ಮಡಿಕೇರಿ ಜ.9 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಗೌರಮ್ಮ ದತ್ತಿ ಸಣ್ಣ ಕಥೆ ಬರೆಯುವ ಸ್ಪರ್ಧೆಗೆ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಥೆ ಬರೆಯುವ ಸ್ಪರ್ಧೆಯನ್ನು ಜ.22ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಬ್ಲಾಸಂ ಶಾಲೆಯಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹಮ್ಮದ್ ತಿಳಿಸಿದ್ದಾರೆ. ಪ್ರತೀ ಪ್ರೌಢಶಾಲೆಯಿಂದ 5 ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಶಾಲೆಗಳ ಮೂಲಕ ಈ ಕೆಳಗಿನ ವಿಳಾಸಕ್ಕೆ 15.01.2024ರ ಒಳಗೆ ತಲುಪಿಸಬೇಕು. ಎಂ.ಪಿ.ಕೇಶವಕಾಮತ್, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಎಸ್‍ಜೆಎಸ್‍ಆರ್‍ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನದ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ ಎಸ್.ಐ.ಮುನೀರ್ ಅಹಮ್ಮದ್, ಗೌರವ ಕಾರ್ಯದರ್ಶಿ ಮೊ. : 9886181613 ಮತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್ ಮೊ. : 9663256829 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಚೆಯ್ಯಂಡಾಣೆ ಜ.9 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಮಂಡ್ಯದ ಡಾ-ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ವಿರಾಜಪೇಟೆಯ ಎ.ಯೆದ್ವಿಕ್ 3 ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿರಾಜಪೇಟೆ ಸಮೀಪದ ಅರಮೇರಿ ಎಸ್.ಎಂ.ಎಸ್.ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಯಾಗಿರುವ ಯ ಯೆದ್ವಿಕ್, ವಿರಾಜಪೇಟೆಯ ಅಜಿತ್ ಹಾಗೂ ಶೋಭಿಕ ದಂಪತ್ರಿಯ ಪುತ್ರ. ಕಳೆದ 3ವರ್ಷದಿಂದ ವಿರಾಜಪೇಟೆಯ ನಾಟ್ಯಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ಗುರುಗಳಾದ ವಿದುಷಿ ಹೇಮಾವತಿ ಕಾಂತ್ ರಾಜ್ ಹಾಗೂ ಕಾವ್ಯಶ್ರೀ ಯವರಲ್ಲಿ ತರಬೇತಿ ಪಡೆದುಕೊಂಡಿದ್ದಾನೆ. ವರದಿ : ಅಶ್ರಫ್
ಮಡಿಕೇರಿ ಜ.8 : ರಾಜ್ಯದ ಇತರೆ ಜಿಲ್ಲೆಗಳಿಗಿಂತ ಭಿನ್ನವಾಗಿರುವ, ಘಟ್ಟ ಪ್ರದೇಶವಾಗಿರುವ ಕೊಡಗಿನಲ್ಲಿ ವಾಹನ ದಟ್ಟಣೆೆ, ನಿಲುಗಡೆಯ ಸಮಸ್ಯೆಗಳನ್ನು ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಬಗೆ ಹರಿಸಲು ಪ್ರಧಾನ ಆದ್ಯತೆ ನೀಡಲಾಗುತ್ತದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯ ಜನಸಂಖ್ಯೆ ಮತ್ತು ವಾಹನಗಳ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಹೊಂದಿಕೊಳ್ಳುತ್ತದೆಯಾದರೂ, ಪ್ರವಾಸಿ ಋತುಗಳು ಮತ್ತು ಉತ್ಸವಗಳ ಸಂದರ್ಭ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ವಾಹನ ದಟ್ಟಣೆ ಸಮಸ್ಯೆ ಹೆಚ್ಚಾಗಿ ಕಾಡುತ್ತದೆಂದು ಅಭಿಪ್ರಾಯಿಸಿದರು. ವಾಹನ ದಟ್ಟಣೆÉ, ನಿಲುಗಡೆ ಸಮಸ್ಯೆಗಳನ್ನು ಜಿಲ್ಲೆಯ ಪಟ್ಟಣ ಪ್ರದೇಶಗಳಲ್ಲಿ ಬಗೆಹರಿಸಲು ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲು ಪೊಲೀಸ್ ಇಲಾಖೆ ಸದಾ ಮುಕ್ತವಾಗಿದೆಯೆಂದು ತಿಳಿಸಿ, ಪ್ರವಾಸಿ ತಾಣ ರಾಜಾಸೀಟ್‌ನಲ್ಲಿ ವಾಹನ ನಿಲುಗಡೆಗೆ ಅಗತ್ಯ…
