ಮಡಿಕೇರಿಯ ಕೊಹಿನೂರ್ ರಸ್ತೆ ಆಧಾರ್ ಸೇವಾ ಕೇಂದ್ರದಲ್ಲಿ ವಾರದ 7 ದಿನವೂ ಸೇವೆ ಲಭ್ಯ (ಸಂಪರ್ಕಿಸಿ : 90354 00147)
ಲೇಖಕ: admin
ಮಡಿಕೇರಿ ಡಿ.2 : ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಅವರ ಮೇಲೆ ಚಿಕ್ಕಮಗಳೂರಿನ ಪೊಲೀಸ್ ಸಿಬ್ಬಂದಿಗಳು ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಘಟನೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘ ಪ್ರತಿಭಟನೆ ನಡೆಸಿತು. ರಾಜ್ಯಾದ್ಯಂತ ಹಿರಿಯ ಹಾಗೂ ಕಿರಿಯ ವಕೀಲರು ಹಲ್ಲೆಯನ್ನು ಖಂಡಿಸಿ ನ್ಯಾಯಾಲಯದ ಕಲಾಪಗಳಿಂದ ಸ್ವಯಂ ಪ್ರೇರಿತವಾಗಿ ಹೊರ ಉಳಿದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಮಡಿಕೇರಿಯಲ್ಲೂ ಬೆಂಬಲ ವ್ಯಕ್ತವಾಯಿತು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಯುವ ವಕೀಲರ ಮೇಲೆ ನಡೆದ ಹಲ್ಲೆ ಖಂಡನೀಯ, ವಕೀಲರು ಸಮಾಜದ ಅಭಿರಕ್ಷಕರು, ಇವರನ್ನೇ ಪೊಲೀಸ್ ಇಲಾಖೆಯವರು ಹೀಗೆ ನಡೆಸಿಕೊಂಡರೆ, ಇನ್ನು ಸಾಮಾನ್ಯ ಜನರ ಗತಿ ಏನು ಎಂದು ಪ್ರಶ್ನಿಸಿದರು. ಪ್ರಕರಣ ದಾಖಲಾದರು ಕೂಡ ಆರೋಪಿಗಳನ್ನು ಬಂಧಿಸದೆ ಇರುವುದು ಸರಿಯಲ್ಲ. ಘಟನೆಯ ಗಂಭೀರತೆ ಅರಿತ ರಾಜ್ಯ ಸರ್ಕಾರ ಆರೋಪಿಗಳನ್ನು ಸೇವೆಯಿಂದ ಅಮಾನತು ಮಾಡಿದೆ. ಆದರೆ ಇನ್ನೂ ಕೂಡ ಅರೋಪಿಗಳ ಬಂಧನವಾಗಿಲ್ಲ, ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವುದು ರಾಜ್ಯದ…
ಮಡಿಕೇರಿ ಡಿ.1 : ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕೊಡಗಿನ ಅಭಿವೃದ್ಧಿ ಮತ್ತು ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯನ್ನು ಅನೇಕ ಸಮಸ್ಯೆಗಳು ಕಾಡುತ್ತಿದ್ದರು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ನಡೆಯಬೇಕೆನ್ನುವ ಸರ್ಕಾರದ ಆದೇಶಕ್ಕೂ ಬೆಲೆ ಇಲ್ಲದಾಗಿದೆ. ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೂಡ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ. ಜಿಲ್ಲೆಯ ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ, ಆದರೆ ಕೃಷಿಕ ವರ್ಗಕ್ಕೆ ಬರ ಪರಿಹಾರ ತಲುಪಿಸುವ ಕಾಳಜಿ ತೋರುತ್ತಿಲ್ಲ. ಬೇಸಿಗೆಯಲ್ಲಿ ನೀರಿನ ಅಭಾವ ಎದುರಾದರೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಚಿಂತನೆ ನಡೆಸಿಲ್ಲ. ದಿನದಿಂದ ದಿನಕ್ಕೆ ವನ್ಯಜೀವಿಗಳ ದಾಳಿ ಮಿತಿ ಮೀರುತ್ತಿದೆ. ಕಾಡಾನೆಗಳ ದಾಳಿಯಿಂದ ಫಸಲು ನಷ್ಟವಾಗುತ್ತಿದೆ. ದಕ್ಷಿಣ ಕೊಡಗಿನಲ್ಲಿ ನಿತ್ಯ ಹುಲಿ ದಾಳಿಗೆ ಹಸುಗಳು ಬಲಿಯಾಗುತ್ತಿವೆ. ಕಂದಾಯ…
