ಮಡಿಕೇರಿ ಜ.13 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜ.25 ಗುರುವಾರದಂದು ಸಿಎಂ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಲೇಖಕ: admin
ಕುಶಾಲನಗರ, ಜ.13 : ವಚನಕಾರರ ಪರಂಪರೆಯ ಮರೆತು ಹೋದ ಮೌಲ್ಯಗಳನ್ನು ಪುನಃ ಸ್ಮರಣೆ ಮಾಡುವ ಕೆಲಸ ವಚನಗಳ ಪಠನ ಹಾಗೂ ಮನನದಿಂದ ಆಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ” ವಚನ ಗಾಯನ ಸ್ಪರ್ಧಾ ಕಾರ್ಯಕ್ರಮ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯ ವಿಶ್ವದ ಮೇರು ಸಾಹಿತ್ಯವಾಗಿದೆ. ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿದ್ದ ಕಂದಾಚಾರ ಹಾಗೂ ಮೂಢನಂಬಿಕೆಗಳ ವಿರುದ್ದ ಸಮರವನ್ನು ಸಾರಿ ಕ್ರಾಂತಿ ಉಂಟು ಮಾಡಿದ ಶರಣರ ವಚನಗಳು ಆಧ್ಯಾತ್ಮದ ನೆಲೆಯೊಳಗೆ ಬದುಕಿನ ಸಾರ ತತ್ಬವನ್ನು ಸಾರಿ ಜಟಿಲವಾಗಿದ್ದ ಮನುಷ್ಯನ ಬದುಕನ್ನು ಸರಳಗೊಳಿಸಿದ ದೀವಿಗೆಗಳು ಎಂದು ಕುಲಪತಿಗಳು ಆಶಿಸಿದರು. ಹನ್ನೆರಡನೇ ಶತಮಾನದ ಆಯ್ದಕ್ಕಿ ಲಕ್ಕಮ್ಮ ಹಾಗೂ ಆಯ್ದಕ್ಕಿ ಮಾರಯ್ಯನ ಆದರ್ಶಗಳು ಇಂದಿನ ಲಂಚಕೋರರು ಹಾಗೂ ಭ್ರಷ್ಟರಿಗೆ…
ಮಡಿಕೇರಿ ಜ.13 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ.15 ರಂದು 34ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮುತ್ತಪ್ಪ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್, ಉತ್ಸವದ ಪ್ರಯುಕ್ತ ಜ.14 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ ಎಂದು ತಿಳಿಸಿದರು. ಮಕರ ಸಂಕ್ರಾಂತಿ ಮಹೋತ್ಸವದ ದಿನವಾದ ಜ.15 ರಂದು ಬೆ.6.30 ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಕ್ಕೆ ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, 7.30 ರಿಂದ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆ, 8.30ಕ್ಕೆ ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಕ್ಕೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಬೆ.10 ಕ್ಕೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಕ್ಕೆ ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ,…
ವಿರಾಜಪೇಟೆ ಜ.13 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಮಂಡ್ಯದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಸ್ಪೋಟ್ರ್ಸ್ ಡಾನ್ಸ್ ಚಾಂಪಿನ ಶಿಪ್ ಸ್ಪರ್ಧೆಯಲ್ಲಿ ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಯು.ಕೆ.