ಲೇಖಕ: admin

ಮಡಿಕೇರಿ ಡಿ.2 : ಮಂಗಳೂರಿನ ಗುರುಗೋಜು ರಾಯು ಕರಾಟೆ ಅಕಾಡೆಮಿ ಇಂಡಿಯಾ ವತಿಯಿಂದ ಮಂಗಳೂರಿನ ಕುದ್ರೋಳಿ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 10 ವರ್ಷದೊಳಗಿನ ಕರಾಟೆ ವಿಭಾಗದಲ್ಲಿ ದಿಗಂತ್ (ದ್ವಿತೀಯ) ಹಾಗೂ ಕುಮಿತೆ ವಿಭಾಗದಲ್ಲಿ (ತೃತೀಯ), 9 ವರ್ಷದೊಳಗಿನ ಕರಾಟೆ ವಿಭಾಗದಲ್ಲಿ ಪೊನ್ನಮ್ಮ (ತೃತೀಯ), ಕಟಾವಿಭಾಗದಲ್ಲಿ ಜಿ.ವಿ.ಲಿಖಿತ್ (ದ್ವಿತೀಯ), 11 ವರ್ಷದೊಳಗಿನವರಲ್ಲಿ ಕರಾಟೆ ವಿಭಾಗದಲ್ಲಿ ಜನಿತ್ (ದ್ವಿತೀಯ), 12 ವರ್ಷದವರಲ್ಲಿ ಕಟಾವಿಭಾಗದಲ್ಲಿ ಕಾವೇರಿಮನೋಜ್ (ಪ್ರಥಮ), ಶೋಭಿತ್ (ದ್ವಿತೀಯ), ಕಟಾ ವಿಭಾಗದಲ್ಲಿ 13 ವರ್ಷದವರಲ್ಲಿ ಮೋಹಿತ್(ಪ್ರಥಮ) ಹಾಗೂ ಕುಮಿತೆ ವಿಭಾಗದಲ್ಲಿ (ತೃತೀಯ), ಶಶಿರಾ (ದ್ವಿತೀಯ) ಹಾಗೂ ಕುಮಿತೆ ವಿಭಾಗದಲ್ಲಿ 14 ವರ್ಷದ ವರುಣ್ ಪ್ರಥಮ ಸ್ಥಾನ ಪಡೆದಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಯನ್ನು ಸಾಧಿಸಿದ್ದಾರೆ ಹಾಗೂ ತರಬೇತಿದಾರರಾದ ಮುಖೇಶ್ ಅವರು ಮಕ್ಕಳ ಪ್ರತಿಭೆಯಲ್ಲಿ ವಿಶ್ವಾಸವನ್ನು ಇಟ್ಟು ಉತ್ತಮ ರೀತಿಯ ತರಬೇತಿ…

Read More

ಮಡಿಕೇರಿ ಡಿ.2 : 2023-24 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಗೆ ಮಡಿಕೇರಿಯ ಸಂತ ಮೈಕಲರ ಪಿಯು ಕಾಲೇಜ್ ನ ಜೀವನ್ ಎಂ, ಕೃಷ್ಣಪಾಂಡಿ ಸಿ, ಮೋಹಿತ್ ಎಚ್.ಎಸ್, ಕ್ಯಾಲ್ವಿನ್ ಪಿ ಹಾಗೂ ಸಂತ ಜೋಸೆಫರ ಪಿಯು ಕಾಲೇಜ್ ನ ವೈಷ್ಣವಿ ಬಿ.ವಿ ಆಯ್ಕೆಯಾಗಿದ್ದಾರೆ. ತುಮಕೂರಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಡಿ.4 ರಂದು ಪಂದ್ಯಾವಳಿ ನಡೆಯಲಿದ್ದು, ಕರ್ನಾಟಕ ರಾಜ್ಯ ಟೆಕ್ವಾಂಡೋ ತರಬೇತುದಾರ ಹಾಗೂ ಕೊಡಗು ಜಿಲ್ಲಾ ವ್ಯವಸ್ಥಾಪಕ, ಮರ್ಕರ ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ತೆರಳಲಿದ್ದಾರೆ. ಎರಡೂ ಕಾಲೇಜ್ ನ ಪ್ರಾಂಶುಪಾಲರ ಪ್ರೋತ್ಸಾಹ ಹಾಗೂ ಸಂತ ಮೈಕಲರ ಕಾಲೇಜ್ ನ ದೈಹಿಕ ಶಿಕ್ಷಕಿ ಜಾನಕಿ ಐ. ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ತರಬೇತುದಾರ ಕುಶಾಲ್ ಕುಮಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.2 : ಕಾಂತರಾಜ್ ವರದಿ ಅಂಗೀಕರಿಸಬೇಕು, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿರುವ ಮೀಸಲಾತಿ ಪ್ರಮಾಣವನ್ನು ಶೇಕಡ 8ಕ್ಕೆ ಏರಿಸಬೇಕು ಮತ್ತು ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ ಪ್ರಮುಖರು, ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಈ ಕುರಿತು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಕೋರಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ಲ ಅಡ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೋಶಾಧಿಕಾರಿ ಮನ್ಸೂರ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಕೊಂಡಂಗೇರಿ, ಇಬ್ರಾಹಿಂ, ಷರೀಫ್ ವಿರಾಜಪೇಟೆ ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.2 : ನಿಗಮ ಮಂಡಳಿಗಳಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದಕ್ಕಾಗಿ ಮತ್ತು ಪ್ರಚಾರಕ್ಕಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಅವರು ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಕೃಷಿ ಮೋರ್ಚಾದ ಕಿರುಗೂರು ಘಟಕದ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಅವಧಿಯಲ್ಲಿ ಕೊಡಗು ಮತ್ತು ಮೈಸೂರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ದಶಪಥ ಹೆದ್ದಾರಿ ಯೋಜನೆಯನ್ನು ಅನುಷ್ಠಾನಗೊಳಿಸಿರುವುದು ಕೂಡ ದೊಡ್ಡ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇತ್ತೀಚೆಗೆ ಸಂಕೇತ್ ಪೂವಯ್ಯ ಅವರು ಈ ದಶಪಥವನ್ನು ಸಂಬAಧ ಇಲ್ಲದ ರಸ್ತೆ ಬಗ್ಗೆ ಸಂಸದರು ಮಾತನಾಡುತ್ತಾರೆ ಎಂದು ಟೀಕಿಸಿರುವುದು ಖಂಡನೀಯ. ಜನೋಪಯೋಗಿ ಯೋಜನೆಯೊಂದು ಯಶಸ್ವಿಯಾಗಿರುವುದಕ್ಕೆ ಹೆಮ್ಮೆ ಪಡಬೇಕೆ ಹೊರತು ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಬಾರದು. ಇದೇ ಹೆದ್ದಾರಿಯಲ್ಲಿ ಸ್ವತ: ಸಂಕೇತ್ ಪೂವಯ್ಯ ಅವರು ಕೂಡ ಸಂಚರಿಸುವುದಿಲ್ಲವೇ ಎಂದು…

