ಲೇಖಕ: admin

ಮಡಿಕೇರಿ ಡಿ.8 :  2022ರಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ತೀತಿರ ಶರ್ಮಿಲಿ ಅಪ್ಪಚ್ಚು ನಿರ್ಮಾಣದ “ಭೀರ್ಯ” ಕೊಡವ ಚಲನಚಿತ್ರಕ್ಕೆ  ಪ್ರತಿಷ್ಠಿತ “ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್” ಪ್ರಶಸ್ತಿ ದೊರೆತಿದೆ. ಬೆಂಗಳೂರಿನ ರಾಜಾಜಿನಗರದ ಒರಿಯನ್ ಮಹಲ್’ನ ಪಿ.ವಿ.ಆರ್ ಚಿತ್ರಮಂದಿರದಲ್ಲಿ ನಡೆದ  ಸಮಾರಂಭದಲ್ಲಿ “ಭೀರ್ಯ” ಕೊಡವ ಚಲನಚಿತ್ರದ ನಿರ್ಮಾಪಕಿ ತೀತಿರ ಶರ್ಮಿಲಿ ಅಪ್ಪಚ್ಚು, ಕಾಂತಾರ ಸಿನಿಮಾ ಖ್ಯಾತಿಯ ನಿರ್ದೇಶಕ ರಿಷಭ್ ಶೆಟ್ಟಿ ಅವರಿಂದ ಪ್ರಶಸ್ತಿಯನ್ನು ಪಡೆದುಕೊಂಡರು. ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಉದ್ಘಾಟನೆ ಮಾಡಿದ್ದರು. ಕಾಂತರ ಸಿನಿಮಾ ಖ್ಯಾತಿಯ ನಟ ನಿರ್ದೇಶಕ ರಿಷಭ್ ಶೆಟ್ಟಿ, ಶ್ರೀನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷ  ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ, ಹರ್ಷಿತಾ, ನಂದಿತಾ ಹಾಗೂ ಆಶೋಕ್, ಸುಂದರ್ ರಾಜ್, ವಸಿಷ್ಠ ಸಿಂಹ, ಶರಣ್, ಶಿವಕುಮಾರ್, ವಿನೋದ್ ರಾಜ್, ಭವ್ಯ, ಅನುಪ್ರಭಾಕರ್, ಪ್ರೇಮಾ, ವಿಜಯಲಕ್ಷ್ಮಿ, ಹರಿಪ್ರಿಯಾ, ವನಿತಾ ವಾಸು, ಹಿನ್ನೆಲೆ ಗಾಯಕರಾದ ಬಿ.ಕೆ…

Read More

ಕಡಂಗ ಡಿ.7 :  ಕರಡ ಫ್ರೆಂಡ್ಸ್ ವತಿಯಿಂದ  ನಡೆದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕಡಂಗ ಫ್ರೆಂಡ್ಸ್ ತಂಡ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕರಡ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ  ನಡೆದ ಪಂದ್ಯಾವಳಿಯಲ್ಲಿ  ಕಡಂಗ ಫ್ರೆಂಡ್ಸ್ ತಂಡ, ಕುಂಜಿಲ ತಂಡ ವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪಂದ್ಯಾವಳಿಗೆ  ಪ್ರಾಥಮಿಕ ಶಾಲಾ ಶಿಕ್ಷಕಿ ದಮಯಂತಿ ಮತ್ತು ಐತಿಚಂಡ ಪ್ರಕಾಶ್ ಕಾರ್ಯಪ್ಪ  ಚಾಲನೆ ನೀಡಿದರು. ಈ ಸಂದರ್ಭ  ಪಾಂಡಂಡ ರಘುಪತಿ, ದರ್ಶನ್, ಅರ್ಜುನ್, ಸುಬ್ರಮಣಿ ಮತ್ತಿತರು ಗಣ್ಯರು ಹಾಜರಿದ್ದರು. ವರದಿ : ನೌಫಲ್ ಕಡಂಗ

