ಲೇಖಕ: admin

ಮಡಿಕೇರಿ ಜ.14 : ಕೊಡಗು ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಕಾಫಿ ಬೆಳೆ ನಷ್ಟವಾಗಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಕಾಫಿ ಮಂಡಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ವಿರಾಜಪೇಟೆಯಲ್ಲಿ ಶಾಸಕರನ್ನು ಭೇಟಿಯಾಗಿ ಅಕಾಲಿಕ ಮಳೆಯಿಂದ ಉಂಟಾದ ಅಪಾರ ನಷ್ಟದ ಕುರಿತು ಮನವಿ ಪತ್ರದ ಮೂಲಕ ಮನವರಿಕೆ ಮಾಡಿದರು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ ನಷ್ಟದ ಸಮೀಕ್ಷೆ ಬಗ್ಗೆ ಭರವಸೆ ನೀಡಿದರು. ಕಾಪಿ ಕೇಂದ್ರ ಸರಕಾರದ ವಾಣಿಜ್ಯ ಸಚಿವಾಲಯದಡಿಯಲ್ಲಿ ಬರುತ್ತಿದ್ದು, ಅಕಾಲಿಕ ಮಳೆಯಿಂದ ಉಂಟಾಗಿರುವ ಕಾಫಿ ಬೆಳೆಗಾರರ ಸಂಕಷ್ಟವನ್ನು ಕೇಂದ್ರವೇ ಪರಿಗಣನೆ ಮಾಡಬೇಕಾಗಿದೆ ಎಂದರು. ::: ಜಿಲ್ಲಾಧಿಕಾರಿಗಳಿಗೆ ಮನವಿ ::: ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿತು. ಕಳೆದ ಮಳೆಗಾಲದಲ್ಲಿ ಕೊಳೆರೋಗಕ್ಕೆ ತುತ್ತಾದ ಕಾಫಿ ಬೆಳೆಯ ನಷ್ಟದ ಸಮೀಕ್ಷೆ ನಡೆಸಲು…

Read More

ನಾಪೋಕ್ಲು ಜ.14 : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಎ.ಹಾರಿಸ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 2 ವರ್ಷಗಳ ಹಿಂದೆ ನನ್ನನ್ನು ಶಾಲೆಯ ಪೋಷಕರು ಸರ್ವಾನುಮತದಿಂದ ಅವಿರೋಧವಾಗಿ ಸಮಿತಿಗೆ ಆಯ್ಕೆ ಮಾಡಿದ್ದರು. ನನ್ನ ಅವಧಿಯಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಶ್ರಮಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ ಎಂದು ಹೇಳಿದ್ದಾರೆ.

Read More

ಮಡಿಕೇರಿ ಜ.13 : ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದ್ದು, ಮೂಲಭೂತ ಸೌಲಭ್ಯಗಳ ಕೊರತೆ ಗ್ರಾಮಸ್ಥರನ್ನು ಕಾಡಿದೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. “ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದ ಭಾಗವಾಗಿ ಮಡಿಕೇರಿ ತಾಲ್ಲೂಕಿನ ವಿವಿಧೆಡೆ ಸಂಚರಿಸಿದ ಅವರು ಜಿಲ್ಲೆಯ ಗ್ರಾಮಗಳನ್ನು ಕಾಡುತ್ತಿರುವ ಕೊರತೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕಟ್ಟೆಮಾಡು, ಮರಗೋಡು, ಹಾಕತ್ತೂರು, ಮೇಕೇರಿ, ಕೆ.ನಿಡುಗಣೆ, ಗಾಳಿಬೀಡು, ವಣಚಲು, ಕಾಟಕೇರಿ, ಮದೆ, ಬೆಟ್ಟತ್ತೂರು, ಬಲ್ಲಮಾವಟಿ, ಎಮ್ಮೆಮಾಡು, ಪಾರಾಣೆ ಮತ್ತು ಮೂರ್ನಾಡು ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸರ್ಕಾರಿ ಶಾಲೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಕೊರತೆ ಕಂಡು ಬಂದಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು, ಮೂಲಭೂತ ಸೌಲಭ್ಯದ ಅಗತ್ಯತೆಯು ಇದೆ. ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆಯಿಂದ ಆರೋಗ್ಯ ಕೇಂದ್ರಗಳೇ ರೋಗಗ್ರಸ್ತವಾಗಿವೆ ಎಂದು ಆರೋಪಿಸಿದರು. ಕಲ್ಮಕಾಡು, ಹಮ್ಮಿಯಾಲ, ವಣಚಲು, 1ನೇ ಮೊಣ್ಣಂಗೇರಿ, ಕಾಲೂರು ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ…

