ಲೇಖಕ: admin

ಮಡಿಕೇರಿ ಡಿ.1 :  ಹಾರಂಗಿ ಗ್ರಾಮದ ಹಲವು ವರ್ಷಗಳ ಬೇಡಿಕೆಯಾಗಿದ್ದ ಆಟದ ಮೈದಾನ ನಿರ್ಮಾಣ ಮತ್ತು ಸಮತಟ್ಟುಗೊಳಿಸುವ ಕಾಮಗಾರಿಗೆ ಗ್ರಾಮದ ಹಿರಿಯರಾದ ಪುಟ್ಟ ಮಾದಯ್ಯ ಚಾಲನೆ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಸೂಚನೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ ಕೈಗೊಂಡಿರುವ ಹಿನ್ನೆಲೆಯಲ್ಲಿ ಹಾರಂಗಿ ನಾಗರಿಕರು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭ  ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರು ಹಾಗೂ ಕೊಡಗು ಜಿ.ಪಂ ಮಾಜಿ ಸದಸ್ಯರಾದ  ವಿ.ಪಿ ಶಶಿಧರ್, ಗ್ರಾ.ಪಂ  ಮಾಜಿ ಸದಸ್ಯರುಗಳಾದ ದೇವರಾಜ್, ಮಂಜುನಾಥ್, ಶ್ರೀನಿವಾಸ್, ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ  ಭಾಸ್ಕರ್ ನಾಯಕ್ ಸದಸ್ಯರಾದ ಮಣಿಕಂಠ ಪ್ರಮುಖರಾದ ಎಂ.ಬಿ. ರವಿ, ರಜಾಕ್, ಸಜನ್ ಹಾಗೂ ಪ್ರಮುಖರು ಹಾಜರಿದ್ದರು.  

Read More

ನಾಪೋಕ್ಲು  ಡಿ.1  : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಲಮುರಿ ನೆಬ್ಬೂರು ಗೌಡ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ನೆಬ್ಬೂರು ಗೌಡ ಸಂಘದ ಅಧ್ಯಕ್ಷ ಕೊಟ್ಟಕೇರಿಯನ ಬಿ.ಲೋಕನಾಥ ಪರೆಗೆ ಭತ್ತ ತುಂಬಿಸುವ ಮೂಲಕ ಕಾರ್ಯಕ್ರವನ್ನು ಉದ್ಘಾಟಿಸಿದರು. ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ನೆಬ್ಬೂರು ಗೌಡ ಸಂಘ ನಾಲ್ಕು ತಲೆಮಾರಿನಿಂದ ನಡೆದುಕೊಂಡು ಬಂದಿದ್ದು, ಕೇವಲ ಮೂರು ಕುಟುಂಬಗಳು ಮಾತ್ರ ಸೇರಿ ಕಟ್ಟಿದ ಸಂಘವಾಗಿದೆ. ಯಾವುದೇ ಕಟ್ಟಡವಿಲ್ಲ, ಕಚೇರಿ ಇಲ್ಲದೆ ವರ್ಷಕ್ಕೊಮ್ಮೆ ಗ್ರಾಮೀಣ ಕ್ರೀಡಾಕೂಟ ನಡೆಸಿಕೊಂಡು ಹಬ್ಬ ಹರಿ ದಿನಗಳನ್ನು ಒಂದಾಗಿ ಸೇರಿ ಆಚರಿಸಿಕೊಂಡು ಬರುತ್ತಿದ್ದೇವೆ, ಹಾಗೆಯೇ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಜಾನಪದ ಸಿರಿ ಸಂಪತ್ತು ಉಳಿಯಬೇಕಾದರೆ ಹಳ್ಳಿಗಳಲ್ಲಿ ಇಂತಹ ಸಂಘ-ಸಂಸ್ಥೆಗಳಿರಬೇಕು. ಜಾನಪದ ಸೊಗಡು ಚಿಗುರಬೇಕಾದರೆ ಮಕ್ಕಳಿಗೆ ಇಂತಹ…

