ಮಡಿಕೇರಿ ಜ.15 : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 32ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆಯು ಜ.23 ರಂದು ನಡೆಯಲಿದೆ. ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 9 ಗಂಟೆಗೆ ತಾಳತ್ತಮನೆಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಾಥಾನ್ ಸ್ಪರ್ಧೆಗಳು ನಡೆಯಲಿದೆ. ಭಾಗವಹಿಸುವ ಕ್ರೀಡಾಪಟುಗಳು ಜ.22ರ ಒಳಗೆ 9480251938, 8431168783, 8762066118, 6361059178 ಸಂಪರ್ಕಿಬಹುದಾಗಿದೆ ಎಂದು ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ವಿರಾಜಪೇಟೆ ಜ.15 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಷಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ಗಗನಶ್ರೀ ಹಾಗೂ ಆರ್.ವಿನಿಷ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಫೆ.5 ಮತ್ತು 6 ರಂದು ಸ್ಪರ್ಧೆ ನಡೆಯಲಿದೆ. ಗಗನಶ್ರೀ ವಿರಾಜಪೇಟೆಯ ವಿಜಯನಗರದ ನಿವಾಸಿ ಶಶಿಕುಮಾರ್ ಮತ್ತು ದಿವ್ಯ ದಂಪತಿಗಳ ಪುತ್ರಿ. ಆರ್.ವಿನಿಷ ವಿರಾಜಪೇಟೆ ಸುಭಾಷ್ ನಗರದ ನಿವಾಸಿ ಕೆ.ರಜನಿಕಾಂತ್ ಮತ್ತು ಆರ್.ಅರ್ಪಿತಾ ದಂಪತಿಗಳ ಪುತ್ರಿ. ಈ ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.
ನಾಪೋಕ್ಲು ಜ.15 : ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡುವುದಿಲ್ಲ , ಅಭಿವೃದ್ಧಿ ಕೆಲಸಗಳು ಜನರಿಗೆ ಗೋಸ್ಕರ ಹೊರತು ಯಾವುದೇ ಪಕ್ಷಗಳಿಗೆ ಅಥವಾ ಯಾವುದೇ ಪಕ್ಷದ ನಾಯಕರಿಗಾಗಿ ಅಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಬಲ್ಲಮಾವಟಿ ಗ್ರಾ.ಪಂ ಒಳಪಟ್ಟ ಕಕ್ಕಬ್ಬೆ-ನೆಲಜಿ ರಸ್ತೆಯ ಒಂದುವರೆ ಕಿಲೋಮೀಟರ್ ದೂರದ ರಸ್ತೆ 35 ಲಕ್ಷ ರೂ.ಗಳ ಅನುದಾನದಲ್ಲಿ ಮರು ಡಾಂಬರೀಕರಣ ಆದ ರಸ್ತೆಯನ್ನು ನಾಪೋಕ್ಲು-ಭಾಗಮಂಡಲ -ಕಕ್ಕಬ್ಬೆ ಜಂಕ್ಷನ್ ನ ನೆಲಜಿ ಯಲ್ಲಿ ಉದ್ಘಾಟಿಸಿ ಮಾತನಾಡಿದರು. ನಿಗಧಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಪೂರ್ಣಗೊಂಡಿದೆ. ಇದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು. ಎರಡು ಮೂರು ತಿಂಗಳಲ್ಲಿ ಆರಂಭಿಸಿದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. ಈ ಸಂದರ್ಭ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು, ನಾಪೋಕ್ಲು-ಭಾಗಮಂಡಲ ರಸ್ತೆಯ ಹಳೆ ತಾಲೂಕಿನಿಂದ ಪುಲಿಕೋಟುವರೆಗಿನ ರಸ್ತೆ ದುರಸ್ತಿ ಕಾರ್ಯ ಒಂದು ತಿಂಗಳ ಒಳಗೆ ರಸ್ತೆಗಳ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ…
