ಮಡಿಕೇರಿ ಜ.20 : NEWS DESK : ಇದೇ ಜನವರಿ, 25 ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಕೊಡಗು ಜಿಲ್ಲೆಗೆ ಅತ್ಯಗತ್ಯವಾಗಿ ಬೇಕಿರುವ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾದ ಡಾ.ಎನ್.ವಿ.ಪ್ರಸಾದ್ ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಇಲ್ಲದಿರುವುದರಿಂದ ಕಾನೂನು ಕಾಲೇಜು ಆರಂಭ ಸೇರಿದಂತೆ ಹಲವು ಯೋಜನೆಗಳ ಪ್ರಸ್ತಾವನೆಯ ಪಟ್ಟಿಮಾಡಿ ಮುಖ್ಯಮಂತ್ರಿ ಅವರಿಗೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ ಎರಡು ವರ್ಷದವರೆಗೆ ಪ್ರತೀ ತಿಂಗಳು 10 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸೌಲಭ್ಯವಿದ್ದು, ಈ ಯೋಜನೆಗೆ ಜಿಲ್ಲೆಯಲ್ಲಿ ಅರ್ಹರು ಸಿಗುತ್ತಿಲ್ಲ ಎಂಬ ಬಗ್ಗೆ…
ಲೇಖಕ: admin
ಸೋಮವಾರಪೇಟೆ ಜ.20 : NEWS DESK : ಮೌಲ್ಯಾಧಾರಿತ ಶಿಕ್ಷಣವೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ ಅವರ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ಹಾಸನ, ಕೊಡಗು ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ಹೇಳಿದರು. ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯ ಕಲೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಅವರು, ಮಾತನಾಡಿದರು. ಮೌಲ್ಯಾಧಾರಿತ ಶಿಕ್ಷಣವೂ ಸಾಮಾಜಿಕ, ನೈತಿಕ, ಸಮಗ್ರತೆ, ಚಾರಿತ್ರ್ಯ, ಆಧ್ಯಾತ್ಮಿಕತೆಯೊಂದಿಗೆ ನಮ್ರತೆ, ಪ್ರಾಮಾಣಿಕತೆಯ ಗುಣಗಳನ್ನು ಕಲಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ಮೌಲ್ಯಾಧಾರಿತ ಶಿಕ್ಷಣ ನೀಡುವತ್ತ ಯೋಜನೆ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ವಿವೇಕ, ವಿನಯ ಮಕ್ಕಳಲ್ಲಿ ಬೆಳಸಬೇಕು. ಪೋಷಕರು ಮಕ್ಕಳನ್ನು ಜೋಪಾನ ಮಾಡಬೇಕಿದೆ. ಮೊಬೈಲ್‍ನಿಂದ ಮಕ್ಕಳಲ್ಲಿ ಕಲಿಕ ಗುಣಮಟ್ಟ ಕುಸಿಯುತ್ತದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಶಿಕ್ಷಣವೂ ನಿಜವಾದ ಆಸ್ತಿಯಾಗಿದ್ದು, ವಿದ್ಯೆಯನ್ನು ಕಲಿಸುವುದರ ಮೂಲಕ ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯೆ ಜ್ಞಾನವನ್ನು ನೀಡುವುದರಿಂದ ಕಲಿತ ವಿದ್ಯೆಯನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಪೋಷಕರು ಮಕ್ಕಳ…
ಚೆಯ್ಯಂಡಾಣೆ ಜ.20 : NEWS DESK : ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.8 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ-ಪೈನರಿ ಮಸೀದಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಕುಂಜಿಲ ಗ್ರಾಮಕ್ಕೆ ಭೇಟಿ ನೀಡಿದಾಗ ಹಲವಾರು ವರ್ಷಗಳಿಂದ ಇಲ್ಲಿನ ಗ್ರಾಮಸ್ಥರು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಬೇಡಿಕೆಯನ್ನು ಇಟ್ಟಿದ್ದರು. ಅದರಂತೆ ಇಂದು ಗ್ರಾಮಸ್ಥರೊಂದಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ. ಕಾಮಗಾರಿಯಲ್ಲಿ ಯಾವುದೇ ಸಮಸ್ಯೆ ಕಂಡುಬಂದಲ್ಲಿ ಗ್ರಾಮಸ್ಥರು ಅಭಿಯಂತರ ಗಮನಕ್ಕೆ ತರಬೇಕು. ಗ್ರಾಮದಲ್ಲಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಲು ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಎ.ಇಸ್ಮಾಯಿಲ್, ಕುಂಜಿಲ ಜಮಾಅತ್ ಅಧ್ಯಕ್ಷ ಸೌಕತ್ ಅಲಿ, ಉಪಾಧ್ಯಕ್ಷ ಇಬ್ರಾಹಿಂ, ಪಂಚಾಯಿತಿ…
