ಲೇಖಕ: admin

ಮಡಿಕೇರಿ ಜ.3 : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಆಯೋಗ ರಚಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜ.5 ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೊಸ ವರ್ಷದಲ್ಲಿ ಮತ್ತೆ ಕೊಡವ ಲ್ಯಾಂಡ್ ಹೋರಾಟವನ್ನು ತೀವ್ರಗೊಳಿಸಲಿದ್ದು, ಶುಕ್ರವಾರ ಬೆಳಗ್ಗೆ 10.30 ಗಂಟೆಯಿಂದ 11.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಸಲ್ಲಿಸುವುದಾಗಿ ಹೇಳಿದ್ದಾರೆ. ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಯ್ಲೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್‍ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕು. ಈ ಕುರಿತು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಿಎನ್‍ಸಿ ಪರ ಕಾನೂನು ಹೋರಾಟ ಮಾಡುತ್ತಿದ್ದಾರೆ. ಸರ್ಕಾರಗಳು ಈ…

Read More

ಮಡಿಕೇರಿ ಜ.3 : ಕಾಡಾನೆ ದಾಳಿಯಿಂದ ಗಾಂಭೀರವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಮಹಿಳೆಯ ಆರೋಗ್ಯವನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿಚಾರಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಪೊನ್ನಣ್ಣ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಹಾಗೂ ಗಾಯಾಳು ಪಲ್ಲವಿ ಪತಿಯಿಂದ ಘಟನೆಯ ಕುರಿತು ಮಾಹಿತಿ‌ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು. ಉನ್ನತ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು. ಈ ಸಂದರ್ಭ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಹಾಜರಿದ್ದರು.

Read More

ನಾಪೋಕ್ಲು ಜ.3 : ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳಬೇಕು. ಕಳಪೆ ಕಾಮಗಾರಿ ಆಗಿದೆ ಎಂದು ಪ್ರತಿಷ್ಠೆ, ಪ್ರಚಾರಕ್ಕಾಗಿ ತಪ್ಪು ಸಂದೇಶ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಚೆರಿಯಪರಂಬು- ಕಲ್ಲುಮೊಟ್ಟೆ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಅವಧಿಯಲ್ಲಿ ರಸ್ತೆ ಕಾಮಗಾರಿ ಕಳಪೆ ಆಗಲು ಬಿಡುವುದಿಲ್ಲ. ಗ್ರಾಮಸ್ಥರಿಗೆ ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ಅಧಿಕಾರ ಇದೆ. ಕಾಮಗಾರಿ ಕಳಪೆ ಆಗಿದ್ದರೆ ಇಲಾಖೆಯ ಇಂಜಿನಿಯರ್‍ಗಳು ಪರಿಶೀಲಿಸಿ ಮಾಹಿತಿ ನೀಡುತ್ತಾರೆ. ಏನೇ ಸಂಶಯಗಳಿದ್ದರು ನನ್ನ ಗಮನಕ್ಕೆ ತನ್ನಿ ಎಂದು ಹೇಳಿದರು. ಈ ಸಂದರ್ಭ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಶ ಕುಶಾಲಪ್ಪ, ಕಾಂಗ್ರೆಸ್ ಬ್ಲಾಕ್ ಯೂತ್ ಅಧ್ಯಕ್ಷ…

Read More

ಮಡಿಕೇರಿ ಜ.3  : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಾಗೂ  ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನವೋದಯ ವಿದ್ಯಾಲಯದಲ್ಲಿ ನಡೆದ  2023-24 ನೇ ಸಾಲಿನ ರಾಜ್ಯ ಮಟ್ಟದ ವಿಜ್ಞಾನ ‌ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ  ಗೋಣಿಕೊಪ್ಪಲಿನ‌ ಕಳತ್ಮಾಡು ಲಯನ್ಸ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗರಿ ವಿದ್ಯಾರ್ಥಿ ಡೆರಿನ್ ಬ್ರೌನ್ ಸೈಮನ್,  ‌9ನೇ ತರಗತಿ ವಿದ್ಯಾರ್ಥಿ ಶ್ವೇತನ್ ಜಿ.ರೈ ಭಾಗವಹಿಸಿ, ಜ.27 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ‌ ಎಂದು ಲಯನ್ಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. 

Read More

ಮಡಿಕೇರಿ ಜ.3 : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಅವರು ಆಸ್ಪತ್ರೆಗೆ ತೆರಳಿ ಮಹಿಳೆಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಕಾಡಾನೆಗಳ ದಾಳಿ ತಡೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚರ್ಚಿಸಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು.

Read More

ವಿರಾಜಪೇಟೆ ಜ.3 : ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣವು ಕೇವಲ ತರಗತಿಯ ನಾಲ್ಕು ಗೋಡೆಗೆ, ಸೀಮಿತವಾಗದೆ ಬದುಕಿನ ಎಲ್ಲಾ ಆಯಾಮದ ಕ್ಷೇತ್ರಗಳಲ್ಲಿ ಶಿಕ್ಷಣ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಬದುಕಿನ ಶಿಕ್ಷಣ ನೀಡುವುದರಲ್ಲಿ ಎಸ್.ಎಂ.ಎಸ್. ಶಾಲೆ ಯಶಸ್ಸನ್ನು ಕಂಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ’ಏಕ ಭಾರತ ಶ್ರೇಷ್ಠ ಭಾರತ’ ಎಂಬ ದ್ಯೇಯವಾಕ್ಯದಡಿಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣವಿಲ್ಲದೆ ನಾವು ಯಶಸ್ವಿಯಾಗಲು ಸಾಧ್ಯವಿಲ್ಲ. ಜ್ಞಾನವು ನಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ನೀವು ಉತ್ತಮ ಶಿಕ್ಷಣವನ್ನು ಹೊಂದಿದ್ದರೆ, ಜೀವನದಲ್ಲಿ ಹೆಚ್ಚು ಯಶಸ್ವಿಯಾಗುತ್ತೀರಿ. ಶಿಕ್ಷಣವು ನಮ್ಮ ಜೀವನಕ್ಕೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಇದು ನಮಗೆ ವಿವಿಧ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತದೆ ಮತ್ತು ನಮಗೆ ಹೆಚ್ಚು ಜ್ಞಾನವನ್ನು ನೀಡುತ್ತದೆ. ನಾವು ಹೆಚ್ಚು ಕಲಿಯುತ್ತೇವೆ, ನಮ್ಮ ಸುತ್ತಲಿನ ವಿಷಯಗಳನ್ನು ನಾವು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಸಂದರ್ಭಗಳನ್ನು ನಿಭಾಯಿಸಲು ಕಲಿಯುತ್ತೇವೆ ಆದ್ದರಿಂದ…