Read More

ಮಡಿಕೇರಿ ಡಿ.7 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಆದೇಶವನ್ನು ಜ.1 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಸಾರ್ವಜನಿಕರು ಬದಲಿ ರಸ್ತೆಯಾದ ನೇಗಳ್ಳಿ-ಕರ್ಕಳ್ಳಿ-ಕಾರೇಕೊಪ್ಪ-ಕೂಡಿಗೆ ರಸ್ತೆ ಮಾರ್ಗವನ್ನು ಬಳಸುವುದು. ಈ ಬಗ್ಗೆ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.7 : ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ-1994 (ದುರ್ಬಳಕೆ ಮತ್ತು ತಡೆ) ಕಾಯಿದೆಯನ್ನು 1ನೇ ಜನವರಿ 1996 ರಿಂದ ಜಾರಿಗೆ ಬಂದಿರುತ್ತದೆ. ಈ ಕಾಯಿದೆಯ ಪ್ರಕಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವು ಆಗಿರುತ್ತದೆ. ಈ ಕಾಯಿದೆಯ ಅನ್ವಯ ಭ್ರೂಣಲಿಂಗ ಪತ್ತೆ, ಭ್ರೂಣಲಿಂಗ ಆಯ್ಕೆಗೆ ಸಂಬಂಧಿಸಿದಂತೆ, ಯಾವುದೇ ರೀತಿಯ ಜಾಹೀರಾತುಗಳನ್ನು ಈ ಕಾಯಿದೆಯಲ್ಲಿ ನಿಷೇಧಿಸಿದೆ. ಇದನ್ನು ಉಲ್ಲಂಘಿಸಿದಲ್ಲಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ರೂ.10 ಸಾವಿರ ವರೆಗೆ ದಂಡ ವಿಧಿಸಲಾಗುತ್ತದೆ. ನೋಂದಾಯಿತ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದಲ್ಲಿ ಅವರಿಗೆ ಮೊದಲಿನ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲುಶಿಕ್ಷೆ ಜೊತೆಗೆ ರೂ.10 ಸಾವಿರಗಳವರೆಗೆ ದಂಡ ವಿಧಿಸಲಾಗುವುದು. ಇದೇ ಅಪರಾಧ ಮತ್ತೊಮ್ಮೆ ಮಾಡಿದಲ್ಲಿ 5 ವರ್ಷಗಳವರೆಗೆ ಜೈಲುಶಿಕ್ಷೆ ಜೊತೆಗೆ ರೂ.50 ಸಾವಿರಗಳವರೆಗೆ ದಂಡ ವಿಧಿಸಲಾಗುವುದು. ನ್ಯಾಯಾಲಯದಲ್ಲಿ ಅಪರಾಧ…

Read More

ಮಡಿಕೇರಿ ಡಿ.7 : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್‍ಸಿಂಗ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎನ್‍ಸಿಸಿ ಅಧಿಕಾರಿ ಕರ್ನಲ್ ಜೆಫಿರಿನ್ ಅರಾನ್ಹಾ (Col. Zephyrin Aranha), ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಏರ್ ಕಮಾಂಡರ್(ನಿವೃತ್ತ) ಕಂಬಿರಂಡ ದೇವಯ್ಯ, ಲೆ.ಕರ್ನಲ್(ನಿವೃತ್ತ) ಎಂ.ನಾಚಪ್ಪ, ಮೇಜರ್(ನಿವೃತ್ತ) ಒ.ಎಸ್.ಚಿಂಗಪ್ಪ, ಮಡಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಕುಟ್ಟಪ್ಪ, ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಿರೀಶ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ಎ.ಪಿ.ಸುಬ್ಬಯ್ಯ, ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ರೆಡ್‍ಕ್ರಾಸ್ ಜಿಲ್ಲಾ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ಪ್ರಮೋದ್ ಕುಮಾರ್…