ಚೆಯ್ಯಂಡಾಣೆ ಜ.20 : NEWS DESK : ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಗ್ರಾಮಕ್ಕೆ ಗ್ರಾಮಸ್ಥರ ಮನವಿ ಮೇರೆಗೆ ಶಾಸಕ ಮಂತರ್ ಗೌಡ ಅವರ ಮುತುವರ್ಜಿಯಿಂದ ನೂತನ ಬಸ್ ಸೇವೆಯನ್ನು ಪ್ರಾರಂಭಿಸಲಾಯಿತು. ಪಾಲೇಮಾಡು ಗ್ರಾಮದಲ್ಲಿ ನೂರಾರು ಬಡ ಕುಟುಂಬಗಳು ವಾಸಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಪಟ್ಟಣ ಸೇರಿದಂತೆ ಇನ್ನಿತರ ಕಡೆಗಳಿಗೆ ತೆರಳಲು ಖಾಸಗಿ ವಾಹನಗಳನ್ನು ಅವಲಂಬಿಸುವ ಪರಿಸ್ಥಿತಿ ಇದೆ. ಇದರಿಂದ ಸಮಸ್ಯೆ ಅನುಭವಿಸುತ್ತಿದ್ದ ಗ್ರಾಮಸ್ಥರು ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಪಾಲೆಮಾಡು ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಮಂತರ್ ಗೌಡ ಅವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಮುತುವರ್ಜಿಹಿಸಿ ಪಾಲೆಮಾಡು ಗ್ರಾಮಕ್ಕೆ ಮೊದಲ ಬಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದ್ದು, ಶಾಸಕರ ಜನಸ್ಪಂದನೆಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಗ್ರಾಮಕ್ಕೆ ಬಸ್ ಬರುತ್ತಿದ್ದಂತೆ ಬಸ್ಸಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ಪಾಲೆಮಾಡು ಗ್ರಾಮದಿಂದ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ಪ್ರತಿ ದಿನ ಬೆಳಗ್ಗೆ 7.45 ಹಾಗೂ ಸಂಜೆ…
ಮಡಿಕೇರಿ ಜ.20 : ಮುದ್ದ ಕಳಲ ಯುವಕ ಸಂಘದ ವತಿಯಿಂದ ನಗರದ ಕೋಟೆ ಮಹಿಳಾ ಸಮಾಜದಲ್ಲಿ ಮೊಗೇರ ಸಮುದಾಯ ಬಾಂಧವರ ವಿಶೇಷ ಸಭೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಜ್ಯೋತಿ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಶೀಘ್ರ ನಿವೇಶನ ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಸ್ವತಂತ್ರ ಪೂರ್ವದಿಂದಲೇ ಸ್ವಂತ ಮನೆ ಇಲ್ಲದೆ ಕೊಡಗಿನ ವಿವಿಧೆಡೆ ಕಾಫಿ ತೋಟಗಳ ಲೈನ್ ಮನೆಯಲ್ಲಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ವಿವಿಧ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಜಿಲ್ಲಾಡಳಿತದ ಗಮನ ಸೆಳೆಯಲಾಗುತ್ತಿದೆ. ನಿವೇಶನದ ಬೇಡಿಕೆ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಹಾಗೂ ಚುನಾಯಿತ ಪ್ರತಿನಿಧಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜ್ಯೋತಿ ಕುಮಾರ್ ಆರೋಪಿಸಿದರು. ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವ ಪ್ರಯತ್ನ ನಡೆಯಬೇಕಾಗಿದೆ ಎಂದ ಅವರು, ಖಾಸಗಿ…
ಮಡಿಕೇರಿ ಜ.20 : NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಝ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಐದು ಗ್ಯಾರಂಟಿಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಜನರ ವಿಶ್ವಾಸವನ್ನು ಗಳಿಸುವಂತಾಗಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ವಲಯ ಮತ್ತು ನಗರ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಶ್ರಮ ವಹಿಸಬೇಕು ಎಂದರು. ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್,…
ಮಡಿಕೇರಿ ಜ.20 : NEWS DESK : ಲೋಕೋಪಯೋಗಿ ಇಲಾಖೆಯಿಂದ ಬಿಟ್ಟಂಗಾಲ ಕೂಟಿಯಾಲ ರಸ್ತೆಯಲ್ಲಿ 2.5 ಕಿ ಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ನಾಗರಿಕರು ಹಾಜರಿದ್ದರು.
