ಲೇಖಕ: admin

ಮಡಿಕೇರಿ ಡಿ.14: ವಿದ್ಯಾರ್ಥಿಗಳು ಗಣಿತ ಮತ್ತು ವಿಜ್ಞಾನದ ವಿಷಯದ ಕಲಿಕೆಯಲ್ಲಿ ಉತ್ತಮ ಯಶಸ್ಸನ್ನು ಸಾಧಿಸಲು ಅನ್ವೇಷಣೆ – ನರ್ಸರೀಸ್ ಆಫ್ ಟ್ಯಾಲೆಂಟ್ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಖಜಾಂಚಿ ಡಾ. ಕೆ.ಎನ್.ಚಂದ್ರಶೇಖರ್ ಅಭಿಪ್ರಾಯಪಟ್ಟರು. ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಅನ್ವೇಷಣೆ – ನರ್ಸರೀಸ್ ಆಫ್ ಟ್ಯಾಲೆಂಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅದನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶ ಎಂದ ಅವರು, ನೀಡಿದ ಸಲಹೆಯನ್ನು ಅರ್ಥ ಮಾಡಿಕೊಂಡು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಪಾಠವು ನಿಮಗೆ ಪ್ರಮಾಣ ಪತ್ರವನ್ನು ನೀಡಬಹುದು, ಒಳ್ಳೆಯ ಕೆಲಸ ಸಿಗುವಂತೆ ಮಾಡಬಹುದು, ಆದರೆ ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗುವುದು ಮುಖ್ಯವಾಗುತ್ತದೆ ಎಂದು ತಿಳಿಸಿದರು. ಸಾಧನೆಗೆ ಯಾವುದು ಕೂಡಾ ಅಡ್ಡಿ ಬರುವುದಿಲ್ಲ, ನಾವು ಮನಸ್ಸು ಮಾಡಬೇಕಷ್ಟೇ. ಇಲ್ಲದಿರುವ…

Read More

ಪುತ್ತೂರು ಜ.14 : ರಕ್ತಕ್ಕೆ ಪರ್ಯಾಯವಿಲ್ಲ, ಅನಿವಾರ್ಯ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ರಕ್ತದಾನ ಮಾಡಿದಾಗ ಒಂದು ಜೀವ ಉಳಿಸಿದ ತೃಪ್ತಿ ಸಿಗುತ್ತದೆ ಎಂದು ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ್.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಘಟಕ, ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಎಡ್‌ಡಿಎಫ್‌ಸಿ ಬ್ಯಾಂಕ್ ಮಂಗಳೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರಿ ಕ್ಲಬ್ ಪುತ್ತೂರು ಎಲೈಟ್ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರಕ್ತದ ಆವಶ್ಯಕತೆ ಯಾರಿಗೆ ಯಾವ ಸಂದರ್ಭದಲ್ಲಿ ಬರುತ್ತದೆ ಎಂದು ಹೇಳುವುದು ಸಾಧ್ಯವಿಲ್ಲ ಇಂತಹ ಸಂದರ್ಭದಲ್ಲಿ ರಕ್ತ ನಿಧಿ ಕೇಂದ್ರಗಳು ಸಂಜೀವಿನಿಯಂತೆ ಕೆಲಸ ಮಾಡುತ್ತವೆ ಎಂದರು. ಆರೋಗ್ಯ ಮಾನವನು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.…

Read More

ಮಡಿಕೇರಿ ಡಿ.14 :  ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ-2024ರ ಫೆ.17 ರಂದು  ಮಂಗಳೂರಿನ  ಗಂಜಿಮಠದಲ್ಲಿರುವ ‘ಝಾರಾ ಕನ್ವೆಂಶನ್‌ ಸೆಂಟರ್’ನಲ್ಲಿ ತನ್ನ ಎಂಟನೇ ‘ಸರಳ ಸಾಮೂಹಿಕ ವಿವಾಹ’ ಸಮಾರಂಭವನ್ನು ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅಬುಧಾಬಿಯ ಬ್ಯಾರೀಸ್‌ ವೆಲ್ಫೇರ್‌ ಫೋರಂನ ಅಧ್ಯಕ್ಷ ಮುಹಮ್ಮದ್‌ ಅಲಿ ಉಚ್ಚಿಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, ನಾಲ್ಕು ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಬ್ಯಾರೀಸ್‌ ವೆಲ್ಫೇರ್‌ ಫೋರಂ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು ಎಂದರು. ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕವಾಗಿದ್ದು, ಆಸಕ್ತರು…

