ಲೇಖಕ: admin

ಮೂರ್ನಾಡು ಜ.13 : ಜಪಾನ್ ಶೋಟೋಕನ್ ಕರಾಟೆ ಅಸೋಶಿಯೇಷನ್ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ ಮೂರ್ನಾಡಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿ ಬ್ಲ್ಯಾಕ್ ಬೆಲ್ಟ್‍ಗಳನ್ನು ಪಡೆದುಕೊಂಡಿದ್ದಾರೆ. ಮೂರ್ನಾಡಿನ ಸಮುದಾಯ ಭವನದಲ್ಲಿ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ ಕೆ.ಡಿ.ತಿಮ್ಮಯ್ಯ, ಕೆ.ಆರ್.ಆದಿತ್ಯನಾಯಕ್, ಡಿ.ಎಸ್.ಮೌಲ್ಯ ಮತ್ತು ಸಿ. ಲಹರಿ ತಿಮ್ಮಯ್ಯ ಜಪಾನ್ ಶೋಟೋಕನ್ ಕರಾಟೆ ಅಸೋಶಿಯೇಷನ್ ಮುಖ್ಯ ತರಬೇತುದಾರ ಕೇರಳದ ಪಾಲೆಕ್ಕಾಡುವಿನ ಗೋಪಾಲ ಕೃಷ್ಣ ಅವರ ನೇತೃತ್ವದಲ್ಲಿ ಬ್ಲ್ಯಾಕ್ ಬೆಲ್ಟ್‍ಗಳನ್ನು ಪಡೆದುಕೊಂಡರು. ಮೂರ್ನಾಡು ಕರಾಟೆ ಶಾಲೆಯ ತರಬೇತುದಾರ ಟಿ.ಬಿ.ಶ್ಯಾಮ್ ಹಾಜರಿದ್ದರು. ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಮೂರ್ನಾಡು ಉಪಠಾಣಾಧಿಕಾರಿ ಪಿ.ಟಿ. ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರಗಳನ್ನು ವಿತರಿಸಿದರು. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು 

Read More

ಸೋಮವಾರಪೇಟೆ ಜ.13 : ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಒಕ್ಕಲಿಗರ ಸಮುದಾಯಭವನದಲ್ಲಿ ನಡೆದ ಕುವೆಂಪು ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಒಕ್ಕಲಿಗರ ಸಂಘದ ಕೊಡುಗೆ ಅಪಾರ. ಒಂದು ವಿದ್ಯಾಸಂಸ್ಥೆ ಬೆಳೆಯಬೇಕಾದರೆ ಪೋಷಕರ ಪ್ರೋತ್ಸಾಹ ಮುಖ್ಯ. ದಾನಗಳಲ್ಲಿ ವಿದ್ಯಾದಾನ ಅತೀ ಶ್ರೇಷ್ಟವಾದುದು. ವಿದ್ಯಾವಂತರು ಈ ದೇಶದ ಆಸ್ತಿಯಾಗಿದ್ದಾರೆ. ಪೋಷಕರು ಮಕ್ಕಳಿಗೆ ಉನ್ನತಶಿಕ್ಷಣ ನೀಡಬೇಕು ಎಂದರು. ಸಂಘದ ಕೆಲ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಕೇಂದ್ರಿಕರಿಸಬೇಕು. ಶಿಕ್ಷಕರ ಸಲಹೆಗಳನ್ನು ಪಡೆದು ಹೆಚ್ಚಿನ ಅಂಕ ಗಳಿಸಬೇಕು. ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಶೇ.98 ರಷ್ಟು ಗ್ರಾಮೀಣ ಮಕ್ಕಳು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿದ್ದಾರೆ ಎಂಬುದು ನಮ್ಮ ಹೆಮ್ಮೆಯಾಗಿದೆ. ಕಳೆದ ಆರು ವರ್ಷಗಳಿಂದಲೂ…

