ಮಡಿಕೇರಿ ಜ.5 : ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ನೌಕರರ ವೇತನಕ್ಕೆ ಮೀಸಲಿರಿಸಲಾಗಿದ್ದ 10 ಲಕ್ಷ ರೂ.ಗಳನ್ನು ನಿಯಮ ಮೀರಿ, ಸಾಮಾಗ್ರಿ ಖರೀದಿಗೆ ಬಳಸಲಾಗಿದೆ. ಇದರಿಂದ ಕಳೆದ ಮೂರು ತಿಂಗಳಿನಿಂದ ಆಸ್ಪತೆಯ ಡಿ ಗ್ರೂಪ್ ಮತ್ತು ನಾನ್ ಕ್ಲೀನಿಂಗ್ ನೌಕರರು ವೇತನ ದೊರಕದೆ ಸಂಕಷ್ಟಕ್ಕೆ ಸಿಲುಕಿರುವುದಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಸ್ವಚ್ಛತಾ ಮತ್ತು ಇತರೆ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ನೌಕರರ ವೇತನಕ್ಕೆ ಅಡಚಣೆಯಾಗಬಾರದೆನ್ನುವ ದೃಷ್ಟಿಯಿಂದ ಮೀಸಲು ಇರಿಸಿದ್ದ ಹಣವನ್ನು 2022 ರಲ್ಲಿ ಆಸ್ಪತ್ರೆಗೆ ಬೆಡ್ ಶೀಟ್, ಹಾಸಿಗೆ ಖರೀದಿಗೆ ಬಳಸಿರುವಂತೆ ತೋರಿಸಲಾಗಿದೆ. ಆದರೆ, 2023 ನೇ ಸಾಲಿನಲ್ಲಿ ಮತ್ತೆ ಆಸ್ಪತ್ರೆಗೆ ಬೆಟ್‍ಶೀಟ್ ಮತ್ತಿತರ ಸಾಮಾಗ್ರಿಗಳಿಗೆ ಬೇಡಿಕೆ ಇಡಲಾಗಿದೆ. ಇದನ್ನು ಗಮನಿಸಿದಾಗ ಹಿಂದಿನ ಸಾಲಿನಲ್ಲಿ ಮೀಸಲು ಹಣದಲ್ಲಿ ನಡೆದಿರುವ ಖರೀದಿಯಲ್ಲಿ ದುರುಪಯೋಗವಾಗಿರುವ ಅನುಮಾನಗಳಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂದು ಆಗ್ರಹಿಸಿದರು. ವಿರಾಜಪೇಟೆ ತಾಲೂಕಿನ ಸರ್ಕಾರಿ…
ಲೇಖಕ: admin
ಮಡಿಕೇರಿ ಜ.5 : ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ರಾಜ್ಯಮಟ್ಟದ 3 ನೇ ವಿಪ್ರ ಮಹಿಳಾ ಸಮ್ಮೇಳನ ಅಭಿಜಾತೆ ಬೆಂಗಳೂರಿನಲ್ಲಿ ಜನವರಿ 6 ಮತ್ತು 7 ರಂದು ಆಯೋಜಿತವಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಿಳಾ ಸಮಾವೇಶದಲ್ಲಿ ಪ್ರಧಾನ ಮಾಡಲಾಗುವ ಧೀಶಕ್ತಿ ಪ್ರಶಸ್ತಿಗೆ ಮಡಿಕೇರಿಯ ಸವಿತಾ ಭಟ್ ಪೂಕಳ ಆಯ್ಕೆಯಾಗಿದ್ದಾರೆ ಎಂದು ವಿಪ್ರ ಮಹಿಳಾ ಘಟಕದ ಕೊಡಗು ಸಂಚಾಲಕಿಯಾದ ಗೀತಾ ಸಂಪತ್ ಕುಮಾರ್ ಮತ್ತು ಸಹಸಂಚಾಲಕಿ ಸವಿತಾ ಯೊಗೀಶ್ ತಿಳಿಸಿದ್ದಾರೆ. ಅಖಿಲ ಕನಾ೯ಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷರಾದ ಅಶೋಕ್ ಹಾನ೯ಳ್ಳಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಶಂಕರಪುರಂನಲ್ಲಿರುವ ಶಂಕರ ಮಠದಲ್ಲಿ 2 ದಿನಗಳ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಮಡಿಕೇರಿಯ ಶೖತಿಲಯ ಭಜನಾ ತಂಡವು ಭಜನಾ ಸ್ಪಧೆ೯ಯಲ್ಲಿ ಪಾಲ್ಗೊಳ್ಳುತ್ತಿದೆ. ಕೊಡಗಿನ ಪ್ರೇಕ್ಷ ಭಟ್ ತಂಡದವರು ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದು, ಮಾಧ್ಯಮದಲ್ಲಿ ಮಹಿಳೆಯ ಪಾತ್ರ ವಿಚಾರ ಸಂಕಿರಣದಲ್ಲಿ ಕೊಡಗು ಜಿಲ್ಲಾ ಸಂಚಾಲಕಿ ಗೀತಾ ಸಂಪತ್ ನಿರೂಪಕಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪುತ್ತೂರು ಜ.5 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅಕೌಂಟ್ ಆಫೀಸರ್ ಆಗಿದ್ದ ಶಿವಪ್ರಸಾದ್.ಕೆ ಸೇವಾನಿವೃತ್ತಿ ಹೊಂದಿದರು. ಕಾಲೇಜಿನ ಪ್ರಾರಂಭದ ದಿನಗಳಿಂದಲೂ ಕಛೇರಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಇವರು 21 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಾರೆ. ಸದಾ ನಗುಮುಖದ ಸ್ನೇಹಪರತೆಯ ಇವರು ಕಾಲೇಜಿನಿಂದ ನಿವೃತ್ತಿಹೊಂದಿದ ಪ್ರಥಮ ಸಿಬ್ಬಂದಿಯಾಗಿಯೂ ಗುರುತಿಕೊಂಡರು. ಕಾಲೇಜಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಶಾಲು ಹೊದೆಸಿ ಗೌರವಿಸಿದರು. ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಹಾಗೂ ಕಛೇರಿ ಸಿಬ್ಬಂದಿಗಳು ಶುಭ ಹಾರೈಸಿ ಬೀಳ್ಕೊಟ್ಟರು. ಇವರು ವಿಟ್ಲ ಸಮೀಪದ ಮೈರ ನಿವಾಸಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ನಿವೃತ್ತಿ ಜೀವನವನ್ನು ನಡೆಸಲಿದ್ದಾರೆ.
ಬೆಂಗಳೂರು ಜ 5 : ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಎಲ್ಲಿ ಮಳೆ ಕಡಿಮೆ…
ನಾಪೋಕ್ಲು ಜ.5 : ನಾಪೋಕ್ಲು ಹೋಬಳಿ ವ್ಯಾಪ್ತಿಯ ಭತ್ತ ಹಾಗೂ ಕಾಫಿ ಬೆಳೆಗಾರರಿಗೆ ಮಳೆ, ಮಳೆ ಮೋಡ ಸಂಕಷ್ಟ ತಂದೊಡ್ಡಿದೆ. ನಾಲ್ಕು ನಾಡು ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆನಿಂದಲೇ ನಿರಂತರ ಮಳೆಯಾಗಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಭಾಗಗಳಲ್ಲಿ ಮಳೆ ಜೋರಾಗಿ ಸುರಿದು ಕಾಫಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮೀಣ ಪ್ರದೇಶದ ಹಲವೆಡೆ ಬತ್ತದ ಕೊಯ್ಲು ಮುಗಿದಿದ್ದು, ಅಲ್ಪ ಸ್ವಲ್ಪ ಬಾಕಿ ಉಳಿದಿರುವ ರೈತರಿಗೆ ಮಳೆಯಿಂದಾಗಿ ಸಂಕಷ್ಟ ಎದುರಾಗಿದೆ. ಕಾಫಿ ತೋಟಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿದ್ದು ಕಾಫಿ ಕೊಯ್ಲು ಆರಂಭಗೊಂಡಿದೆ. ಬಿಸಿಲಿನ ಕೊರತೆಯಿಂದ ರೈತರು ಕಾಫಿ ಒಣಗಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ಹಿಂದಿನ ವರ್ಷ ಮಳೆಯೂ ಬೇಗನೆ ಸುರಿದಿರುವುದರಿಂದ ಕಾಫಿ ಹಣ್ಣಾಗಿದ್ದು ರೈತರು ಕೊಯ್ಲು ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಒಣಗಿಸಲು ಬಿಸಿಲಿನ ಕೊರತೆ ಕಾಡುತ್ತಿದೆ. ವಾರಗಟ್ಟಲೆ ಬಿಸಿಲಿನ ತಾಪವೂ ಇಲ್ಲದೆ ಕಾಫಿಯನ್ನು ಒಣಗಿಸುವುದು ಕಷ್ಟಕರವಾಗಿದೆ. ರೋಬಸ್ಟಾ ಕಾಫಿ ಹಲವೆಡೆ ಹಣ್ಣಾಗಿ ಮಳೆಯಿಂದಾಗಿ ಹಣ್ಣಾದ ಕಾಫಿಗಳು ಉದುರುತ್ತಿವೆ. ಕಾಫಿನ ಕೊಯ್ಲಿನ ಜೊತೆಗೆ ಉದುರಿದ ಕಾಫಿ…
ಸಿದ್ದಾಪುರ ಜ.5 : ಅಕ್ಷರ ಫೌಂಡೇಶನ್ ವತಿಯಿಂದ ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಬೆಟ್ಟದ ಕಾಡು ಹಾಗೂ ಕೆಪಿಎಸ್ ಶಾಲೆಯ 4, 5 ಹಾಗೂ 6ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರಾ.ಪಂ ಮಟ್ಟದ ಗಣಿತ ಕಲಿಕಾ ಆಂದೋಲನ – ಗಣಿತ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ.1,000 ನಗದು, ದ್ವಿತೀಯ ರೂ.600 ಹಾಗೂ ತೃತೀಯ ರೂ.400 ನಗದು ಮತ್ತು ಮೂವರಿಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಪರಿವೀಕ್ಷಕರಾಗಿ ಕಾರ್ಯನಿರ್ವಹಿಸಿದ ಬೆಟ್ಟದಕಾಡು ಶಾಲೆಯ ಶಿಕ್ಷಕರಾದ ಪುಷ್ಪವೇಣಿ, ಧನಲಕ್ಷ್ಮಿ ಹಾಗೂ ಕೆಪಿಎಸ್ ಶಾಲೆಯ ಪ್ರಾಥಮಿಕ ವಿಭಾಗದ ಶಿಕ್ಷಕರಾದ ಟಿ.ಎಸ್.ಸೌಮ್ಯ, ಕೆ.ಪ್ರಶಾಂತ್ ಭಕ್ತ ಅವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭ ಗ್ರಾ.ಪಂ ಕಾರ್ಯದರ್ಶಿ ಪ್ರವೀಣ್, ಕೆಪಿಎಸ್ ಪ್ರಾಥಮಿಕ ವಿಭಾಗದ ಪ್ರಬಾರ ಮುಖ್ಯ ಶಿಕ್ಷಕಿ ಬಿ.ಭಾರತಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಸಿದ್ದಾಪುರ ಜ.5 : ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಹೆಚ್.ಎಂ.ಲೋಕೇಶ್ ಅವರನ್ನು ಶಿಕ್ಷಣ ಸಂಸ್ಥೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯ ಸಭಾಂಗಣದಲ್ಲಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕ ವೃಂದ, ಸಿಬ್ಬಂದಿಗಳು ಫಲ-ತಾಂಬೂಲ ನೀಡಿ ಶಾಲು ಹೊದಿಸಿ ಸನ್ಮಾನಿಸಿ, ಶುಭ ಹಾರೈಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಭಾರತಿ ನಿರೂಪಿಸಿ, ಶಶಿಕುಮಾರ್ ಸ್ವಾಗತಿಸಿ, ಆಶಾ ಪ್ರಾರ್ಥಿಸಿದರು.
