ಲೇಖಕ: admin

ಮಡಿಕೇರಿ ಜ.17 : ಆಲ್ ಇಂಡಿಯಾ ಕೇರಳ ಮುಸ್ಲಿಂ ಕಲ್ಚರಲ್ ಕಮಿಟಿ(ಎಐಕೆಎಂಸಿಸಿ)ಯ ಕೊಡಗು ಜಿಲ್ಲಾ ಘಟಕದಿಂದ 12 ವರ್ಷ ವಯೋಮಿತಿಯೊಳಗಿನ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಘಟಕದ ನಿರ್ದೇಶಕ ಖಲೀಲ್ ಬಾಷಾ, ಶಿಬಿರದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದರು. ಹೃದ್ರೋಗದಿಂದ ಬಳಲುತ್ತಿರುವ ಯಾವುದೇ ಸಮುದಾಯದ ಮಕ್ಕಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯ ಒದಗಿಸಬೇಕೆನ್ನುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಲ್ಲಿ ಹೆಚ್ಚಿನ ಚಿಕಿತ್ಸೆ ಇಲ್ಲವೆ ಶಸ್ತ್ರ ಚಿಕಿತ್ಸೆಯ ಅಗತ್ಯವಿರುವವರಿಗೆ ಅದನ್ನು ಕೇರಳದ ಕೋಝಿಕೋಡ್‍ನ ಮೆಟ್ರೋಮಡ್ ಇಂಟರ್‍ನ್ಯಾಷನಲ್ ಕಾರ್ಡಿಯಾಕ್ ಸೆಂಟರ್‍ನಲ್ಲಿ ಉಚಿತವಾಗಿ ಒದಗಿಸಲಾಗುತ್ತದೆ ಎಂದು ತಿಳಿಸಿದರು. ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಕುಶಾಲನಗರ ವಿಭಾಗದವರಾದರೆ ಮೊ.9731138438, 8861225651, ಮಡಿಕೇರಿ ಮೊ.9964813083, 7907455887, ವಿರಾಜಪೇಟೆ ಮೊ.9916265123, 9972068760 ಮೂಲಕ ಹೆಸರನ್ನು ಜ.30ರ ಒಳಗಾಗಿ ನೋಂದಾಯಿಸಿಕೊಳ್ಳಬಹದು. ಎಲ್ಲಿ ಹೆಚ್ಚಿನ ನೋಂದಣಿ ಇರುತ್ತದೊ ಅಲ್ಲಿ ಶಿಬಿರವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಹೃದ್ರೋಗ…

Read More

ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರ ಕ್ರಮದಲ್ಲಿ ಬದಲಾವಣೆ ತಂದುಕೊಳ್ಳುವುದು ಬಹಳ ಮುಖ್ಯ. ಕೆಲವು ಟಿಪ್ಸ್‌ಗಳು: ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ. ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು. ಆಯಾ ಕಾಲದಲ್ಲಿ ಸಿಗುವ ಹಣ್ಣುಗಳನ್ನು ಸೇವಿಸಿ. ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ…

Read More

ಮಡಿಕೇರಿ ಜ.17 : ಸದೃಢ ದೇಹ ಸೌಂದರ್ಯ ಮತ್ತು ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ WORK OUT ಗೆ ನೀವೂ ತಯಾರಾಗಿ. ಮಡಿಕೇರಿ ನಗರದ ಶ್ರೀದಂಡಿನ ಮಾರಿಯಮ್ಮ ದೇವಾಲಯ ರಸ್ತೆಯ ಚೆಸ್ಕಾಂ ಕಚೇರಿ ಬಳಿ ಮೈಸೂರು ಸಿಲ್ಕ್ಸ್ ಬಿಲ್ಡಿಂಗ್ ನಲ್ಲಿ  ಎಸ್ಎಂ ಫಿಟ್ ನೆಸ್ ಜಿಮ್ ಶುಭಾರಂಭಗೊಂಡಿದೆ. ಪ್ರತಿದಿನ ಬೆಳಗ್ಗೆ 5.30 ರಿಂದ 9.30 ಮತ್ತು ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತರಗತಿ ನಡೆಯಲಿದೆ. ಕಾಲೇಜ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರೂ.200/ ರಿಯಾಯಿತಿ ಇರುತ್ತದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8217872661, 9483242274, 9845206770

