ಪುತ್ತೂರು ಡಿ.7 : ದಿನದಿನವೂ ತಂತ್ರಜ್ಞಾನದಲ್ಲಿ ಅಗಾಧ ಬೆಳವಣಿಗೆಗಳಾಗುತ್ತಿದೆ, ಅದಕ್ಕೆ ತಕ್ಕಂತೆ ನಮ್ಮನ್ನು ನಾವು ಉನ್ನತೀಕರಿಸಿಕೊಳ್ಳದೇ ಹೋದರೆ ಬಹಳ ಹಿಂದುಳಿಯುತ್ತೇವೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ (AIML) ವಿಭಾಗ, IEEE VCET ವಿದ್ಯಾರ್ಥಿ ವಿಭಾಗ ಮತ್ತು IEEE ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಕಥಾನ್-2023 ಸ್ಪರ್ಧೆಗೆ ಚಾಲನೆಯನ್ನು ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗೆ ಬಳಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ವಿವಿಧ ವಿಷಯಗಳನ್ನು ಕಲಿಯುವುದರಿಂದ ಮನಸ್ಸು ಉಲ್ಲಸಿತವಾಗುತ್ತದೆ, ಬುದ್ಧಿ ಚುರುಕಾಗುತ್ತದೆ, ಉದ್ಯೋಗದಲ್ಲಿ ಮಾತ್ರವಲ್ಲ ಜೀವನ ಪಯಣದಲ್ಲಿಯೂ ಉನ್ನತಿ ಪ್ರಾಪ್ತಿಯಾಗುತ್ತದೆ ಎಂದರು. ಸವಾಲುಗಳನ್ನು ಎದುರಿಸುವ ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಭಾಗವಹಿಸಬೇಕು, ಕಾಲೇಜು ಅದಕ್ಕೆ…
ಲೇಖಕ: admin
ಮಡಿಕೇರಿ ಡಿ.7 : ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಕೊಟ್ಟುಕತೀರ ಯಶೋಧ ಪ್ರಕಾಶ್ ನಿರ್ಮಿಸಿರುವ ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ “ಪೊಮ್ಮಾಲೆ ಕೊಡಗ್” ಕೊಡವ ಚಿತ್ರ ಸ್ಯಾಂಡಲ್ ವುಡ್ ನ ಪ್ರತಿಷ್ಠಿತ “ನಂದಿ ಫಿಲ್ಮಂ ಅವಾರ್ಡ್-2023” ರಲ್ಲಿ “ಮೆಚ್ಚುಗೆಯ ಚಿತ್ರ” ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನ ಒರಿಯನ್ ಮಾಲ್‍ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಪೊಮ್ಮಾಲೆ ಕೊಡಗ್” ಚಿತ್ರದಲ್ಲಿ ಅಭಿನಯಿಸಿರುವ ನಟಿ, ಸಹ ನಿರ್ದೇಶಕಿ, ಬರಹಗಾರ್ತಿ ಮತ್ತು ಸಂಭಾಷಣೆ ರಚನೆಕಾರರಾದ ಈರಮಂಡ ಹರಿಣಿ ವಿಜಯ್ ಅವರು ಕಾಂತಾರ ಖ್ಯಾತಿಯ ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ನಿರ್ಮಾಪಕಿ ಕೊಟ್ಟುಕತೀರ ಯಶೋಧ ಪ್ರಕಾಶ್ ಅವರ ಅನುಪಸ್ಥಿತಿಯಲ್ಲಿ ಅವರು ಪ್ರಶಸ್ತಿ ಪಡೆದುಕೊಂಡರು. ಉತ್ತಮ ಚಿತ್ರ ಪ್ರಶಸ್ತಿ ಚಾರ್ಲಿ 777, ಉತ್ತಮ ನಟ ರಿಷಬ್ ಶೆಟ್ಟಿ, ಉತ್ತಮ ನಟಿ ಪ್ರಶ್ತಿಯನ್ನು ಸಪ್ತಮಿ ಗೌಡ ಪಡೆದುಕೊಂಡರು. ಅಲ್ಲದೆ ಉತ್ತಮ ಛಾಯಾಗ್ರಹಣ, ಸಂಕಲನ,…
