ಸೋಮವಾರಪೇಟೆ ಜ.16 : ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ದೇವಾಲಯದ ಆವರಣದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಕೆ.ಎಂ.ಲೋಕೇಶ್, ಶಾಂತಳ್ಳಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ.ಧರ್ಮಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕ ಡಾ.ಮಂತರ್‍ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಎಂಎಲ್ಸಿಗಳಾದ ಎಸ್.ಜಿ.ಮೇದಪ್ಪ, ವೀಣಾ ಅಚ್ಚಯ್ಯ, ಮೈಸೂರು ಗೋಪಾಲಗೌಡ ಆಸ್ಪತ್ರೆಯ ಮಾಲೀಕ ಡಾ.ಶ್ರಶೂಷ್‍ಗೌಡ, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಹರಪಳ್ಳಿ ರವೀಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಸೇರಿದಂತೆ ಗ್ರಾಮದ ಪ್ರಮುಖರು ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು. ಶಾಂತಳ್ಳಿಯ ರಾಜಬೀದಿ ಮಾರ್ಗದಲ್ಲಿ ಅದ್ಧೂರಿಯ ರಥೋತ್ಸವಕ್ಕೆ ಸಾಗಿತು. ಮೆರವಣಿಗೆ ಮಂಚೂಣಿಯಲ್ಲಿ ಕಳಸ ಹೊತ್ತ ಮಹಿಳೆಯರು ರಥದೊಂದಿಗೆ ಸಾಗಿದರು. ಕೀಲು ಕುದುರೆ, ಬೊಂಬೆ ಕುಣಿತ ನೆರೆದಿದ್ದ ಭಕ್ತಾದಿಗಳ ಮನಸೂರೆಗೊಂಡಿತು. ದಾರಿಯ ಇಕ್ಕೆಲಗಳಲ್ಲೂ ಗ್ರಾಮಸ್ಥರು…
ಲೇಖಕ: admin
ಮಡಿಕೇರಿ ಜ.16 : NEWS DESK ಕೊಡಗು ಜಿಲ್ಲೆಯಲ್ಲಿ 2023-24ನೇ ಸಾಲಿನ ಜನವರಿ ಮೊದಲ ವಾರದಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆಹಾನಿಯ ಸಮೀಕ್ಷೆಗೆ ಜಿಲ್ಲಾಡಳಿತ ಅಧಿಕಾರಿಗಳ ತಂಡವನ್ನು ರಚಿಸಿದೆ. ಅಕಾಲಿಕ ಮಳೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ಶೇ.33 ಕ್ಕಿಂತ ಅಧಿಕ ಬೆಳೆಹಾನಿಯಾಗಿರುವ ಪ್ರಕರಣಗಳನ್ನು ಅಂದಾಜಿಸುವ ಸಂಬಂಧ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ.NEWS DESK ಕೃಷಿ ಇಲಾಖೆಯ ಕೊಡಗು ಜಿಲ್ಲಾ ಜಂಟಿ ನಿರ್ದೇಶಕರು, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು, ಕಾಫಿ ಮಂಡಳಿಯ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ತಹಶೀಲ್ದಾರರು ಸಮೀಕ್ಷೆಯ ತಂಡದಲ್ಲಿರಲಿದ್ದಾರೆ. ಉಪವಿಭಾಗಾಧಿಕಾರಿಗಳು ಅಧಿಕಾರಿಗಳ ತಂಡದ ಮೇಲುಸ್ತುವಾರಿಯನ್ನು ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.NEWS DESK ಶೇ.33ಕ್ಕಿಂತ ಅಧಿಕ ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ 2024 ಜ.25 ರೊಳಗಾಗಿ ಖಚಿತ ವರದಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ತಂಡಗಳನ್ನು…
ಮಡಿಕೇರಿ ಜ.16 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಜನವರಿ, 18 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.