Read More

ಮಡಿಕೇರಿ,ಜ.13  : ಮಡಿಕೇರಿ ನಗರದ ಕಾವೇರಿ ಬಡಾವಣೆ, ವಿಜಯನಗರ ಬಡಾವಣೆ,ಡೈರಿ ಫಾರಂ, ಕನ್ನಿಕೆ ಬಡಾವಣೆ ಟಿ.ಜಾನ್ ಬಡಾವಣೆ, ಪ್ರಕೃತಿ ಬಡಾವಣೆಗಳನ್ನೊಳಗೊಂಡ ಶ್ರೀ ವಿಜಯ ವಿನಾಯಕ ಗೌಡ ಒಕ್ಕೂಟದ 9ನೇ ವರ್ಷದ ಸಂತೋಷ ಕೂಟ ಜ.15 ರಂದು ನಡೆಯಲಿದೆ. ಕೊಡಗು ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕೂಟದ ಅಧ್ಯಕ್ಷ ಕುರಿಕಡ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕುದುಕುಳಿ ಮಿಲನ ಭರತ್ ಪಾಲ್ಗೊಳ್ಳುವರು. ಒಕ್ಕೂಟದ ಸದಸ್ಯರು ಹಾಗೂ ಮಕ್ಕಳಿಗೆ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದೆಂದು ಒಕ್ಕೂಟದ ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.13 : ಕರ್ನಾಟಕ ಸ್ಪೋಟ್ರ್ಸ್ ಡ್ಯಾನ್ಸ್ ಅಸೋಷಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿ ಎಂ.ಶ್ರೀದೇವಿ ಹಾಗೂ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ದೇಚಮ್ಮ ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶ್ರೀದೇವಿ ವಿರಾಜಪೇಟೆ ತಾಲೂಕಿನ ಕೆ. ಬೋಯಿಕೇರಿ ಗ್ರಾಮದ ಮುರುಗೇಶ್ ಮತ್ತು ತುಳಸಿ ದಂಪತಿಯ ಪುತ್ರಿ. ದೇಚಮ್ಮ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟದ ನಿವಾಸಿ ದೀಪಕ್ ಮತ್ತು ಅನುರಾಧ ಅವರ ಪುತ್ರಿ. ಈ ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆ ಜಮ್ಮು ಕಾಶ್ಮೀರದಲ್ಲಿ ಫೆ.5 ಮತ್ತು 6 ರಂದು ನಡೆಯಲಿದೆ.

Read More

ಮಡಿಕೇರಿ ಜ.13 : ವಿಶೇಷ ಚೇತನರಿಗೆ ರಾಜ್ಯಾದ್ಯಂತ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾ ಪಂಚಾಯತ್ ಭವನದ ಮುಂಭಾಗ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ವಿಶೇಷ ಚೇತನರ ಸಂಘದ ಅಧ್ಯಕ್ಷ ಜೆ.ಎ.ಮಹದೇಶ್ವರ, ಸರ್ಕಾರ ವಿಶೇಷ ಚೇತನರನ್ನು ಮರೆಯುತ್ತಿದ್ದು, ವಿಶೇಷ ಚೇತನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ತಕ್ಷಣವೇ ವಿಆರ್‍ಡಬ್ಲ್ಯೂಗಳಿಗೆ ಖಾಯಮಾತಿ ಹಾಗೂ ಸೇವಾ ಭದ್ರತೆ ಒದಗಿಸಬೇಕು, ಸಮಯಕ್ಕೆ ಸರಿಯಾಗಿ ಗೌರವಧನ ನೀಡಬೇಕು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿ ದೊರೆಯುವಂತೆ ಮಾಡಬೇಕು, 5 ಸಾವಿರ ಮಾಸಿಕ ಭತ್ಯೆ, ವಸತಿ ವ್ಯವಸ್ಥೆ, ವಿಶೇಷ ಚೇತನರಿಗೆ ಪ್ರತ್ಯೇಕ ಬಿಪಿಎಲ್ ಕಾರ್ಡ್ ನೀಡಬೇಕೆಂದು ಒತ್ತಾಯಿಸಿದರು. ಸಂಘದ ಕಾರ್ಯದರ್ಶಿ ತಿರುಮಲೇಶ್ವರ್, ನಿರ್ದೇಶಕರಾದ ಕೆ.ಎಂ.ಹಸ್ಸನ್, ವೀಣಾ, ಹರೀಶ್, ಜಯ ಕುಮಾರ್, ಮಿಲನ್…

