ಸೋಮವಾರಪೇಟೆ ಜ.18 : ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಒತ್ತಾಯಿಸಿದೆ. ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಜ.6 ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಗಿದೆ. ಬೇಡಿಕೆಗಳ ಈಡೇರಿಕೆಗೆ ಪೂರಕವಾಗಿ ಹೋರಾಟ ಕೈಗೊಳ್ಳುವ ಮುಂಚಿತವಾಗಿ ರಾಜ್ಯದ ಎಲ್ಲಾ ಮಾನ್ಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರಿಗೆ ನಮ್ಮ ಸಂಘದ ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರವನ್ನು ಸಲ್ಲಿಸಿ ಅವರ ಸಹಕಾರ ಮತ್ತು ಬೆಂಬಲ ಪಡೆಯಲು ಸಭೆ ನಿರ್ಣಯಿಸಿದಂತೆ ಎಲ್ಲ ಶಾಸಕರುಗಳಿಗೂ ಮನವಿ ಸಲ್ಲಿಸಲಾಗುತ್ತಿದೆ ಎಂದು ಅಧ್ಯಕ್ಷ ಪ್ರದೀಪ್ ತಿಳಿಸಿದರು. ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ…
ಲೇಖಕ: admin
ಮಡಿಕೇರಿ ಜ.18 : ಕೊಡಗಿನಲ್ಲಿ ನಿರಂತರವಾಗಿ ಆನೆ ಮತ್ತು ಮಾನವರ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಾಫಿ ಬೆಳೆಗಾರರು, ಕೂಲಿ ಕಾರ್ಮಿಕರು ದಿನನಿತ್ಯದ ಕೆಲಸ ಮಾಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಪರಿಹಾರ ಹುಡುಕುವ ಸಲುವಾಗಿ ಮಡಿಕೇರಿಯ ಕೊಡಗು ವಿದ್ಯಾಲಯ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಪಿ.ವಿ.ಲಕ್ಷ್ಯ ಮತ್ತು ಎಂ. ಭವಿಷ್ಯ, ಶಿಕ್ಷಕಿ ಪಿ. ಎಸ್. ಪೊನ್ನಮ್ಮ ಅವರ ಮಾರ್ಗದರ್ಶನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿಯು ಆಯೋಜಿಸಿದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಂಡು ವನ್ಯಜೀವಿಗಳು ಮತ್ತು ಮಾನವರ ನಡುವಿನ ಸಂಘರ್ಷದ ಕುರಿತಾಗಿ ಸಂಶೋಧನಾತ್ಮಕ ಪ್ರಬಂಧವನ್ನು ಮಂಡಿಸಿದ್ದಾರೆ. ಇವರ ಪ್ರಬಂಧವು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿರುತ್ತದೆ. ಕೊಡಗಿನಲ್ಲಿ ಆನೆ ಮತ್ತು ಮಾನವರ ನಡುವೆ ಸಂಘರ್ಷ ನಡೆಯುತ್ತಿರುವ ಜಾಗಗಳಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಸಮೀಕ್ಷೆ ನಡೆಸಿ ಪರಿಸ್ಥಿತಿಯ ತೀವ್ರತೆಯನ್ನು ತಿಳಿದುಕೊಂಡರು. ವಿದ್ಯಾರ್ಥಿಗಳ ಯೋಜನೆಯು…
ಮಡಿಕೇರಿ ಜ.18 : ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಆಂಬ್ಯುಲೆನ್ಸ್ ಸೌಲಭ್ಯ ಇರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಸೌಕರ್ಯ ಇಲ್ಲವೆಂದು ಕೇಳಿ ಬರಬಾರದು. ಹೆರಿಗೆಗೆ ದಾಖಲಾಗುವ ತಾಯಿಯ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಸ್ಟ ನಿರ್ದೇಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶೇಕಡವಾರು ಹೆರಿಗೆ, ಶಸ್ತ್ರ ಚಿಕಿತ್ಸೆ, ತಾಯಿ ಮತ್ತು ಶಿಶು ಸಂರಕ್ಷಣೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.…