Read More

ನಾಪೋಕ್ಲು ಜ.16 : ನೆಲಜಿ ಮತ್ತು ಕುಂಜಿಲ ಗ್ರಾಮದ ಗಡಿಭಾಗದಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ನೆಲಜಿ ಗ್ರಾಮದ ಅಚ್ಚಾಂಡಿರ ಹಾಗೂ ಕಲಿಯಾಟಂಡ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಚೀಯಕಪೂವಂಡ ಉಮೇಶ್ ಎಂಬವರ ಕಾಫಿ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಚಿಯಕಪೂವಂಡ ಉಮೇಶ್ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕ ತಮಿಳರ ವೇಲು ಎಂಬಾತ ಕೆಲಸ ನಿರ್ವಹಿಸುತ್ತಿರುವಾಗ ಅಲ್ಲೇ ಸಮೀಪದ ಕಾಡಿನಲ್ಲಿ ಕಾಡು ಕುರಿಯನ್ನು ಹುಲಿ ಅಟ್ಟಿಸಿಕೊಂಡು ಹೋಗಿರುವುದನ್ನು ಕಂಡಿರುವುದಾಗಿ ಉಮೇಶ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಲಭ್ಯವಾದ ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಗಸ್ತು ಅರಣ್ಯ ಪಾಲಕರಾದ ಕಾಳೇಗೌಡ, ಸೋಮಣ್ಣ ಗೌಡ, ಸಿಬ್ಬಂಧಿ ಕೆ.ಎಲ್.ರಾಹುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸತಾಗಿ ನಿರ್ಮಾಣ ಮಾಡಿದ ರಸ್ತೆ ಇದ್ದು, ಹುಡಿ ಮಣ್ಣಿನ ರಸ್ತೆಯಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತುಗಳನ್ನು ಸ್ಪಷ್ಟವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಗಸ್ತು ಅರಣ್ಯಪಾಲಕ ಕಾಳೇಗೌಡ ಮಾಹಿತಿ ನೀಡಿದ್ದಾರೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರ ಮಾಳೆಯಂಡ…

Read More

ವಿರಾಜಪೇಟೆ ಜ.16 : ವಿರಾಜಪೇಟೆಯ ಸರ್ಕಾರಿ ಜೂನಿಯರ್ ಪ್ರೌಢಶಾಲಾ ಸಭಾಂಗಣದಲ್ಲಿ “ಓಜಸ್ವಿ ಫೌಂಡೇಶನ್ “ಹಾಗೂ” ಜಸ್ಟ್ ರೋಬೋಟಿಕ್ಸ್” ಅವರ ಸಹಭಾಗಿತ್ವದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ರೋಬೋಟಿಕ್ಸ್ ವಿಜ್ಞಾನ ತರಬೇತಿ ಪಡೆದ ವಿದ್ಯಾರ್ಥಿಗಳ ವತಿಯಿಂದ 8ನೇ ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್ ಸೈನ್ಸ್ ಎಂಬ ಹೊಸ ತಂತ್ರಜ್ಞಾನದ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕಾವೇರಿ ಶಾಲೆಯ ಅಧ್ಯಕ್ಷ ಸುದೇಶ್ ಅವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ನುಡಿ ನುಡಿದರು. ಓಜಸ್ವಿ ಫೌಂಡೇಶನ ಟ್ರಸ್ಟಿ ಕವಿತಾ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಜಸ್ಟ್ ರೋಬೋಟಿಕ್ಸ್ ವಿಭಾಗದ ಸಿ ಇ ಓ ಬ್ರಿಜೇಶ್, ಕುತೂಹಲಕಾರಿಯಾದ ಹೊಸ ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವಾದ ಮಾಹಿತಿಯನ್ನು ನೀಡಿದರು. ನಂತರ ಗುಂಪು ಚಟುವಟಿಕೆಯನ್ನು ಮಾಡುವುದರ ಮೂಲಕ ಕಾವೇರಿ ಶಾಲೆಯ ವಿದ್ಯಾರ್ಥಿಗಳು ತಾವು ಕಲಿತುಕೊಂಡಂತಹ ಮೋಟರ್ ಕಾರ್ ತಯಾರಿಸುವ ಹಾಗೂ ಅದನ್ನು ಚಲಾಯಿಸುವ ವಿಧಾನವನ್ನು ಅಲ್ಲಿನ ವಿದ್ಯಾರ್ಥಿಗಳಿಗೆ ಅಚ್ಚುಕಟ್ಟಾಗಿ ತಿಳಿಸಿ ಕೊಟ್ಟರು. ಈ ಸಂದರ್ಭ ವಿರಾಜಪೇಟೆಯ ಕ್ಲಸ್ಟರ್ ಸಿ ಆರ್…