ಮಡಿಕೇರಿ ಜ.14 :NEWS DESK ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ರಾಜ್ಯ ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಮಕ್ಕಂದೂರು ಗ್ರಾಮದ ನಾಪಂಡ ರವಿ ಕಾಳಪ್ಪ ಅವರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರವಿ ಕಾಳಪ್ಪ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಜ.14 : ಬೆಂಗಳೂರಿನ ಕೊಡಗು ಗೌಡ ಸಮಾಜದಲ್ಲಿ ಬೆಂಗಳೂರಿನ ಎಲ್ಲಾ ಗೌಡ ಸಮಾಜ ಮತ್ತು ಒಕ್ಕಲಿಗ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಜ.14 ರಂದು ನಡೆಯಿತು. ಕೊಡಗಿನಲ್ಲಿ ನಡೆಯುತ್ತಿರುವ ಕೊಡವ ಲ್ಯಾಂಡ್ ಬೇಡಿಕೆ ಹಾಗೂ ಡಾ.ಸುಬ್ರಮಣ್ಯಂ ಸ್ವಾಮಿ ಅವರು ಕೊಡವರ ಪರವಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಹೂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಕೊಡವರನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸಬೇಕೆನ್ನುವ ಒತ್ತಾಯವಿರುವ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ಕೊಡಗಿನಲ್ಲಿ ಶೇ.80 ರಿಂದ 90 ರಷ್ಟು ಮಂದಿ ಗೌಡರು, ಒಕ್ಕಲಿಗರು, ಹಿಂದುಳಿದ ವರ್ಗದವರು ಹಾಗೂ ಇತರೆ ಜನಾಂಗದವರು ವಾಸಿಸುತ್ತಿದ್ದಾರೆ. ಕೇವಲ ಅಲ್ಪಸಂಖ್ಯಾತ ವರ್ಗಕ್ಕೆ ಪ್ರತ್ಯೇಕ ರಾಜ್ಯ ಅಥವಾ ಸ್ವಾಯತ್ತತೆ ನೀಡುವುದು ಎಷ್ಟು ಸಮಂಜಸ ಎಂದು ಸಮಾಲೋಚಿಸಲಾಯಿತು. ಸರಕಾರ ಇಂತಹ ಬೇಡಿಕೆಗಳಿಗೆ ಮಣಿದರೆ, ಜನಾಂಗೀಯ ಸಂಘರ್ಷಕ್ಕೆ ಒಳಗಾಗುವ ಪರಿಸ್ಥಿತಿ ಉದ್ಭವವಾಗಬಹುದು ಎಂದು ಸಭೆ ಆತಂಕ ವ್ಯಕ್ತಪಡಿಸಿತು. ಹಾಗಾಗಿ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ನಾವೆಲ್ಲರೂ ರಾಷ್ಟ್ರದ ಐಕ್ಯತೆಗಾಗಿ, ಸಂವಿಧಾನದ ಮೂಲಭೂತ ತತ್ವಗಳಿಗೆ ಧಕ್ಕೆಯಾಗದ…
ಮಡಿಕೇರಿ ಜ.14 : ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹುಲ್ಲು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರಪೇಟೆ ಸಮೀಪ ಯಡೂರು ಗ್ರಾಮದ ಮಾರಿಗುಡಿ ಜಂಕ್ಷನ್ ನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕುಂದಳ್ಳಿ ಗ್ರಾಮದ ಪ್ರವೀಣ್ ಎಂಬುವವರು ತಮ್ಮ ಟ್ರ್ಯಾಕ್ಟರ್ ನಲ್ಲಿ ಬಸವನಕಟ್ಟೆಯಿಂದ ಹುಲ್ಲನ್ನು ತುಂಬಿಸಿ, ತೆರಳುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಗೊಂಡು ಬೆಂಕಿ ಕಾಣಿಸಿಕೊಂಡಿತು. ಹುಲ್ಲು ಸಂಪೂರ್ಣ ನಾಶವಾಗಿದ್ದು, ಬೇರೆ ಯಾವುದೇ ಅನಾಹುತ ಸಂಭವಿಸಿಲ್ಲ.
ಮಡಿಕೇರಿ ಜ.14 : ಸೋಮವಾರಪೇಟೆ ಪುಷ್ಪಗಿರಿ ಜೇಸೀ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್.ವಸಂತ್ ಅವರನ್ನು ಸನ್ಮಾನಿಸಲಾಯಿತು. ಸಂಕಪ್ಪ ಸಭಾಂಗಣದಲ್ಲಿ ನಡೆದ ಜೇಸೀ ಪದಗ್ರಹಣ ಸಮಾರಂಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಲೋಮನ್ ಡೇವಿಡ್, ನಿಕಟಪೂರ್ವ ಅಧ್ಯಕ್ಷ ಸುರೇಶ್ ಮಾವುಟ್ಕರ್, ಕುಶಾಲನಗ ಶ್ರೀ ಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜುಕುಮಾರ್, ದಕ್ಷಿಣ ಕೊಡಗು ಛಾಯಾಗ್ರಹಕರ ಸಂಘದ ಮಾಜೀ ಅಧ್ಯಕ್ಷ ರವೀಂದ್ರ ರೈ, ಸೋಮವಾರಪೇಟೆ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿನಯ್‌ಕುಮಾರ್ ಸೇರಿದಂತೆ ಇತರರು ವಸಂತ್ ಅವರನ್ನು ಸನ್ಮಾನಿಸಿದರು. ಜೇಸಿ ನಿಕಟಪೂರ್ವ ಅಧ್ಯಕ್ಷೆ ಎಂ.ಎ.ರುಬೀನಾ ಉಪಸ್ಥಿತರಿದ್ದರು.