ಮಡಿಕೇರಿ 17 : ಮಾರುತಿ ಓಮ್ನಿ ಮತ್ತು ಬೊಲೆರೋ ಜೀಪು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಬುಧವಾರ ನಡೆದಿದೆ. ಓಮ್ನಿ ಚಲಾಯಿಸುತ್ತಿದ್ದ ಮಾಜಿ ಯೋಧ, ಬಸವನಹಳ್ಳಿ ನಿವಾಸಿ ರಾಜೇಶ್ ದೇವಯ್ಯ (38) ಹಾಗೂ ಅವರ ಪುತ್ರಿ ಮೂರು ವರ್ಷದ ನ್ಯಾನ್ಸಿ ಬೊಳ್ಳಮ್ಮ ಮೃತ ದುರ್ದೈವಿಗಳು. ರಾಜೇಶ್ ದೇವಯ್ಯ ಅವರು ಮೂಲತಃ ಕಾಲೂರು ಗ್ರಾಮದವರಾಗಿದ್ದು, ಪ್ರಸಕ್ತ ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ನೆಲೆಸಿದ್ದರು. ಮಡಿಕೇರಿಯಲ್ಲಿ ತಮ್ಮ ನಾದಿನಿಯ ಪುತ್ರಿಯ ನಾಮಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಓಮ್ನಿಯಲ್ಲಿ ಬಸವನಹಳ್ಳಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ದೇವಯ್ಯ ಹಾಗೂ ಪುತ್ರಿ ನ್ಯಾನ್ಸಿ ಬೊಳ್ಳಮ್ಮ ಪ್ರಯಾಣಿಸುತ್ತಿದ್ದ ಓಮ್ನಿಗೆ ಬೋಯಿಕೇರಿಗೆ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿರಿಯಪಟ್ಟಣ ತಾಲೂಕಿನ ಚನಕಲ್ ಕಾವಲ್‍ನ ಬೊಲೆರೋ ಜೀಪು ಡಿಕ್ಕಿಯಾಗಿದೆ. ಪತ್ನಿ ಸ್ಮಿತಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಓಮ್ನಿಯನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ರಾಜೇಶ್ ದೇವಯ್ಯ ಅವರು ಸ್ಥಳದಲ್ಲೇ ಮೃತಪಟ್ಟರೆ, ಪುತ್ರಿ ನ್ಯಾನ್ಸಿ…
ಮಡಿಕೇರಿ ಜ.17 : ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಒಂಭತ್ತು ಕಳವು ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಮಾಗೋಳ್ಳಿ ಗ್ರಾಮದ ನಿವಾಸಿ ವೀರೇಶ್ ಕುಮಾರ(32) ಎಂಬಾತನೆ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ಕಳವು ಮಾಡಿದ್ದ ಒಂದು ಮೊಬೈಲ್, ಬೆಳ್ಳಿ ಚೆಂಬು ಮತ್ತು ವಾಚ್‍ವೊಂದನ್ನು ವಶಪಡಿಸಿಕೊಳ್ಳಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಗರಹಳ್ಳಿ ನಿವಾಸಿ ತಿಮ್ಮಯ್ಯ ಬಿ.ಸಿ. ಎಂಬವರ ಕೂರ್ಗ್ ಹಳ್ಳಿ ಎಸ್ಟೇಟ್‍ನಲ್ಲಿನ ಮನೆಗೆ ಇದೇ ಜ.7ರಂದು ಅಪರಿಚಿತ ವ್ಯಕ್ತಿಗಳು ಬೀಗ ಮುರಿದು ಒಳನುಗ್ಗಿ ಗಾದ್ರೇಜ್‍ನಲ್ಲಿದ್ದ ಬೆಳ್ಳಿ ಚೆಂಬು, ಮೊಬೈಲ್ ಮತ್ತು ವಾಚ್‍ವೊಂದನ್ನು ಕಳವು ಮಾಡಿದ್ದರು. ಈ ಬಗ್ಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕುಶಾಲನಗರ, ವಿರಾಜಪೇಟೆ, ಕುಟ್ಟ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿಯ ಕಳವು ಪ್ರಕರಣಗಳು ದಾಖಲಾಗಿತ್ತು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕರ ರಾಜೇಶ್ ಕೆ.ಅವರ ಮುಂದಾಳತ್ವದಲ್ಲಿ, ಸುಂಟಿಕೊಪ್ಪ ಠಾಣಾ ಎಸ್‍ಐ ಶ್ರೀಧರ್ ಎಂ.ಸಿ., ಸಿಬ್ಬಂದಿಗಳು…
