ಮಡಿಕೇರಿ NEWS DESK ಮಾ.6 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ ಮಹಿಳೆಯರಿಗಾಗಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಆಯೋಜಿಸಲಾಗಿದೆ. ವೈವಿಧ್ಯಮಯ ಕಾಯ೯ಕ್ರಮಗಳೊಂದಿಗೆ ಮಹಿಳಾ ದಿನಾಚರಣೆಯ ಸಂಭ್ರಮಾಚರಣೆ ಜರುಗಲಿದೆ ಎಂದು ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಿ.ಕೆ. ರವೀಂದ್ರ ರೈ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ರವಿಂದ್ರರೈ, ಮಾ.9 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ, ಮತ್ತು ಮಹಿಳಾ ದಿನಾಚರಣೆಯನ್ನು ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ ಉದ್ಘಾಟಿಸಲಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವಯ೯ ಆಶಯ ಭಾಷಣ ಮಾಡಲಿದ್ದಾರೆ. ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ, ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ರಾಷ್ಟ್ರಪ್ರಶಸ್ತಿ ಪಡೆದ ಕೊಟ್ಟುಕೊತ್ತೀರ ಯಶೋಧ ಪ್ರಕಾಶ್, ಮಹಿಳಾ ಮತ್ತು ಮಕ್ಕಳ…
ಲೇಖಕ: admin
ನಾಪೋಕ್ಲು NEWS DESK ಮಾ.6 : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ ಮಾ.8ರಂದು ಅದ್ದೂರಿಯಾಗಿ ನಡೆಯಲಿದೆ. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ವೈವಿಧ್ಯಮಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಭಾನುವಾರ ಬೆಳಿಗ್ಗೆ 10.30ಗಂಟೆಗೆ ಕಾರುಗುಂದ ಗೌಡ ಸಮಾಜದಲ್ಲಿ ಸಮಾರಂಭವನ್ನು ಆಯೋಜಿಸಲಾಗಿದೆ. ಚೆಟ್ಟಿಮಾನಿಯ ನಿವೃತ್ತ ಪ್ರಾಧ್ಯಾಪಕಿ ಸುಳ್ಯಕೋಡಿ ಶಿವದೇವಿ ಅವನಿಶ್ಚಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕಾರ್ಯಕ್ರಮ ಉದ್ಘಾಟಿಸುವರು. ಬೆಂಕಿ ಇಲ್ಲದ ಅಡುಗೆ ಪದಾರ್ಥಗಳ ಪ್ರದರ್ಶನವನ್ನು ಕೊಡಗು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟದ ಸ್ಥಾಪಕ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್ ಉದ್ಘಾಟಿಸುವರು. ಕರಕುಶಲ ವಸ್ತು ಪ್ರದರ್ಶನವನ್ನು ಕುಶಾಲನಗರದ ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕಲಾ ಆನಂದ್ ಕರಂದ್ಲಾಜೆ ಉದ್ಘಾಟಿಸುವರು. ಮಹಿಳೆಯರು ಸಿದ್ಧಪಡಿಸಿದ ಕರಕುಶಲ ವಸ್ತುಗಳ ಮತ್ತು ಖಾದ್ಯ ಪದಾರ್ಥಗಳ ಮಾರಾಟ ಮಳಿಗೆಗಳನ್ನು ಮಡಿಕೇರಿ…