Read More

ನಾಪೋಕ್ಲು ಡಿ.1 : ತಲೆತಲಾಂತರಗಳಿಂದ ಉಳಿಸಿಕೊಂಡು ಬಂದಿರುವ ಸಂಸ್ಕೃತಿ ,ಸಂಪ್ರದಾಯಗಳನ್ನು ಮುಂದಿನ ತಲೆಮಾರಿಗೂ ಪರಿಚಯಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕನ್ನಡ ಜಾನಪದ ಪರಿಷತ್ ಕೊಡಗು ಜಿಲ್ಲೆ ಹಾಗೂ ಬುಡಕಟ್ಟು ಕೃಷಿಕರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸಮೀಪದ ಯವಕಪಾಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸುವರ್ಣ ಕನ್ನಡ ಜಾನಪದ ಸಂಭ್ರಮ ಹಾಗೂ ವಿಶ್ವ ಬುಡಕಟ್ಟು ದಿನಾಚರಣೆ, ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಾನಪದ ಪರಿಷತ್ ಜಿಲ್ಲಾಧ್ಯಕ್ಷೆ ಡಾ.ಕಾವೇರಿ ಪ್ರಕಾಶ್ ಪ್ರಸ್ತಾವಿಕವಾಗಿ ಮಾತನಾಡಿ, ಜನಪದ ಸಂಸ್ಕೃತಿಯನ್ನು ಉಳಿಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಕಲಾವಿದ ಪೊನ್ನಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ತೋರ ಗ್ರಾಮದ ಹಿರಿಯ ಜಾನಪದ ಕಲಾವಿದೆ ಗೋಪಮ್ಮ,, ದುಡಿಕೊಟ್ ಕಲಾವಿದೆ ಕೆ.ಸಿ.ದೇವಕ್ಕಿ ,ಯವಕಪಾಡಿ ಗ್ರಾಮದ ಹಿರಿಯ ಜಾನಪದ ಕಲಾವಿದ ಕೆ.ಸಿ.ಸೋಮಣ್ಣ, ಮರಂದೋಡ ಗ್ರಾಮದ ಕೊಳಲು ವಾದಕ ಕೆ.ಮಾದಪ್ಪ ಹಾಗೂ ಮರಂದೋಡ…

