ಕುಶಾಲನಗರ ನ.28 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ನಮ್ಮ ಕ್ಲಿನಿಕ್’ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಪಡಿಸಿಕೊಳ್ಳುವಂತೆ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ನಗರದ ಬಿ.ಎಂ. ರಸ್ತೆಯಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಕ್ಲಿನಿಕ್ ಆರಂಭಿಸಿರುವ ಕಾರಣ ಸಮುದಾಯ ಆರೋಗ್ಯ ಕೇಂದ್ರದ ಒತ್ತಡ ನಿವಾರಣೆಯಾಗಲಿದೆ. ಕ್ಲಿನಿಕ್‍ನಲ್ಲಿ ನುರಿತ ವೈದ್ಯ, ತಾಂತ್ರಿಕ ಸಿಬ್ಬಂದಿಗಳು ಲಭ್ಯವಿದ್ದು, ಡೇ ಕ್ಲಿನಿಕ್ ಮಾದರಿಯ ಸೌಲಭ್ಯವನ್ನು ಸಾರ್ವಜನಿಕರು ಬೆಳಗ್ಗೆ 9.30 ರಿಂದ ಸಂಜೆ 4.30 ರ ತನಕ ಪಡೆದುಕೊಳ್ಳುವ ಅವಕಾಶವಿದೆ ಎಂದರು. ಗರ್ಭಿಣಿಯರು, ನವಜಾತಶಿಶುಗಳ ಆರೈಕೆ ಸೇರಿದಂತೆ ಹೊರರೋಗಿಗಳ ರಕ್ತ ಪರೀಕ್ಷೆ, ಚುಚ್ಚುಮದ್ದು, ವಾಕ್ಸಿನೇಷನ್ ಪಡೆದುಕೊಳ್ಳಲು ಇಲ್ಲಿ ಅನುಕೂಲ ಕಲ್ಪಿಸಲಾಗಿದೆ ಎಂದರು. ವಿವಿಧ ಮಾದರಿಯ ಪರೀಕ್ಷೆಗಳನ್ನು ಖಾಸಗಿ ಲ್ಯಾಬ್‍ಗಳಿಗೆ ಸೂಚಿಸುವ ಬದಲಾಗಿ, ಆದಷ್ಟು ಎಲ್ಲಾ ಪರೀಕ್ಷೆಗಳನ್ನು ಇಲ್ಲಿಯೇ ಮಾಡಲು ಆರೋಗ್ಯಾಧಿಕಾರಿಗಳಿಗೆ ತಿಳಿಸಿ, ಮಡಿಕೇರಿಯಲ್ಲಿ ಕೂಡ ನಮ್ಮ ಕ್ಲಿನಿಕ್ ಸ್ಥಾಪನೆಗೆ ಕ್ರಮವಹಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಆರೋಗ್ಯ ಮತ್ತು…
ಲೇಖಕ: admin
ಸೋಮವಾರಪೇಟೆ ನ.28 : ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಸಮೀಪದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಮಕ್ಕಳ ಗುಡಿ ಬೆಟ್ಟಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು. ನೈಸರ್ಗಿಕ ಪ್ರಕೃತಿ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡ ಶಾಸಕರು, ಸ್ಥಳೀಯರಿಂದ ಅಲ್ಲಿನ ಮಾಹಿತಿ ಪಡೆದುಕೊಂಡರು. ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೆ ಅಭಿವೃದ್ಧಿ ವಂಚಿತವಾಗಿರುವ ಈ ಪ್ರದೇಶಕ್ಕೆ ತುರ್ತಾಗಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು. ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ಉತ್ತಮ ಅವಕಾಶ ಇಲ್ಲಿ ಇದ್ದು, ವಿಶೇಷ ಗಮನ ಹರಿಸಿ ಮಕ್ಕಳ ಗುಡಿ ಬೆಟ್ಟದ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸುವುದಾಗಿ ಹೇಳಿದರು. ಈ ಸಂದರ್ಭ ಗ್ರಾಮದ ಹಿರಿಯರಾದ ಎಸ್.ಎಂ.ಚಂಗಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.