Read More

ಸೋಮವಾರಪೇಟೆ ಜ.13 : ಹಚ್ಚಹಸಿರಿನ ಮಲೆನಾಡು ಪ್ರದೇಶವಾದ ಪುಷ್ಪಗಿರಿ ತಪ್ಪಿನ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ, ಚೋಳರ ಕಾಲದ ಐತಿಹ್ಯ ಹೊಂದಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 65ನೇ ವಾರ್ಷಿಕ ಮಹಾರಥೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಂದಿನಿಂದ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಸುಮಾರು 900ಕ್ಕೂ ಅಧಿಕ ವರ್ಷಗಳ ಹಿಂದಿನ ಇತಿಹಾಸ ಹೊಂದಿರುವ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ಮಹಾ ರಥೋತ್ಸವಕ್ಕೆ ಕೊಡಗು ಮಾತ್ರವಲ್ಲದೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಸಹಸ್ರಾರು ಮಂದಿ ಭಕ್ತರು ಆಗಮಿಸಿ, ತಮ್ಮ ಇಷ್ಟಾರ್ಥಗಳಿಗೆ ಪ್ರಾರ್ಥನೆ ಸಲ್ಲಿಸುವುದು, ಹರಕೆ ಒಪ್ಪಿಸುವುದು ವಾಡಿಕೆ. ಜಾತಿ, ಮತ, ಪಂಥ, ಧರ್ಮಾತೀತವಾಗಿಯೂ ಇಲ್ಲಿ ಪ್ರಾರ್ಥನೆ ಸಲ್ಲಿಸುವುದು, ಇಷ್ಟಾರ್ಥ ನೆರವೇರಿದ ಮೇಲೆ ಹರಕೆ ಒಪ್ಪಿಸುವುದು ವಿಶೇಷ. ಜ.13 (ಇಂದು) ಬೆಳ್ಳಿ ಬಂಗಾರ ದಿನ ಆಚರಣೆಯೊಂದಿಗೆ ಸಂಜೆ 6.30 ರಿಂದ ಪ್ರಸಕ್ತ ವರ್ಷದ ಜಾತ್ರೆ ಪ್ರಾರಂಭೋತ್ಸವ ಪೂಜೆ ನಡೆಯಲಿದೆ. ಜ.14 ರಂದು ‘ಮಕರ ಸಂಕ್ರಮಣ ಕರುವಿನ ಹಬ್ಬ’ ಹಾಗೂ 7 ಗಂಟೆಗೆ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ…

Read More

ಮಡಿಕೇರಿ ಜ.13 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ  ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ  ನಡೆಯಿತು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿದರು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ ಇತರರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.13 : ಅಕುಲ್ ಟೂರಿಸಮ್ ವತಿಯಿಂದ ಇದೇ‌ ಮೊದಲ ಬಾರಿಗೆ ಆಯೋಜಿಸಲಾದ ಕೂರ್ಗ್ ಹಿಸ್ಟಾರಿಕಲ್ ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಕುಶಾಲನಗರದ ಜಾತ್ರಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕ್ರೀಡೆಯಿಂದ ಸಾಮರಸ್ಯದ ಸಂದೇಶವನ್ನು ಸಾರಬಹುದಾಗಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಕ್ರೀಡಾ ಪಟುಗಳು ಪರಸ್ಪರ ಸಹೋದರರಂತೆ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಮಾಜಕ್ಕೆ ಉತ್ತಮವಾದ  ಸಂದೇಶವನ್ನು ತಿಳಿಸುತ್ತದೆ ಎಂದ ಅವರು, ಪಂದ್ಯಾವಳಿಯು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಕುಶಾಲನಗರ ಪುರಸಭೆ ಸದಸ್ಯ ವಿ.ಎಸ್.ಆನಂದ್‌ ಕುಮಾರ್ ಮಾತನಾಡಿ, ಕುಶಾಲನಗರದಲ್ಲಿ ಅಕುಲ್ ಟೂರಿಸಮ್ ಸಂಸ್ಥೆಯವರು ಅತ್ಯಂತ ಹೆಚ್ಚಿನ ಮೊತ್ತದ ಕ್ರಿಕೆಟ್ ಪಂದ್ಯಾವಳಿ ನಡೆಸಿತ್ತಿರುವುದು ಸಂತೋಷದ ವಿಷಯ. ಗ್ರಾಮೀಣ ಕ್ರೀಡಾಪಡುಗಳು, ತಮ್ಮ ಪ್ರತಿಭೆಯನ್ನು ಹೊರಹಾಕಲು ಈ ಪಂದ್ಯಾವಳಿ ಒಳ್ಳೆಯ ವೇದಿಕೆಯಾಗಲಿದೆ ಎಂದರು. ಈ ಸಂದರ್ಭ ನಂಜರಾಯಪಟ್ಟಣ ಗ್ರಾ.ಪಂ ಸದಸ್ಯ ರಕ್ಷಿತ್ ಮಾವಾಜಿ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಆಯೋಜಕರಾದ ಅಕುಲ್, ಶರಣ್ ಇದ್ದರು.