Read More

ನಾಪೋಕ್ಲು ಡಿ.1 : ನಾಪೋಕ್ಲುವಿನ ಬಿದ್ದಾಟಂಡ ವಾಡೆಯ ನೂರಂಬಾಡ ಮಂದ್ನಲ್ಲಿ ಗ್ರಾಮಸ್ಥರೆಲ್ಲರ ಸಮಾಗಮದೊಂದಿಗೆ ನಡೆದ ಸಾಂಪ್ರದಾಯಿಕ ಪುತ್ತರಿ ಕೋಲಾಟ ಸಂಭ್ರಮದಿಂದ ನಡೆಯಿತು. ನಾಪೋಕ್ಲು, ಬೇತು ಮತ್ತು ಕೋಕೇರಿ ಗ್ರಾಮಗಳನ್ನು ಒಳಗೊಂಡಂತೆ ನಡೆಯುವ ಐತಿಹಾಸಿಕ ನೂರಂಬಾಡ ಕೋಲ್ ಮಂದ್ನಲ್ಲಿ ಹುತ್ತರಿ ಕೋಲಾಟಕ್ಕೂ ಮುನ್ನ ಬೇತು ಮಕ್ಕಿ ಶಾಸ್ತಾವು ದೇವಾಲಯದಿಂದ ಸಂಪ್ರದಾಯದಂತೆ ತಕ್ಕ ಮುಖ್ಯಸ್ಥರು ದೇವರ ತಿರುವಾಭರಣದೊಂದಿಗೆ ಕಾಪಾಳ ಕಳಿ ವೇಷಧಾರಿಗಳು ಮತ್ತು ಕೊಂಬು ಕೊಟ್ಟ್ ವಾಲಗದೊಂದಿಗೆ ಮೆರವಣಿಗೆಯ ಮೂಲಕ ನೂರಂಬಾಡ ಮಂದ್ನತ್ತ ಹೆಜ್ಜೆ ಹಾಕಿದರು. ಅನೂಚಾನವಾಗಿ ನಡೆದುಕೊಂಡು ಬಂದ ಪದ್ಧತಿಯಂತೆ ಮೆರವಣಿಗೆಯ ನಡುವೆ ಕುರುಂಬರಾಟ್ ಬನದಲ್ಲಿ ವಿಶ್ರಾಂತಿಯನ್ನು ಪಡೆದು ಮಧ್ಯಾಹ್ನ ನೂರಂಬಾಡ ಮಂದ್ಗೆ ತಿರುವಾಭರಣದೊಂದಿಗೆ ಆಗಮಿಸಿದ ಬೇತು ಗ್ರಾಮದ ತಕ್ಕಮುಖ್ಯಸ್ಥರನ್ನು ಗ್ರಾಮದ ತಕ್ಕಮುಖ್ಯಸ್ಥರು ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ, ಸ್ವಾಗತಿಸಿದ ಬಳಿಕ ಹುತ್ತರಿ ಕೋಲಾಟಕ್ಕೆ ಚಾಲನೆ ದೊರಕಿತು. ನಾದಕ್ಕೆ ತಕ್ಕಂತೆ ಮೂರು ಗ್ರಾಮದ ತಕ್ಕಮುಖ್ಯಸ್ಥರು ಗ್ರಾಮಸ್ಥರು ಮಂದ್ಗೆ ಪ್ರದಕ್ಷಿಣೆ ಬರುವುದರೊಂದಿಗೆ ಲಾಲಿತ್ಯ ಪೂರ್ಣವಾಗಿ ವೈವಿಧ್ಯತೆಗಳನ್ನು ಮಿಳಿತಗೊಳಿಸಿಕೊಂಡ ಕೋಲಾಟ್ನ ನಾದದೊಂದಿಗೆ…

Read More

ಮಡಿಕೇರಿ ನ.30 : ಇಷ್ಟು ದಿನ ಕೊಡಗಿನಲ್ಲಿ ಕಾಣಿಸಿಕೊಳ್ಳದೇ ಇದ್ದ ಸಂಸದ ಪ್ರತಾಪ್ ಸಿಂಹ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೆ ಸುಳ್ಳುಗಳನ್ನು ಹೇಳಿ ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಷ್ಟೇ ಕೊಡಗಿನ ಕಡೆ ಮುಖ ಮಾಡುವ ಪ್ರತಾಪ್ ಸಿಂಹ ಅವರು ಪ್ರಧಾನಿ ‘ಮೋದಿ’ ಕೃಪಾ ಕಟಾಕ್ಷದಲ್ಲಿ ಗೆಲ್ಲುವ ವ್ಯಕ್ತಿಯಾಗಿದ್ದಾರೆ. ಸುಳ್ಳುಗಳನ್ನು ಹೇಳುತ್ತಾ, ಭಾವನಾತ್ಮಕವಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು. ಕೊಡವ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ.ಗಳನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಂಸದರು ಮತ್ತೆ ಸುಳ್ಳುಗಳನ್ನು ಹರಿ ಬಿಟ್ಟಿದ್ದಾರೆ. ವಿಧಾನಸಭಾ ಚುನಾವಣೆಯ ಹಂತದಲ್ಲಿ ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಘೋಷಿಸಿದ ಕೊಡವ ಅಭಿವೃದ್ಧಿ ನಿಗಮಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲವೆಂದು ಧರ್ಮಜ ಉತ್ತಪ್ಪ ಸ್ಪಷ್ಟಪಡಿಸಿದರು. ಈ ಹಿಂದಿನ ಸಮ್ಮಿಶ್ರ ಸರ್ಕಾರ ಹಾಗೂ ಬೊಮ್ಮಾಯಿ…

