ಕಡಂಗ ಜ.24 NEWS DESK : ಕಡಂಗ ಪ್ರಿಮೀಯರ್ ಫುಟ್ಬಾಲ್ ಆರನೇ ಆವೃತ್ತಿಯ ಪಂದ್ಯಾವಳಿಯಲ್ಲಿ ಬರ್ಗೂರು ಎಫ್ ಸಿ ತಂಡ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಪಾಲ್ಗೊಂಡು ಅತ್ಯಂತ ರೋಚಕವಾದ ಫೈನಲ್ ಪಂದ್ಯದಲ್ಲಿ ಸೆವೆನ್ ಶೂಟರ್ ತಂಡವನ್ನು ಮಣಿಸಿ ಬರ್ಗೂರು ಎಫ್ ಸಿ ತಂಡವು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕ್ರೀಡಾಕೂಟದ ಉತ್ತಮ ಆಟಗಾರ ಪ್ರಶಸ್ತಿಯನ್ನು ಸಫಾದ್ ಪಡೆದುಕೊಂಡರು. ಉತ್ತಮ ಗೋಲ್ಕೀಪರ್ ಪ್ರಶಸ್ತಿ ಅಫ್ಸಲ್ ಪಡೆದುಕೊಂಡರು. ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಅನಸ್ ಭಾಜನರಾದರು. ಕ್ರೀಡಾಕೂಟದ ಉತ್ತಮ ಡಿಫೆಂಡರ್ ಆಗಿ ಅಸೀಕ್, ಹೆಚ್ಚು ಗೋಲು ಬಾರಿಸಿದ ಆಟಗಾರ ನಾಫಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ತೀರ್ಪುಗಾರರಾಗಿ ರಾಜ್ಯಮಟ್ಟದ ತೀರ್ಪುಗಾರ ಶೇಷಪ್ಪ ಅಮ್ಮತ್ತಿ ಕಾರ್ಯನಿರ್ವಹಿಸಿದರು. ಉದ್ಘಾಟನೆ :: ನಿವೃತ್ತ ಶಿಕ್ಷಕರಾದ ಕುಲ್ಲಚೆಂಡ ಟೈನಿ ಈರಪ್ಪ ಪಂದ್ಯಾವಳಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಅತಿಥಿಗಳಾದ ಅರಫ ಅಬ್ದುಲ್ ರಹಮಾನ್ ಮಾತನಾಡಿ, ಕ್ರೀಡೆಯಿಂದ ಯುವ ಪ್ರತಿಭೆಗಳನ್ನು ಹೊರ ತರಲು…
ಲೇಖಕ: admin
ಮಡಿಕೇರಿ ಜ.24 NEWS DESK : ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೂತನ ಕಚೇರಿ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಮಧ್ಯಾಹ್ನ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಪಿ ಕಚೇರಿ ಉದ್ಘಾಟನೆ ನಂತರ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ. ಇದೇ ಸಂದರ್ಭ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ಪೂರ್ಣಗೊಂಡ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಮಡಿಕೇರಿ ನಗರ ಸಜ್ಜಾಗುತ್ತಿದೆ, ಗಾಂಧಿ ಮೈದಾನದಲ್ಲಿ ಸಾವಿರಾರು ಜನರಿಗೆ ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನದಟ್ಟಣೆ ಹೆಚ್ಚಾಗಬಹುದು ಎನ್ನುವ ಕಾರಣಕ್ಕೆ ನಗರದ ಜಿಲ್ಲಾ ಕ್ರೀಡಾಂಗಣ, ಜೂನಿಯರ್ ಕಾಲೇಜು ಮೈದಾನ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ ಮತ್ತು ಶಾಂತಿ ಚರ್ಚ್ ಬಳಿಯ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಗುರುವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.…
