ಮಡಿಕೇರಿ ಜ.20 : NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶತಮಾನೋತ್ಸವ ಸಂಭ್ರಮ ಹಿನ್ನೆಲೆ ಎರಡು ದಿನಗಳ ಕಾಲ ನಗರ ಗಾಂಧಿ ಮೈದಾನದಲ್ಲಿ ಆಯೋಜಿತ ವಾಹನ ಮತ್ತು ಕೃಷಿ ಯಂತ್ರೋಪಕರಣಗಳ ಸಾಲ ಮೇಳಕ್ಕೆ ಚಾಲನೆ ದೊರಕಿತು. ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ ಅವರು ಬೆಳಗ್ಗೆ ಮೇಳಕ್ಕೆ ಚಾಲನೆಯನ್ನು ನೀಡಿದರು. ದ್ವಿಚಕ್ತ ಮತ್ತು ಚತುಷ್ಚಕ್ರವಾಹನ ಮಾರಾಟದ ಹಲ ಕಂಪೆನಿಗಳು ತಮ್ಮ ವಾಹನಗಳನ್ನು ಮೇಳದಲ್ಲಿ ಪ್ರದರ್ಶನಕ್ಕಿರಿಸಿದ್ದರೆ, ಕೃಷಿ ಯಂತ್ರೋಪಕರಣಗಳ ಮಾರಾಟದ ಹಲ ಮಳಿಗೆಗಳು ಗಮನ ಸೆಳೆಯುತ್ತಿವೆ. ಜಿಲ್ಲಾ ವ್ಯಾಪ್ತಿಯ ಬೆಳೆಗಾರರು, ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡುತ್ತಿರುವುದು ಕಂಡು ಬಂದಿತು. ಈ ಎರಡು ದಿನಗಳ ಮಾರಾಟ ಮೇಳದಲ್ಲಿ ವಿಶೇಷವಾಗಿ ಜಿಲ್ಲೆಯ ಕೃಷಿಕರ ಅನುಕೂಲಕ್ಕಾಗಿ ಕೃಷಿ ಯಂತ್ರೋಪಕರಣಗಳನ್ನು ಮತ್ತು ವಾಹನಗಳನ್ನು ಬ್ಯಾಂಕ್ ನೀಡುವ ಸಾಲದ ಮೂಲಕ ಖರೀದಿಸಿದಲ್ಲಿ, ಸಾಲದ ಒಟ್ಟು ಮೊತ್ತದ ಶೇ.7 ರಷ್ಟು ರಿಯಾಯಿತಿಯನ್ನು ಕೆಡಿಸಿಸಿ…
ಲೇಖಕ: admin
ಸೋಮವಾರಪೇಟೆ ಜ.20 : NEWS DESK : ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಜ.26ರಂದು ಪದವಿಪೂರ್ವ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ಸೋಮವಾರಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಪ್ರತಿ ಪೂರ್ವಭಾವಿ ಸಭೆಯಲ್ಲೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ತಹಶೀಲ್ದಾರ್ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದರು. ಧ್ವಜಾರೋಹಣ, ಮೈದಾನ ಸ್ವಚ್ಪತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿ, ಬೆಳಗ್ಗಿನ ಉಪಾಹಾರ, ಕವಾಯಿತು, ಕುಡಿಯುವ ನೀರು ಮತ್ತಿತರ ವ್ಯವಸ್ಥೆಯ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುವಂತೆ ಸೂಚಿಸಿದರು. ಮೈದಾನ ಸ್ವಚ್ಪತೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯವರು ಒಂದು ದಿನ ಮೊದಲೇ ಗಮನ ಹರಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಈರ್ವರು ನಿವೃತ್ತ ಯೋಧರನ್ನು ಸನ್ಮಾನಿಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ…
ವಿರಾಜಪೇಟೆ ಜ.20 : NEWS DESK : ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರಲ್ಲಿ ಕನ್ನಡ ನೆಲ ಜಲ ಮತ್ತು ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಮಾಡುತ್ತಾ ಕನ್ನಡಿಗರಲ್ಲಿ ಜಾಗೃತವಾಗಿರುವ ಕನ್ನಡ ಅಭಿಮಾನವನ್ನು ಬಡಿದೆಬ್ಬಿಸುತ್ತಿದೆ ಎಂದು ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಅಧ್ಯಕ್ಷ ಮುಕ್ಕಾಟೀರ ಐ.ಸುನೀಲ್ ನಾಣಯ್ಯ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಹಾಗೂ ದೇವಣಗೇರಿ ಬಿ.ಸಿ.ಪ್ರೌಢಶಾಲೆ ವತಿಯಿಂದ ಶಾಲಾ ಸಭಾಂಗಣದಲ್ಲಿ ನಡೆದ ಮುಲ್ಲೆಂಗಡ ಶಂಕರಿ ಪೊನ್ನಪ್ಪ ಮತ್ತು ಮುಲ್ಲೇಂಗಡ ಮಧೋಶ್ ಪೂವಯ್ಯ ಅವರು ಸ್ಥಾಪಿಸಿದ “ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಸ್ಮರಣಾರ್ಥ ದತ್ತಿನಿಧಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಸಾಹಿತ್ಯವನ್ನು ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ದೇವಣಗೇರಿ ಬಿ.ಸಿ. ಪ್ರೌಢ ಶಾಲೆ ಮುಖ್ಯೋದ್ಯಾಯರಾದ ಹೆಚ್.ಡಿ. ಲೋಕೇಶ್ ಕನ್ನಡದ ಹಿರಿಯ ಕವಿ, ಸಾಹಿತಿಗಳ ಸಾಹಿತ್ಯದ ಬಗ್ಗೆ ಉಲ್ಲೇಖಿಸಿ ಮಾತನಾಡಿ,…
ವಿರಾಜಪೇಟೆ ಜ.20 : NEWS DESK : ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಜಿ.ನಟರಾಜ್ ಬೋರ್ಕರ್ ಹಾಗೂ ಉಪಾಧ್ಯಕ್ಷರಾಗಿ ಬಿ.ಪಿ. ಸ್ವಾತಿ ಪ್ರಕಾಶ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯಲ್ಲಿ ಇತ್ತೀಚಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 15 ಸದಸ್ಯರು ಅವಿರೋಧವಾಗಿ ಆಯ್ಕೆಗೊಂಡಿದ್ದರು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಆಶಾ ನಡೆಸಿಕೊಟ್ಟರು. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸಂಘದ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಸದಸ್ಯರಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆಂದು ಹೇಳಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಬಿ.ಆರ್. ಉದಯ ಶಂಕರ್ ಸೇರಿಂತೆ ಸದಸ್ಯರುಗಳು ಹಾಜರಿದ್ದರು.
ಮಡಿಕೇರಿ ಜ.20 : NEWS DESK : ಹನ್ನೆರಡನೇ ಶತಮಾನದಲ್ಲಿ ಕನ್ನಡ ನಾಡನ್ನು ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ಭಕ್ತಿ ಭಂಡಾರಿ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕರಾಗಿ ಘೋಷಿಸಿದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಕ್ರಮ ಸ್ತುತ್ಯಾರ್ಹವಾದುದು ಎಂದು ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಹೇಳಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿದ ಅವರು, ಸಮಾಜದಲ್ಲಿ ಇಂದಿಗೂ ಸಾಮಾಜಿಕ ಪಿಡುಗಾಗಿಯೇ ಉಳಿದಿರುವ ಜಾತಿ, ವರ್ಣ, ವರ್ಗ, ಲಿಂಗ ಬೇಧದ ವಿರುದ್ದದ ಬಸವೇಶ್ವರರು ಹನ್ನೆರಡನೇ ಶತಮಾನದಲ್ಲಿಯೇ ಧ್ವನಿ ಮೊಳಗಿಸಿದ್ದರು ಎಂದ ಅವರುಕೊಡಗು ಜಿಲ್ಲೆಯ ಮಹಾ ಜನತೆಯ ಪರವಾಗಿ ರಾಜ್ಯ ಸರ್ಕಾರದ ದಿಟ್ಟಕ್ರಮವನ್ನು ಪ್ರಶಂಸಿಸಿದ್ದಾರೆ.