ವಿರಾಜಪೇಟೆ ನ.28 : ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಮೊದಲಿಗೆ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ನೆರೆ ಕಟ್ಟಿ ದೇವಸ್ಥಾನದ ಜಾಗದಲ್ಲಿಯೆ ನೆಡಲಾಗಿದ್ದ ಭತ್ತದ ಕದಿರುವಿಗೆ ಪೂಜಿಸಿ ಹಾಲಿನ ಅಭಿಷೇಕ ಮಾಡಿ ಕದಿರನ್ನು ತೆಗೆಯಲಾಯಿತು. ನಂತರ ದೇವಸ್ಥಾನದ ಆವರಣದಲ್ಲಿ ಹೊಸ ಭತ್ತಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ನಮಿಸಿ ಮಹಾ ಮಂಗಳಾರತಿಯನ್ನು ಬೆಳಗಲಾಯಿತು. ಕದಿರನ್ನು ವಿಶೇಷ ಎಲೆಗಳು ಹಾಗೂ ಬಳ್ಳಿಯಿಂದ ಕಟ್ಟಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಪುತ್ತರಿ ಹಬ್ಬದ ವಿಶೇಷ ಖಾದ್ಯ ತಂಬಿಟ್ಟು ವಿತರಣೆ ಮಾಡಲಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ನ.28 : ದೇಶರಕ್ಷಣೆಯಲ್ಲಿ ಸೈನಿಕರ ಪಾತ್ರ ಎಷ್ಟು ಮುಖ್ಯವೋ, ರೋಗಿಗಳ ರಕ್ಷಣೆಯಲ್ಲಿ ಶುಶ್ರೂಷಕರ ಪಾತ್ರ ಹೆಚ್ಚಿದೆ. ಮಾನಸಿಕ ಶಕ್ತಿ, ಯೋಗ, ಧ್ಯಾನವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಸಲಹೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ “ಐಕ್ಯಂ” 2023-24 ಎಂಬ ಶಿರ್ಷಿಕೆಯಲ್ಲಿ ಕಾಲೇಜಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜು ಇರುವುದು ಹೆಮ್ಮೆಯ ವಿಷಯ. ವೈದ್ಯಕೀಯ ಕಾಲೇಜಿನಲ್ಲಿ ಪ್ರಾರಂಭಿಸಿ ಪ್ರಸ್ತುತ 400 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಮಡಿಕೇರಿಯಲ್ಲಿ ಸರ್ಕಾರಿ ಜಾಗದ ಸಮಸ್ಯೆ ಇದ್ದು, ಆದಾಗ್ಯೂ ಜನಪ್ರತಿನಿಧಿಗಳ ಮೂಲಕ ನರ್ಸಿಂಗ್ ಕಾಲೇಜಿಗೆ ಅವಶ್ಯವಿರುವ ಜಾಗವನ್ನು ಮಂಜೂರು ಮಾಡಲು ಪ್ರಯ್ನತಿಸುವುದಾಗಿ ಭರವಸೆ ನೀಡಿದರು. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡಲು ಲಕ್ಷಾಂತರ ರೂಪಾಯಿ ಇದ್ದು, ಸರ್ಕಾರಿ ಕಾಲೇಜಿನಲ್ಲಿ ಅತೀ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಿರಿ, ಕೊರೋನ ಸಮಯದಲ್ಲಿ ಶುಶ್ರೂಷಕರು ಮನೆ, ಮಕ್ಕಳನ್ನು…
ಕುಶಾಲನಗರ ನ.28 : ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಸಾಂಪ್ರದಾಯಿಕ ಪುತ್ತರಿ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕುಶಾಲನಗರ ಕೊಡವ ಸಮಾಜದ ಆವರಣದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ ಸಮುದಾಯ ಬಾಂಧವರು ಮತ್ತು ಸಾರ್ವಜನಿಕರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಬಲ್ಲಾರಂಡ ಜಾಲಿ ತಮ್ಮಯ್ಯ ಅವರು ಗುತ್ತಿ ಪೂಜೆ ನೆರವೇರಿಸಿ ಆವರಣದ ಗದ್ದೆಗೆ ತೆರಳಿ ಸಾಂಪ್ರದಾಯಿಕವಾಗಿ ಕದಿರು ತೆಗೆದರು. ನಂತರ ಸಮಾಜಕ್ಕೆ ಬಂದು ಕದಿರು ವಿತರಣೆ ನಡೆಯಿತು. ಈ ಸಂದರ್ಭ ಸಮಾಜದ ಉಪಾಧ್ಯಕ್ಷ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ವಾಂಚೀರ ಮನು ನಂಜುಂಡ, ಖಜಾಂಚಿ ಬಲ್ಯಾಟಂಡ ಚಿಂಗಪ್ಪ, ಆಡಳಿತ ಮಂಡಳಿ ನಿರ್ದೇಶಕರು ಸದಸ್ಯರು ಸಾರ್ವಜನಿಕರು ಇದ್ದರು.