Read More

ಮಡಿಕೇರಿ ಡಿ.14 : ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ಆತಂಕ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರನ್ನು ಸಂಸದ ಸ್ಥಾನದಿಂದ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಾಪ್ ಸಿಂಹ ವಿರುದ್ಧ ಘೋಷಣೆಗಳನ್ನು ಕೂಗಿದ ವಿರಾಜಪೇಟೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸೂಕ್ತ ಕಾನೂನು ಕ್ರಮಕ್ಕಾಗಿ ಒತ್ತಾಯಿಸಿದರು. ಇಬ್ಬರು ವ್ಯಕ್ತಿಗಳು ಸಂಸತ್ ಭವನಕ್ಕೆ ನುಗ್ಗಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ಸಂಸತ್ ಭವನದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಾಪ್ ಸಿಂಹರನ್ನು ಬಂಧಿಸಿ ಸಂಸದ ಸ್ಥಾನದಿಂದ ವಜಾಗೊಳಿಸಬೇಕು. ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳಿಗೆ ಸಂಸದರ ಮೂಲಕ ಪಾಸ್ ಸಿಕ್ಕಿರುವುದು ಖಾತ್ರಿಯಾಗಿದೆ. ಇದು ಗಂಭೀರ ಪ್ರಕರಣವಾಗಿದ್ದು, ಪ್ರತಾಪ್ ಸಿಂಹ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸಂಸತ್ ಸದಸ್ಯರಿಗೇ ರಕ್ಷಣೆ…

Read More

ಮಡಿಕೇರಿ ಡಿ.14 : ವೈಲ್ಡ್ ಮಾಸ್ಟರ್ಸ್ ಕೊಡಗು ವತಿಯಿಂದ ಜನವರಿ 2ನೇ ವಾರದಲ್ಲಿ 4ನೇ ವರ್ಷದ ಲೆದರ್ ಬಾಲ್ ಟಿ-20 ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ನಡೆಯಲಿದೆ ಎಂದು ಸಂಸ್ಥೆಯ ಸಹ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಐಪಿಎಲ್ ಮಾದರಿಯ ಟಿ-20 ಪ್ರೀಮಿಯರ್ ಲೀಗ್ ಪಂದ್ಯಾವಳಿ ನಡೆಯಲಿದ್ದು, ಪ್ರತಿವರ್ಷದಂತೆ ಈ ಬಾರಿಯೂ ವಿಭಿನ್ನ ಪ್ರಯತ್ನ ಮಾಡಲಾಗುತ್ತಿದೆ ಎಂದರು. ವಿಜೇತ ತಂಡಕ್ಕೆ ರೂ.1 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.60 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೆ, ವೈಯಕ್ತಿಕ ಮ್ಯಾನ್ ಆಫ್ ದಿ ಸಿರಿಸ್, ಬೆಸ್ಟ್ ಬ್ಯಾಟ್ಸ್ ಮೆನ್, ಬೆಸ್ಟ್ ಬೌಲರ್, ಬೆಸ್ಟ್ ವಿಕೆಟ್ ಕೀಪರ್, ಎಮರ್ಜಿಂಗ್ ಪ್ಲೆಯರ್ ನಂತಹ ಹಲವು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ತಂಡದಲ್ಲಿ 9 ಕ್ರೀಡಾಪಟುಗಳು ಕಡ್ಡಾಯವಾಗಿ ಜಿಲ್ಲೆಯವರಾಗಿರಬೇಕು, ಮತ್ತಿಬ್ಬರು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ…

Read More

ಮಡಿಕೇರಿ ಡಿ.14 : ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ” ಎಂಬ ಘೋಷವಾಕ್ಯದೊಂದಿಗೆ ವಿರಾಜಪೇಟೆ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ನಡೆಯಿತು. ವಿರಾಜಪೇಟೆ ಚೌಕಿಯಲ್ಲಿ “ಬೇಟಿ ಬಚಾವ್ ಬೇಟಿ ಪಡಾವ್” ಎಂಬುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪಶು ವೈದ್ಯಾಧಿಕಾರಿ ಡಾ.ರಾಕೇಶ್ ಮಾತನಾಡಿ, ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡಲು ಮಾತ್ರ ಸೀಮಿತವಲ್ಲ, ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಿದ್ದಾರೆ ಎಂದರು. ಗಡಿಯಾರ ಕಂಬದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಮೊಹಮದ್ ರಾಫಿ, ಹೆಣ್ಣು ಮಕ್ಕಳ ಮೇಲಿನ ಶೋಷಣೆ ನಿಲ್ಲಬೇಕು, ಶಿಕ್ಷಣವನ್ನು ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದರು. ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಅಭಿಯಾನದಲ್ಲಿ ಮಾತನಾಡಿದ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಗೀತಾ, ಹೆಣ್ಣು ಮಕ್ಕಳ ಸ್ವರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು. ಪೊಲೀಸ್ ಠಾಣೆಯ ಸಹಾಯಕ ದೂರವಾಣಿ ಸಂಖ್ಯೆಯಾದ 112 ಗೆ ಕರೆ…

Read More

ಮಡಿಕೇರಿ ಡಿ.14 :  ಕರ್ನಾಟಕ ಸ್ಪೋರ್ಟ್ಸ್ ಅಸೋಷಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ಆಶ್ರಯದಲ್ಲಿ ಮೈಸೂರಿನ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ   ನಡೆದ ವಲಯ ಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಕೌಶಿ ಕಾವೇರಮ್ಮ  ಚಿನ್ನದ ಪದಕ ಪಡೆದುಕೊಂಡಿದ್ದು,   ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೌಶಿ ಕಾವೇರಮ್ಮ ವಿರಾಜಪೇಟೆ ಕಾವೇರಿ ಕಾಲೇಜು ವಿದ್ಯಾರ್ಥಿನಿಯಾಗಿದ್ದು,  ವಿದುಷಿ ಹೇಮಾವತಿ ಕಾಂತರಾಜ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ. ಈಕೆ  ರೋಟರಿ ಸಂಸ್ಥೆಯ ಸಹಾಯಕ ವಿ.ಡಿ.ಸೀಮ ಮತ್ತು ರೋಟರಿ ಸಂಸ್ಥೆಯ ವಾಹನ ಚಾಲಕ ವಿ.ಡಿ.ಡಾಲಿ ದಂಪತಿಯರ ಪುತ್ರಿ.

Read More

ಮಡಿಕೇರಿ ಡಿ.14 :  ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರ್ನಾಟಕ ಸರ್ಕಾರದ ಇಂಧನ ಸಚಿವರ ಗಮನ  ಗಮನ ಸೆಳೆದರು. ಸದನದ ಪ್ರಶ್ನೋತ್ತರ ವೇಳೆಯಲ್ಲಿ ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಕಿ ಉಳಿದಿರುವ 10 ಹೆಚ್.ಪಿ ವರೆಗಿನ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡುವ ಬಗ್ಗೆ, ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ಸೋಲಾರ್ ಪಂಪ್ ಸೆಟ್ ಗಳಿಗೆ ಅವಕಾಶ ಕಲ್ಪಿಸುವ ವ್ಯವಸ್ಥೆ ಹಾಗೂ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ವಿಶೇಷವಾದ ಗಮನ ಹರಿಸಲು ಮನವಿ ಮಾಡಿದರು.

Read More

ಸೋಮವಾರಪೇಟೆ ಡಿ.14 :   ವೀರಶೈವ ಸಮಾಜ ಹಾಗೂ ಬಸವೇಶ್ವರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ   ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂಗಳ ವಾದ್ಯಗಳೊಂದಿಗೆ ನಂದಿದ್ವಜ ಮೆರವಣಿಗೆಯ ನಂತರ, ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.   

Read More

ನಾಪೋಕ್ಲು ಡಿ.14 : ಸ್ಕೌಟ್ಸ್ ಮತ್ತು ಗೈಡ್ಸ್ ಸನಿವಾಸ-2023 ಶಿಬಿರವು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳು ಬಾಲ್ಯದಲ್ಲಿಯೇ ಶಿಸ್ತು ಮತ್ತು ಮೌಲ್ಯಗಳನ್ನು ರೂಪಿಸಿಕೊಳ್ಳಲು ಶಿಬಿರ ಸಹಕಾರಿಯಾಗಿದೆ. ಬೌದ್ಧಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ, ಪ್ರತಿ ಮಗುವು ಉತ್ತಮ ನಾಗರೀಕನಾಗಲು ಸಾಧ್ಯ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಧನಂಜಯ, ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಜೀವನ ಕೌಶಲ್ಯಗಳನ್ನು ತಿಳಿದುಕೊಂಡು ಬಾಳಿನಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ಸಿಗುವಂತಾಗುತ್ತದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಶುಭ ಹಾರೈಸಿ, ದ್ವಿತೀಯ ಸೋಪಾನ ಮತ್ತು ತೃತೀಯ ಸೋಪಾನ ಪರೀಕ್ಷೆಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸ್ಕೌಟ್ ಎ.ಡಿ.ಸಿ.ಹಾರಿಸ್, ಸ್ಕೌಟ್ ಮತ್ತು ಗೈಡ್ ನಲ್ಲಿ ತಮಗಾದ ಅನುಭವಗಳನ್ನು…

Read More