ವಿರಾಜಪೇಟೆ ಜ.24 NEWS DESK : ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ವಿರಾಜಪೇಟೆಯ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಬೆಳಿಗ್ಗೆಯಿಂದಲೇ ನಗರದ ವಿವಿಧ ದೇವಾಲಯಗಳಲ್ಲಿ ರಾಮಜಪ, ಭಜನೆ ಸೇರಿದಂತೆ ವಿಶೇಷ ಪೂಜೆ ನೆರವೇರಿತು. ವೀರಾಜಪೇಟೆಯ ಪ್ರಮುಖ ದೇವಾಲಯಗಳಲ್ಲೊಂದಾದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೆರೆದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಸಾವಿರಾರು ಭಕ್ತರು ಮುಂಜಾನೆಯಿಂದಲೇ ದೇವಾಲಯಕ್ಕೆ ಆಗಮಿಸಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡರು. ರಾಮ ಪ್ರತಿಷ್ಠಾಪನೆ ಪ್ರಯುಕ್ತ ದೇವಾಲಯವನ್ನು ಹೂವುಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಗಣಪತಿ ದೇವಾಲಯದಲ್ಲಿಹಿಂದೂಪರ ಸಂಘಟನೆಗಳಿಂದ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಮಾಡಲಾಯಿತು. ನಗರದ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಶ್ರೀ ಬಾಲಂಜನೆಯ ದೇವಾಲಯದಲ್ಲಿ ಬೆಳಿಗ್ಗೆಯಿಂದಲೆ ವಿಶೇಷ ಪೂಜೆ, ಪುನಸ್ಕಾರ, ನಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ರಾತ್ರಿ ವಿಶೇಷ ಪೂಜೆ ನಡೆದ ಬಳಿಕ ಅನ್ನ ಸಂತರ್ಪಣೆ ಮಾಡಲಾಯಿತು. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಆಂಜನೇಯ ದೇವಾಲಯ ಚಿಕ್ಕಪೇಟೆ, ಕಾವೇರಿ ಗಣೇಶೊತ್ಸವ…
ವಿರಾಜಪೇಟೆ ಜ.24 NEWS DESK : ಅಯೋದ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಶ್ರೀ ರಾಮ ಕಥೆ “ಚೂಡಾಮಣಿ ಪ್ರಧಾನ “ಪ್ರವಚನವನ್ನು ಪುತ್ತೂರಿನ ಪ್ರಖ್ಯಾತ ಯಕ್ಷಗಾನ ಭಾಗವತರಾದ ಗಣಪತಿ ಪದ್ಯಾಣರವರು ವಾಚಿಸಿದರೆ, ಪುತ್ತೂರಿನ ಪ್ರಖ್ಯಾತ ಯಕ್ಷಗಾನ ಭಾಗವತರಾದ ಡಾ. ಮಹಾಲಿಂಗ ಭಟ್ ವ್ಯಾಖ್ಯಾನವನ್ನು ಮಾಡಿದರು. ಬಳಿಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭ ಭಕ್ತಾದಿಗಳು, ಗ್ರಾಮಸ್ಥರು, ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.
ಮಡಿಕೇರಿ ಜ.24 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯುವ ಗಣರಾಜ್ಯೋತ್ಸವ ಪೆರೇಡ್ ಗೆ ಕೊಡಗಿನ ಶ್ರೇಯ ಆಯ್ಕೆಯಾಗಿದ್ದಾಳೆ. ಮಡಿಕೇರಿ ತಾಲ್ಲೂಕಿನ ಅರ‍್ವತ್ತೋಕ್ಲು ಗ್ರಾಮದ ಬಾಳಾಡಿ ಪ್ರತಾಪ್ – ಚಂದ್ರಿಕ ದಂಪತಿ ಪುತ್ರಿಯಾಗಿರುವ ಶ್ರೇಯ, ಪ್ರಸ್ತುತ ಮೈಸೂರಿನ ಶಾರದಾ ವಿಲ್ಲಾ ಫಾರ್ಮಸಿ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿಯಾಗಿದ್ದಾಳೆ.
ಮಡಿಕೇರಿ ಜ.24 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಮಡಿಕೇರಿಯ ಪುಣ್ಯ ಪೊನ್ನಮ್ಮ ಆಯ್ಕೆಯಾಗಿದ್ದಾಳೆ. ಪುಣ್ಯ ಪೊನ್ನಮ್ಮ ಮಡಿಕೇರಿಯ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮತ್ತು ಫೀಲ್ಡ್ ಕಾರ್ಯಪ್ಪ ಕಾಲೇಜಿನ ಉಪನ್ಯಾಸಕಿ ವಿನಿತ ದೇಚಮ್ಮ ದಂಪತಿಯ ಪುತ್ರಿಯಾಗಿದ್ದಾಳೆ. ಎನ್‌ಸಿಸಿ ಕೆಡೆಟ್ ಆಗಿ ಹಲವಾರು ಕ್ಯಾಂಪ್ ಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ತೋರಿರುವ ಪುಣ್ಯ ಪೊನ್ನಮ್ಮ ಪ್ರಸ್ತುತ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾನಿಲಯದಲ್ಲಿ ಮೂರನೇ ವರ್ಷದ ಲಾ ಶಿಕ್ಷಣ ಪಡೆಯುತ್ತಿದ್ದಾಳೆ.
