ಲೇಖಕ: admin

ಮಡಿಕೇರಿ, NEWS DESK ಮಾ.25:-ಇದೇ ಏಪ್ರಿಲ್, 05 ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು. ಏಪ್ರಿಲ್, 14 ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿಭವನದ ವರೆಗೆ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ…

Read More

ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ 22 ರವರೆಗೆ ವಾರ್ಷಿಕ ಬೇಸಿಗೆ ಶಿಬಿರ ‘ಸಮಾಗಮ 2026’ ಆಯೋಜಿತವಾಗಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕೊಡಗು ವಿದ್ಯಾಲಯದ ಬೇಸಿಗೆ ಶಿಬಿರದ ಸಂಯೋಜಕಿಯರಾದ ಬಿಂದು ಮತ್ತು ಅಂಜನಾ, ಈ ಶಿಬಿರವು ಮಕ್ಕಳಿಗೆ ಪಠ್ಯೇತರ ಜ್ಞಾನ, ಆನಂದ ಮತ್ತು ಅರ್ಥಪೂರ್ಣ ಕಲಿಕೆಯ ಅನುಭವವನ್ನು ಒದಗಿಸುವ ಉದ್ದೇಶದಿಂದ ವಿಶೇಷವಾಗಿ ರೂಪಿಸಲಾಗಿದೆ. ಈ ಶಿಬಿರದ ಮೂಲಕ ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನ್ವೇಷಿಸಿ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳುವ ಜೊತೆಗೆ ಸೃಜನಶೀಲತೆ, ಶಿಸ್ತನ್ನು ಅಭಿವೃದ್ಧಿಪಡಿಸಿಕೊಳ್ಳಲಿದ್ದಾರೆ. ದೈಹಿಕ ಕ್ಷಮತೆ, ಏಕಾಗ್ರತೆ ಮತ್ತು ಸಾಮಾಜಿಕ ಕೌಶಲ್ಯಗಳ ಬೆಳವಣಿಗೆಗೂ ಇದು ನೆರವಾಗಲಿದೆ ಎಂದು ತಿಳಿಸಿದರು.. ಮಕ್ಕಳ ಬೇಸಿಗೆ ರಜೆಯನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ, ಪ್ರತಿದಿನ ಬೆಳಗ್ಗೆ 6:30 ರಿಂದ ಸಂಜೆ 6:00 ರವರೆಗೆ ರಚನಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಸುಮಾರು 25 ವರ್ಷಗಳ ಪರಂಪರೆಯನ್ನು ಹೊಂದಿರುವ ಈ ಕ್ರೀಡಾ ಶಿಬಿರವು ಪ್ರತಿವರ್ಷ ಯಶಸ್ವಿಯಾಗಿ ನಡೆಯುತ್ತಿದ್ದು, 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದೂ ಉಪನ್ಯಾಸಕಿಯರು ಮಾಹಿತಿ ನೀಡಿದರು.…

Read More

ಮಡಿಕೇರಿ, NEWS DESK ಮಾರ್ಚ್ 25: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜಿನಲ್ಲಿ 6ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು 4ನೇ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆಶಿತಾ ರವರ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ನಂತರ ಗಣ್ಯ ಅತಿಥಿಗಳ ಸಾನಿಧ್ಯದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನಡೆಯಿತು. ಡೀನ್ ಹಾಗೂ ನಿರ್ದೇಶಕರಾದ ಡಾ. ಲೋಕೆಶ್ ಎ.ಜೆ ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು ಸರ್ಕಾರಿ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಂಜುಳ ಎ.ಕೆ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾ ವಿಧಿ ನರ್ಸಿಂಗ್ ವೃತ್ತಿಯ ಪವಿತ್ರ ಸಾಂಪ್ರದಾಯಿಕ ಆಚರಣೆ ಎಂದು ವಿವರಿಸಿ, ವಿದ್ಯಾರ್ಥಿಗಳು ಸೇವಾಭಾವನೆ ಮತ್ತು ಶಿಸ್ತಿನಿಂದ ವೃತ್ತಿಯನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ದೀಪ ಹಚ್ಚಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸಹ ಪ್ರಾಧ್ಯಾಪಕರಾದ ಗುರುಪಾದ ಕೆ.ಪಿ ಅವರು ಕಾಲೇಜಿನ…