Read More

ಸುಂಟಿಕೊಪ್ಪ ಜ.3 :  ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ಕೊಡಗು ಜಿಲ್ಲಾ ಅಕ್ಷರ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ  ಸರಕಾರಿ ಪ್ರಾಥಮಿಕ ಶಾಲೆಗಳ 4 ರಿಂದ 6ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಗ್ರಾ.ಪಂ ಮಟ್ಟದ ಗಣಿತ ಸ್ಪರ್ಧೆ  ನಡೆಯಿತು. ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ವಹಿಸಿದ್ದರು. ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ಉಪಾಧ್ಯಕ್ಷರಾದ ಶಿವಮ್ಮ ಮಹೇಶ್, ಸದಸ್ಯರಾದ ಹೆಚ್.ಯು. ರಫೀಕ್ ಖಾನ್, ಐ. ಸೋಮನಾಥ್, ಎ. ಶಬೀರ್, ಕೆ.ಕೆ. ಪ್ರಸಾದ್, ಕೆ.ಎಂ. ಆಲಿಕುಟ್ಟಿ, ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೀತಾ, ಗದ್ದೆಹಳ್ಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹೇಮಕುಮಾರಿ ಹಾಗೂ ಶಿಕ್ಷಕಿಯರು ಹಾಗೂ ಇತರರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ವಿ.ಜಿ. ಲೋಕೇಶ್ ಅವರು ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಹಂಸಿಕಾ ಉದಯ ಮತ್ತು ಭುವನೇಶ್ವರಿ ಪ್ರಾರ್ಥಿಸಿದರು. ಫಲಿತಾಂಶ: 4ನೇ…

Read More

ಮಡಿಕೇರಿ ಜ.3 :  ಗೋಣಿಕೊಪ್ಪಲಿನ ಒಂದನೇ ವಿಭಾಗ ನಿವಾಸಿ ದಿ.ಒಕ್ಕಲಿಗರ ವಿ.ತಿಮ್ಮಯ್ಯ ರವರ ಜೇಷ್ಠ ಪುತ್ರ ಶ್ರೀನಿವಾಸ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ಸಂಗೀತ ಕಲಾವಿದ ವಿ.ಟಿ.ಶ್ರೀನಿವಾಸ್ (63) ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಸಹೋದರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಗೋಣಿಕೊಪ್ಪಲಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಜ.2 : ಪ್ರಸಕ್ತ(2023-24) ಸಾಲಿನ ವಿಶ್ವ ಕೌಶಲ್ಯ ಸ್ಪರ್ಧೆಯು 2024 ರಲ್ಲಿ ಪ್ರಾನ್ಸ್ ದೇಶದ ಲಿಯಾನ್‍ನಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 22 ವರ್ಷದೊಳಗಿನ ಒಂದು ಸಾವಿರಕ್ಕೂ ಹೆಚ್ಚಿನ ಯುವಜನತೆ 59 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮವಾಗಿದೆ. ಈ ಸ್ಪರ್ಧೆಗೆ ಪೂರಕವಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ‘ಇಂಡಿಯಾ ಸ್ಕಿಲ್ ಕರ್ನಾಟಕ 2024’ ಸ್ಪರ್ಧೆಯನ್ನು ಪ್ರಾರಂಭಿಸಿದೆ. ಜಿಲ್ಲಾ, ವಲಯ, ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಗೆಲವು ಸಾಧಿಸಿದವರಿಗೆ ನಿರಂತರ ತರಬೇತಿ ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆ ಕಲ್ಪಿಸಿಕೊಡುವುದು ಇಂಡಿಯಾ ಸ್ಕಿಲ್ ಕರ್ನಾಟಕ 2024 ಸ್ಪರ್ಧೆಯ ಮುಖ್ಯ ಗುರಿಯಾಗಿದೆ. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಜ.7 ಕೊನೆಯ ದಿನವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು www.skillindiadigital.gov.in ಲಿಂಕ್ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಸುವ ಮೂಲಕ ಜನವರಿ, 07…

Read More

ಮಡಿಕೇರಿ ಜ.2 : ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿನಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜ್ ಸನ್ಮಾನಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ರಲ್ಲಿ “ಕಲುಷಿತಗೊಳ್ಳುತ್ತಿರುವ ನದಿ ತೀರಗಳು” ಎಂಬ ವಿಷಯದ ಕುರಿತು ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾಳಿಗೆ ಶುಭ ಹಾರೈಸಿದ ಸಚಿವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಮಕ್ಕಳ ವಿಜ್ಞಾನ ಸಮಾವೇಶದ ಮಹತ್ವ…

Read More