Read More

ಮಡಿಕೇರಿ ಡಿ.2 : ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಲು ಬದ್ಧನಾಗಿರುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡವಾಮೆರ ಕೊಂಡಾಟ ಸಂಘಟನೆ ವತಿಯಿಂದ ನಗರದ ಬಾಲಭವನದಲ್ಲಿ ನಡೆದ 2ನೇ ವರ್ಷದ ಕೊಡವ ಅಂತರ ಕುಟುಂಬ ಬಾಳೋಪಾಟ್ ಬಂಬಂಗ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಾವುದೇ ಒಂದು ಜನಾಂಗದ ಏಳಿಗೆಗೆ ಸರ್ಕಾರದ ಸಹಕಾರದ ಅಗತ್ಯವಿದೆ. ಜನಪ್ರತಿನಿಧಿಯಾಗಿ ಜಿಲ್ಲೆಯ ಮತ್ತು ಜನರ ಅಭ್ಯುದಯಕ್ಕಾಗಿ ಸರ್ಕಾರಿ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಮಾತನಾಡಿ ಅಭಿವೃದ್ಧಿಯ ವಿಚಾರದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಶ್ರಮಿಸುವುದಾಗಿ ಹೇಳಿದರು. ದೇಶದ ಸಂವಿಧಾನದಡಿ ಕೊಡವರಿಗೆ ದೊರಕಬೇಕಾದ ಹಕ್ಕುಗಳ ಪರ ಇರುವುದಾಗಿ ಭರವಸೆ ನೀಡಿದರು. ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾತನಾಡಿ ಕೊಡವ ಜನಾಂಗದ ಏಳಿಗೆಯ ದೃಷ್ಟಿಯಿಂದ ಕೊಡವಾಮೆರ ಕೊಂಡಾಟ ಸಂಘಟನೆ ಜನಜಾಗೃತಿ ಮೂಡಿಸುವ ಮೂಲಕ ಇತರರಿಗೆ ಮಾದರಿಯಾಗಿದೆ…

Read More

ಮಡಿಕೇರಿಯ ಕೊಹಿನೂರ್ ರಸ್ತೆ ಆಧಾರ್ ಸೇವಾ ಕೇಂದ್ರದಲ್ಲಿ ವಾರದ 7 ದಿನವೂ ಸೇವೆ ಲಭ್ಯ (ಸಂಪರ್ಕಿಸಿ : 90354 00147)