Read More

ಮಡಿಕೇರಿ ಮಾ.25 NEWS DESK : ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ 10ನೇ ತರಗತಿ ಪರೀಕ್ಷೆ ಬರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ದಿನವಾದ ಭಾನುವಾರ ಖಾಸಗಿ ಹೊಟೇಲ್‍ನಲ್ಲಿ ಪ್ರವೇಶ ಪತ್ರ ನೀಡಿರುವುದು ನಿಯಮಬಾಹಿರ ಕ್ರಮವಾಗಿದ್ದು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಎ.ಕಿಶೋರ್ ಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ದಿನಾಂಕ 22-03-2026 ರ ಭಾನುವಾರ ರಜೆ ದಿನ ಶಾಸಕರ ಸಮ್ಮುಖದಲ್ಲಿ ಖಾಸಾಗಿ ಹೊಟೇಲ್‍ನಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡಿರುವುದು ಎಷ್ಟು ಸರಿ. ಶಾಸಕರು ಅಧಿಕಾರಿಯನ್ನು ಹಿಡಿತದಲ್ಲಿಟ್ಟುಕೊಂಡು ಕೆಲಸ ಮಾಡಿಸುವ ಬದಲು ಪ್ರವೇಶ ಪತ್ರ ನೀಡುವ ಅಗತ್ಯವೇನಿತ್ತು, ಶಾಸಕರೇ ಪ್ರವೇಶ ಪತ್ರ ನೀಡುವುದಾದರೆ ಸ್ಥಳೀಯ ಉಪನಿರ್ದೆಶಕರು, ಕ್ಷೇತ್ರ ಶಿಕ್ಷಣಾದಿಕಾರಿಗಳ ಕರ್ತವ್ಯ ಏನು ಎಂದು ಪ್ರಶ್ನಿಸಿದ್ದಾರೆ. ಬೇಜವಾಬ್ದಾರಿ ವರ್ತನೆ ತೋರಿದ…

Read More

ಮಡಿಕೇರಿ NEWS DESK ಮಾ.25 : ಸೋಮವಾರಪೇಟೆಯ ಸಾಮಾಜಿಕ ಹೋರಾಟಗಾರ್ತಿ ಡಾ.ಕಾವೇರಿ ಹೆಚ್.ಎಂ ಅವರು ದಕ್ಷಿಣ ಏಷ್ಯಾ ದೇಶಗಳ ಆದಿವಾಸಿಗಳ ಪಾರಂಪರಿಕ ಜ್ಞಾನ, ಗ್ರಾಮೀಣ ನಾಯಕತ್ವ ಮತ್ತು ಗ್ರಾಮೀಣ ಅಭಿವೃದ್ಧಿ ಕುರಿತು ಜಪಾನ್ ದೇಶದಲ್ಲಿ ನಡೆಯುತ್ತಿರುವ ತರಬೇತಿ ಹಾಗೂ ಅಧ್ಯಯನ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ. ಇದು 9 ತಿಂಗಳ ಕಾರ್ಯಕ್ರಮವಾಗಿದ್ದು, ಈ ತರಬೇತಿ ಮೂಲಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಾರಂಪರಿಕ ಜ್ಞಾನ ವ್ಯವಸ್ಥೆಗಳ ಬಗ್ಗೆ ಜಾಗತಿಕ ಅನುಭವವನ್ನು ಪಡೆಯುವ ಅವಕಾಶ ದೊರೆಯಲಿದೆ. ಡಾ.ಕಾವೇರಿ ಹೆಚ್.ಎಂ ಅವರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಶುಭ ಹಾರೈಸಿದ್ದಾರೆ.

Read More

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹೊವಯ್ಯ ಹಾನಗಲ್ ಅವರು ಇಂದು ಬೆಳಿಗ್ಗೆ ನಿಧನರಾದರು. ಇವರು ಪತ್ರಕರ್ತ ಜಯಪ್ಪ ಹಾನಗಲ್ ಅವರ ಸಹೋದರ.