ಮಡಿಕೇರಿ ಜ.24 NEWS DESK : ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಭೇಟಿ ನೀಡಿ, ಉದ್ಘಾಟನೆ ಸಂಬಂಧ ಪರಿಶೀಲಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಇದ್ದರು.
ಮಡಿಕೇರಿ ಜ.24 NEWS DESK : ಪ್ರಸಕ್ತ(2023-24) ಸಾಲಿಗೆ ವಕ್ಫ್ ನೋಂದಾಯಿತ/ ಸಂಘ ಕಾಯ್ದೆಯಡಿ ನೊಂದಾಯಿತ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ 13 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜೊತೆ 2 ವರ್ಷಗಳ ಕಾಲ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು (ಆನ್‍ಲೈನ್-ಆಫ್‍ಲೈನ್ ಕೋಚಿಂಗ್) ನೀಡಲು ಹಾಗೂ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ, ಎನ್‍ಐಒಎಸ್, ದೂರ ಶಿಕ್ಷಣ ಮೂಲಕ ನೀಡುವುದಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿಂದ ಅರ್ಜಿ ಸಲ್ಲಿಸಲು (htt ps://dom.karnataka.gov.in) ಮೂಲಕ ಅರ್ಹ ನೋಂದಾಯಿತ ಮದರಸಾಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮದರಸಾ ಸಂಸ್ಥೆಗಳು ರಾಜ್ಯದಲ್ಲಿ ವಕ್ಫ್ ನೋಂದಾಯಿತ/ ಇತರೆ ಸಂಘ ಸಂಸ್ಥೆ ಕಾಯ್ದೆಯಡಿ ನೋಂದಾಯಿತ ಮದರಸಾ ಸಂಸ್ಥೆಯಾಗಿರಬೇಕು. ಮದರಸಾದಲ್ಲಿ 40 ಅರ್ಹ ವಿದ್ಯಾರ್ಥಿಗಳಿರಬೇಕು. ಮದರಸಾಗಳು ತರಗತಿ ಕೊಠಡಿಗಳೊಂದಿಗೆ ವಸತಿ ಸೌಲಭ್ಯವನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜನವರಿ, 31 ರವರೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ…
ಮಡಿಕೇರಿ ಜ.23 NEWS DESK : ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ವಿರಾಜಪೇಟೆ ಪಟ್ಟಣದಲ್ಲಿ ಅಳವಡಿಸಿದ್ದ ಕೇಸರಿ ತೋರಣ ಮತ್ತು ಫ್ಲೆಕ್ಸ್ಗಳನ್ನು ತೆರವು ಮಾಡುವಂತೆ ಪುರಸಭೆಯ ಮುಖ್ಯಾಧಿಕಾರಿಗಳು ನೋಟೀಸು ನೀಡಿದ್ದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಮಂಗಳವಾರ ಪುರಸಭೆ ಕಛೇರಿ ಎದುರು ಪ್ರತಿಭಟನೆ ನಡೆಸಿದವು. ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪುರಸಭೆ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೋಟೀಸ್ ವಾಪಾಸ್ಸು ಪಡೆಯುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ವಿರಾಜಪೇಟೆಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ತೋರಣ ತೆರವು ಮಾಡುವಂತೆ ನೋಟೀಸ್ ನೀಡಿರುವುದು ಖಂಡನೀಯ. ಕಾಂಗ್ರೆಸ್ ಪಕ್ಷದ ನಾಯಕರ ಬೃಹತ್ ಕಟ್ ಔಟ್ ಅಳವಡಿಸಿದಲ್ಲಿ ಯಾವುದೇ ತೊಂದರೆ ಇಲ್ಲ, ಶ್ರೀರಾಮಚಂದ್ರನ ಚಿತ್ರ ಮತ್ತು ಕೇಸರಿ ಕಂಡಲ್ಲಿ ತೆರುವು ಮಾಡುವಂತೆ ಹೇಳುವುದು ರಾಜಕೀಯ ಕುತಂತ್ರ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಟನೆಯಲ್ಲಿ ಜಿ.ಪಂ ಮಾಜಿ ಸದಸ್ಯರಾದ ಶಶಿ…
ಮಡಿಕೇರಿ ಜ.24 NEWS DESK : ಜಿಲ್ಲಾಡಳಿತ ವತಿಯಿಂದ ಜನವರಿ, 26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.