Read More

ಮಡಿಕೇರಿ ಡಿ.2 : ಚಿಕ್ಕಮಗಳೂರಿನ ಯುವ ವಕೀಲ ಪ್ರೀತಂ ಅವರ ಮೇಲೆ ಚಿಕ್ಕಮಗಳೂರಿನ ಪೊಲೀಸ್ ಸಿಬ್ಬಂದಿಗಳು ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಘಟನೆಯನ್ನು ಖಂಡಿಸಿ ಮಡಿಕೇರಿ ವಕೀಲರ ಸಂಘ ಪ್ರತಿಭಟನೆ ನಡೆಸಿತು. ರಾಜ್ಯಾದ್ಯಂತ ಹಿರಿಯ ಹಾಗೂ ಕಿರಿಯ ವಕೀಲರು ಹಲ್ಲೆಯನ್ನು ಖಂಡಿಸಿ ನ್ಯಾಯಾಲಯದ ಕಲಾಪಗಳಿಂದ ಸ್ವಯಂ ಪ್ರೇರಿತವಾಗಿ ಹೊರ ಉಳಿದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಮಡಿಕೇರಿಯಲ್ಲೂ ಬೆಂಬಲ ವ್ಯಕ್ತವಾಯಿತು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಯುವ ವಕೀಲರ ಮೇಲೆ ನಡೆದ ಹಲ್ಲೆ ಖಂಡನೀಯ, ವಕೀಲರು ಸಮಾಜದ ಅಭಿರಕ್ಷಕರು, ಇವರನ್ನೇ ಪೊಲೀಸ್ ಇಲಾಖೆಯವರು ಹೀಗೆ ನಡೆಸಿಕೊಂಡರೆ, ಇನ್ನು ಸಾಮಾನ್ಯ ಜನರ ಗತಿ ಏನು ಎಂದು ಪ್ರಶ್ನಿಸಿದರು. ಪ್ರಕರಣ ದಾಖಲಾದರು ಕೂಡ ಆರೋಪಿಗಳನ್ನು ಬಂಧಿಸದೆ ಇರುವುದು ಸರಿಯಲ್ಲ. ಘಟನೆಯ ಗಂಭೀರತೆ ಅರಿತ ರಾಜ್ಯ ಸರ್ಕಾರ ಆರೋಪಿಗಳನ್ನು ಸೇವೆಯಿಂದ ಅಮಾನತು ಮಾಡಿದೆ. ಆದರೆ ಇನ್ನೂ ಕೂಡ ಅರೋಪಿಗಳ ಬಂಧನವಾಗಿಲ್ಲ, ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವುದು ರಾಜ್ಯದ…

Read More

ಮಡಿಕೇರಿ ಡಿ.1 : ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕೊಡಗಿನ ಅಭಿವೃದ್ಧಿ ಮತ್ತು ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯನ್ನು ಅನೇಕ ಸಮಸ್ಯೆಗಳು ಕಾಡುತ್ತಿದ್ದರು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾದರ್ಶನ ಕಾರ್ಯಕ್ರಮ ನಡೆಯಬೇಕೆನ್ನುವ ಸರ್ಕಾರದ ಆದೇಶಕ್ಕೂ ಬೆಲೆ ಇಲ್ಲದಾಗಿದೆ. ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕೂಡ ನಡೆಸುತ್ತಿಲ್ಲ ಎಂದು ಟೀಕಿಸಿದ್ದಾರೆ. ಜಿಲ್ಲೆಯ ತಾಲ್ಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದೆ, ಆದರೆ ಕೃಷಿಕ ವರ್ಗಕ್ಕೆ ಬರ ಪರಿಹಾರ ತಲುಪಿಸುವ ಕಾಳಜಿ ತೋರುತ್ತಿಲ್ಲ. ಬೇಸಿಗೆಯಲ್ಲಿ ನೀರಿನ ಅಭಾವ ಎದುರಾದರೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಚಿಂತನೆ ನಡೆಸಿಲ್ಲ. ದಿನದಿಂದ ದಿನಕ್ಕೆ ವನ್ಯಜೀವಿಗಳ ದಾಳಿ ಮಿತಿ ಮೀರುತ್ತಿದೆ. ಕಾಡಾನೆಗಳ ದಾಳಿಯಿಂದ ಫಸಲು ನಷ್ಟವಾಗುತ್ತಿದೆ. ದಕ್ಷಿಣ ಕೊಡಗಿನಲ್ಲಿ ನಿತ್ಯ ಹುಲಿ ದಾಳಿಗೆ ಹಸುಗಳು ಬಲಿಯಾಗುತ್ತಿವೆ. ಕಂದಾಯ…

Read More

ಮಡಿಕೇರಿ ಡಿ.1 : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದು,್ದ ಅರ್ಜಿ ಸಲ್ಲಿಸಲು 2024 ರ ಜನವರಿ, 10 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.inನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ:1902 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.…

Read More

ಮಡಿಕೇರಿ ಡಿ.1 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ವಿಕಲಚೇತನರಿಗಾಗಿ ವಿಕಲಚೇತನರೊಂದಿಗೆ ವಿಕಲಚೇತನರಿಂದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಂರಕ್ಷಿಸಲು ಮತ್ತು ಸಾಧಿಸಲು ಕಾರ್ಯ ಪ್ರವೃತ್ತರಾಗುವಿಕೆಯಲ್ಲಿ ಒಗ್ಗಟ್ಟು’ ಎಂಬ ಘೋಷವಾಕ್ಯದೊಂದಿಗೆ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ,…

Read More