ಮಡಿಕೇರಿ ಜ.17 : ಅಯೋಧ್ಯೆಯಲ್ಲಿ ಜ.22 ರಂದು ನಡೆಯಲಿರುವ ಶ್ರೀ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ದಿವ್ಯ ಕಾರ್ಯಕ್ರಮದಂದು ಕೊಡಗಿನ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಆಯೋಜಿತವಾಗಿದ್ದು, ಈಗಾಗಲೆ ಹಲವೆಡೆಗಳಲ್ಲಿ ಆಕರ್ಷಕ ಅಲಂಕಾರಗಳು ಗಮನ ಸೆಳೆಯಲಾರಂಭಿಸಿವೆ. ತಾಲ್ಲೂಕು ಕೇಂದ್ರ ವಿರಾಜಪೇಟೆಯ ಶ್ರೀ ಗಣಪತಿ ದೇವಸ್ಥಾನದ ಬುಡದಲ್ಲಿರುವ ಪುರಾತನ ‘ಗಡಿಯಾರ ಕಂಬ’ದ ಸುತ್ತಮುತ್ತಲ ಪ್ರದೇಶವನ್ನು ಕೇಸರಿ ಬಣ್ಣದ ಬಾವುಟಗಳಿಮದ ಅತ್ಯಾಕರ್ಷಕವಾಗಿ ಅಲಂಕರಿಸಲಾಗಿದೆ. ರಾಮಚಂದ್ರನ ಪ್ರಾಣಪ್ರತಿಷ್ಠಾಪನಾ ಕಾರ್ಯದ ಹಿನ್ನೆಲೆ, ಅಂದಿನ ದಿನವನ್ನು ಉತ್ಸಾಹ ಮತ್ತು ಶ್ರದ್ಧಾಭಕ್ತಿಗಳಿಂದ ಎದುರ್ಗೊಳ್ಳಲು ಹತ್ತು ಹಲವು ಕಾರ್ಯಕ್ರಮಗಳು ಸದ್ದು ಗದ್ದಲವಿಲ್ಲದೆ ಆಯೋಜನೆಗೊಳ್ಳುತ್ತಿದೆ. ಹಲವು ಕಡೆ ಅಂದು ಅನ್ನಸಂತರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ::: ಬಾಡಗರಕೇರಿ ::: ದಕ್ಷಿಣ ಕೊಡಗಿನ ಬಾಡಗರಕೇರಿಯ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನೆಯನ್ನು ಗ್ರಾಮಸ್ಥರು ವೀಕ್ಷಿಸಲು ಅನುಕೂಲವಾಗುವಂತೆ ನೇರ ಪ್ರಸಾರ ವ್ಯವಸ್ಥೆಯೊಂದಿಗೆ, ದೇವಸ್ಥಾನದಲ್ಲಿ ರಾಮ ಭಜನೆಯನ್ನು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.15ರವರೆಗೆ ಆಯೋಜಿಸಲಾಗಿದೆ. ರಾಮ ಲಲ್ಲಾ ಪ್ರತಿಷ್ಠಾಪನೆಯ ಮಧ್ಯಾಹ್ನ 12.20 ಗಂಟೆಗೆ…
ಮಡಿಕೇರಿ ಜ.17 : ಕುಂಜಿಲ ಪಯ್‍ನರಿ ಜುಮುಆ ಮಸೀದಿ ಪುನರ್ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭ ಜ.19 ರಂದು ನಡೆಯಲಿದೆ. ಕುಂಜಿಲ ಪಯ್‍ನರಿ ಆವರಣದಲ್ಲಿ ಮಧ್ಯಾಹ್ನ 2 ಗಂಟೆಗೆ ಸಯ್ಯಿದ್ ಸ್ವಾದಿಖ್‍ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಹಾಗೂ ಸಯ್ಯಿದ್ ಜಲಾಲುದ್ದೀನ್ ಸಖಾಫಿ ಅಲ್ ಬುಖಾರಿ ವಳಪಟ್ಟಣಂ ಖಾಝಿ ನೂತನ ಮಸೀದಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕುಂಜಿಲ ಪಯ್‍ನರಿ ಆಡಿಟೋರಿಯಂ ನಲ್ಲಿ ನಡಯಲಿರುವ ಸಭಾ ಕಾರ್ಯಕ್ರಮವನ್ನು ಖತೀಬರಾದ ಜನಾಬ್ ನಿಝಾರ್ ಅಹ್ಸನಿ ಉದ್ಘಾಟಿಸಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಕ್ಫ್, ವಸತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ಬಿ.