Read More

ಸುಂಟಿಕೊಪ್ಪ ಜ.16 : ತಮಿಳು ಸಂಘದ ವತಿಯಿಂದ ಪೊಂಗಲ್ (ಮಕರ ಸಂಕ್ರಾಂತಿ) ಹಬ್ಬದ ಆಚರಣೆಯ ಅಂಗವಾಗಿ ಕಳಸ ಮೆರವಣಿಗೆಯು ಶ್ರದ್ಧಾಭಕ್ತಿಯಿಂದ ನಡೆಯಿತು. ಮಾದಾಪುರ ರಸ್ತೆಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯದಿಂದ ನೂರಾರು ಮಹಿಳೆಯರು, ಪುರುಷರು ಸೇರಿದಂತೆ ಮಕ್ಕಳು ಪೂಜೆ ನೆರವೇರಿಸಿ, ಕೊಪ್ಪದ ನಾದಸ್ವರದೊಂದಿಗೆ ಗಣಪತಿ ದೇವಾಲಯದಿಂದ ಹಾಲಿನ ಕಳಸ ಹೊತ್ತು ಮೆರವಣಿಗೆ ಮೂಲಕ ಮುಖ್ಯ ಬೀದಿಯಲ್ಲಿ ಅಯ್ಯಪ್ಪ ದೇವಾಲಯದವರೆಗೆ ಸಾಗಿ ಅಲ್ಲಿಂದ ಚಾಮುಂಡೇಶ್ವರಿ ದೇವಾಲಯದಲ್ಲಿ ಸಮಾಪ್ತಿಗೊಂಡಿತು. ಬೆಳಿಗ್ಗೆ ಕಳಸಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ವೃಕ್ಷೋದ್ಭವ ದೇವಾಲಯದ ಟ್ರಸ್ಟಿ ಎ.ಲೋಕೇಶ್ ಕುಮಾರ್ ಅವರು ಶಿರಕ್ಕೆ ಕಳಸ ಇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಅಲ್ಲಿ ದೇವಿಗೆ ಅಭಿಷೇಕ ಮಾಡಿ ನಂತರ ವಿಶೇಷ ಪೂಜಾ ಕೈಂಕಾರ್ಯಗಳನ್ನು ನೆರವೇರಿಸಲಾಯಿತು. ನೆರೆದಿದ್ದ ಭಕ್ತ ಸಮೂಹಕ್ಕೆ ಸಮಿತಿ ವತಿಯಿಂದ ಪೊಂಗಲ್ ಮತ್ತು ಅನ್ನ ಸಂತರ್ಪಣೆ ನೆರವೇರಿಸಲಾಯಿತು. ಈ ಸಂದರ್ಭ ತಮಿಳು ಸಮಿತಿ ಅಧ್ಯಕ್ಷ ಅಯ್ಯಪ್ಪ, ಗ್ರಾ.ಪಂ ಸದಸ್ಯ ಎಂ.ಮಂಜುನಾಥ್, ವಾಹನ ಚಾಲಕರ ಸಂಘದ ಅಧ್ಯಕ್ಷ…

Read More

ವಿರಾಜಪೇಟೆ ಜ.17 : ಕರ್ನಾಟಕ ಸ್ಪೋರ್ಟ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯಾನ್ ಸ್ಪೋರ್ಟ್ಸ್ ಡ್ಯಾನ್ಸ್ ಕೌನ್ಸಿಲ್ ವತಿಯಿಂದ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‍ಶಿಪ್‍ನಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ 56 ವಿದ್ಯಾರ್ಥಿಗಳು ಚೆನ್ನ, ಬೆಳ್ಳಿ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಸೋಲೋ, ಡಬಲ್ಸ್ ಹಾಗೂ ಗ್ರೂಪ್ ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಒಟ್ಟು 62 ಚಿನ್ನ, 32 ಬೆಳ್ಳಿ, 6 ಕಂಚು ಸೇರಿದಂತೆ ಒಟ್ಟು 100 ಪದಕಗಳನ್ನು ಪಡೆದು ಚಾಂಪಿಯನ್‍ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಫೆ.7 ರಿಂದ ಜಮ್ಮು ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.   