ಮಡಿಕೇರಿ ಜ.8 : ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ರೂ. 10.00 ಕೋಟಿ ಅನುದಾನ ಮಂಜೂರಾಗಿದ್ದು, ಈ ಪೈಕಿ ರೂ.6.00 ಕೋಟಿ ಅನುದಾನ ಕೊಡವ ಸಾಂಸ್ಕೃತಿಕ ಭವನ / ಮ್ಯೂಸಿಯಂ ಇತ್ಯಾದಿ ಅಭಿವೃದ್ಧಿಗಾಗಿ ಹಾಗೂ ರೂ.4.00 ಕೋಟಿಗಳಲ್ಲಿ 31 ಕೊಡವ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಮಂಜೂರಾತಿ ನೀಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಪ್ರಸ್ತುತ, ಈ ಕೂಡ ಲಗತ್ತಿಸಿರುವ 31 ಸ್ಥಳಗಳಲ್ಲಿ ಕೊಡವ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು ರೂ.4.00 ಕೋಟಿ (ನಾಲ್ಕು ನೂರು ಲಕ್ಷ ರೂಪಾಯಿಗಳು ಮಾತ್ರ)ಗಳ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದ್ದು, ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಡಿಕೇರಿ ಜ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2023-24ನೇ ಸಾಲಿನ ಹಿರಿಯ ಸಾಹಿತಿ ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜ.29ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಕಥೆ ಬರೆಯುವ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ. ಪ್ರತಿ ಕಾಲೇಜ್ ನಿಂದ 5 ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಾಲೇಜ್ ನ ಮೂಲಕ ಈ ಕೆಳಕಂಡ ವಿಳಾಸಕ್ಕೆ ದಿನಾಂಕ 15.01.2024ರ ಒಳಗೆ ಕಳುಹಿಸಿಕೊಡಬೇಕು. ಎಂ.ಪಿ.ಕೇಶವಕಾಮತ್, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್‍ಜೆಎಸ್‍ಆರ್‍ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಕಾರ್ಯಪ್ಪ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ ಎಸ್.ಐ.ಮುನೀರ್ ಅಹಮದ್, ಗೌರವ ಕಾರ್ಯದರ್ಶಿ ಮೊ. : 9886181613…
ಮಡಿಕೇರಿ ಜ.8 : ದಕ್ಷಿಣ ಕೊಡಗಿನ ಪೊನ್ನಂಪೇಟೆಯ ಆಸ್ಟ್ರೋ ಟರ್ಫ್ ಮೈದಾನದಲ್ಲಿ ಆಯೋಜಿತ 67ನೇ ರಾಷ್ಟ್ರೀಯ ಮಟ್ಟದ 17 ವರ್ಷದೊಳಗಿನ ಬಾಲಕಿಯರ ಹಾಕಿ ಪಂದ್ಯಾವಳಿ ಪ್ರಶಸ್ತಿಯನ್ನು ಜಾರ್ಖಂಡ್ ತಂಡ ತನ್ನ ಮುಡಿಗೇರಿಸಿಕೊಂಡಿದೆ. ಸೋಮವಾರ ಸಂಜೆ ನಡೆದ ಅಂತಿಮ ಪಮದ್ಯದಲ್ಲಿ ಜಾರ್ಖಂಡ್ ತಂಡ 7-1 ಗೋಲಗಳ ಭಾರೀ ಅಂತರದಿಂದ ಚಂಡೀಗಡ ತಂಡವನ್ನು ಪರಾಭವಗೊಳಿಸಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿತು. ಚಂಡೀಗಡ ತಂಡ ರನ್ನರ್ಸ್ ಅಪ್ ಪ್ರಶಸ್ತಿಗೆ ಭಾಜನವಾಯಿತು. ಅಂತಿಮ ಪಂದ್ಯಕ್ಕೂ ಮುನ್ನ 3ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ 1-0 ಅಂತರದಿಂದ ಮಣಿಪುರ ತಂಡವನ್ನು ಮಣಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರು. ಉದ್ಘಾಟನೆ-ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ. ವಿರಾಜಪೇಟೆ ತಾಲೂಕಿನ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜ್ ಅವರು ಹಾಕಿ ಸ್ಟಿಕ್‍ನಿಮದ ಚೆಂಡನ್ನು ತಳ್ಳುವ ಮೂಲಕ ಅಂತಿಮ ಪಂದ್ಯಕ್ಕೆ ಚಾಲನೆ ನೀಡಿ, ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಮಡಿಕೇರಿ ಜ.8 : ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.…
