ಲೇಖಕ: admin

ಮಡಿಕೇರಿ ನ.2 : ಸ್ಪಿಕ್ ಮೆಕೆ ಮತ್ತು ಭಾರತೀಯ ವಿದ್ಯಾಭವನ ಕೊಡಗು ಘಟಕದ ವತಿಯಿಂದ ನವಂಬರ್ 6 ರಂದು ಸೋಮವಾರ ನಗರದಲ್ಲಿ ಖ್ಯಾತ ವೇಣುವಾದಕ ಪ್ರವೀಣ್ ಗೋಡ್ಕಿಂಡಿ ಅವರ ಕೊಳಲು ವಾದನ ಆಯೋಜಿಸಲಾಗಿದೆ. ನಗರದ  ಶ್ರೀ ಓಂಕಾರೇಶ್ವರ ದೇವಾಲಯ ಬಳಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಕಾಯ೯ಕ್ರಮ ನಡೆಯಲಿದೆ. ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿ ಅವರೊಂದಿಗೆ ತಬಲದಲ್ಲಿ ಕಿರಣ್ ಗೋಡ್ಕಿಂಡಿ ಜತೆಯಾಗಲಿದ್ದಾರೆ ಎಂದು ಭಾರತೀಯ ವಿದ್ಯಾಭವನ ಕೊಡಗು ಘಟಕದ ಕಾಯ೯ದಶಿ೯ ಬಾಲಾಜಿ ಕಶ್ಯಪ್ ತಿಳಿಸಿದ್ದಾರೆ .

Read More

ನಾಪೋಕ್ಲು ನ.2 :  ಮೈಸೂರಿನ ಕೊಡಗು ಗೌಡ ಸಮಾಜ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ  ಸಮಾಜದ ಸಾಂಸ್ಕೃತಿಕ ಸಭಾಂಗಣದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಗಣ್ಯರು ಹಾಗೂ ಸಮಾಜದ ಪ್ರಮುಖರು ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ತೋಟಂಬೈಲ್ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಮನೆತನ ಮತ್ತು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟದ ಸಂದರ್ಭ ಅವರನ್ನು ಅಮಾನವೀಯವಾಗಿ ಗಲ್ಲಿಗೇರಿಸಲ್ಪಟ್ಟ ಬಗ್ಗೆ ತಿಳಿಸಿದರು. ಮೈಸೂರು ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚ೦ಡೀರ ಬಸಪ್ಪ ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಪೂರ್ವ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟ ಮತ್ತು ಗಲ್ಲಿಗೆರಿಸಲ್ಪಟ್ಟ ಸನ್ನಿವೇಶವನ್ನು ಎಳೆಯಾಗಿ ಬಿಡಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷರಾದ ಕುಯ್ಯಮುಡಿ ರಾಮಪ್ಪ, ಕಾಯ೯ದಶಿ೯ ಕುಂಟಿಕಾನ ಗಣಪತಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕೊಡಗು ಗೌಡ ಮಾಜಿ…

Read More

ಮಡಿಕೇರಿ ನ.2 :  ಕನ್ನಡ ಸಾಹಿತ್ಯ ಪರಿಷತ್ತು ಕೊಡ್ಲಿಪೇಟೆ ಹೋಬಳಿ ಘಟಕ, ಕೊಡ್ಲಿಪೇಟೆ ವಿದ್ಯಾ ಸಂಸ್ಥೆಯ ಸಹಯೊಗದೊಂದಿಗೆ ಕರ್ನಾಟಕ ಸುವರ್ಣ  ಸಂಭ್ರಮ -50 ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು 5 ಕನ್ನಡ ಗೀತೆಗಳನ್ನು ಹಾಡಿ  ಗಮನ ಸೆಳೆದರು. ಕ. ಸಾ. ಪ. ಹೋಬಳಿ ಘಟಕದ ಅಧ್ಯಕ್ಷ ಬಿ.ಪಿ.ಶಾಂತಮಲ್ಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಸೋಮಶೇಖರಪ್ಪ, ಯೊಗೇಂದ್ರ, ಮುಖ್ಯ ಶಿಕ್ಷಕರರಾದ  ಅಬ್ದುಲ್ ರಬ್, ರಂಗಸ್ವಾಮಿ, ಮಂಜುನಾಥ್, ಕಿರಣಕುಮಾರ್,  ಕ.ಸಾ.ಪ. ಹೋಬಳಿ ಘಟಕದ  ಕಾರ್ಯದರ್ಶಿ ಶಾಂತಕುಮಾರ್, ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕರಾದ  ಯು.ಪಿ.ನಾಗೇಶ್  ಹಾಜರಿದ್ದರು.  ದೈಹಿಕ ಶಿಕ್ಷಕ ಸುನೀಲ್ ಸ್ವಾಗತಿಸಿದರು, ಉಪನ್ಯಾಸಕ  ಅಭಿಲಾಷ್  ವಂದಿಸಿದರು.