ಕುಶಾಲನಗರ ನ.28 : ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಪುತ್ತರಿ (ಹುತ್ತರಿ) ಹಬ್ಬ ಆಚರಣೆ ಸಾಂಪ್ರದಾಯಿಕವಾಗಿ ನಡೆಯಿತು. ಕುಶಾಲನಗರ ಗೌಡ ಸಮಾಜ ಮತ್ತು ಸಹ ಸಂಘಟನೆಗಳಾದ ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದಲ್ಲಿ ಸೇರಿ ಸಾಂಪ್ರದಾಯಿಕ ಕಾರ್ಯಗಳ ನಂತರ ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಸಮೀಪದ ಹಾರಂಗಿ ರಸ್ತೆಯ ಗೌಡ ಯುವಕ ಸಂಘದ ಗದ್ದೆಯಲ್ಲಿ ಕದಿರು ತೆಗೆಯಲಾಯಿತು. ಸಮಾಜದ ಉಪಾಧ್ಯಕ್ಷರಾದ ಕುಲಚೆಟ್ಟಿ ಕಾಶಿ ಪೂವಯ್ಯ ಅವರು ಗದ್ದೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಸಮಾಜ ಬಾಂಧವರಿಗೆ ಹಾಗೂ ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು. ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಉಪಾಧ್ಯಕ್ಷರಾದ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲಚನ ಹೇಮಂತ್, ಬಲ್ಲಡ್ಕ ವಿಜಯ್ ಕುಮಾರ್,, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ,…
ಮಡಿಕೇರಿ ನ.28 : ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ “ತೆಪ್ಪೋತ್ಸವ, ಪಲ್ಲಕಿ ಉತ್ಸವ ಹಾಗೂ ದಟ್ಟೋತ್ಸವ” ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಪುಷ್ಪಾಲಂಕೃತ ತೆಪ್ಪದ ಮೇಲೆ ಬೆಳ್ಳಿ ಮೂರ್ತಿಯನ್ನು ಕೂರಿಸಿ ತೆಪ್ಪೋತ್ಸವ ಮಾಡಲಾಯಿತು. ಇದಕ್ಕೂ ಮೊದಲು ದೇವಾಲಯದಲ್ಲಿ ವಿವಿಧ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ಪಲ್ಲಕ್ಕಿಯಲ್ಲಿ ಕೂರಿಸಿ ದೇವಾಲಯದ ಆವರಣದಲ್ಲೇ ಪಲ್ಲಕ್ಕಿ ಉತ್ಸವ ಮಾಡಲಾಯಿತು. ನಂತರ ಅದೇ ಪಲ್ಲಕ್ಕಿಯಲ್ಲಿ ಈಶ್ವರನ್ನು ಕರೆತಂದು ತೆಪ್ಪದಲ್ಲಿ ಕೂರಿಸಿ ಕಲ್ಯಾಣಿಯಲ್ಲಿ ಉತ್ಸವ ಮಾಡಲಾಯಿತು. ಬೃಹತ್ ಕಲ್ಯಾಣಿಯಲ್ಲಿ ಮೂರು ಸುತ್ತು ತೆಪ್ಪೋತ್ಸವ ಮಾಡಲಾಯಿತು. ವರ್ಷಕ್ಕೊಮ್ಮೆ ನಡೆಯುವ ಈ ತೆಪ್ಪೋತ್ಸವಕ್ಕೆ ನೂರಾರು ಭಕ್ತರು ಆಗಮಿಸಿ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು.