Read More

ಮಡಿಕೇರಿ ನ.30 : 2022-23ನೇ ಸಾಲಿನಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಿ.1 ರಂದು ಸನ್ಮಾನಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ 21 ಉಪನ್ಯಾಸಕರು ಹಾಗೂ 9 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ. ಕೊಡಗು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ ಅವರು ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಸಮಾಜ ಸೇವಕ ಟಿ.ಆರ್.ವಾಸುದೇವ್, ಇವೆಂಟ್ಸ್ ಟೆಕ್ ಮಾಲೀಕ ಹೆಚ್.ಪಿ.ಅವಿನ್ ಕುಮಾರ್, ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ, ದಲಿತ…

Read More

ಕುಶಾಲನಗರ, ನ.30: ಕುಶಾಲನಗರ ಗಣಪತಿ ರಥೋತ್ಸವ ಅಂಗವಾಗಿ  ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲತಾಂಬುಲದೊಂದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ದೇವಾಲಯದ ಪ್ರಧಾನ ಅರ್ಚಕ  ಆರ್.ಕೆ.ನಾಗೇಂದ್ರ ಬಾಬು ಅವರ ನೇತೃತ್ವದಲ್ಲಿ ಅರ್ಚಕರಾದ ರಾಘವೇಂದ್ರ ಭಟ್ ಮತ್ತಿತರರು ವಿಶೇಷ ಪೂಜೆ ಸಲ್ಲಿಸಿ, ದೇವಾಲಯದ ರಥೋತ್ಸವ ಮತ್ತು ಉತ್ಸವದಿಗಳು ಸಾಂಗವಾಗಿ ನೆರವೇರಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಗಣಪತಿ ದೇವಾಲಯ ಸಮಿತಿ ಗೌರವ ಅಧ್ಯಕ್ಷರಾದ ವಿ.ಎನ್.ವಸಂತಕುಮಾರ್, ಪಟ್ಟಣದ ವಿವಿಧ ದೇವಾಲಯಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಡಿ.1 ರಂದು ರಥೋತ್ಸವ ::  ಕುಶಾಲನಗರ ಶ್ರೀ ಗಣಪತಿ ದೇವಸ್ಥಾನದ ರಥೋತ್ಸವ ಇಂದು ನಡೆಯಲಿದೆ. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಗಣಪತಿ ರುದ್ರಾಭಿಷೇಕ ಪುಷ್ಪಾಲಂಕಾರ ರಥಪೂಜೆ ರಥ ಬಲಿ ನಂತರ ಮಧ್ಯಾಹ್ನ 12 ಗಂಟೆಗೆ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ರಥ ಬೀದಿಯಲ್ಲಿ ರಥ ಸಾಗಲಿದೆ.