ಮಡಿಕೇರಿ ಜ.20 : NEWS DESK : ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಕೊಡಗಿನ ಬಿ.ಎಸ್.ರಕ್ಷಿತಾ ಆಯ್ಕೆಯಾಗಿದ್ದಾಳೆ. ಬೆಂಗಳೂರಿನ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಅಂತಿಮ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿರುವ ಇವಳು, ಎನ್.ಸಿ.ಸಿ. ಘಟಕದಿಂದ ಪರೇಡ್ ಗೆ ಆಯ್ಕೆಯಾಗಿದ್ದಾಳೆ. ವಿರಾಜಪೇಟೆಯ ಬೇಟೋಳಿ ಗ್ರಾ.ಪಂ ಮಾಜಿ ಸದಸ್ಯ ಬಿ. ಎನ್. ರಮೇಶ್ ಅವರ ಮೊಮ್ಮಗಳು ಮತ್ತು ಬೆಂಗಳೂರಿನಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಅಧಿಕಾರಿ ಬಿ.ಆರ್. ಶುಭ ಶಂಕರ್ ಹಾಗೂ ಶಿಕ್ಷಕಿ ಬಿ.ಎನ್.ನಳಿನಾಕ್ಷಿ ಅವರ ಪುತ್ರಿಯಾಗಿರುವ ರಕ್ಷಿತಾ ಈ ಹಿಂದೆಯೂ ಎನ್. ಸಿ. ಸಿ. ಯ ಅನೇಕ ಶಿಬಿರಗಳು ಹಾಗೂ ತರಬೇತಿಗಳಲ್ಲಿ ಪಾಲ್ಗೊಂಡು ಉತ್ತಮ ಎನ್.ಸಿ.ಸಿ. ಕೆಡೆಟ್ ಎಂಬ ಮನ್ನಣೆಗೂ ಪಾತ್ರಳಾಗಿದ್ದಾಳೆ.
ಮಡಿಕೇರಿ ಜ.20 : NEWS DESK : ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಸರ್ಕಾರದ ಘೋಷಣೆ ಸ್ವಾಗತಾರ್ಹ ಕ್ರಮ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ತಿಳಿಸಿದ್ದಾರೆ. 12 ನೆ ಶತಮಾನದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟು ಅಂದಿನ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಜಾತೀಯತೆ, ಕಂದಾಚಾರದ ವಿರುದ್ಧ ಹೋರಾಡಿದ ಧೀಮಂತರು, ಅಂದೆ ಅನುಭವ ಮಂಟಪ ಸ್ಥಾಪಿಸಿ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದವರು ಎಂದ ಅವರು ಕರ್ನಾಟಕದ ಆಚಾರ, ವಿಚಾರ ಸಾಂಸ್ಕೃತಿಕ ಸೊಗಡನ್ನು ಜಗತ್ತಿಗೆ ಪರಿಚಯಿಸಿದವರು. ಇಂತಹ ಮಹಾನ್ ವ್ಯಕ್ತಿಯನ್ನು ಈ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಮಂತ್ರಿಮಂಡಲ ಬಸವೇಶ್ವರರು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ನಿರ್ಧರಿಸಿ ಘೋಷಿರುವುದು ಸ್ವಾಗತಾರ್ಹ ಹಾಗೂ ಅಭಿನಂದನಾರ್ಹ ಕ್ರಮವಾಗಿದ್ದು, ಬಸವಾನುಯಾಯಿಗಳಲ್ಲಿ ಸಂತಸ ಮೂಡಿಸಿದೆ ಎಂದು ಎಸ್.ಮಹೇಶ್ ತಿಳಿಸಿದ್ದಾರೆ.