Read More

ಮಡಿಕೇರಿ ಡಿ.7 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ನಡೆಯಿತು. 12 ಮಂದಿ ನೇತ್ರದಾನ ಹಾಗೂ ನಾಲ್ವರು ದೇಹದಾನಕ್ಕೆ ಹೆಸರು ನೋಂದಾಯಿಸಿಕೊಂಡರು. ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಅಂಬೇಕಲ್ಲು ನವೀನ್ ಕುಶಾಲಪ್ಪ, ನೇತ್ರದಾನ, ದೇಹದಾನ ಮಾಡುವುದು ಮಹತ್ವದ ಕೆಲಸ. ದಸಂಸ ಸೇವಾ ಕಾರ್ಯ ಹೀಗೆ ಮುಂದುವರೆಯಲಿ ಎಂದು ಹಾರೈಸಿದರು. ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ ಮಾತನಾಡಿ, ರಕ್ತದಾನದಿಂದ ಮಾನಸಿಕ ಹಾಗೂ ದೈಹಿಕ ಸಮಸ್ಯೆ ಉಂಟಾಗುತ್ತದೆ ಎಂಬ ಮೌಢ್ಯತೆ ಮರೆತು, ಸಾಮಾಜಿಕ ಕಳಕಳಿಯ ಬದ್ಧತೆ ತೋರಬೇಕೆಂದು ಕರೆ ನೀಡಿದರು. ರಕ್ತ, ದೇಹದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು, ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂಧರಿದ್ದು, ನಮ್ಮ ಸಾವಿನ ನಂತರ ಅವರಿಗೆ ಬೆಳಕಗಾಬಹುದು ಎಂದು ತಿಳಿಸಿದರು. ದೇಶದಲ್ಲಿ ರಕ್ತದ ಬೇಡಿಕೆಯೂ…

Read More

ಮಡಿಕೇರಿ ಡಿ.7 : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿಸಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಎಲ್ಲಾ ತಾಲ್ಲೂಕು ಸಮಿತಿಗಳಲ್ಲಿ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸಾಧನೆ ಮತ್ತು ಬದುಕಿನ ಹಾದಿಯನ್ನು ಸ್ಮರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ದಲಿತ ಮುಖಂಡ ಕೆ.ಪಳನಿ ಪ್ರಕಾಶ್, ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ನಾವು ಉತ್ತಮ ಜೀವನ ನಡೆಸುತ್ತಿದ್ದೇವೆ. ಅವರ ಚೈತ್ಯನದ ಶಕ್ತಿಯನ್ನು ಇಂದಿನ ಯುವ ಸಮೂಹ ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯ ಚಿಂತನೆಯನ್ನು ವಾಸ್ತವಗೊಳಿಸಬೇಕು ಎಂದು ಕರೆ ನೀಡಿದರು. ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಮಹಾ ಪರಿನಿರ್ವಾಣವು ಬೌದ್ಧ ಧರ್ಮದ ಪ್ರಮುಖ ಗುರಿಗಳಲ್ಲಿ ಒಂದು. ಬುದ್ಧ ಮತ್ತು ಬೌಧ…