Read More

ಕಡಂಗ ನ.30 :  ವಿರಾಜಪೇಟೆ ವಲಯದ ಎಸ್ ಎಸ್ ಎಫ್ ಸಾಹಿತ್ಯೋತ್ಸವ ಕಾರ್ಯಕ್ರಮವು ಡಿ.2 ಮತ್ತು 3 ರಂದು ವಿರಾಜಪೇಟೆಯ ಗುಂಡಿಗೆರೆಯಲ್ಲಿ ನಡೆಯಲಿದ್ದು, ಅದರ ಕರಪತ್ರವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ   ಬಿಡುಗಡೆಗೊಳಿಸಿದರು. ಈ ಸಂದರ್ಭ  ಎಸ್‍ಎಸ್‍ಎಫ್ ಪ್ರಮುಖರಾದ ಮತೀನ್, ತಿಮ್ಮಯ್ಯ,ರಾಫಿ,ಸುಫ್ಯಾನ್ ಅನ್ವಾರಿ, ಸಿಹಾಬುದ್ದೀನ್ ಜೌಹರಿ,ತ್ವಾಹಿರ್ ಹಾಜರಿದ್ದರು. ವಿರಾಜಪೇಟೆ ವಲಯಕ್ಕೆ  ಒಳಗೊಂಡ ವಿದ್ಯಾರ್ಥಿಗಳಲ್ಲಿರುವ ಕಲೆಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ. ಡಿ.2 ರಂದು ರಾತ್ರಿ ಇಶಾಲ್ ನೈಟ್ ಕಾರ್ಯಕರ್ಮ ನೆಡೆಯಲಿವೆ. ದುಆ ಕಾರ್ಯಕ್ರಮ ಕ್ಕೆ ಸಯ್ಯದ್ ಸಿದಿ ಅಲ್ ಅಹಸನಿ ಮತ್ತು ಸಯ್ಯದ್ ಮಹದಿ ಲತೀಫಿ ನೇತೃತ್ವವಹಿಸಲಿದ್ದಾರೆ. ಕಾರ್ಯಕಮಕ್ಕೆ ಅತಿಥಿಗಳಾಗಿ ಆಶ್ರಫ್ ಅಹಸನಿ , ಗುಂಡಿಗೆರೆ ಜಮಾಹತ್ ಖತೀಬ್ ಇಲ್ಲ್ಯಾಸ್ ಅಮ್ಜದಿ , ಮಸೀದಿ ಅಧ್ಯಕ್ಷ ಮಹಮ್ಮದ್ ಹಾಜಿ, ರಂಜಿಪೂಣಚ್ಚ , ಡಿ.ಎಚ್.ಎಸ್ ಸೂಫಿ ಹಾಜಿ, ರಾಫಿ ವಿರಾಜಪೇಟೆ , ಹನೀಫ ಚೋಕಂಡಳ್ಳಿ , ರಫೀಕ್ ಕೊಮ್ಮೆತೊಡು, ಮತೀನ್ ಭಾಗವಹಿಸಲಿದ್ದಾರೆ. ವರದಿ : ನೌಫಲ್ ಕಡಂಗ  

Read More

ಮಡಿಕೇರಿ ನ.30 :  ಪ್ರಣಾಮ್ ಭಾರತ ವತಿಯಿಂದ ಡಿ.3 ರಂದು  ಮಡಿಕೇರಿಯಲ್ಲಿ ಹಾಸ್ಯ ಸಂಜೆ ಎಂಬ “ಸ್ಟ್ಯಾಂಡ್ ಅಪ್ ಕಾಮಿಡಿ” ವಿನೂತನ ಕಾರ್ಯಕ್ರಮ ನಡೆಯಲಿದೆ. ನಗರದ   ಭಾರತೀಯ ವಿದ್ಯಾಭವನದ ಸಂಭಾಂಗಣದಲ್ಲಿ ಸಂಜೆ 5 ಗಂಟೆಗೆ  ನಡೆಯಲಿರುವ ಕಾರ್ಯಕ್ರಮದಲ್ಲಿ  ಕಾದಂಬರಿಕಾರ ಭಾರದ್ವಾಜ ಆನಂದತೀರ್ಥ,  ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ರೇಡಿಯೋ ಎಫ್ ಎಮ್ ಖ್ಯಾತಿಯ ಆರ್ಜೆ ತ್ರಿಶೂಲ್ ಕಂಬಳ, ಡಿಜಿಟಲ್ ಮಾರ್ಕೆಟಿಂಗ್ ತಜ್ಞ ರಿತೇಶ್ ನೂಜಿಬೈಲು, ಕಾರ್ಯಕ್ರಮ ನಿರೂಪಕಿ ಅಕ್ಷತಾ ಶೆಟ್ಟಿ, ಯುವ ಪ್ರತಿಭೆ ಅಬ್ದುಲ್ ಕೌಸರ್  ವೀಕ್ಷಕರನ್ನು ನಗಿಸುವ ಹೊಣೆ ಹೊತ್ತಿದ್ದಾರೆ. ಇದು ಇಡೀ ಕುಟುಂಬದವರು ಒಟ್ಟಾಗಿ ಕುಳಿತು ರಂಜನೆಯನ್ನು ಪಡೆಯಬಹುದಾದ ಹಾಸ್ಯ ಕಾರ್ಯಕ್ರಮಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮದ ಆಯೋಜಕರು ಮನವಿ ಮಾಡಿದ್ದಾರೆ.  ಟಿಕೆಟ್ ಕಾಯ್ದಿರಿಸಲು ಆಸಕ್ತರು 9380869836 ಸಂಖ್ಯೆಗೆ ಕರೆ ಮಾಡಲು ಕೋರಿಕೊಳ್ಳಲಾಗಿದೆ.