ಮಡಿಕೇರಿ ಜ.20 : NEWS DESK : ಸೋಮವಾರಪೇಟೆ ಪಟ್ಟಣದ ಮಡಿಕೇರಿ ರಸ್ತೆಯಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಗಾಗಿ ಮಣ್ಣು ತೆಗೆಯುತಿರುವುದರಿಂದ ಬಸವೇಶ್ವರ ಪ್ರತಿಮೆ ಕುಸಿಯುವ ಭೀತಿಯ ಹಿನ್ನಲೆಯಲ್ಲಿ ಕಿರಿಕೋಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ ಹಾಗೂ ವೀರಶೈವ ಸಮಾಜದ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಲೋಕೋಪಯೋಗಿ ಇಲಾಖೆಯ ಅಭಿಯಂತರರು ಹಾಗೂ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಿದರು. ಸೇತುವೆ ನಿರ್ಮಾಣ ಕಾರ್ಯ ಸ್ವಾಗತಾರ್ಹ, ಅಭಿವೃದ್ಧಿಕಾರ್ಯಗಳಿಗೆ ನಮ್ಮ ಸಹಕಾರವಿದೆ. ಆದರೆ ಬಸವೇಶ್ವರರ ಪ್ರತಿಮೆಗೆ ಯಾವುದೇ ಹಾನಿಯಾಗದಂತೆ ಜಾಗ್ರತೆ ವಹಿಸಬೇಕು ಎಂದು ಸದಾಶಿವ ಸ್ವಾಮೀಜಿ ತಿಳಿಸಿದರು. ಈ ಸಂದರ್ಭ ಅಭಿಯಂತರ ಅರ್ಬಾಜ್ ಅಹಮ್ಮದ್ ಮಾತನಾಡಿ, ಹಲವು ದಿನಗಳಿಂದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಪ್ರತಿಮೆಯ ಪಕ್ಕದಲ್ಲಿ ಜಾಗರೂಕತೆಯಿಂದ ಕೆಲಸ ಮಾಡಿತಿದ್ದೇವೆ ಆದರೆ ಮಣ್ಣು ಕುಸಿಯುತ್ತಿರುವುದರಿಂದ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಇದು ಅನಿವಾರ್ಯ. ಅಗತ್ಯ ಬಿದ್ದರೆ ಪ್ರತಿಮೆಯನ್ನು ತಾತ್ಕಾಲಿಕವಾಗಿ ತೆಗೆಯಬೇಕಾಗುತ್ತದೆ ಎಂದು ವಿವರಿಸಿದರು. ಪ್ರತಿಮೆಗೆ ಯಾವುದೇ ಹಾನಿಯಾಗದಂತೆ ಕಾರ್ಯ ನಿರ್ವಹಿಸುತ್ತವೆ ಹಾಗೂ ಪ್ರತಿಮೆ ಜಾರದಂತೆ ಬೆಲ್ಟ್ ಹಾಕಿ ಎಳೆದು ಕಟ್ಟಲಾಗಿದೆ…
ಮಡಿಕೇರಿ ಜ.20 :NEWS DESK : ಹಿಂದೂ ವಿವಾಹಕ್ಕೆ ಸಂಭಂದಿಸಿದಂತೆ ಹಿಂದೂ ಧರ್ಮದಲ್ಲಿ ಜನಿಸಿದ ವಧು-ವರರಿಗೆ ಉತ್ತಮ ಜೋಡಿ ಕಲ್ಪಿಸುವ ನಿಟ್ಟಿನಲ್ಲಿ ವಿಶ್ವ ಹಿಂದೂ ಮಾಂಗಲ್ಯ ಮಂಚ್ ಆರಂಭವಾಗಿದ್ದು, ಜ.12 ರಂದು ವಿರಾಜಪೇಟೆಯಲ್ಲಿ ಕೊಡಗು ಜಿಲ್ಲಾ ಘಟಕ ಉದ್ಘಾಟನೆಗೊಳ್ಳಲಿದೆ ಎಂದು ಮಂಚ್ ನ ರಾಜ್ಯಾಧ್ಯಕ್ಷ ವಿನೋದ್ ತರ್ಮಲ್ ತಿಳಿಸಿದ್ದಾರೆ. ವಿರಾಜಪೇಟೆಯ ಘಟಕದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಧರ್ಮದ ವಧು ಮತ್ತು ವರರಿಗೆ ಉತ್ತಮ ಬಾಳಸಂಗಾತಿ ದೊರಕಿಸಿಕೊಡಬೇಕು ಎನ್ನುವ ಪರಿಕಲ್ಪನೆಯಿಂದ ಸಂಸ್ಥೆಯನ್ನು ಆರಂಭಿಸಲಾಗಿದ್ದು, ರಾಜ್ಯದ ಇತರ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇದೀಗಾ ಕೊಡಗು ಜಿಲ್ಲೆಗೆ ಸಿಮಿತವಾದಂತೆ ಕೊಡಗು ಜಿಲ್ಲಾ ಘಟಕದ ಕಾರ್ಯ ಕಛೇರಿಯನ್ನು ವಿರಾಜಪೇಟೆ ನಗರದಲ್ಲಿ ಪ್ರಾರಂಭಿಸಲಾಗುವುದು ಎಂದರು. ವಿಶ್ವ ಹಿಂದೂ ಮಾಂಗಲ್ಯ ಮಂಚ್‍ನ ಪ್ರಮುಖರಾದ ಕೆ.ಎನ್.ಶಶಿ ಕುಮಾರ್ ಮಾತನಾಡಿ, ಹಿಂದೂ ಧರ್ಮವನ್ನು ಆಚರಿಸಿಕೊಂಡು ಬರುತ್ತಿರುವ ಜಾತಿ ಉಪ ಜಾತಿಗಳನ್ನು ಒಂದೇ ವೇದಕೆಯಲ್ಲಿ ತರುವುದಾಗಿದೆ. ವಧು ವರರಿಗೆ ಸೂಕ್ತ ಬಾಳ ಸಂಗಾತಿಯನ್ನು ದೊರಕಿಸಿಕೊಡುವುದು ಸಂಸ್ಥೆಯ ಪ್ರಮುಖ ವಿಷಯವಾಗಿದೆ. ವಧು-ವರರು ಸಂಸ್ಥೆಯ…
ಮಡಿಕೇರಿ ಜ.20 : NEWS DESK : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಯುವ ಪ್ರಶಸ್ತಿಗೆ ನೆಲಕ್ಕಿ ಯುವತಿ ಮಂಡಳಿಯ ಸದಸ್ಯರಾದ ಜೀವಿತ ಚಿಂತನ್ ಆಯ್ಕೆಯಾಗಿದ್ದಾರೆ. ಜೀವಿತ ಚಿಂತನ್ ಯುವತಿ ಮಂಡಳಿ ವತಿಯಿಂದ ನಡೆಯುವ ವಿವಿಧ ಕಾರ್ಯಕ್ರಮಗಳಾದ ತಾಲ್ಲೂಕು ಯುವಜನ ಮೇಳ ಜಿಲ್ಲಾ ಯುವಜನ ಮೇಳ, ರಾಜ್ಯ ಯುವಜ ಮೇಳ ಹಾಗೂ ಜಿಲ್ಲಾ ಯುವಜನೋತ್ಸವ, ರಾಜ್ಯ ಯುವ ಜನೋತ್ಸವ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ಶ್ರಮದಾನ ರಕ್ತದಾನ, ಶೈಕ್ಷಣಿಕ ಚಟುವಟಿಕೆ, ದಸರಾ ಕಾರ್ಯಕ್ರಮ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದಾರೆ. ಇವರು ಉತ್ತಮ ಹಾಡುಗಾರರು, ನೃತ್ಯಗಾರರು, ಶಿಕ್ಷಕಿಯೂ ಹಾಗೂ ಲೇಖಕರು ಆಗಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ. ಜ.20 ರಂದು ಸುಬ್ರಮಣ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.