ಮಡಿಕೇರಿ ಜ.5 : ಕಾಫಿ ಕೊಯ್ಲಿನ ಹಂತದಲ್ಲಿನ ಕಾರ್ಮಿಕರ ಕೊರತೆ, ಕಾರ್ಮಿಕರ ವೇತನಗಳಿಂದ ಕಂಗಾಲಾಗಿರುವ ಕೊಡಗಿನ ಬೆಳೆಗಾರ, ತನ್ನ ಆರ್ಥಿಕ ಪರಿಸ್ಥಿತಿಗಳಿಗೆ ತಕ್ಕಂತೆ ಕೆಲಸಗಾರರನ್ನು ಹೊಂದಿಸಿಕೊಳ್ಳಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಇಲ್ಲೊಬ್ಬ ಬೆಳೆಗಾರರು ತಾವು ನೀಡಬಹುದಾದ ಕಾರ್ಮಿಕರ ದಿನಗೂಲಿಯ ವಿವರ ಬರೆದು “ಕೆಲಸಗಾರರು ಬೇಕಾಗಿದ್ದಾರೆ” ಎನ್ನುವ ಫಲಕದೊಂದಿಗೆ ರಸ್ತೆಗಿಳಿದು ತಮ್ಮ ಅಸಹಾಯಕ ಸ್ಥಿತಿಯನ್ನು ಸಾಕ್ಷೀಕರಿಸಿದ್ದಾರೆ. ವರ್ಷಾವಧಿ ತೋಟದ ನಿರ್ವಹಣೆಗಾಗಿ, ಅದರ ಕೆಲಸ ಕಾರ್ಯಗಳಿಗಾಗಿ ಶ್ರಮಿಸಿದ ಬೆಳೆಗಾರ, ತನ್ನ ಶ್ರಮಕ್ಕೆ ಯಶಸ್ಸು ಪಡೆಯುವುದು ಕಾಫಿ ಫಸಲನ್ನು ಜಾಗೃತೆಯಿಂದ ಕೊಯ್ಲು ಮಾಡಿ, ಉತ್ತಮ ಧಾರಣೆಗೆ ಮಾರಾಟ ಮಾಡುವುದರಿಂದ ಮಾತ್ರ. ಇತ್ತೀಚಿನ ವರ್ಷಗಳಲ್ಲಿ ಕಾಫಿ ಕೊಯ್ಲು ಸಮಯ ಬಂತೆಂದರೆ ಬೆಳೆಗಾರ ಬೆಚ್ಚಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರ ವೇತನ ಜಿಲ್ಲೆಯ ಒಂದೊಂದು ಭಾಗದಲ್ಲಿ ಒಂದೊಂದು ರೀತಿ ಇದೆ. ಕಾಫಿ ಹಣ್ಣನ್ನು ಕೊಯ್ಯುವ ಕಾರ್ಮಿಕನಿಗೆ ಪ್ರತಿ ಕೆ.ಜಿ.ಗೆ ಕಳೆದ ಸಾಲಿನವರೆಗೆ 3.50 ರೂ.ಗಳಿಂದ 7 ರೂ.ಗಳವರೆಗೆ ನೀಡಿರುವ ಉದಾಹರಣೆಗಳು ಇದೆ. ಕಾಫಿ ಫಸಲು ಹೆಚ್ಚಾಗಿರುವ ತೋಟಗಳಲ್ಲಿ ಪ್ರತಿ…
ಸುಂಟಿಕೊಪ್ಪ ಜ.5 : ಪವಿತ್ರ ಮಂತ್ರಾಕ್ಷತೆ ವಿತರಣಾ ಅಭಿಯಾನದ ಅಂಗವಾಗಿ ಅಯೋಧ್ಯೆಯ ಶ್ರೀ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸಲಾಯಿತು. ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭ ಆರ್.ಎಸ್.ಎಸ್ ನ ರಾಕೇಶ್, ವೇಲು ಮುರುಗನ್, ಸಂಘ ಪರಿವಾರದ ಪೃಥ್ವಿರಾಜ್, ಮನುಅಚ್ಚಮಯ್ಯ, ವಿಜಯ್, ದರ್ಶನ್, ತ್ರಿಜಲ್, ಸಂತೋಷ್, ಬಿಜೆಪಿ ಮುಖಂಡರಾದ ಸುದೀಶ್, ಬಿ.ಕೆ.ಪ್ರಶಾಂತ್, ಮನು ಅಚ್ಚಮಯ್ಯ, ಲೀಲಾವತಿ, ಸಂದೀಪ್, ಪಿ.ಆರ್.ಸುನಿಲ್ ಕುಮಾರ್ ಇತರರು ಅಭಿಯಾನದಲ್ಲಿ ಪಾಲ್ಹೊಂಡಿದ್ದರು.
ಮಡಿಕೇರಿ ಜ.4 :NEWS DESK ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಮುಂದಿನ ತಿಂಗಳ ಮೊದಲ ವಾರ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಳ್ಳುವಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಕುಶಾಲನಗರ ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಅಭಿಯಂತರರ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ಮುಂದಿನ ತಿಂಗಳು ಮಡಿಕೇರಿಯಲ್ಲಿ ಸರ್ಕಾರದ ಉಚಿತ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಭಾಗಮಂಡಲದ ಸೇತುವೆ ಉದ್ಘಾಟನೆಗೊಳ್ಳಲಿದೆ ಎಂದರು. ಆಡಳಿತಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವ…