Read More

ಮಡಿಕೇರಿ ಜ.17 : ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2024-25ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಫೆ.5 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ, ಫೆ.6 ರಂದು ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಣಗದಲ್ಲಿ ಹಾಗೂ ಫೆ.7 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಆಯಾಯ ದಿನದಂದು ಬೆಳಗ್ಗೆ 9 ಗಂಟೆಗೆ ಹೆಸರು ನೋಂದಾಯಿಸಬೇಕು. 01-06-2024 ಕ್ಕೆ 11 ವರ್ಷದೊಳಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.17 : ಕೇಂದ್ರ ಲೋಕಸೇವಾ ಅಯೋಗದ ಪೂರ್ವಭಾವಿ ಪರೀಕ್ಷೆಗಳು ಮೇ, 26 ರಂದು ನಡೆಯಲಿದೆ. ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆ ಗಮನದಲ್ಲಿರಿಸಿ ಫೆಬ್ರವರಿ, 01 ರಿಂದ ಬೆಂಗಳೂರಿನ ಕೃಷಿಕ್ ಸರ್ವೋದಯ ಫ಼ೌಂಡೇಶನ್ ಕೇಂದ್ರ ಕಚೇರಿಯಲ್ಲಿ ಮೂರು ತಿಂಗಳ ಕಾಲ ನುರಿತ ವಿಷಯ ತಜ್ಞರಿಂದ ಆಕಾಂಕ್ಷಿಗಳ ಕೈಗೆಟುಕುವ ರಿಯಾಯಿತಿ ಶುಲ್ಕದಲ್ಲಿ ಆಫ್‍ಲೈನ್ ಹಾಗೂ ಆನ್‍ಲೈನ್ ತರಬೇತಿ ಪ್ರಾರಂಭಿಸಲಾಗುವುದು. ಆಫ್‍ಲೈನ್ ತರಬೇತಿಗೆ ರೂ.25 ಸಾವಿರ ಹಾಗೂ ಆನ್‍ಲೈನ್ ತರಬೇತಿಗೆ ರೂ. 15 ಸಾವಿರ ನಿಗದಿಯಾಗಿದ್ದು ತರಬೇತಿಗೆ ಹಾಜರಾಗುವ ಅರ್ಹ ಅಭ್ಯರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು. ಗ್ರಂಥಾಲಯ ಸೌಲಭ್ಯ ಹಾಗೂ ಪ್ರತ್ಯೇಕ ಸ್ಟಡಿ ಕ್ಯುಬಿಕಲ್ ವ್ಯವಸ್ಥೆಯಿದೆ. ಆಸಕ್ತ ಅಭ್ಯರ್ಥಿಗಳು ಜನವರಿ, 25 ರೊಳಗೆ 7625000990 ಅಥವಾ 080-25202299 ಸಂಪರ್ಕಿಸಿ ತರಬೇತಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.

Read More

ಮಡಿಕೇರಿ ಜ.16 : ಸರ್ಕಾರ ಮತ್ತು ಇಲಾಖೆಗಳಿಂದ ಲಭ್ಯವಾಗುವ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಕುಶಾಲನಗರ ಕಾಂಗ್ರೆಸ್ ಕಾರ್ಮಿಕ ಘಟಕದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಮಿಕರು ಕೆಲಸ ನಿರ್ವಹಿಸುವ ಸಂದರ್ಭ ಉಂಟಾಗುತ್ತಿರುವ ಅನಾನುಕೂಲತೆಗಳ ಬಗ್ಗೆಯೂ ಗಮನಹರಿಸಬೇಕಿದೆ. ಇಂತಹ ಕೆಲಸಗಳು ಕಾರ್ಮಿಕ ಘಟಕಗಳ ಪದಾಧಿಕಾರಿಗಳ ಪ್ರಮುಖ ಕರ್ತವ್ಯವಾಗಬೇಕಿದೆ ಎಂದರು. ರಾಜ್ಯ ಕಾರ್ಮಿಕ ಘಟಕ ಉಪಾಧ್ಯಕ್ಷೆ ಹರಿಣಿ ಗೌಡ, ಕೆಪಿಸಿಸಿ ಪ್ರಮುಖರಾದ ಕೆ.ಪಿ.ಚಂದ್ರಕಲಾ, ಮಂಜುನಾಥ್ ಗುಂಡುರಾವ್ ಮಾತನಾಡಿದರು. ನಗರ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ಜಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು. ಕುಶಾಲನಗರ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಯೋಜಕ ನಟೇಶ್ ಗೌಡ, ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ.ಹಮೀದ್, ಬಿ.ಡಿ.ಅಣ್ಣಯ್ಯ, ಪುರಸಭೆ…

Read More