ಮಡಿಕೇರಿ,ಡಿ.7 : ಕರ್ನಾಟಕ ಸುವರ್ಣ ಸಂಭ್ರಮ ವರ್ಷಾಚರಣೆಯ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಇದೇ ಡಿ.17ರಂದು ಕುಶಾಲನಗರದಲ್ಲಿ ಹುತ್ತರಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ವಿಷೇಷವಾಗಿ ಹಮ್ಮಿಕೊಳ್ಳಲಾಗಿರುವ ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಡಿ.10 ನೇ ತಾರೀಕಿನೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ. ನೋಂದಾವಣಿ ಹಾಗೇ ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್ (9980988123), ನಾಗೇಗೌಡ (9448072619) ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸ್ನೇಹ ಸಿರಿ ಬಳಗದ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಡಿ.6 : ನಗರದ ಕೊಡಗು ವಿದ್ಯಾಲಯದಲ್ಲಿ ಡಿ.9 ರಂದು ವಾಷಿ೯ಕ ಕ್ರೀಡಾ ದಿನಾಚರಣೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30 ಗಂಟೆಗೆ ಕ್ರೀಡಾ ದಿನಾಚರಣೆಯನ್ನು ಶಾಲಾ ಮೈದಾನದಲ್ಲಿ ನಿವೃತ್ತ ಏರ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಉದ್ಘಾಟಿಸಲಿದ್ದಾರೆ. ವಿದ್ಯಾಥಿ೯ಗಳಿಂದ ಪಥಸಂಚಲನ, ವಿವಿಧ ರೀತಿಯ ಕ್ರೀಡೆಗಳು, ಪ್ರತಿಭಾ ಪ್ರದಶ೯ನ ಸೇರಿದಂತೆ ವಿವಿಧ ಕಾಯ೯ಕ್ರಮಗಳು ನಡೆಯಲಿದೆ ಎಂದು ಕೊಡಗು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಗೋಣಿಕೊಪ್ಪಲು ಡಿ.6 : ಮನಸು ಶಾಂತಿಯುತವಾಗಿ ಕೂಡಿರಲು ಕವಿತೆಗಳ ಓದಿನಿಂದ ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಅಭಿಪ್ರಾಯಪಟ್ಟರು. ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು, ಸಾಹಿತ್ಯ ಸಂವರ್ಧಕ ಪರಿಷತ್ತು, ಛಂದೋಬದ್ಧ ಕಾವ್ಯ ಸೌಂವರ್ದಕ ಪರಿಷತ್ತು, ಬೊಮ್ಮಲಿಂಗೇಶ್ವರ ಪ್ರಕಾಶನ, ಕಲಾ ಉತ್ಸವ ಕೊಡಗು, ಸಹಯೋಗ ದಲ್ಲಿ ವಿರಾಜಪೇಟೆ ನಗರದ ಮೊಗರಗಲ್ಲಿಯಲ್ಲಿ ನಡೆದ ಕವಿ ಜಗದೀಶ್ ಜೋಡುಬೀಟಿ ಇವರ ಪುಸ್ತಕ ಪರಿಚಯ ಕವಿಗಳೊಂದಿಗೆ ಸಂವಾದ, ಕವಿಗೋಷ್ಠಿ ಮತ್ತು ಜಾನಪದ ಗೀತೆ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕದನವನ್ನತಡೆಯುವ ಶಕ್ತಿ ಮತ್ತು ಸಂತಾನವನ್ನು ನಡೆಸುವ ಯುಕ್ತಿ ಕಾವ್ಯದೊಳಡಾಗಿದೆ. ಪ್ರತಿಯೊಬ್ಬರ ಮನಸಿನಲ್ಲೂ ಕಾವ್ಯ ನೆಲೆನಿಂತಾಗ ಈ ಸಮಾಜದ ಸಂಘರ್ಷಗಳಿಂದ ಹೊರಗುಳಿದು ಉತ್ತಮ ಮಾನವೀಯ ಬಾಂಧವ್ಯವನ್ನು ಗಟ್ಟಿಗೊಳಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನೊಂದವರ ಬೆಂದವರ ಹೃದಯಗಳನ್ನು ಅರಿತುಕೊಂಡಗ ಕವಿ ಹೃದಯಗಳು ಕಾವ್ಯ ರಚಿಸಬೇಕು. ವಚಾಳಿತನವನ್ನು ಬಿಟ್ಟು ಮೌನತೆಯನ್ನು ಅಪ್ಪಿಕೊಂಡಾಗ ಕವಿತೆಗಳು ಅರಳುತ್ತದೆ ಎಂದರು. ನಿವೃತ ಪ್ರಾಂಶುಪಾಲ ನಾಟಕ ಭಾರ್ಗವ ಕೆಂಪರಾಜು ಮಾತನಾಡಿ, ಮನುಷ್ಯ ಜೀವನದ ಪಾರಂಪರಿಕ ಹಿನ್ನೆಲೆಯಲ್ಲಿ ಕಾವ್ಯವನ್ನ ಅಪ್ಪಿಕೊಂಡಾಗಿದೆ.…