ಮಡಿಕೇರಿ ಜ.8 : ಹೆಸರುವಾಸಿ ಪ್ರವಾಸಿತಾಣ ಮಾಂದಲಪಟ್ಟಿಗೆ ಪ್ರವಾಸಿಗರನ್ನು ಕರೆದೊಯ್ಯುವ ಜೀಪುಗಳಿಗೆ ಒಡ್ಡಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಮಾಂದಲ್ ಪಟ್ಟಿ ಕ್ಯಾಂಪರ್ ಜೀಪ್ ಮಾಲೀಕರು ಹಾಗೂ ಚಾಲಕರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಲಹೆಗಾರ ಯಾಲದಾಳು ಡಾ.ಮನೋಜ್ ಬೋಪಯ್ಯ ಹಾಗೂ ಜೀಪ್ ಮಾಲೀಕರು, ಚಾಲಕರು ಪ್ರಾದೇಶಿಕ ಸಾರಿಗೆ ಇಲಾಖೆ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು. ಕಳೆದ ಅನೇಕ ವರ್ಷಗಳಿಂದ ಪ್ರವಾಸಿಗರನ್ನು ಜೀಪ್ ನಲ್ಲಿ ಕರೆದೊಯ್ಯುವ ಮೂಲಕ ಸ್ಥಳೀಯ ಯುವಕರು ಉದ್ಯೋಗವನ್ನು ಕಂಡುಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಾಡಿಗೆ ಮಾಡುವ ಸಂದರ್ಭ ಯಾರೂ ಕಾನೂನು ಉಲ್ಲಂಘಿಸಿಲ್ಲ. ಆದರೆ ಅಧಿಕಾರಿಗಳು ಬದಲಾದಂತೆ ಯಾರದ್ದೋ ಒತ್ತಡಕ್ಕೆ ಮಣಿದು ಒಂದೊಂದು ನಿಯಮ ಜಾರಿ ಮಾಡಲಾಗುತ್ತಿದ್ದು, ಇದರಿಂದ ಚಾಲಕರ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ. ಸಾಲ ಮಾಡಿ ಜೀಪ್ ಖರೀದಿಸಲಾಗಿದೆ, ಇದೀಗ ದಿಢೀರ್ ಆಗಿ ನಿರ್ಬಂಧ ಹೇರಿರುವುದರಿಂದ ಸಾಲ ತೀರಿಸಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇತ್ತೀಚಿನ ಹತ್ತು ವರ್ಷಗಳಲ್ಲಿ ಕೊಡಗಿನಲ್ಲಿ…
ಬೆಂಗಳೂರು ಜ.8 : ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು. ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿ ಹಾಜರಿದ್ದರು. ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಹಾಗೂ ಕ್ರೈಸ್ತ ಧರ್ಮ ಗುರುಗಳು ನಿಯೋಗದ ಜತೆಗಿದ್ದರು. ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ…
ಮಡಿಕೇರಿ ಜ.8 : ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ ಸಮಾರಂಭ ಸಂಭ್ರಮದಿಂದ ಜರುಗಿತು. ‘ಪಾಲೂರ್ ಕೊಡವಾಮೆ ಕೂಟ’ ವತಿಯಿಂದ ನಡೆದ 18ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಮಂದನೆರವಂಡ, ನೆರವಂಡ, ಚೆರುವಾಳಂಡ, ಮೇಪಾಡಂಡ, ಪೊದುವಾಡ, ಪೈಕೇರ, ಬೊಳ್ಳಿಯಂಡ, ಬಲ್ಲಂಡ ಕುಟುಂಬಗಳ ಸದಸ್ಯರು ಪಾಲ್ಗೊಂಡಿದ್ದರು. ಮೇಪಾಡಂಡ ವೇಣು ಉತ್ತಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ “ಕೊಡವರ ಆಚಾರ, ವಿಚಾರ ಹಾಗೂ ಕಲೆ ಬಹಳ ವಿಶಿಷ್ಟವಾದದ್ದು. ಯುವಜನತೆ ನಮ್ಮ ಸಂಸ್ಕೃತಿಯನ್ನ ಕಾಪಾಡಲು ಒಗ್ಗಟ್ಟಿನಿಂದ ಆಸಕ್ತಿ ತೋರಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾದ ನೆರವಂಡ ಎಂ.ಹರೀಶ್ ಅವರನ್ನ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡವಾಮೆ ಕೂಟದ ವತಿಯಿಂದ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಗ್ರಾಮಸ್ಥರಿಗೆ ಹಲವು ಮನೋರಂಜನಾ…