ಮಡಿಕೇರಿ ನ.28 : ಕೊಡಗಿನ ಸಾಂಪ್ರದಾಯಿಕ ಹಬ್ಬಗಳಲ್ಲೊಂದಾದ ಪುತ್ತರಿ ಹಬ್ಬವನ್ನು ಮನೆಗೆ ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಳ್ಳುವ ಮೂಲಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ನಿಗದಿತ ಸಮಯದಲ್ಲಿ ನೆರೆಕಟ್ಟಿ, ಕದಿರು ತೆಗೆದು ಪುತ್ತರಿ ಹಬ್ಬವನ್ನು ಸಂಭ್ರಮಿಸಿದರು. ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಕದಿರು (ಪೈರು) ಕೊಯ್ಯುವ ಮೂಲಕ ಪುತ್ತರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ನೆರೆ ಕಟ್ಟುವ ಸಂಪ್ರದಾಯವನ್ನು ಅರ್ಚಕರು ಹಾಗೂ ತಕ್ಕ ಮುಖ್ಯಸ್ಥರು ನೆರವೇರಿಸಿದರು. ದೇವಾಲಯ ಆವರಣದ ಗದ್ದೆಯಲ್ಲಿ ಕದಿರು ಕೊಯ್ದು ಹಬ್ಬದ ವಿಧಿ ವಿಧಾನ ನಡೆಸಲಾಯಿತು. ನಗರದ ಐತಿಹಾಸಿಕ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಕೊಡವ ಸಮಾಜದ ವತಿಯಿಂದ ದೇವಾಲಯದ ಗದ್ದೆಯಲ್ಲಿ ಭತ್ತದ ಕದಿರಿಗೆ ಪೂಜೆ ಸಲ್ಲಿಸಿ ಕದಿರು ಕೊಯ್ದು ವಿಶೇಷ ಪೂಜೆ ಸಲ್ಲಿಸಿ ನೆರದಿದ್ದವರಿಗೆ ಕದಿರು (ಪೈರು) ವಿತರಿಸಲಾಯಿತು.
ಮಡಿಕೇರಿ ನ.28 : ಧಾನ್ಯಲಕ್ಷ್ಮಿಯನ್ನು ಮನೆ ತುಂಬುವ ಕೊಡಗಿನ ವಿಶೇಷ ಹಬ್ಬವಾದ ಪುತ್ತರಿ ಹಬ್ಬವನ್ನು ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಗದ್ದೆಯಿಂದ ತಂದ ಕದಿರಿಗೆ ಹಾಗೂದೇವರಿಗೆ ಪೂಜೆ ಸಲ್ಲಿಸಿ, ನೆರದಿದ್ದವರಿಗೆ ಪ್ರಸಾದ ವಿತರಿಸಲಾಯಿತು. ನಂತರ ಸ್ಥಳೀಯರು ಸುತ್ತಮುತ್ತಲಿನ ಗ್ರಾಮಸ್ಥರು ಶ್ರೀ ಗೌರಿಶಂಕರ ಸನ್ನಿಧಿಯಲ್ಲಿ ನಡೆದ ಪುತ್ತರಿ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಹಬ್ಬದ ಆಚರಣೆಯ ನಂತರ ದೇವಾಲಯದ ಆವರಣದ ಸ್ವಚ್ಛತಾ ಕಾರ್ಯ ನಡೆಯಿತು.
ಮಡಿಕೇರಿ ನ.27 : ದಕ್ಷಿಣ ಕೊಡಗಿನ ಹಳ್ಳಿಗಟ್ಟು ಶ್ರೀಭದ್ರಕಾಳಿ ದೇವಾಲಯದಲ್ಲಿ ಪುತ್ತರಿ ಹಬ್ಬವನ್ನು ಶ್ರದ್ಧಾಭಕ್ತಿ, ಸಂಭ್ರಮದಿಂದ ಆಚರಿಸಲಾಯಿತು. ಗದ್ದೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕದಿರನ್ನು ದೇವಾಲಯಕ್ಕೆ ತರಲಾಯಿತು. ಪೂಜೆಯ ನಂತರ ಭಕ್ತರಿಗೆ ವಿತರಿಸಲಾಯಿತು. ದೇವಾಲಯದಲ್ಲಿ ಪೂಜೆಯಾದ ನಂತರ ಗ್ರಾಮದ ವಿವಿಧ ಭಾಗದಲ್ಲಿ ಕದಿರು ಕೊಯ್ದು ಪುತ್ತರಿ ಆಚರಿಸಲಾಯಿತು.