ಗೋಣಿಕೊಪ್ಪ ಡಿ.6 : ಶಿಕ್ಷಣದಿಂದ ಮಾತ್ರ ಈ ಸಮಾಜದಲ್ಲಿ ಸಮಾನತೆಯ ಮೌಲ್ಯಾಧಾರಿತ ಬದುಕು ನಡೆಸಲು ಸಾಧ್ಯ ಎಂದು ಕಾವೇರಿ ಕಾಲೇಜು ಉಪನ್ಯಾಸಕ ವನಿತ್ ಕುಮಾರ್ ತಿಳಿಸಿದರು. ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ನಿಟ್ಟೂರು ಗ್ರಾ.ಪಂ ಸಭಾಂಗಣದಲ್ಲಿ ನಡೆದ 67ನೇ ಮಾಹ ಪರಿನಿರ್ಮಾಣ ಮತ್ತು ಸಂವಿಧಾನ ಕುರಿತು ಜನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಶೋಷಿತ ಸಮುದಾಯಗಳು ಬದುಕು ನಡೆಸಲು ಜ್ಞಾನದ ಅಗತ್ಯವಿದೆ. ಅಂಬೇಡ್ಕರ್ ಹಾದಿಯಲ್ಲಿ ಕಲಿಕೆಯ ಪ್ರಾಮುಖ್ಯ ತೆಯನ್ನು ತಿಳಿದುಕೊಳ್ಳಬೇಕು ಎಂದರು. ದುಷ್ಚಟಗಳಿಂದ ದೂರ ಉಳಿದು ಗೌರವಿತವಾಗಿ ಬದುಕು ನಡೆಸಲು ಚಿಂತಿಸಬೇಕು. ವಿದ್ಯಾರ್ಹತೆಯಿಂದ ಉತ್ತಮ ಉದ್ಯೋಗ ಪಡೆದು ಆರ್ಥಿಕವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸಬೇಕು ಇದರಿಂದ ಮತ್ತೊಂಬರ ಮುಂದೆ ಕೈಚಾಚುವುದು ತಪ್ಪುತ್ತದೆ ಎಂದು ಹೇಳಿದರು. ನೋಟರಿ, ವಕೀಲ ಕಾಶಿಯಪ್ಪ ಮಾತನಾಡಿ ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಹಿಂದೂಳಿದ ಸಮೂದಯಗಳು ಸಮಾನತೆಯ ಬದುಕು ನಡೆಸಲು ಅರ್ಹರಗಾಬೇಕು ಎಂಬ ಚಿಂತಿಸಿದರು. ಪರಿಣಾಮ ಇಂದು ಸರ್ಕಾರಿ ಕೆಲಸಗಳ ಅಧಿಕಾರಿ, ಸಿಬ್ಬಂದಿಗಳಗುತ್ತಿದ್ದಾರೆ ಇದು ಉತ್ತಮ ಬೆಳವಣಿಗೆ ಎಂದು ಹೇಳಿದರು.…
ಮಡಿಕೇರಿ ಡಿ.6 : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೆಲವು ಇಲಾಖೆಗಳು ಭೌತಿಕ ಪ್ರಗತಿ ಸಾಧಿಸಿದ್ದು, ಆರ್ಥಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ಸೂಚಿಸಿದರು. ವೈಯಕ್ತಿಕ ಫಲಾನುಭವಿಗಳು ಆಯ್ಕೆ ಮಾಡದಿದ್ದಲ್ಲಿ, ಕೂಡಲೇ ಆಯ್ಕೆ ಮಾಡಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬಡವರಿಗಾಗಿ ಮೀಸಲಿಡುವ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಆಶಯಗಳನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಇಲಾಖೆ ಕಾರ್ಯಕ್ರಮಗಳು ನಿಗದಿಯಂತೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ…
ಮಡಿಕೇರಿ ಡಿ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ‘ಮಹಾ ಪರಿನಿರ್ವಾಣ ದಿನ’ ಕಾರ್ಯಕ್ರಮವು ಬುಧವಾರ ನಡೆಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶ್ರೇಷ್ಠ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗೌರವ ಸಲ್ಲಿಸಿ ಮಾತನಾಡಿ ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು, ಜೊತೆಗೆ ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಸಹ ಪ್ರಸ್ತುತವಾಗಿವೆ ಎಂದು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ, ಚಲನಶೀಲತೆ ಮತ್ತು ಕ್ರೀಯಾಶೀಲತೆ ಸ್ವಲ್ಪವನ್ನಾದರೂ ಅನುಸರಿಸಿದರೆ ಪ್ರತಿಯೊಬ್ಬರೂ ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಬರೆದಿರುವ ಪುಸ್ತಕಗಳನ್ನು…