Read More

ಮಡಿಕೇರಿ ಡಿ.7 : ಹೆಚ್‍ಡಿಎಫ್‍ಸಿ ಬ್ಯಾಂಕ್‍ನ ಮಡಿಕೇರಿ ಶಾಖೆ ವತಿಯಿಂದ ಸಿಎಸ್‍ಆರ್ ಚಟುವಟಿಕೆಯ ಭಾಗವಾಗಿ ರಕ್ತದಾನ ಶಿಬಿರ ನಡೆಯಿತು. ಬ್ಯಾಂಕ್‍ನ ಸಭಾಂಗಣದಲ್ಲಿ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಜೀವದ ಪ್ರಾಮುಖ್ಯತೆ ಮತ್ತು ರಕ್ತದ ಅವಶ್ಯಕತೆ ಬಗ್ಗೆ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿರುವ ವ್ಯಕ್ತಿಗೆ ತಿಳಿದಿರುತ್ತದೆ. ಒಬ್ಬ ವ್ಯಕ್ತಿಯ ಜೀವವನ್ನು ಉಳಿಸಲು ರಕ್ತದಾನ ಅತ್ಯಂತ ಅವಶ್ಯಕವಾಗಿದ್ದು, ಅದನ್ನು ಅರ್ಥಮಾಡಿಕೊಂಡು ದಾನಿಗಳು ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು ಎಂದು ಕರೆ ನೀಡಿದರು. ಬ್ಯಾಂಕ್‍ಗಳಲ್ಲಿ ಕೇವಲ ಹಣಕಾಸಿನ ವ್ಯವಹಾರಗಳೇ ನಡೆಯುತ್ತದೆ, ಆದರೆ ಹೆಚ್‍ಡಿಎಫ್‍ಸಿ ಬ್ಯಾಂಕ್ ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ರಕ್ತದ ಅಗತ್ಯತೆಗಳನ್ನು ಅರಿತು ಇಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು. ಶಾಖಾ ವ್ಯವಸ್ಥಾಪಕ ಚಂಗಂಡ ಪಿ.ದೇವಪ್ಪ ಮಾತನಾಡಿ, ಸಿಎಸ್‍ಆರ್ ಚಟುವಟಿಕೆಯ ಭಾಗವಾಗಿ ಕಳೆದ 15 ವರ್ಷಗಳಿಂದ ರಕ್ತದಾನ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಹೆಚ್‍ಡಿಎಫ್‍ಸಿ ಬ್ಯಾಂಕ್‍ನ ವಿವಿಧ ಶಾಖೆಗಳಲ್ಲಿಯೂ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ರಕ್ತನಿಧಿ ವಿಭಾಗದ ಮುಖ್ಯಸ್ಥ…

Read More

ಮಡಿಕೇರಿ ಡಿ.7 : ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೂಡಿಗೆ ಸೈನಿಕ ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್‍ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಸ್.ವೀಣಾ, ಜಿ.ಪಂ ಸಿಇಓ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ,ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ  ಡಾ.ಜೆ.ಆರ್.ಬಾಲಸುಬ್ರಮಣ್ಯಂ ಸೇರಿದಂತೆ ಮಾಜಿ ಸೈನಿಕರು  ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ, ಗೌರವ ವಂದನೆ ಸಲ್ಲಿಸಲಾಯಿತು.

Read More

ಮಡಿಕೇರಿ ಡಿ.7 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಡಿ.10 ರಂದು ಪ್ರತಿಭಾವಂತ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 23 ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ತಮ್ಮ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕೊಡಗು ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತರಾದ ಮೂಟೇರ ಪುಷ್ಪಾವತಿ ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮೈಸೂರು ರಂಗಾಯಣದ ಹಿರಿಯ ಕಲಾವಿದೆ ದೇವಜನ ಗೀತಾ ಮೋಂಟಡ್ಕ, ಅತಿಥಿಗಳಾಗಿ ವಿದ್ಯಾನಿಧಿ ದಾನಿಗಳಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಮಂಙಂಡ್ರ ರೇಖಾ ಉಲ್ಲಾಸ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷ, ಕೆ.ಎಂ.ಟಿ ವಿದ್ಯಾ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪೊನ್ನಚ್ಚನ ಮೋಹನ್, ನಿವೃತ್ತ ಶಿಶು ಅಭಿವೃದ್ಧಿ ಅಧಿಕಾರಿ, ಕಾಫಿ ಬೆಳೆಗಾರ ಸೂದನ ಎ.ಮೋಹಿನಿ ಹಾಗೂ ಚೇರಂಬಾಣೆ-ಕಾರುಗುಂದ ಕೊಡಗು ಗೌಡ ಸಮಾಜದ…

Read More