Read More

ಮಡಿಕೇರಿ ಜ.13 : ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ಸಭೆಯು ಜ.28 ರಂದು ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಶುಲ್ಕ ರೂ.501, ಭಾವಚಿತ್ರ-3, ಆಧಾರ್ ಕಾರ್ಡ್ ಪ್ರತಿ ಹಾಗೂ ಯುಡಿಐಡಿ ಕಾರ್ಡಿನೊಂದಿಗೆ ಸಭೆಗೆ ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘ ಕೋರಿದೆ. ಹೆಚ್ಚಿನ ಮಾಹಿತಿಗೆ 934240252 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜ.13 : “ಬೇರ್” (ದಿ ರೂಟ್) ಕೊಡವ ಸಿನಿಮಾ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ನಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳ್ಳುತ್ತಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ. ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್” ಕೊಡವ ಸಿನಿಮಾ ಮೂಡಿ ಬಂದಿದೆ. ಬಾಂಗ್ಲಾದೇಶದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ಪ್ರದರ್ಶನಕ್ಕೆ “ಬೇರ್” ಆಯ್ಕೆಯಾಗುವ ಮೂಲಕ ಕೊಡವ ಸಿನಿಮಾವೊಂದು ಮೊದಲ ಬಾರಿಗೆ ಅವಕಾಶ ಗಿಟ್ಟಿಸಿಕೊಂಡ ಹೆಮ್ಮೆಗೆ ಪಾತ್ರವಾಗಿದೆ. ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ತಯಾರಾದ ಈ ಚಿತ್ರ ಪ್ರಪ್ರಥಮ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದೆ. ಕೆಲವೇ ಪಾತ್ರದಾರಿಗಳ ನಟನೆ ಇದ್ದು, ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ…

Read More

ಮಡಿಕೇರಿ ಜ.13 :  ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಿರಾಜಪೇಟೆ ನಗರದಲ್ಲಿ “ಮಾದಕ ವಸ್ತು-ದ್ರವ್ಯಗಳ ನಿರ್ಮೂಲನೆ’ ಕುರಿತು ಜನಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿ, ಯುವ ಜನತೆ ದುಶ್ಚಟಗಳಿಂದ ದೂರ ಇದ್ದು, ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ,   ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯವರು, ವಿರಾಜಪೇಟೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೋಟರಿ ಕ್ಲಬ್, ಡೆಂಟಲ್ ಕಾಲೇಜು, ಆಟೋ ಚಾಲಕರು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ  ಜಾಗೃತಿ ಮೂಡಿಸಿದರು.

Read More

ಮಡಿಕೇರಿ ಜ.13 : ಶುಕ್ರವಾರ 12-01-2024 ರಂದು  ಅಸ್ತಮಿಸಿದ ಶನಿವಾರ ರಾತ್ರಿ ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು  ಜಿಲ್ಲಾ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್  ತೀರ್ಮಾನಿಸಿದ್ದಾರೆ ಇದೇ ಬರುವ ದಿನಾಂಕ 07-02-2024 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಜಬ್ – 27 ಇಸ್ರಾಹ್ – ಮಿಹ್ರಾಜ್ ರಾತ್ರಿಯಾಗಿರುತ್ತದೆ.

Read More