ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲುನಲ್ಲಿ ನಡೆಯಲಿರುವ ಹಿಂದು ಜನ ಜಾಗೃತಿ ಸಮಾವೇಶ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್ 1 ರಂದು ಬೆಳಗ್ಗೆ 6 ಗಂಟೆಯಿoದ ಮಧ್ಯರಾತ್ರಿ 12 ಗಂಟೆಯವರೆಗೆ ನಾಪೋಕ್ಲು ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್‌ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಮಾ.26 : ಜಿಲ್ಲಾ ಕೇಂದ್ರ ಮಡಿಕೇರಿಯ ಸಮೀಪದ ಇಬ್ನಿವಳವಾಡಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಪತ್ತೆಗಾಗಿ ಅರಣ್ಯ ಇಲಾಖೆ ಸಾಕಾನೆಗಳು ಮತ್ತು ಆಧುನಿಕ ಡ್ರೋನ್ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ಇಬ್ನಿವಳವಾಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಬುಧವಾರ ಬೆಳಗ್ಗೆ ನಿರಾತಂಕವಾಗಿ ಸಂಚರಿಸುತ್ತಿರುವ ಹುಲಿಯ ದೃಶ್ಯ ಸೆರೆಯಾಗಿತ್ತು. ಹುಲಿ ಸಂಚಾರದಿoದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇಬ್ನಿವಳವಾಡಿ ಗ್ರಾಮದ ಪಕ್ಕದಲ್ಲೆ ಇರುವ ಅರಣ್ಯ ಪ್ರದೇಶ, ಸಿಂಕೋನ, ಕಗ್ಗೋಡ್ಲು ಮತ್ತಿತರ ಗ್ರಾಮಗಳಲ್ಲಿ ಹುಲಿ ತೆರಳಿರುವ ಸಾಧ್ಯತೆಗಳಿರುವ ಕಾರಣ ಅರಣ್ಯ ಇಲಾಖೆ, ಹುಲಿಯ ಶೋಧ ಕಾರ್ಯಕ್ಕೆ ಸಾಕಾನೆಗಳನ್ನು ಬಳಸಿಕೊಂಡಿದೆ. ಸಾಕಾನೆಗಳಾದ ಕಂಜನ್, ಈಶ್ವರ್, ಪ್ರಶಾಂತ್ ಆನೆಗಳನ್ನು ಬಳಸಿಕೊಂಡು ಇಬ್ನಿವಳವಾಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಯ ಶೋಧ ಕಾರ್ಯವನ್ನು ಇಲಾಖಾ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಸಾಕಾನೆಗಳೊಂದಿಗೆ ಅತ್ಯಾಧುನಿಕ ಥರ್ಮಲ್ ಡ್ರೋನ್ ಬಳಸಿ ಇಬ್ನಿವಳವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆಯಾದರು, ಇಲ್ಲಿಯವರೆಗು ಸುಳಿವು ದೊರಕಿಲ್ಲ. ಅರಣ್ಯ ಇಲಾಖೆಯ ಡಿಸಿಎಫ್, ಎಸಿಎಫ್…
ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆಯಲಿರುವ ರಾಮನವಮಿ ಉತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮಾರ್ಚ್, 27 ರಂದು ಬೆಳಗ್ಗೆ 6 ಗಂಟೆಯಿoದ ಮಧ್ಯರಾತ್ರಿ 12 ಗಂಟೆಯವರೆಗೆ ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿ, ಅಬ್ಬೂರ ಕಟ್ಟೆ ಗ್ರಾಮ, ಐಗೂರು ಗ್ರಾಮ ಮತ್ತು ಮಾದಾಪುರ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್ ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಮಾ.25 NEWS DESK : ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳೊಂದಿಗೆ ಅಪರಾಧ ಪ್ರಕರಣಗಳ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅವಲೋಕನ ಸಭೆ ನಡೆಸಿದರು.
ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 27 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.25 NEWS DESK : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಸಂಚರಿಸುತ್ತಿದ್ದು, ಜನರು ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ನಮ್ಮ ಕರುಗಳು, ಹಸುಗಳು ಮತ್ತು ಎತ್ತುಗಳು ದಾಳಿಗೆ ಒಳಗಾದರೂ, ನಾವು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಲ್ಲಿ ಚೆಟ್ರಂಡ ನಾಣಯ್ಯ ಎಂಬುವವರ 4 ಜಾನುವಾರುಗಳು ಹುಲಿ ದಾಳಿಗೆ ಒಳಗಾಗಿ ಮೃತಪಟ್ಟಿವೆ. ಫೆ.18ರಂದು ಸೋಮಯ್ಯ ಅವರ ಹಸು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮಾ.15ರಂದು ಮೃತಪಟ್ಟಿದೆ. ಕಳೆದ ಒಂದು ವಾರದಲ್ಲಿ ಮತ್ತೊಂದು ಹಸು ಕೂಡ ಸಾವನ್ನಪ್ಪಿದೆ. ಇಷ್ಟೊಂದು ನಷ್ಟಗಳಾದರೂ ಅಧಿಕಾರಿಗಳಿಂದ ಯಾವುದೇ…
ಕುಶಾಲನಗರ ಮಾ.25 NEWS DESK : ಪ್ರವಾಹ, ಭೂಕಂಪ, ಚಂಡಮಾರುತ ಮೊದಲಾದ ನೈಸರ್ಗಿಕ ವಿಕೋಪಗಳು ಮತ್ತು ಮಾನವ ನಿರ್ಮಿತ ವಿಪತ್ತುಗಳು ಎದುರಾದ ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ತಕ್ಷಣದಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಕೊಡಗು ವಿಶ್ವವಿದ್ಯಾಲಯ ಸಹಯೋಗದಲ್ಲಿ ಕಾಲೇಜಿನ ಜ್ಞಾನ ಕಾವೇರಿ ಆವರಣದಲ್ಲಿ ನಡೆದ ಯುವ ಆಪತ್ ಮಿತ್ರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಪತ್ತೆಹಚ್ಚಿ ರಕ್ಷಿಸುವಂತಹ ಮತ್ತು ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತಹ ಧೈರ್ಯ ಮತ್ತು ವೃತ್ತಿಪರತೆಯಿಂದ ಜೀವ ರಕ್ಷಣೆ ಮಾಡುತ್ತದೆ. ಗಾಯಗೊಂಡವರಿಗೆ ತಕ್ಷಣದ ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ಆರೈಕೆಯನ್ನು ಒದಗಿಸುತ್ತದೆ. ರಾಸಾಯನಿಕ, ಜೈವಿಕ, ವಿಕಿರಣಶೀಲ ಮತ್ತು ಪರಮಾಣು ವಿಪತ್ತುಗಳನ್ನು ಎದುರಿಸಲು ವಿಶೇಷ ತರಬೇತಿ ನೀಡುತ್ತದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು ಸ್ಥಳೀಯ…
ಮಡಿಕೇರಿ NEWS DESK ಮಾ.25 : 1785 ಡಿ.12 ರಂದು ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪುಷ್ಪನಮನ ಸಲ್ಲಿಸಿತು. ಮರಣ ಹೊಂದಿದ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ ಹೋರಾಟಕ್ಕೆ ಜಯ ಕೋರಿದರು. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಪ್ರಾದೇಶಿಕ ಸ್ವಾಯತ್ತತೆ ನೀಡಬೇಕು, ಬುಡಕಟ್ಟು ಸ್ಥಾನಮಾನ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಂಸ್ಕೃತಿ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯಕ್ಕಾಗಿ ಸಂವಿಧಾನದಡಿ ವಿಶೇಷ ಖಾತರಿ ನೀಡಬೇಕು, ದೇವಟ್‌ಪರಂಬುವಿನಲ್ಲಿ ಸ್ಮಾರಕ ತಾಣ ಸ್ಥಾಪಿಸಬೇಕು, ವಿಶ್ವ ರಾಷ್ಟ್ರ ಸಂಸ್ಥೆಯ ಹತ್ಯಾಕಾಂಡ ಸ್ಮಾರಕ ಪಟ್ಟಿಯಲ್ಲಿ ದೇವಟ್ ಪರಂಬ್ ಕೊಡವ ನರಮೇಧವನ್ನು ಸೇರಿಸಬೇಕು, ಕೊಡವ ಇತಿಹಾಸ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಬೇಕು, ಕೊಡವ ಇತಿಹಾಸವನ್ನು ತಿರುಚಿ ವಿರೂಪಗೊಳಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವ ಸಮುದಾಯಕ್ಕೆ ಪ್ರತ್ಯೇಕ “ಕೋಡ್” ಮತ್ತು “ಕಾಲಂ” (ಅಂಕಣ) ನೀಡಬೇಕು, ಕೊಡವ ಸಮುದಾಯವನ್ನು ಒಂದು ವಿಶಿಷ್ಟವಾದ ಆದಿಮಸಂಜಾತ ಗುಂಪಾಗಿ ಗುರುತಿಸಬೇಕು, ನಿಖರವಾದ…
ಮಡಿಕೇರಿ ಮಾ.25 NEWS DESK : ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯಲು ಹೆಣ್ಣು ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡುವ ಕಾರ್ಯಕ್ಕೆ ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ದೊರೆಯಿತು. ಈ ಸಂದರ್ಭ ಆಡಳಿತ ವೈದ್ಯಾಧಿಕಾರಿ ಡಾ.ಪಾರ್ವತಿ ಮಾತನಾಡಿ, ಅಪಾಯಕಾರಿ ಕ್ಯಾನ್ಸರ್ ನಂತಹ ಪಿಡುಗು ತೊಲಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 14 ವರ್ಷದ ಮೇಲ್ಪಟ್ಟು 15 ವರ್ಷದ ಒಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೆಚ್‍ಪಿವಿ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಮಕ್ಕಳ ಭವಿಷ್ಯಕ್ಕಾಗಿ ಎಲ್ಲಾ ಪೋಷಕರು ಈ ಅಭಿಯಾನದಲ್ಲಿ ಇಲಾಖೆಯೊಂದಿಗೆ ಸಹಕಾರ ನೀಡಿ, ಲಸಿಕೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಲಸಿಕೆಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಅತ್ಯುತ್ತಮ ಮತ್ತು ಸುರಕ್ಷಿತ ಗುಣಮಟ್ಟದ ಲಸಿಕೆ ಇದಾಗಿದ್ದು ಯಾವ ರೀತಿಯ ಅಡ್ಡ ಪರಿಣಾಮ ಇರುವುದಿಲ್ಲ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಮಿಲನ ಮುತ್ತಮ್ಮ, ಬಿಂದು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ…
ಸುಂಟಿಕೊಪ್ಪ ಮಾ.25 NEWS DESK : ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ, ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸುವ ಮೂಲಕ ಸಂಸ್ಥೆಯು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಿದೆ ಎಂದು ಸಂಜೀವಿನಿ ಒಕ್ಕೂಟದ ಕೃಷಿಸಖಿಯಾದ ಬ್ರಿಜಿಟ್ ಡಿಸೋಜ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಮಹಿಳೆಯರಿಗೆ ಸ್ವಾಲಂಬಿ ಬದುಕಿಗಾಗಿ 3 ತಿಂಗಳ ಹೊಲಿಗೆ ತರಬೇತಿಯನ್ನು ನೀಡಲಾಗಿದೆ. ತರಬೇತಿದಾರರಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಬ್ರಿಜಿಟ್ ಡಿಸೋಜ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಮುಂದಿನ ದಿನಗಳಲ್ಲಿಯೂ ಈ ಭಾಗದ ಮಹಿಳೆಯರು ಇನ್ನಿತರ ತರಬೇತಿಗಳಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳುವಂತೆ…