ಜಿ ವಿದ್ಯಾರ್ಥಿ ವಿಹಾ ಮುತ್ತಮ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಫ್ರೀ ಸ್ಟೈಲ್ ನೃತ್ಯದಲ್ಲಿ ಕಂಚಿನ ಪದಕ ಮತ್ತು ಸಾಮೂಹಿಕ ನೃತ್ಯದಲ್ಲಿ ಚಿನ್ನದ ಪದಕವನ್ನು ಗೆದ್ದು, ಜಮ್ಮುವಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ನಿವಾಸಿ ಐತಿಚಂಡ ರಕ್ಷಿತ ಅವರ ಪುತ್ರಿಯಾಗಿರುವ ವಿಹಾ ಮುತ್ತಮ್ಮ, ವಿರಾಜಪೇಟೆಯ ವಿಷ್ಣು ಅವರ ಟೀಮ್ ಇಂಟೊಪೀಸ್ ನೃತ್ಯ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ವಿರಾಜಪೇಟೆ ಜ.13 : ಸ್ವಾಮಿ ವಿವೇಕಾನಂದರು ಯುವ ಜನರಿಗೆ ಮಾದರಿಗಳಾಗಿದ್ದು, ಯುವ ಜನಾಂಗದ ಕನಸನ್ನು ಕಂಡ ಮಹಾನ್ ಚೇತನರಾಗಿದ್ದಾರೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಸ್ನಾತಕೋತ್ತರ ಎಂ.ಕಾಂ. ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ವಿಶೇಷವಾಗಿ ಆದ್ಯಾತ್ಮಿಕ ಕ್ಷೇತ್ರಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿದ್ದಾರೆ. ಶಿಸ್ತು, ಏಕಾಗ್ರತೆ, ಧ್ಯಾನ, ತಾಳ್ಮೆಗಳೆಂಬ ಅಂಶಗಳನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತೀಯ ಸಮಾಜಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿದ್ದು, ನವ ಸಮಾಜದ ನಿರ್ಮಾತೃರಾಗಿದ್ದಾರೆ. ಅವರು ಸಾಮಾಜಿಕ ಮತ್ತು ಆಧ್ಯಾತ್ಮಿಕ ಚಿಂತಕರಾಗಿದ್ದು, ಯುವಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಿದ್ದಾರೆ ಎಂದು ನುಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಎಂ.ಕಾಂ. ವಿದ್ಯಾರ್ಥಿಗಳು…
ಮಡಿಕೇರಿ ಜ.13 : “ದ್ವೇಷ ಬಿಟ್ಟು ದೇಶ ಕಟ್ಟು” ಪರಿಕಲ್ಪನೆಯೊಂದಿಗೆ ಮಡಿಕೇರಿ ಮುಸ್ಲಿಂ ಒಕ್ಕೂಟ ರಚನೆಗೊಂಡಿದೆ. ಒಕ್ಕೂಟದ ಸಂಚಾಲಕರಾಗಿ ಲಿಯಾಖತ್ ಆಲಿ ಆಯ್ಕೆಯಾಗಿದ್ದಾರೆ. ಒಕ್ಕೂಟ ರಚನೆಯಾದ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಲಿಯಾಖತ್ ಆಲಿ, ಭಾವೈಕ್ಯತೆಯ ಬೀಡು ಕೊಡಗು ಜಿಲ್ಲೆಯಲ್ಲಿ ಎಲ್ಲರೂ ಸೌಹಾರ್ಧತೆಯಿಂದ ಜೀವನ ಸಾಗಿಸಬೇಕು ಎನ್ನುವುದು ಒಕ್ಕೂಟದ ಉದ್ದೇಶ ಎಂದರು. ಅಲ್ಪಸಂಖ್ಯಾತ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ, ಆದ್ದರಿಂದ ಒಕ್ಕೂಟ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಿದೆ. ರಾಜಕೀಯ ರಹಿತವಾದ ಈ ಸಂಘಟನೆ ವಿಚಾರವಂತಿಕೆಯಿಂದ ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆ ನಮಗೆ ನೋವುಂಟು ಮಾಡಿದೆ. ಆದರೆ ಶಾಂತಿಯುತ ಬದುಕಿಗೆ ಪೂರಕವಾಗಿ ನಡೆದುಕೊಳ್ಳುವುದೇ ಒಕ್ಕೂಟದ ಗುರಿಯಾಗಿದ್ದು, ಈ ರೀತಿಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವುದು ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ರಹಿತವಾದ ಈ ಸಂಘಟನೆ ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಅಸಹಾಯಕರಿಗೂ ಸಹಾಯ ಮಾಡಲಿದೆ. ಶಿಕ್ಷಣ ಮತ್ತು ಸರ್ಕಾರದ ಸೌಲಭ್ಯಗಳ…