ಮಡಿಕೇರಿ ಡಿ.1 : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದು,್ದ ಅರ್ಜಿ ಸಲ್ಲಿಸಲು 2024 ರ ಜನವರಿ, 10 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.inನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:1902 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.…
ಮಡಿಕೇರಿ ಡಿ.1 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ವಿಕಲಚೇತನರಿಗಾಗಿ ವಿಕಲಚೇತನರೊಂದಿಗೆ ವಿಕಲಚೇತನರಿಂದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಂರಕ್ಷಿಸಲು ಮತ್ತು ಸಾಧಿಸಲು ಕಾರ್ಯ ಪ್ರವೃತ್ತರಾಗುವಿಕೆಯಲ್ಲಿ ಒಗ್ಗಟ್ಟು’ ಎಂಬ ಘೋಷವಾಕ್ಯದೊಂದಿಗೆ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ,…
ಮಡಿಕೇರಿ ಡಿ.1 : ಪಾಠ-ಪ್ರವಚನಗಳೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಪ್ರಮುಖರು ಕರೆ ನೀಡಿದರು. ಶ್ರೀ ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಮದೆನಾಡಿನ ಬಿಜಿಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಉದ್ಘಾಟಿಸಿ ಮಾಡಿದ ಶಕ್ತಿ ದಿನಪತ್ರಿಕೆ ಹಿರಿಯ ಉಪ ಸಂಪಾದಕ ಕುಡೆಕಲ್ ಸಂತೋಷ್, ಮಕ್ಕಳಲ್ಲಿ ಸಾಧಿಸುವ ಛಲ ಇರಬೇಕು, ಜೀವನದಲ್ಲಿ ಮುಂದೆ ಬರಬೇಕಾದರೆ ವಿದ್ಯೆಯೊಂದಿಗೆ ಇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಪ್ರತಿಯೋರ್ವರಲ್ಲೂ ಪ್ರತಿಭೆ ಇರುತ್ತದೆ, ಅದನ್ನು ಹೊರ ಹಾಕುವದರ ಮೂಲಕ ಸಾಧನೆ ಮಾಡಬೇಕು. ಮಕ್ಕಳೆಂದ ಮೇಲೆ ತುಂಟಾಟ ಇದ್ದೇ ಇರುತ್ತದೆ, ಅದನ್ನೆಲ್ಲ ಮೆಟ್ಟಿ ನಿಂತು ಮುಂದೆ ಬರಬೇಕು ಎಂದು ಹೇಳಿದರು. ಗುರಿಯ ಹಿಂದೆ ಗುರುಗಳಿದ್ದಾರೆ ಎಂಬ ಮಾತಿನಂತೆ ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸಬೇಕು, ಪ್ರಸ್ತುತ ಮೊಬೈಲ್ ಅನಿವಾರ್ಯವಾಗಿದ್ದು, ಅದರಲ್ಲಿನ ಉತ್ತಮ ಮಾಹಿತಿಗಳನ್ನು ಪಡೆದುಕೊಂಡು ಕ್ರಿಯಾತ್ಮಕ ಚಟುವಟಿಕೆಗಳತ್ತ ಆಸಕ್ತಿ ತೋರುವದರೊಂದಿಗೆ ವಿದ್ಯೆ ನೀಡಿದ…
ಮಡಿಕೇರಿ ಡಿ.1 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವರ್ಷಂಪ್ರತೀ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸುತ್ತದೆ. ಅಂತೆಯೇ ಈ ಸಾಲಿನಲ್ಲಿ ಡಿಸೆಂಬರ್, 07 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ರಾಷ್ಟ್ರದ ಅರ್ಥವ್ಯವಸ್ಥೆಯ ಬೆಳವಣಿಗೆಗಳಲ್ಲಿ ಸಹಕಾರಿ ವಲಯದ ಪಾತ್ರ’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಅಲ್ಲದೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಠಿ, ಸಾಮಾಜಿಕ ನ್ಯಾಯ ವಿತರಣೆಗಳು ಸಹಕಾರಿ ವಲಯದಿಂದ ಮಾತ್ರವೇ ಜಾರಿಗೊಳಿಸಲು ಸಾಧ್ಯ’ ವಿಷಯದ ಕುರಿತು ಚರ್ಚಾ ಸ್ಪರ್ಧೆಯು ಡಿ.7 ರಂದು ಬೆಳಗ್ಗೆ 11 ಗಂಟೆಗೆ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪ್ರಬಂದ ಸ್ಪರ್ಧೆಗೆ ಒಂದು ಶಾಲೆಯಿಂದ ಒಬ್ಬ ವಿದ್ಯಾರ್ಥಿ ಹಾಗೂ ಚರ್ಚಾ ಸ್ಪರ್ಧೆಗೆ ಒಂದು ಶಾಲೆಯಿಂದ ವಿಷಯದ ಪರವಾಗಿ ಒಬ್ಬರು ಮತ್ತು ವಿರುದ್ಧವಾಗಿ ಒಬ್ಬರನ್ನು ಆಯ್ಕೆ ಮಾಡಿ ಕಳುಹಿಸತಕ್ಕದ್ದು. ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯಾಣ ದರ…
ಮಡಿಕೇರಿ ಡಿ.1 : ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೂಡಿಗೆ ಸೈನಿಕ ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್‍ಸಿಂಗ್ ಅವರು ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲೆಯ ಮಾಜಿ ಯೋಧರು ಅವರ ಕುಟುಂಬದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯ ಕೋರಿದ್ದಾರೆ.
ಮಡಿಕೇರಿ ಡಿ.1 : ಪ್ರತಿಯೊಬ್ಬ ನಾಗರಿಕರಿಗೂ ಎಚ್‍ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ನಗರಸಭೆ ಅಧ್ಯಕ್ಷ ಎನ್.ಪಿ.ಅನಿತಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು, ಓಡಿಪಿ-ಸ್ನೇಹಾಶ್ರಯ, ಆಶೋದಯ ಸಂಸ್ಥೆ ಹಾಗೂ ವಿಹಾನ್ ಆರೈಕೆ ಮತ್ತು ಬೆಂಬಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮುದಾಯ ಮುನ್ನಡೆಸಲಿ ಎಂಬ ಘೋಷವಾಕ್ಯದೊಂದಿಗೆ ನಡೆದ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುವಂತಹ ವೈರಾಣು ಎಂದರೆ…
ಮಡಿಕೇರಿ ಡಿ.1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದಿವಾಸಿ ಜನರ ಸಂಖ್ಯೆ ಹೆಚ್ಚಿದ್ದು, ಆದಿವಾಸಿ ಜನರ ಕುಂದುಕೊರತೆ ಪರಿಹರಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ಸಭೆ ಆಹ್ವಾನಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದ ಸಭಾಂಗಣದಲ್ಲಿ ನಡೆದ ‘ಗಿರಿಜನ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಸಾಕಷ್ಟು ಕುಟುಂಬಗಳಿಗೆ ಅರಣ್ಯ ಹಕ್ಕು ಪತ್ರ ಹಾಗೂ ಸಮುದಾಯ ಹಕ್ಕುಪತ್ರ ಸಹ ದೊರೆಯಬೇಕಿದೆ. ಆ ನಿಟ್ಟಿನಲ್ಲಿ ಹಲವು ಸಮಸ್ಯೆಗಳನ್ನು ಚರ್ಚಿಸಿ ಇತ್ಯರ್ಥಪಡಿಸಲು ಸಭೆ ಆಹ್ವಾನಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಈಗಾಗಲೇ ಗಿರಿಜನರ ಕುಂದುಕೊರತೆ ಆಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…