Read More

ಮಡಿಕೇರಿ ಜ.13 : ಸಾರ್ವಜನಿಕರಿಂದ ದೂರು ಬರದಂತೆ ಗಮನಹರಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಲೋಕಾಯುಕ್ತ ಡಿವೈಎಸ್‍ಪಿ ವಿ.ಕೃಷ್ಣಯ್ಯ ಅವರು ಸಲಹೆ ನೀಡಿದರು. ನಗರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಕಾನೂನು ಬದ್ಧವಾಗಿ ಸರ್ಕಾರದ ನಿಯಮಾನುಸಾರ ಕೆಲಸಗಳನ್ನು ಮಾಡಬೇಕು. ಸಾರ್ವಜನಿಕರ ಕೆಲಸ ಆಗದಿರುವುದಕ್ಕೆ ಹಿಂಬರಹ ನೀಡಬೇಕು. ಸಾರ್ವಜನಿಕರಿಂದ ದೂರುಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕು ಎಂದು ಹೇಳಿದರು. ಸಾರ್ವಜನಿಕರು ಮಾಹಿತಿ ಕೇಳಿದಾಗ ಮಾಹಿತಿ ನೀಡುವುದು ಮೊದಲ ಆದ್ಯತೆ ಆಗಬೇಕು. ಮಾಹಿತಿ ನೀಡದೆ ಶತಾಯಿಸುವುದು ಒಂದು ರೀತಿಯ ಭ್ರಷ್ಟಾಚಾರವಿದ್ದಂತೆ. ಆದ್ದರಿಂದ ಯಾವುದೇ ಪತ್ರಕ್ಕೆ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿವರ್ಷ ಆಸ್ತಿದಾಯಕ ಪಟ್ಟಿ ಸಲ್ಲಿಸಬೇಕು. ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿವರದ ನಾಮಫಲಕ ಅಳವಡಿಸಬೇಕು ಎಂದು ಲೋಕಾಯುಕ್ತ ಡಿವೈಎಸ್‍ಪಿ ಅವರು ನಿರ್ದೇಶನ ನೀಡಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಖಲಾತಿಗಳನ್ನು ಕ್ರಮಬದ್ಧವಾಗಿ ಇಟ್ಟುಕೊಳ್ಳಬೇಕು. ಮಧ್ಯವರ್ತಿಗಳಿಗೆ ಅವಕಾಶ…

Read More

ಬೆಂಗಳೂರು ಜ.9: ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು. ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಇದನ್ನ ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನ ಶೀಘ್ರವಾಗಿ ಸಿದ್ದಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನ ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಮಾತನಾಡಿ, ಅಧಿಕಾರಿಗಳು…

Read More

ವಿರಾಜಪೇಟೆ ಜ.9 :  ಡಾ. ಡಿ.ವೀರೇಂದ್ರ ಹೆಗ್ಗಡೆಯರು ಜ.13 ರವರೆಗೆ ಒಂದು ವಾರದ ಸ್ವಚ್ಛತಾ ಸಪ್ತಾಹ ಆಚರಿಸುವಂತೆ ಮಾರ್ಗದರ್ಶನ ನೀಡಿದ ಹಿನ್ನೆಲೆ ಶೌರ್ಯ ವಿಪತ್ತು ತಂಡದ ಸದಸ್ಯರಿಂದ  ಬಾಳುಗೋಡುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಶ್ರೀ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿ  ಘಟಕದ ಪದಾಧಿಕಾರಿಗಳು ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಮೇಲ್ವಿಚಾರಕ ನಾಗರಾಜ್, ವಿಪತ್ತು ತಂಡದ ಸಂಯೋಜಕಿ ರೇಖಾ ಗಣೇಶ್ ಮೋಹನ್, ರಂಜನ್, ಅರುಣ್, ಅಕ್ಷತ್, ಕವನ್, ಜ್ಯೋತಿ, ಎಸ್. ಸಬಿತ, ಜ್ಯೋತಿ, ಸುನಿಲ್ ಕುಟ್ಟಪ್ಪ ಭಾಗವಹಿಸಿದ್ದರು.