ಮಡಿಕೇರಿ ಜ.20 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಮೂರ್ನಾಡಿನ ಕರಸೇವಕರನ್ನು ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕ ಸನ್ಮಾನಿಸಿ ಗೌರವಿಸಿತು. 1992ರಲ್ಲಿ ರಾಮ ಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಕರಸೇವಕರಾದ ಬೈಲೋಳಿ ಸುಬ್ಬಯ್ಯ, ವೀರೇಶ್, ಸೋಮ ಚೆಲುವ ಹಾಗೂ ಬಿ.ಕೆ.ಪೂವಪ್ಪ ಅವರ ಪರವಾಗಿ ಪತ್ನಿ ಕಲಾವತಿ ಅವರನ್ನು ಸನ್ಮಾನಿಸಿ ಕರಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ನಾಲ್ವರು ಕರಸೇವಕರ ಮನೆಗಳಿಗೇ ತೆರಳಿ ಗೌರವಿಸಿದ ವಿಹೆಚ್‍ಪಿ ಪ್ರಮುಖರು ಅಯೋಧ್ಯೆಯ ಮಂತ್ರಾಕ್ಷತೆ ನೀಡಿದರು. ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಹಿಂದೂ ಕಾರ್ಯಕರ್ತರ ಪರಿಶ್ರಮದಿಂದ ಇದು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್ ನ ಮೂರ್ನಾಡು ಘಟಕದ ಅಧ್ಯಕ್ಷ ಬಿ.ವಿ.ಮೋಹನ್, ಕಾರ್ಯದರ್ಶಿ ದಿನೇಶ್ ಮೂರ್ನಾಡು, ಬಜರಂಗದಳದ ಪ್ರಮುಖ ಎಂ.ಕೆ.ಪ್ರವೀಣ್, ಮಾತೃಶಕ್ತಿಯ ಜಿಲ್ಲಾ ಪ್ರಮುಖರಾದ ಪೂರ್ಣಿಮಾ ಸುರೇಶ್, ಜಾನಕಿ ಚಂಗಪ್ಪ ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಜ.20 : NEWS DESK : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜ.22 ರಂದು ಕೊಡಗು ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಮತ್ತು ಮನೆ ಮನೆಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಘಟಕ ಕರೆ ನೀಡಿದೆ. ಜಿಲ್ಲೆಯ ಎಲ್ಲಾ ದೇವಾಲಯಗಳನ್ನು ಶುಚಿ ಮಾಡಿ, ಅಲಂಕಾರಗೊಳಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು. ಶ್ರೀರಾಮ ನಾಮಸ್ಮರಣೆ ಮತ್ತು ಭಜನೆಯೊಂದಿಗೆ ಬಾಲರಾಮನ ಪ್ರತಿಷ್ಠಾಪನೆಯ ದಿನವನ್ನು ಅರ್ಥಪೂರ್ಣಗೊಳಿಸಬೇಕು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸೂಚನೆಯಂತೆ ಈಗಾಗಲೇ ಜಿಲ್ಲೆಯ ಪ್ರತಿ ಮನೆಗೂ ಆಯೋಧ್ಯೆಯ ಮಂತ್ರಾಕ್ಷತೆಯನ್ನು ತಲುಪಿಸಲಾಗಿದೆ. ಸೋಮವಾರ ಸೂರ್ಯಾಸ್ತವಾದ ನಂತರ ಎಲ್ಲಾ ಮನೆಯಲ್ಲಿ ದೀಪ ಬೆಳಗಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಿ ದೀಪೋತ್ಸವ ಆಚರಿಸಬೇಕು ಎಂದು ವಿಹೆಚ್‍ಪಿ ಮನವಿ ಮಾಡಿದೆ.
ನಾಪೋಕ್ಲು ಜ.20 : ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ನಾಪೋಕ್ಲುವಿನ ಸಂತೆ ಮೈದಾನದಲ್ಲಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿ ನೀಡಲಾಯಿತು. ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ಯಾತ್ರೆ ನಡೆದಿದ್ದು, ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋಧಯ ಯೋಜನೆ, ಪ್ರಧಾನಮಂತ್ರಿ ಅವಾಸ್ ಯೋಜನೆ ಗ್ರಾಮೀಣ ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ , ಕಿಸಾನ್ ಕ್ರೆಡಿಟ್ ಕಾರ್ಡ್ , ಪೋಷನ್ ಅಭಿಯಾನ್, ಜಲಜೀವನ್ ಮಿಷನ್, ಸ್ವಾಮಿತ್ವ ಯೋಜನೆ, ಜೀವನ್ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ ಅಟಲ್ ಪಿಂಚಣಿ ಯೋಜನೆ ಪ್ರಧಾನಮಂತ್ರಿ ಪ್ರಣಾಮ ಯೋಜನೆ ಮತ್ತು ಜ್ಞಾನ ಗೊಬ್ಬರಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ…