ಝಡ್.ಝಮೀರ್ ಅಹಮ್ಮದ್ ಖಾನ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಬಾಷಾ, ಬೆಂಗಳೂರು ಶಾಂತಿ ನಗರ ಶಾಸಕ ಹಾಗೂ ಫುಟ್‍ಬಾಲ್ ಅಸೋಸಿಯೇಷನ್ ನ ರಾಷ್ಟ್ರೀಯ ಉಪಾಧ್ಯಕ್ಷ ಎನ್.ಎ.ಹಾರಿಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎ.ಹುಸೈನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯ…
ಮಡಿಕೇರಿ ಜ.17 : ಸರಕಾರ “ಶಕ್ತಿ” ಯೋಜನೆಯಡಿ ಉಚಿತ ಬಸ್ ಸೇವೆಯನ್ನು ಘೋಷಿಸಿದೆ, ಆದರೆ ನಮಗೆ, ನಮ್ಮ ಅಮ್ಮನಿಗೆ ಈ ಸೇವೆ ಲಭ್ಯವಾಗುತ್ತಿಲ್ಲ. ಗುಣಮಟ್ಟದ ಕಪ್ಪು ಹಲಗೆ, ಶುದ್ಧ ಕುಡಿಯುವ ನೀರು ಬೇಕು. ಹೀಗೆ ಹಲವು ಬೇಡಿಕೆಗಳನ್ನು ಮುಂದಿಟ್ಟವರು ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲಾ ವಿದ್ಯಾರ್ಥಿಗಳು. ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬಾಳೆಲೆ ಗ್ರಾಮ ಪಂಚಾಯಿತಿ ವತಿಯಿಂದ ವಿಜಯಲಕ್ಷ್ಮಿ ಪ್ರೌಢಶಾಲಾ ವಿದ್ಯಾರ್ಥಿ ಕುಮಾರಿ ಲೇಖಾ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ತಮಗಿರುವ ಕೊರತೆಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಪ್ರೌಢಶಾಲಾ ವಿದ್ಯಾರ್ಥಿಗಳು ಆಡಳಿತ ವ್ಯವಸ್ಥೆಯ ಕಣ್ತೆರೆಸುವ ಪ್ರಯತ್ನ ಮಾಡಿದರು. ವಿದ್ಯಾರ್ಥಿನಿ ಸುಶ್ಮಿತಾ ಮಾತನಾಡಿ ಬಾಳೆಲೆ ಭಾಗದಲ್ಲಿ ರಾಜ್ಯ ಸರಕಾರಿ ಬಸ್ ಸಂಚಾರ ಸಮರ್ಪಕವಾಗಿಲ್ಲ. ಇದರಿಂದಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ ನಮ್ಮ ತಾಯಂದಿರು ಉಚಿತ ಬಸ್ ಸೇವೆಯಿಂದ ವಂಚಿತರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದಳು. ಇತರ ವಿದ್ಯಾರ್ಥಿಗಳು ಮಾತನಾಡಿ ಬಾಳೆಲೆ ಹೋಬಳಿಯ ಕುಗ್ರಾಮಗಳಾದ ಮಲ್ಲೂರು, ಕುಂಬಾರಕಟ್ಟೆ…
ಬೆಳಗಾವಿ ಜ.16 : ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟುಗಳನ್ನು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು, ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು. ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜ.16 : ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ರೇವಣಸಿದ್ದೇಶ್ವರ ಸಿಂಹಾಸನಾಧೀಶ್ವರ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಶಾಸಕರಾದ ಮಹಂತೇಶ್ ಕೌಜಲಗಿ, ಎಚ್.ವೈ.ಮೇಟಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.