ಮಡಿಕೇರಿ ಜ.16 : ಬೆಂಗಳೂರು ಮೂಲದ ಐಟಿ ಕಂಪೆನಿ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಲಾಡ್ಜ್ ವೊಂದರಲ್ಲಿ ನಡೆದಿದೆ. ಬೆಂಗಳೂರು ಮೂಲದ ಸಂದೇಶ್(35) ಎಂಬಾತನೇ ಸಾವಿಗೆ ಶರಣಾಗಿರುವ ವ್ಯಕ್ತಿ. ನಗರದ ಕೊಹಿನೂರ್ ರಸ್ತೆಯಲ್ಲಿರುವ ಲಾಡ್ಜ್‍ಗೆ 2 ದಿನಗಳ ಹಿಂದೆ ಬಂದಿದ್ದ ಸಂದೇಶ್ ಮಂಗಳವಾರ ಕೊಠಡಿ ಖಾಲಿ ಮಾಡುವುದಾಗಿ ಹೇಳಿ ಶುಲ್ಕವನ್ನು ಮೊದಲೇ ಪಾವತಿಸಿದ್ದ. ಆದರೆ ಇಂದು ಸ್ನಾನದ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವ ದೃಶ್ಯ ಕಂಡು ಬಂದಿದೆ. ಸಾವಿಗೂ ಮೊದಲು ಡೆತ್‍ನೋಟ್ ಬರೆದಿಟ್ಟಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ ಜ.15 : ಮಡಿಕೇರಿ ತಾಲ್ಲೂಕಿನ ಅರೆಕಾಡು, ಹೊಸ್ಕೇರಿ, ಅಭ್ಯತ್ ಮಂಗಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ಆದ್ದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೊಡವ ವೆಲ್‍ಫೇರ್ ಆ್ಯಂಡ್ ರಿಕ್ರಿಯೇಷನ್ ಅಸೋಸಿಯೇಷನ್ ಲೋಕೋಪಯೋಗಿ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ. ರಸ್ತೆ ಅವ್ಯವಸ್ಥೆಯಿಂದ ವಾಹನಗಳು ಮತ್ತು ಪಾದಾಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿಂದೆ ಕೂಡ ರಸ್ತೆ ಅವ್ಯವಸ್ಥೆ ಕುರಿತು ಶಾಸಕರ ಗಮನ ಸೆಳೆಯಲಾಗಿತ್ತು. ಅಲ್ಲದೆ ಶಾಸಕರು ಸ್ಥಳ ಪರಿಶೀಲನೆ ಮಾಡಿ ರಸ್ತೆ ಅಭಿವೃದ್ಧಿಯ ಬಗ್ಗೆ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ರಸ್ತೆ ಅಭಿವೃದ್ಧಿಯನ್ನು ಕಂಡಿಲ್ಲ, ಬದಲಿಗೆ ಮತ್ತಷ್ಟು ಹದಗೆಟ್ಟಿದೆ. ದ್ವಿಚಕ್ರ ವಾಹನಗಳು ಹಾಗೂ ಪಾದಾಚಾರಿಗಳು ನಿಯಂತ್ರಣ ತಪ್ಪಿ ಬೀಳುತ್ತಿರುವ ಘಟನೆಗಳು ನಡೆದಿದೆ. ಅನೇಕರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ, ಪ್ರಸ್ತುತ ಜೀವಕ್ಕೇ ಹಾನಿಯಾಗುವ ಪರಿಸ್ಥಿತಿ ಉದ್ಭವಿಸಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಕ್ಕೇರ ಬಿ.ಜಯ ಚಿಣ್ಣಪ್ಪ ಆತಂಕ ವ್ಯಕ್ತಪಡಿಸಿದರು. ರಸ್ತೆ ಅವ್ಯವಸ್ಥೆ ಮತ್ತು ಇಲ್ಲಿನ ಅಪಾಯಕಾರಿ ಪರಿಸ್ಥಿತಿಯ…
ಬೆಂಗಳೂರು ಜ.16 : ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕುಗಳ ಮಾಹಿತಿ ಹಕ್ಕು ವಿಭಾಗದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅಭಿನಂದಿಸಲಾಯಿತು. ವಿಧಾನಸೌಧದಲ್ಲಿ ಭೇಟಿಯಾಗಿದ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯ ವಕೀಲರ ರಕ್ಷಣಾ ಕಾಯಿದೆಯನ್ನು ಸದನದಲ್ಲಿ ಅಂಗೀಕಾರವಾಗಿದ್ದಕ್ಕಾಗಿ ಎ.ಎಸ್.ಪೊನ್ನಣ್ಣ ಅವರನ್ನು ಅಭಿನಂದಿಸಿ, ವಿವಿಧ ಬೇಡಿಕೆಯ ಮನವಿಯನ್ನು ಸಲ್ಲಿಸಿದರು.