ಮಡಿಕೇರಿ ಜ.14 : ಸೋಮವಾರಪೇಟೆಯ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಪಟ್ಟಣದ ವೃತ್ತದಲ್ಲಿರುವ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವ ಶಕ್ತಿಯಿಂದ ಮಾತ್ರ ದೇಶದ ಬೆಳವಣಿಗೆ ಸಾಧ್ಯ. ಯುವ ಸಮುದಾಯದ ಮೇಲೆ ಸ್ವಾಮಿ ವಿವೇಕಾನಂದರು ಅದಮ್ಯ ವಿಶ್ವಾಸ ಇಟ್ಟಿದ್ದರು. ಇವರ ಜೀವನ ಚರಿತ್ರೆಯೇ ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದರು. ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಸಮಾಜದ ಮೇಲೆ ಅತೀವ ಕಾಳಜಿ, ಧರ್ಮ ಶ್ರದ್ಧೆಯೊಂದಿಗೆ ಭಾರತದ ಪ್ರಾಚೀನ ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಿದ ಕೀರ್ತಿ ವಿವೇಕಾನಂದರಿಗೆ ಸಲ್ಲಬೇಕು ಎಂದು ತಿಳಿಸಿದರು. ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪಿ.ಕೆ.ರವಿ, ರೋಟರಿ ಸಂಸ್ಥೆ ಅಧ್ಯಕ್ಷ ನಂಗಾರು ವಸಂತ್, ಕಾರ್ಯದರ್ಶಿ ಚೇತನ್, ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ಮಾಜೀ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್,…
ಮಡಿಕೇರಿ ಜ.14 : ಭಾರತ ದೇಶದ ಮಹಾಗ್ರಂಥ ಎನಿಸಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನವನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ಸಮಾಜ ಸೇವಕ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಪೊನ್ನಂಪೇಟೆಯ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಶ್ರಮಿಸಿದ ಶಿಕ್ಷಕರು, ಉಪನ್ಯಾಸಕರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನವನ್ನು ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಕೇಂದ್ರ ಹಾಗೂ ರಾಜ್ಯದ ಶಿಕ್ಷಣ ಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಕೇತ್ ಪೊವಯ್ಯ ಹೇಳಿದರು. ಸಂವಿಧಾನದಲ್ಲಿರುವ ಅಂಶಗಳು ಅನುಷ್ಠಾನಗೊಳ್ಳಬೇಕು, ಪ್ರತಿಯೊಬ್ಬರು ಸಂವಿಧಾನವನ್ನು ಪ್ರೀತಿಸಿ ಗೌರವಿಸಬೇಕು. ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿ ಇಂದು ಇಡೀ ವಿಶ್ವದಲ್ಲಿ ನಮ್ಮ ದೇಶವನ್ನು ಗೌರವದಿಂದ ಕಾಣಲು ಸಾಧ್ಯವಾಗಿದೆ. ಬಡತನದ ನಿರ್ಮೂಲನೆ, ಯುವ ಸಮೂಹಕ್ಕೆ ಉದ್ಯೋಗಾವಕಾಶ, ಸಮಾನತೆ ಇವೆಲ್ಲವೂ ಸಂವಿಧಾನದಿಂದ ನಮಗೆ ದೊರಕಿದೆ…
ಮಡಿಕೇರಿ ಜ.14 : ಕೊಡಗು ಜಿಲ್ಲೆಯ ಲೆಫ್ಟಿನೆಂಟ್ ಐಶ್ವರ್ಯ ಎ.ಜಿ(24) ಹಾಗೂ ಮಧ್ಯಪ್ರದೇಶದ ಸೆಹೋರ್ ನ ಲೆಫ್ಟಿನೆಂಟ್ ಉತ್ಕರ್ಷ್ ಬಿ.ಶರ್ಮಾ(27) ಅವರು ಲಖನೌ ನಗರದ 11 ಜಿಆರ್‌ಆರ್‌ಸಿ ಠಾಕೂರ್ ಷಿಯೋದಾತ್ ಸಿಂಗ್ ಪರೇಡ್ ಮೈದಾನದಲ್ಲಿ ಜನವರಿ 15 ರಂದು ನಡೆಯುವ 76ನೇ ಸೇನಾ ದಿನದ ಪರೇಡ್ ನಲ್ಲಿ ಸೇನಾ ತುಕಡಿಯನ್ನು ಮುನ್ನಡೆಸಲಿದ್ದಾರೆ. ಐಶ್ವರ್ಯ ಮಡಿಕೇರಿಯ ಉದ್ಯಮಿ ಗಣೇಶ್ ಹಾಗೂ ಮೋಂತಿ ಗಣೇಶ್ ಅವರ ಪುತ್ರಿ. ಬಿಬಿಎ ಪದವೀಧರರಾಗಿರುವ ಐಶ್ವರ್ಯಾ ಅವರು ಎನ್‌ಸಿಸಿಯಲ್ಲಿದ್ದಾಗ ಸಿ ಪ್ರಮಾಣ ಪತ್ರವನ್ನು ಹೊಂದಿದ್ದಾರೆ. 2017ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಂದು ಎನ್‌ಸಿಸಿ ತುಕಡಿಯನ್ನು ಮುನ್ನಡೆಸಿದ್ದರು. ಎನ್‌ಸಿಸಿ ಇವರಿಗೆ ಸೇನಾ ಅಧಿಕಾರಿಯಾಗಲು ಪ್ರೇರೇಪಿಸಿತು.