ನಾಪೋಕ್ಲು ಜ.13 : ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀಪೋತ್ಸವ ನಡೆಯಲಿದೆ. ದೇವಾಲಯದಲ್ಲಿ ಮಧ್ಯಾಹ್ನ 1 ಗಂಟೆಗೆ ವಿಶೇಷ ಪೂಜೆ, ಸಂಜೆ 7.30ಕ್ಕೆ ಪೂಜೆ ಹಾಗೂ ದೀಪೋತ್ಸವ ಜರುಗಲಿದೆ ಮಧ್ಯಾಹ್ನ ವಿಶೇಷ ಪೂಜೆ ಹಾಗೂ ಸಾಯಂಕಾಲ ದೀಪೋತ್ಸವ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜ.13 : ಬಲಮುರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರು ಅಯೋಧ್ಯೆತ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿದರು. ಬಲಮುರಿ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ, ಬಲಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಮನೆಗಳಿಗೆ ತಲುಪಿಸಲಾಯಿತು. ಈ ಸಂದರ್ಭ ಬಲಮುರಿ ಗ್ರಾ.ಪಂ ಸದಸ್ಯ ಬೊಳ್ಳಚೆಟ್ಟಿರ ಪ್ರಕಾಶ್ ಕಾಳಪ್ಪ, ಜಿ.ಪಂ ಮಾಜಿ ಸದಸ್ಯ ಬಿದ್ದಂಡ ಉಷಾ ದೇವಮ್ಮ, ದೇವನೂರು ಗೌಡ ಸಂಘದ ಅಧ್ಯಕ್ಷ ಪೊನ್ನಚ್ಚನ ಜಯ, ಶ್ರೀರಾಮ ಭಕ್ತ ಸ್ವಯಂಸೇವಕರಾದ ಗುಡ್ಡೆರ ಲಕ್ಷು, ಆಂಗೀರ ಸಂತೋಷ್ ಮಾದಪ್ಪ , ಬಿದ್ದಂಡ ಸಂದೀಪ್ ನಂಜಪ್ಪ ,ಕುಂದನ ದಯಾನಂದ, ರಾಜ ಮೇಡತನ ರಶ್ಮಿ, ಕವಿನ್ ಸೇರಿದಂತೆ ಮುಖ್ಯ ಪಟ್ಟವರು ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜ.13 : ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಪೋಕ್ಲು, ಹಳೆ ವಿದ್ಯಾರ್ಥಿಗಳ ಸಂಘ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ ಪ್ರಾಂಶುಪಾಲರು ಪ್ರೋ.ಕಾಂಡಂಡ ಉಷಾ ಜೋಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಬಾಲ್ಯ ಚಿಕಾಗೋ ಭಾಷಣದ ಬಗ್ಗೆ ವಿವರಣೆಯನ್ನು ನೀಡಿ, ವಿವೇಕಾನಂದ ಹಾಗೂ ಪುಣ್ಯ ಪುರುಷರ ಆದರ್ಶ ಅವರನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಎನ್.ಬಿ.ದಿಲೀಶ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸೇವೆ ವಿಷಯದ ಕುರಿತಾಗಿ ಮಾತನಾಡಿದರು. ಸ್ವಾಮಿ ವಿವೇಕಾನಂದರ ಸೇವಾ ಜೀವನದ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ, ಗುರುವಿನ…
ವಿರಾಜಪೇಟೆ, ಜ.13 : ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು, ಜನರ ಸೇವೆಯೇ ಮುಖ್ಯ ಗುರಿಯಾಗಿಸಿಕೊಳ್ಳಬೇಕೆಂದು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು. ವಿರಾಜಪೇಟೆ ಬಳಿಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೂರ್ಗ್ ಇನ್‍ಸ್ಟಿಟ್ಯೊಟ್ ಆಫ್ ಡೆಂಟಲ್ ಸೈನ್ಸ್ ಆಯೋಜಿಸಲಾಗಿದ್ದ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ದಂತ ವೈದ್ಯಕೀಯ ಕಾಲೇಜು ತನ್ನ ಅತ್ಯುತ್ತಮ ಸೌಲಭ್ಯಗಳ ಮೂಲಕ ಸಮಾಜಕ್ಕೆ ಉತ್ತಮ ದಂತ ಸೇವೆಯನ್ನು ನೀಡುತ್ತಿರುವುದು ಶ್ಲಾಘನಿಯ. ವಿದ್ಯಾರ್ಥಿಗಳ ಜೀವನ ಮಹತ್ವವಾದದ್ದು, ಮಾದಕ ವಸ್ತುಗಳನ್ನು ದೂರಮಾಡಿ ಮುಂದಿನ ಭವಿಷ್ಯದ ಕಡೆಗೆ ಗಮನಹರಿಸುವ ಮೂಲಕ ಶ್ರದ್ಧೆಯಿಂದ ಗುರಿ ಮುಟ್ಟುವಂತಾಗಬೇಕು ಎಂದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಕಲೆ ಪಾಠ್ಯೆತರ ಚಟುವಟಿಕೆಗಳಲ್ಲಿಯು ಭಾಗವಹಿಸಬೇಕು ಕರೆ ನೀಡಿದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಸುನೀಲ್ ಮುದ್ದಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಭೆಯನ್ನುದ್ದೇಶಿಸಿ ಕೊಡಗು ದಂತ ಕಾಲೇಜಿನ ವಿದ್ಯಾರ್ಥಿಗಳ ಸಂಘ ಉತ್ತಮ ನಾಯಕತ್ವ…