Read More

ಚೆಯ್ಯಂಡಾಣೆ  ಜ.9 : ಯಾರನ್ನು ಬೇಡವೆನ್ನದೆ ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದತೆಯಿಂದ ಕಾಣುವ ದೇಶವಿದ್ದರೆ ಅದು ನಮ್ಮ ಭಾರತ ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಎಸ್ ವೈ ಎಸ್ ಮಾಜಿ ರಾಜ್ಯಾಧ್ಯಕ್ಷ ಡಾ.ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ ಕಕ್ಕಿಂಜೆ ಹೇಳಿದರು. ಪರಂಪರೆಯ ಪ್ರತಿನಿಧಿಗಳಾಗೋಣ ಎಂಬ ಧ್ಯೇಯ ವಾಕ್ಯದಲ್ಲಿ ಜ.24ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘದ 30ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ನಾಪೋಕ್ಲು ಪಟ್ಟಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ನಮ್ಮದೇಶದ ಪರಂಪರೆ ಎಲ್ಲರನ್ನೂ ಒಗ್ಗೂಡಿಸುವ ಪರಂಪರೆಯಾಗಿದೆ. ಎಲ್ಲಾ ವರ್ಗದವರಿಗೂ ಕೆಂಪು ಹಾಸನ್ನು ಹಾಸಿದ ನಾಡು ಇದಾಗಿದೆ. ವಿಶ್ವದ ಹಲವಾರು ದೇಶಕ್ಕೆ ಮಾದರಿಯಾಗಬಲ್ಲ ನಮ್ಮ ದೇಶದಲ್ಲಿ ಎಲ್ಲರಿಗು ಮುಕ್ತವಾದ ಸ್ವಾತಂತ್ರ್ಯ ನೀಡಿ ಮಾದರಿಯಾದ ರಾಷ್ಟ್ರವಾಗಿದೆ. ಇದರ ಬಗ್ಗೆ ಯುವ ಪೀಳಿಗೆಗೆ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

Read More

ಸುಂಟಿಕೊಪ್ಪ, ಜ. 9 : ಸುಂಟಿಕೊಪ್ಪ ಜೆಸಿಐ ಸಂಸ್ಥೆಯ 2024 ನೇ ನೂತನ ಸಾಲಿನ ಅಧ್ಯಕ್ಷರಾಗಿ ನೇಮಕಗೊಂಡ ಸಂಪತ್ ಕುಮಾರ್ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಹಾರಂಗಿ ರಸ್ತೆಯಲ್ಲಿರುವ ಅತ್ತೂರು ಗ್ರಾಮದ ಆರ್- ಕ್ಯೂಬ್ ಫಾರ್ಮ್ ಹೌಸ್ ನ ಸಭಾಂಗಣದಲ್ಲಿ ನಡೆಯಿತು. ಸುಂಟಿಕೊಪ್ಪ ಜೆಸಿಐ ಸಂಸ್ಥೆಯ 2023ನೇ ಸಾಲಿನ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಜೆಸಿಐ ವಲಯ 14ರ ಅಧ್ಯಕ್ಷೆ ಆಶಾ ಜೈನ್ ಅವರು ಸಂಸ್ಥೆಯ ಅಧ್ಯಕ್ಷ ಸಂಪತ್ ಕುಮಾರ್ ಹಾಗೂ ಪದಾಧಿಕಾರಿಗಳಿಗೆ ಅಧಿಕಾರ ಪ್ರಮಾಣ ಬೋಧಿಸಿದರು. ನಂತರ ಮಾತನಾಡಿದ ಜೆಸಿಐ ವಲಯ ಅಧ್ಯಕ್ಷೆ ಆಶಾ ಜೈನ್ ಅವರು, ಯುವ ಸಮುದಾಯದಲ್ಲಿ ಶಿಸ್ತು, ಸಮಯಪಾಲನೆ, ಸಂಯಮ, ಉತ್ತಮ ನಾಯಕತ್ವ ಗುಣ ಹಾಗೂ ವ್ಯಕ್ತಿತ್ವ ಬೆಳೆಸಲು ಸಹಕಾರಿಯಾದ ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಯುವಶಕ್ತಿಯ, ನಾಗರಿಕರ ಜಾಗತಿಕ ಸಂಸ್ಥೆಯಾಗಿದೆ. ಯುವ ಸಮುದಾಯದಲ್ಲಿ ಧನಾತ್ಮಕ ಬದಲಾವಣೆಯೊಂದಿಗೆ ಕ್ರೀಯಾಶೀಲ ವ್ಯಕ್ತಿತ್ವ, ನಾಯಕತ್ವ, ಉತ್ತಮ ಉದ್ಯಮಶೀಲ ಕೌಶಲ್ಯಗಳನ್ನು ಬೆಳೆಸುವುದರೊಂದಿಗೆ ದೇಶದಲ್ಲಿ ಬ್ರಾತೃತ್ವ ಬೆಳೆಸಿ…

Read More