Read More

ಕುಶಾಲನಗರ  ನ.2 :   ಪ್ರತಿಯೊಬ್ಬ ಮನುಷ್ಯನ ಯಶಸ್ಸು, ಸುಖ, ಶಾಂತಿ ಹಾಗೂ ನೆಮ್ಮದಿಯುಕ್ತ ಬದುಕಿಗೆ ಪರಿಶುದ್ಧವಾದ ಹಾಗೂ ದೃಢವಾದ ಮನಸೇ ಮೂಲ ಕಾರಣ ಎಂದು ಹರಿಹರಪುರದ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮಿ ನರಸಿಂಹ ಪೀಠದ ಅಧ್ಯಕ್ಷ  ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಸ್ವಾಮೀಜಿ ಹೇಳಿದರು. ಕುಶಾಲನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶ್ರೀಮಠದ ವತಿಯಿಂದ  ಹಮ್ಮಿಕೊಂಡಿದ್ದ ಸಮಾನ ಸಂಸ್ಕಾರ ಕಾರ್ಯಾಗಾರದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಪ್ರತಿಯೊಬ್ಬ ಮನುಷ್ಯನಲ್ಲೂ ಮಾನವೀಯ ಮೌಲ್ಯಗಳು ತುಂಬಿದ ತ್ಯಾಗ ಹಾಗೂ ಸಮರ್ಪಣಾ ಮನೋಭಾವ ಅಭಿವ್ಯಕ್ತವಾಗಿರಬೇಕು. ಅಮೂಲ್ಯವಾದ ಮಾನವ ಜನ್ಮ ಹೊತ್ತು ಬಂದ ಪ್ರತಿಯೊಬ್ಬರು ಹುಟ್ಟುವಾಗಲೇ ದೇವ ಋಣ, ಋಷಿ ಋಣ, ಪಿತೃ ಋಣ, ಮನುಷ್ಯ ಋಣ ಹಾಗೂ ಭೂತ ಋಣ ಎಂಬ ಐದು ಅಂಶಗಳಿಗೆ ಅಬಾರಿಯಾಗಿರಬೇಕು ಎಂದು ಶ್ರೀಗಳು ಸವಿವರವಾಗಿ ಮಾಹಿತಿ ನೀಡಿದರು. ವಿಶ್ವ ಮಾನವ ಪ್ರೇಮ ಪರಸ್ಪರರಲ್ಲೂ ಅಭಿವ್ಯಕ್ತಗೊಂಡಲ್ಲಿ ಶ್ರೇಷ್ಠ ಸಮಾಜ ನಿರ್ಮಾಣ ಸಾಧ್ಯವಿದೆ ಎಂದ ಸ್ವಾಮೀಜಿ  ಶ್ರೀಗಳು ಕಾವೇರಿ ನದಿ ಹುಟ್ಟಿ ಹರಿದಿಹ…

Read More

ನಾಪೋಕ್ಲು ನ.2 :  ಮೈಸೂರಿನ ಕೊಡಗು ಗೌಡ ಸಮಾಜ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ  ಸಮಾಜದ ಸಾಂಸ್ಕೃತಿಕ ಸಭಾಂಗಣದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಗಣ್ಯರು ಹಾಗೂ ಸಮಾಜದ ಪ್ರಮುಖರು ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ತೋಟಂಬೈಲ್ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಮನೆತನ ಮತ್ತು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟದ ಸಂದರ್ಭ ಅವರನ್ನು ಅಮಾನವೀಯವಾಗಿ ಗಲ್ಲಿಗೇರಿಸಲ್ಪಟ್ಟ ಬಗ್ಗೆ ತಿಳಿಸಿದರು. ಮೈಸೂರು ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚ೦ಡೀರ ಬಸಪ್ಪ ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಪೂರ್ವ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟ ಮತ್ತು ಗಲ್ಲಿಗೆರಿಸಲ್ಪಟ್ಟ ಸನ್ನಿವೇಶವನ್ನು ಎಳೆಯಾಗಿ ಬಿಡಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷರಾದ ಕುಯ್ಯಮುಡಿ ರಾಮಪ್ಪ, ಕಾಯ೯ದಶಿ೯ ಕುಂಟಿಕಾನ ಗಣಪತಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕೊಡಗು ಗೌಡ ಮಾಜಿ…