ಮಡಿಕೇರಿ ಡಿ.6 : ಮಡಿಕೇರಿ ನಗರಸಭೆಯ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಡಿ 2023-24 ನೇ ಸಾಲಿನ ಅನುಮೋದಿತ ಕ್ರಿಯಾ ಯೋಜನೆಯಂತೆ ಶೇ.24.10 ರ ಪರಿಶಿಷ್ಟ ಜಾತಿ/ ಪಂಗಡದ, ಶೇ.7.25 ರ ನಗರ ಬಡ ಜನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇ.5 ರ ಅಂಗವಿಕಲರ ಅಭಿವೃದ್ದಿ ಯೋಜನೆಯಡಿ ವೈಯಕ್ತಿಕ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹಾಗೂ ಮುಂದೆ ಅಗತ್ಯ ಪಡಿಸಬಹುದಾದ ಇತರೆ ದಾಖಲಾತಿಗಳನ್ನು ನೀಡುವ ಷರತ್ತಿಗೆ ಒಳಪಡಿಸಿದೆ. ಅರ್ಜಿ ಸಲ್ಲಸಲು ಡಿಸೆಂಬರ್, 26 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ನಗರಸಭೆ ಕಚೇರಿಯಲ್ಲಿ ಪಡೆಯಬಹುದಾಗಿದೆ. ಶೇ.24.10 (ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮ): ನಿವೇಶನ ಹೊಂದಿರುವ ಫಲಾನುಭವಿಗಳ ಮನೆಯ ಮೇಲ್ಚಾವಣಿ ದುರಸ್ತಿಗಾಗಿ ಸಹಾಯಧನ ನೀಡುವುದು. 4.16 ಲಕ್ಷ ರೂ. ಕಾಯ್ದಿರಿಸಲಾಗಿದೆ. ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಮನೆಯ ಕಂದಾಯ ರಶೀದಿ, ನಮೂನೆ-3 ಕಡ್ಡಾಯವಾಗಿ ಫಲಾನುಭವಿಯ ಹೆಸರಿನಲ್ಲಿರ…
ಮಡಿಕೇರಿ ಡಿ.6 : ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ 2023-24 ನೇ ಸಾಲಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿದ್ದು, ಅರ್ಹ ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರಿರುವ ನವಕಾನೂನು ಪದವೀಧರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ದಾಖಲೆ ಪ್ರತಿಗಳೊಂದಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು ಮಡಿಕೇರಿ ಮತ್ತು 2 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು ಮಡಿಕೇರಿ(ಕಾರ್ಯ ನಿರ್ವಹಣೆ ವಿರಾಜಪೇಟೆ), ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಸೋಮವಾರಪೇಟೆ, ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಪೊನ್ನಂಪೇಟೆ ಹಾಗೂ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಕುಶಾಲನಗರ ಇಲ್ಲಿಗೆ ಸಂಬಂಧಪಟ್ಟ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ, 12 ಕೊನೆಯ ದಿನವಾಗಿದೆ.…