Read More

ವಿರಾಜಪೇಟೆ ನ.30 : ಸಮೀಪದ ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಶಾಲೆಯಲ್ಲಿ, ಮಕ್ಕಳ ಸಂತೆ ನಡೆಯಿತು. ತಾಜಾ ಸೊಪ್ಪು, ಮನೆಯಲ್ಲಿ ಬೆಳಸಿದ ತರಕಾರಿ, ಹಣ್ಣುಗಳು, ಮಕ್ಕಳಿಂದಲೇ ತಯಾರಿಸಲ್ಪಟ್ಟ ಐಸ್‍ಕ್ರೀಂ, ಬೋಂಡ, ಬಜ್ಜಿ, ಫ್ರೂಟ್ ಸಲಾಡ್ ಆಕರ್ಷಣೀಯವಾಗಿತ್ತು. ಮಕ್ಕಳಲ್ಲಿ ಕಂಡು ಬಂದ ಸ್ಪರ್ಧಾತ್ಮಕ ಮನೋಭಾವ ಗ್ರಾಹಕರ ಗಮನ ಸೆಳೆಯಿತು. ಮಕ್ಕಳಲ್ಲಿ ಕುಶಲತೆ, ಸಂವಹನ ಕಲೆ, ಸಾಮಾಜಿಕ ಬದುಕಿನೊಂದಿಗೆ ಒಡನಾಟದ ಕೌಶಲ್ಯವನ್ನು ಕಲಿಸುವುದರೊಂದಿಗೆ, ಅವರಲ್ಲಿ ಸೃಜನಶೀಲತೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ, ಈ ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಚಿಣ್ಣರು, ಗ್ರಾಹಕರ ಬಳಿ ಹಣ ಪಡೆದು ವ್ಯಾಪಾರ-ವಹಿವಾಟು ನಡೆಸಿದ್ದು, ಮಕ್ಕಳು ವ್ಯಾಪಾರ ಮಾಡಿ ಖುಷಿಪಟ್ಟರು. ಈ ಸಂದರ್ಭ ಮಾತನಾಡಿದ ಮುಖ್ಯೋಪದ್ಯಾಯರಾದ ಮಹದೇವ್, ವಿದ್ಯಾರ್ಥಿಗಳಿಗೆ ಲಾಭ ನಷ್ಟದ ಪರಿಚಯ, ವ್ಯವಹಾರ ಜ್ಞಾನ, ಸ್ವಚ್ಛತೆಯ ಪರಿಕಲ್ಪನೆ ಮೂಡಿಸಲು ಮಕ್ಕಳ ಸಂತೆ ಉಪಯುಕ್ತವಾಗುತ್ತದೆ. ಶಾಲೆಗಳಲ್ಲಿ ಆಟ-ಪಾಠದ ಜೊತೆಗೆ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳಿಗೆ ಮುಂಬರುವ ದಿನಗಳಲ್ಲಿ ತಮ್ಮ ಬದುಕು ಹೇಗೆ ಕಟ್ಟಿಕೊಳ್ಳಬೇಕೆಂಬುವುದು ಅನುಭವ ದೊರೆತಂತಾಗುತ್ತದೆ ಎಂದು ಹೇಳಿದರು. ಗ್ರಾ.ಪಂ ಸದಸ್ಯ ಶಹಧೀರ್…

Read More