Read More

ಮಡಿಕೇರಿ ನ.2 :  ಕೊಡಗು ಹಿತರಕ್ಷಣಾ ವೇದಿಕೆ ಹಾಗೂ  ಶಿವರಾಮೇ ಗೌಡರ ಕರ್ನಾಟಕ ರಕ್ಷಣಾ ವೇದಿಕೆ  ವತಿಯಿಂದ  ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ ಯು ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ನಡೆಯಿತು. ನಗರದ ಕೋಟೆ ಆವರಣದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಅವರ ಸ್ಮಾರಕಕ್ಕೆ  ವೇದಿಕೆ ಸದಸ್ಯರುಗಳು ಹಾಗೂ ಸಂಘಟನೆಯ ಅಧ್ಯಕ್ಷರುಗಳು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ. ಖಲೀಲ್ ಭಾಷಾ, ವಿಷ್ಣು ಸೇನೆ ಜಿಲ್ಲಾಧ್ಯಕ್ಷ ರಫೀಕ್( ದಾದಾ). ವೀರಭದ್ರ ಮುನೇಶ್ವರ ದೇವಾಲಯದ ಗೌರವಾಧ್ಯಕ್ಷ  ಪಿ.ಜಿ.ಮಂಜುನಾಥ್, ಫೀಲ್ಡ್ ಮಾರ್ಷಲ್  ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ಶಿವರಾಮೇ ಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರುಗಳಾದ ಜಿ.ಎನ್.ಪುನೀತ್   ಹಾಗೂ ಆದರ್ಶ್  ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.

Read More

ನಾಪೋಕ್ಲು ನ.2 : ಕರ್ನಾಟಕದ ಏಕೀಕರಣಕ್ಕಾಗಿ ಹಲವು ಗಣ್ಯರು ದುಡಿದಿದ್ದು, ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ನಿರ್ದೇಶಕ ಮಕ್ಕಿ ಸುಬ್ರಮಣ್ಯ ಹೇಳಿದರು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯ ಬೆಳವಣಿಗೆಗೆ ಹಲವು ಸಾಹಿತಿಗಳು ಶ್ರಮಿಸುತ್ತಿದ್ದು, ನಾಡು ಸಮೃದ್ದವಾಗಿದೆ ಎಂದರು. ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ, ಮೈಸೂರು ಪ್ರಾಂತ್ಯಕ್ಕೆ ಕರ್ನಾಟಕ ರಾಜ್ಯವೆಂದು 1973 ರಲ್ಲಿ ಮರುನಾಮಕರಣ ಮಾಡಲಾಯಿತು. ಅದರ ಸುವರ್ಣ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ ಎಂದು ದಿನದ ಮಹತ್ವದ ಬಗ್ಗೆ ಮಾತನಾಡಿದರು.. ಶಿಕ್ಷಕಿ ಸೀತಮ್ಮ ಹಾಗೂ ವಿದ್ಯಾರ್ಥಿಗಳು ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ವಹಿಸಿದ್ದ ಕಾರ್ಯಕ್ರಮದಲ್ಲಿ ನಿರ್ದೇಶಕರುಗಳಾದ ಬಿದ್ದಾಟoಡ ಪಾಪ ಮುದ್ದಯ್ಯ, ಬೊಳ್ಳಚೆಟ್ಟಿರ ಸುರೇಶ್, ಅಪ್ಪಾರಂಡ ಅಪ್ಪಯ್ಯ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ 14 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ…

Read More

ಮಡಿಕೇರಿ ನ.1 : ಭಾರತ ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿ ಮತ್ತು ಉಕ್ಕಿನ ಮಹಿಳೆ ಎಂದು ಹೆಸರಾಗಿದ್ದ ದಿ.ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ 39ನೇ ಪುಣ್ಯತಿಥಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭ ದೇಶದ ಗೃಹ ಸಚಿವರಾಗಿದ್ದ ಮತ್ತು 550 ಸಣ್ಣ ಸಣ್ಣ ರಾಜ್ಯಗಳನ್ನು ಒಗ್ಗೂಡಿಸಿ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾಗಿದ್ದ ಸರದಾರ್ ವಲ್ಲಭಾಯಿ ಪಟೇಲ್ ಅವರ 148ನೇ ಜನ್ಮದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ 186ನೇ ಪುಣ್ಯತಿಥಿಯನ್ನು ಆಚರಿಸಲಾಯಿತು. ದೇಶದ ಅಪ್ರತಿಮ ಮಹಿಳೆ ಎಸಿಕೊಂಡ ಹಾಗೂ ಸುಮಾರು 16 ವರ್ಷಗಳ ಕಾಲ ದೇಶವನ್ನು ಆಳಿದ ಇಂದಿರಾಗಾಂಧಿ ಅವರ ವ್ಯಕ್ತಿತ್ವ, ಸಾಧನೆ, ಹಿರಿಮೆ ಮತ್ತು ಬಡ ಹಾಗೂ ಶೋಷಿತ…