Read More

ಮಡಿಕೇರಿ NEWS DESK ಮಾ.25 : ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ ಕಾರಣಕ್ಕೆ ತಿರಸ್ಕೃತ ಗೊಂಡು ನಿರಾಶೆ ಹೊಂದಿದ ನಗರ ಪ್ರದೇಶದ ಸುಮಾರು 1500 ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನ್ಯಾಯ ದೊರಕಿಸುವ ಪ್ರಯತ್ನಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಪ್ರಾಮಾಣಿಕ ಪ್ರಯತ್ನಪಟ್ಟಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2015 ರಿಂದ 2022 ರ ವರೆಗೆ  94 ಸಿ.ಸಿ. ಅಡಿಯಲ್ಲಿ 1500 ಕ್ಕೂ ಹೆಚ್ಚು ಜನರು ಮತ್ತು 94 ಸಿ ಅಡಿ 11 ಸಾವಿರಕ್ಕೂ ಹೆಚ್ಚು ಜನರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿತವಾಗಿದ್ದವು.ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಬಳಿ ಶಾಸಕ ಡಾ ಮಂತರ್ ಗೌಡ ತೆರಳಿದ ಸಂಧರ್ಭದಲ್ಲಿ ಬಹಳಷ್ಟು ಜನರು ನ್ಯಾಯ ಒದಗಿಸುವಂತೆ ಶಾಸಕರಲ್ಲಿ ಮನವಿ ಸಲ್ಲಿಸಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಾ ಮಂತರ್ ಗೌಡ ಸದನದಲ್ಲಿ ಈ ವಿಚಾರದ ಪ್ರಸ್ತಾವನೆಯನ್ನು…

Read More

ಮಡಿಕೇರಿ ಮಾ.24 NEWS DESK : ಅಂಬಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನ ಸಂಘ ಹಾಗೂ ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮರಾಟಿ ಪ್ರೀಮಿಯರ್ ಲೀಗ್-2ರ ಕ್ರಿಕೆಟ್ ಪಂದ್ಯಾಟದಲ್ಲಿ ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.  ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಗೂಗ್ಲಿಬಾಯ್ಸ್ ತಂಡ ನಿಗದಿತ 4 ಓವರ್‍ನಲ್ಲಿ 4 ವಿಕೆಟ್ ಕಳೆದುಕೊಂಡು 35 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ಅಂಚಿ ಕ್ರಿಕೆಟರ್ಸ್ ತಂಡ 4 ವಿಕೆಟ್ ಕಳೆದುಕೊಂಡು 18ರನ್ ಅಷ್ಟೇ ಗಳಿಸಲಷ್ಟೆ ಶಕ್ತವಾಗಿ 17ರನ್‍ಗಳ ಅಂತರದಲ್ಲಿ ಸೋಲುಂಡಿತ್ತು. ಪರಿಣಾಮ ಗೂಗ್ಲಿಬಾಯ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಅಂಚಿ ಕ್ರಿಕೆಟರ್ಸ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಸೋತ ಮರಾಟಿ ರಾಯಲ್ಸ್ ಕೊಡಗು ತಂಡ ನಿಗದಿತ 4 ಓವರ್‍ನಲ್ಲಿ 5 ವಿಕೆಟ್ ಕಳೆದುಕೊಂಡು 46 ಕಲೆ…

Read More

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ವಿಶ್ವ ಕ್ಷಯರೋಗ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಂದಿನ ಒಂದು ವರ್ಷದಲ್ಲಿ ಒಂದು ಲಕ್ಷ ಜನರಿಗೆ ನಲ್ವತ್ತಕ್ಕಿಂತ ಕಡಿಮೆ ಕ್ಷಯ ರೋಗಿಗಳು ಕಂಡುಬರಲಿದ್ದು, ಸಂಪೂರ್ಣವಾಗಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಅವರು ಕೋರಿದರು. ಕ್ಷಯರೋಗವನ್ನು ತಡೆಯುವಲ್ಲಿ 6 ರಿಂದ 7 ಲಕ್ಷ ರೂ. ವರೆಗೆ ಒಬ್ಬ ರೋಗಿಗೆ ಸರ್ಕಾರ ಭರಿಸಿ ಅತ್ಯುತ್ತಮ ಚಿಕಿತ್ಸೆ ನೀಡಲಿದೆ ಎಂದು ಡಾ.ಸನತ್ ಕುಮಾರ್ ಅವರು ಹೇಳಿದರು. ಮುಂದಿನ ಪೀಳಿಗೆ ಕ್ಷಯ ರೋಗದಿಂದ ಬಳಲಬಾರದು,…

Read More