ಪುತ್ತೂರು ಜ.16 : ಇಂದ್ರಿಯಗಳು ಕೇಳಿದ್ದನ್ನು ಕೇಳಿದ ಹಾಗೆ ಕೊಟ್ಟರೆ ಅವು ನಮ್ಮನ್ನು ದಾರಿ ತಪ್ಪಿಸುತ್ತವೆ. ಮನಸ್ಸಿನ ಮಟ್ಟಕ್ಕೆ ಬುದ್ದಿಯನ್ನು ತರಬಾರದು ಬದಲಿಗೆ ಮನಸ್ಸನ್ನು ಬುದ್ದಿಯ ಮಟ್ಟಕ್ಕೆ ಏರಿಸಬೇಕು ಎಂದು ವಿಶ್ವಹಿಂದೂ ಪರಿಷದ್‌ನ ಜಿಲ್ಲಾ ಸತ್ಸಂಗ ಪ್ರಮುಖ ಹಾಗೂ ಸಂಸ್ಕಾರ ಭಾರತಿಯ ಜಿಲ್ಲಾ ಸಂಯೋಜಕ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನಾ ಘಟಕದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಕುಟುಂಬ ಪ್ರಬೋಧನಾ ಕಾರ್ಯಕ್ರಮದಲ್ಲಿ ಷೋಡಶ ಸಂಸ್ಕಾರಗಳು ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಇಂದ್ರಿಯಗಳನ್ನು ಹಿಡಿದಿಟ್ಟುಕೊಳ್ಳುವುದು ಕ್ಲಿಷ್ಟಕರ ಕೆಲಸ ಆದರೆ ಸಾಧನೆಯ ಹಾದಿಯಲ್ಲಿ ಇಂದ್ರಿಯ ನಿಗ್ರಹ ಎನ್ನುವ ಇಚ್ಚಾ ಶಕ್ತಿಯನ್ನು ಬೆಳೆಸಿಕೊಳ್ಳಲೇಬೇಕು ಎಂದರು. ವಿವಿಧ ಸಂಸ್ಕಾರಗಳ ಚೌಕಟ್ಟಿನಲ್ಲಿ ಜೀವಿತವನ್ನು ಕಟ್ಟಿಕೊಂಡಾಗ ನಾವು ಔನ್ನತ್ಯವನ್ನು ಪ್ರಾಪ್ತಿಸಿಕೊಳ್ಳಬಹುದು ಎಂದರು. ಸಮಾರAಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ಮಾತನಾಡಿ ಆಧುನಿಕತೆಯ ನೆಪದಲ್ಲಿ ನಾವು ನಮ್ಮ…
ಕಡಂಗ ಜ.16 : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮತ್ತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಕಡಂಗ ಪಟ್ಟಣದಲ್ಲಿ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ನಡೆಯಿತು. ಈ ಸಂದರ್ಭ ವಿರಾಜಪೇಟೆ ಠಾಣಾಧಿಕಾರಿ ವಾಣಿ ಶ್ರೀ ಮಾತನಾಡಿ, ವಾಹನ ಸವಾರರು ತಮ್ಮ ತಮ್ಮ ವಾಹನಗಳ ಎಲ್ಲಾ ರೀತಿಯ ದಾಖಲೆಗಳು ಸ್ಪಷ್ಟವಾಗಿ ಇಟ್ಟುಕೊಳ್ಳಿ, ಇನ್ಸೂರೆನ್ಸ್ ಮತ್ತು ಆರ್ ಸಿ ಬುಕ್ ಗಳು ಕಡ್ಡಾಯವಾಗಿ ಸರಿಪಡಿಸಿಕೊಳ್ಳಬೇಕು, ಬೈಕ್ ಸವಾರರು ಹೆಲ್ಮೆಟ್ ಮತ್ತು ಕಾರು ಚಾಲಕರು ವಾಹನದ ಬೆಲ್ಟ್‍ನ್ನು ಕಡ್ಡಾಯವಾಗಿ ಧರಿಸಿ ವಾಹನ ಸಂಚಾರ ಮಾಡುವ ಮೂಲಕ ಎಲ್ಲಾ ರೀತಿಯ ಸಂಚಾರ ನಿಯಮಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು. 18 ವರ್ಷದೊಳಿಗೆ ವಿದ್ಯಾರ್ಥಿಗಳಿಗೆ ಪೋಷಕರು ವಾಹನವನ್ನು ನೀಡದಂತೆ ತಿಳಿಸಿದ ಅವರು, ದ್ವಿಚಕ್ರ ವಾಹನದಲ್ಲಿ ಮೂವರನ್ನು ಕುಳಿತುಕೊಂಡು ಸಂಚಾರ ಮಾಡುತ್ತಿರುವುದು ಕಂಡು ಬಂದರೆ ಪೋಷಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭ ಠಾಣಾ ಸಿಬ್ಬಂದಿಗಳಾದ ಕಿರಣ್ ಕುಮಾರ್, ಸಂದೀಪ್ ಸರ್ಮೂರ್ತಿ, ಅನಿತಾ…
ಮಡಿಕೇರಿ ಜ.16 : ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಜ.14 ರಂದು ಸಂಜೆಯಿಂದಲೇ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಜ.15 ರಂದು ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ, ಕಳಶಾಭಿಷೇಕ ಮಹಾಪೂಜೆ ನೆರವೇರಿತು. ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಯಂಪೂಜೆ, ರಂಗಪೂಜೆ, ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠಪೂಜೆ, ಶುದ್ಧಿಕಲಶಾಭಿಷೇಕ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವಿಗೆ…
ಬೆಂಗಳೂರು ಜ 16: ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಹೇಳಿದರು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದರು. ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಉಪಸ್ಥಿತರಿದ್ದರು.