Read More

ಮಡಿಕೇರಿ ನ.1 : ಡಿವೈನ್ ಪಾರ್ಕ್ ಸಂಸ್ಥೆಯ ಅಂಗಸಂಸ್ಥೆಯಾದ ಮೂರ್ನಾಡು ವಿವೇಕ ಜಾಗೃತ ಬಳಗದ ವತಿಯಿಂದ ವಿವೇಕ ಸಂಪದ ಓದುಗರ ಸಮಾವೇಶ ನಡೆಯಿತು. ಸಿದ್ದಾಪುರದ ಕರಡಿಗೋಡು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದ ಡಿವೈನ್ ಪಾರ್ಕ್‍ನ ಅಧಿಕಾರಿ ಗುರುಪ್ರಸಾದ್ ಓದುಗರ ಸಮಾವೇಶದ ಕುರಿತು ವಿವರಿಸಿದರು. ವಿವೇಕವನ್ನೇ ಸಂಪದವಾಗಿಸಿಕೊಂಡಿರುವ ಪುಸ್ತಕ, ಸ್ವಾಮಿ ವಿವೇಕಾನಂದರ ಜಾಗೃತ ಚೇತನವೇ ಪುಸ್ತಕದ ಸಂಪಾದಕೀಯದ ಜವಾಬ್ದಾರಿ ಹೊತ್ತು ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಅನೇಕ ವಿಚಾರವನ್ನು ಹೊತ್ತ ಚಾತುರ್ಮಾಸಿಕ ಪತ್ರಿಕೆ. ಭಗವಂತನಿಗೆ ಮೊದಲ ಆದ್ಯತೆ ನೀಡಿದೆ. ಆದರೆ ಬದುಕು ಜಟಕಾಬಂಡಿಯಾಗದೆ, ಭಗವಂತನ ಕೃಪಾಬಂಡಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮೂರ್ನಾಡು ವಿವೇಕ ಜಾಗೃತ ಬಗಳಗದ ಅಧ್ಯಕ್ಷೆ ದಿವ್ಯ ತೇಜಕುಮಾರ್, ಉಪಾಧ್ಯಕ್ಷ ಯಶವಂತ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಶೃತಿ ಸ್ವಾಗತಿಸಿದರು. ಬಿ.ಜಿ.ಸೌಮ್ಯ ನಿರೂಪಿಸಿದರು. ಸಿ.ಜಿ.ಲೀಲಾವತಿ ವಂದಿಸಿದರು. ಸುಮಾರು ನೂರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Read More

ಮಡಿಕೇರಿ ನ.1 : ಕರ್ನಾಟಕದ ಜೀವನದಿ ಕಾವೇರಿ ಉಗಮತಾಣವಾದ ತಲಕಾವೇರಿಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಹಾಗು ಬೇಬಿಗ್ರಾಮ ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ಶ್ರೀ ಮ ನಿ ಪ್ರ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ 68 ನೇ ರಾಜ್ಯೋತ್ಸವ ಹಾಗೂ ಕರ್ನಾಟಕ ಎಂದು ನಾಮಕರಣ ಆಗಿ 50 ವರ್ಷ ಸಂದ ಪ್ರಯುಕ್ತ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ವಿಶೇಷವಾಗಿ ರಾಜ್ಯೋತ್ಸವವನ್ನು ಆಚರಿಸಿದರು. ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ನೂರಾರು ಭಕ್ತರಿಗೆ ಸಿಹಿ ವಿತರಿಸಿ ಕನ್ನಡವನ್ನು ಉಳಿಸಿ ಬೆಳಿಸಿ ಎಂದು ಕಿವಿಮಾತನ್ನು ಉಭಯ ಶ್ರೀಗಳು ಹೇಳಿದರು. ಈ ಸಂದರ್ಭ ಮಾತನಾಡಿದ ಬೇಬಿ ಗ್ರಾಮ ಚಂದ್ರವನ ಆಶ್ರಮದ ಶ್ರೀ ಮ ನಿ ಪ್ರ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ, ಕನ್ನಡ ಉಳಿಯಬೇಕು ಬೆಳೆಯಬೇಕು ಎಂದರೆ ನಾವೆಲ್ಲರೂ ಕೂಡಾ ಒಮ್ಮನಸ್ಸಿನಿಂದ ಒಟ್ಟಾರೆಯಾಗಿ ಇರಬೇಕು. ಇವತ್ತು ಕನ್ನಡನಾಡಿನ ಗಡಿ ಸಮಸ್ಯೆ , ಜಲ ಸಮಸ್ಯೆ ಈ ಎಲ್ಲಾ ಸಮಸ್ಯೆಗಳಿಗೆ…

Read More