ಮಡಿಕೇರಿ ಮಾ.5 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್, 06 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಅಪೋಲೋ ಫಾರ್ಮಸಿ ಮೈಸೂರು, ಜಾಯ್ ಆಲುಕಾಸ್ ಜ್ಯುವೆಲ್ಲರಿ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಸ್ ರೆಸಾರ್ಟ್ ಸಿದ್ದಾಪುರ, ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಆಲ್ಫಾ ಟೆಕ್ನಾಲಜಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ…
ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆ ಗರ್ವಾಲೆ ಗ್ರಾಮದ ಓಡಿಯಂಡ ಕುಟುಂಬದ ಮನೆಯಿಂದ ದೇವರ ಭಂಡಾರ ತಂದು ಪೂಜೆ ಸಲ್ಲಿಸಲಾಯಿತು. ನಂತರ ಮಹಾಮಂಗಳಾರತಿ, ಒಪ್ಪಿಸುವುದು, ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಗ್ರಾಮಸ್ಥರಿಂದ ಸಾಂಪ್ರದಾಯಿಕ ಬೊಳಕಾಟ್ ನೃತ್ಯ ಪ್ರದರ್ಶನ ನಡೆಯಿತು. ದೇವಸ್ಥಾನ ಸಮಿತಿ ವತಿಯಿಂದ ಭಕ್ತಾದಿಗಳಿಗೆ ಅನ್ನದಾನದ ನೆರವೇರಿತು. ತಕ್ಕ ಮುಖ್ಯಸ್ಥರಾದ ಸೋಮಯ್ಯ, ಐಮುಡಿಯಂಡ ಭೀಮಯ್ಯ, ಆರುಡ ರಾಜಪ್ಪ, ತಾಚಮಂಡ ಈರಪ್ಪ, ಪಾಸುರ ಗಣಪತಿ ನೇತೃತ್ವದಲ್ಲಿ ಸಾಂಪ್ರದಾಯಿಕ ಆಚರಣೆಗಳು ಜರುಗಿತು.
ಮಡಿಕೇರಿ ಮಾ.5 NEWS DESK : ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಹೊರತು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು ಎಂದು ಜಿಲ್ಲೆಯ ಹಿರಿಯ ದಾನಿ ಕೈಬುಲಿರ ಪಾರ್ವತಿ ಬೋಪಯ್ಯ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಲಿಟಲ್ ಫ್ಲವರ್ಸ್ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಬೋಪಯ್ಯ ಸ್ಮಾರಕ ದತ್ತಿ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ಕೊಡಗು ಜಿಲ್ಲೆಯ 10ನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲೂಕಿನ ನೀಡ್ತಾ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ.ಎಸ್.ಪೂರ್ವಿಕ ಅವರನ್ನು ಸನ್ಮಾನಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪಾಲಿಗೆ ಅಧ್ಯಾಪಕರು ಶಿಲ್ಪಿಗಳಂತೆ. ಪೋಷಕರು ಒಂದು ಕಲ್ಲಿನ ರೀತಿಯಲ್ಲಿರುವ ವಿದ್ಯಾರ್ಥಿಯನ್ನು ಶಾಲೆಗೆ ಒಪ್ಪಿಸಿದ ಸಂದರ್ಭದಲ್ಲಿ ಅಧ್ಯಾಪಕರು ಅವರನ್ನು ತಿದ್ದಿ ತೀಡಿ ಉತ್ತಮವಾದ ಶಿಲ್ಪವನ್ನಾಗಿ ಮಾಡುತ್ತಾರೆ. ಅಧ್ಯಾಪಕರ ಈ ಸೇವೆ ವಿದ್ಯಾರ್ಥಿಗಳು ಮರೆಯಕೂಡದು ಎಂದರು.…
ಸೋಮವಾರಪೇಟೆ ಮಾ.5 NEWS DESK : ಹಿಂದೂ ಸಂಗಮ ಹಿಂದೂಗಳ ಐಕ್ಯತೆಯ, ಒಗ್ಗಟ್ಟಿನ, ಸಂಘಟನೆಯ ಬಲವನ್ನು ಹೆಚ್ಚಿಸುವ ಮಂತ್ರವಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಸಂಘ ಪ್ರಚಾರಕ್ ಸುಧಾಕರ್ ಅಭಿಪ್ರಾಯಿಸಿದರು. ಚೌಡ್ಲು ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಪಟ್ಟಣದ ಆರ್‍ಎಂಸಿ ಆವರಣದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ದೇಶ ತನ್ನದೇ ಆದ ವಿಶಿಷ್ಟ ಪರಂಪರೆಯನ್ನು ಹೊಂದಿದೆ. ಈ ಕಾರಣದಿಂದಲೇ ಪ್ರಪಂಚಕ್ಕೆ ಭಾರತ ಧಾರ್ಮಿಕತೆಯ ಮಾದರಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಂದಿನ ಮಕ್ಕಳಿಗೆ ದೇಶಪ್ರೇಮದ ಪಾಠವನ್ನು ಪ್ರಾರಂಭಿಕ ಹಂತದಲ್ಲಿಯೇ ಕಲಿಸಿಕೊಡುವ ಮಹತ್ಕಾರ್ಯ ಪೋಷಕರಿಂದ ಆಗಬೇಕಿದೆ ಎಂದರು. ಮಾರಿಯಮ್ಮ ದೇವಾಲಯದಿಂದ ನಡೆದ ಮೆರವಣಿಗೆಯಲ್ಲಿ ಭಜನಾ ನೃತ್ಯ, ಚಂಡೆ ಮದ್ದಳೆ, ಛದ್ಮವೇಶಗಳು, ಶ್ರೀ ರಾಮನ ಘೋಷಣೆಗಳು, ಬಾಬಾ ಸಾಹೇಬ್ ಅಂಬೇಡ್ಕರ್ ಸ್ಥಬ್ದಚಿತ್ರ ಹಾಗು ದೇಶ ಪ್ರೇಮವನ್ನು ಪ್ರತಿಬಿಂಬಿಸುವ ವಿವಿಧ ಕಲಾ ಕೃತಿಗಳು ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ, ಯಸಳೂರು ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷರಾದ ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿ, ಹಿಂದೂ ರಾಷ್ಟ್ರದ…
ಸೋಮವಾರಪೇಟೆ ಮಾ.5 NEWS DESK : ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕಂದೂರು ಗ್ರಾಮದ ಶಾಸ್ತ ಯುವಕ ಸಂಘದ ವತಿಯಿಂದ ರುದ್ರಭೂಮಿಯಲ್ಲಿ ಶ್ರಮದಾನ ನಡೆಯಿತು. ಗ್ರಾಮದ ಶಾಸ್ತ ಯುವಕ ಸಂಘದ ಸದಸ್ಯರು ತಲಾ 1 ಸಾವಿರ ರೂಪಾಯಿ ರೂ. ನೆರವು ಒದಗಿಸಿ, ಜೆಸಿಬಿ ಯಂತ್ರದ ಮೂಲಕ ಕಾಡು, ಗಿಡಗಂಟಿಗಳನ್ನು ತೆರವುಗೊಳಿಸಿದರು. ಕೂಲಿ ಕಾರ್ಮಿಕ ಕುಟುಂಬಗಳು ನೆಲೆಸಿರುವ ಕಲ್ಕಂದೂರು ಬಾಣೆ ಗ್ರಾಮದಲ್ಲಿ ಯಾರಾದರೂ ಮೃತರಾದರೆ ಇದೇ ಸ್ಮಶಾನ ಜಾಗದಲ್ಲಿ ಶವಸಂಸ್ಕಾರ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಸೌದೆಗಳಿಗೂ ಸಮಸ್ಯೆಯಾಗುತ್ತಿದೆ. ಮಳೆಗಾಲದಲ್ಲಿ ಶವಸಂಸ್ಕಾರಕ್ಕೆ ಪರದಾಡುವ ಸ್ಥಿತಿಯಿದೆ. ಈ ಬಗ್ಗೆ ಶಾಸಕ ಡಾ.ಮಂತರ್ ಗೌಡ ಅವರ ಗಮನ ಸೆಳೆದು ಸ್ಮಶಾನದಲ್ಲಿ ಸಿಲಿಕಾನ್ ಚೇಂಬರ್ ಅಳವಡಿಸಲು ಅನುದಾನ ಕಲ್ಪಿಸುವಂತೆ ಮನವಿ ಮಾಡಲಾಗುವುದು ಎಂದು ಶಾಸ್ತ ಯುವಕ ಸಂಘದ ಕಾರ್ಯದರ್ಶಿ ಲೋಕೇಶ್ ತಿಳಿಸಿದ್ದಾರೆ. ಶ್ರಮದಾನದಲ್ಲಿ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ಖಜಾಂಚಿ ಸುರೇಶ್, ಪದಾಧಿಕಾರಿಗಳಾದ ಹರೀಶ್, ರಮೇಶ್, ಲಿಂಗರಾಜು, ಶಿವಕುಮಾರ್, ದೀಕ್ಷಿತ್, ಮಹೇಶ್, ಚೆನ್ನ, ಪ್ರಜ್ವಲ್, ಸ್ವಾಮಿಗೌಡ, ಅನಿಲ್ ಸೇರಿದಂತೆ ಇತರರು…
ಮಡಿಕೇರಿ, NEWS DESK ಮಾ.5 : ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದ ಬಡಾವಣೆ ರಸ್ತೆಯಲ್ಲಿ ನಡೆದಿದೆ. ಗುತ್ತಿಗೆದಾರ ಅಮೆಮನೆ ದೇವಿ ಪ್ರಸಾದ್(43) ಮೃತ ವ್ಯಕ್ತಿಯಾಗಿದ್ದಾರೆ. ಒಂಟಿ ನಳಿಕೆ ಬಂದೂಕು ಸಹಿತ ಮನೆಯಿಂದ ಹೊರ ಬಂದ ದೇವಿ ಪ್ರಸಾದ್ ರಸ್ತೆ ಬದಿಯಲ್ಲೇ ಎದೆಯ ಭಾಗಕ್ಕೆ ಗುಂಡು ಹೊಡೆದುಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಮಡಿಕೇರಿ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಪಿ.ಕೆ.ರಾಜು, ಠಾಣಾಧಿಕಾರಿ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಘಟನೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಮೇ 2ರಿಂದ 10 ರವರೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆದಂ ಎಸ್.ಕುಶಾಲನಗರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಗುಂಡುರಾವ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಹಾಗೂ ಮೊದಲನೇ ವರ್ಷದ ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ ಎಂದರು. ಈ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟವನ್ನು ಕೊಡಗು ಮುಸ್ಲಿಂ ಸ್ಪೋಟ್ಸ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿದೆ. ಕ್ರೀಡಾಕೂಟದಲ್ಲಿ ಸುಮಾರು 150 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಕ್ರಿಕೆಟ್ ಪಂದ್ಯಾಟದ ಪ್ರಥಮ ನಗದು ಬಹುಮಾನ ರೂ.1,11,111/- ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 66,666/- ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ 33,333/-ಹಾಗೂ ಆಕರ್ಷಕ ಟ್ರೋಫಿ, ಚತುರ್ಥ ಬಹುಮಾನ 22,222/- ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುತ್ತದೆ. ಪುರುಷರ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ…
ಮಡಿಕೇರಿ, NEWS DESK ಮಾ.5 : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬಳಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿದ್ದ 39 ಸಾವಿರ ಕೋಟಿ ರೂ.ಗಳನ್ನು ಹಿಂದಿರುಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೋರ್ಚಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ರಾಜ್ಯದ ಕಾಂಗ್ರೆಸ್ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜಾತಿ ಉಪ ಯೋಜನೆಗಳಿಗೆ ಮೀಸಲಾಗಿದ್ದ ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿದೆ. ಅಲ್ಲದೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ಮೀಸಲಾಗಿದ್ದ ಹಣದಲ್ಲಿ ಉಳಿಕೆಯಾಗಿರುವ 15 ಸಾವಿರ ಕೋಟಿ ರೂ.ಗಳನ್ನು ಬಳಸಿಕೊಳ್ಳಲು ಮುಂದಾಗುತ್ತಿದೆ ಎನ್ನುವ ಮಾಹಿತಿ ಇದೆ. ಯಾವುದೇ ಕಾರಣಕ್ಕೂ ಶೋಷಿತ ಸಮುದಾಯದ ಕಲ್ಯಾಣಕ್ಕೆ ಮೀಸಲಾದ ಹಣವನ್ನು ದುರ್ಬಳಕೆ ಮಾಡಬಾರದು. ಬಜೆಟ್ ಗೂ…






