ಮಡಿಕೇರಿ ಜ.2 : ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿನಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಎ.ಎಸ್.ಶ್ರೀಶಾಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜ್ ಸನ್ಮಾನಿಸಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ರಲ್ಲಿ “ಕಲುಷಿತಗೊಳ್ಳುತ್ತಿರುವ ನದಿ ತೀರಗಳು” ಎಂಬ ವಿಷಯದ ಕುರಿತು ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿದ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾಳಿಗೆ ಶುಭ ಹಾರೈಸಿದ ಸಚಿವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಮಕ್ಕಳ ವಿಜ್ಞಾನ ಸಮಾವೇಶದ ಮಹತ್ವ…
ಲೇಖಕ: admin
ಮಡಿಕೇರಿ ಜ.2 : ಮುಂದಿನ ಆರು ತಿಂಗಳಲ್ಲಿ ಜಿಲ್ಲೆಯ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು. ಜಿಲ್ಲೆಯ ಯಾವ ಭಾಗದಲ್ಲಿಯೂ ಕುಡಿಯುವ ನೀರು ಸರಬರಾಜಿನಲ್ಲಿ ಸಮಸ್ಯೆ ಇದೆ ಎಂದು ಕೇಳಿ ಬರಬಾರದು. ಹಾಗೆಯೇ ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಬರ ನಿರ್ವಹಣೆಯಲ್ಲಿ ಉದಾಸೀನ ಮಾಡಬಾರದು. ಪಂಚಾಯತ್ ರಾಜ್ ಎಂಜಿನಿಯರ್‍ಗಳು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಿಡಿಒಗಳು ಕುಡಿಯುವ ನೀರು ಪೂರೈಕೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು. ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ…
ವಿರಾಜಪೇಟೆ ಜ.2 : ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ನಮ್ಮ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸಬೇಕು ಎಂದು ಅಂತರಾಷ್ಟ್ರೀಯ ಅಥ್ಲೇಟ್ ಮಾರಮಾಡ ಮಾಚಮ್ಮ ಹೇಳಿದರು. ವಿರಾಜಪೇಟೆಯ ರೋಟರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾ ಜ್ಯೋತಿಯನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪರಿಸರವೇ ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆ ಮೆರೆಯಲು ಪೂರಕ. ದೈಹಿಕವಾಗಿ ಸಮರ್ಥರಿರುವ ಇವರಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ನೀಡಿದರೆ ಅದ್ವಿತೀಯ ಸಾಧನೆ ಮಾಡಬಲ್ಲರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅನುಕೂಲಕರ ವಾತಾವರಣ ಇದೆ. ಅಲ್ಲದೇ, ದೈಹಿಕ ಶಿಕ್ಷಣ, ಶಿಕ್ಷಕರು ಅತ್ಯಂತ ಆಸಕ್ತಿ, ಶ್ರದ್ಧೆಯಿಂದ ಕಲಿಸುತ್ತಿದ್ದಾರೆ. ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಹೆಚ್ಚು ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಸೌಲಭ್ಯದ ಕೊರತೆಯಾಗದಂತೆ ಶಿಕ್ಷಕರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ…
ಮಡಿಕೇರಿ ಜ.2 : ಕಾನೂನಿನ ಅರಿವಿಲ್ಲದವರು ಕಾನೂನು ಪ್ರಕ್ರಿಯೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ. ಹಳೆಯ ಪ್ರಕರಣಗಳ ಇತ್ಯರ್ಥಕ್ಕಾಗಿ ಸಾಮಾನ್ಯ ಸುತ್ತೋಲೆಯನ್ನು ಅಧಿಕಾರಿಗಳ ಮಟ್ಟದಲ್ಲಿ ಕಳುಹಿಸಲಾಗಿದೆ. ರಾಮಮಂದಿರ ಉದ್ಘಾಟನೆಗೆ ನಮ್ಮ ವಿರೋಧವಿಲ್ಲದಿರುವಾಗ ದ್ವೇಷ ರಾಜಕಾರಣ ಮಾಡುವ ಅಗತ್ಯವೇನಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಮಂದಿರ ಉದ್ಘಾಟನೆಗೆ ನಮ್ಮ ವಿರೋಧವಿಲ್ಲವೆಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ನಾನು ಕೂಡ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭ ಕೋರುತ್ತೇನೆ ಎಂದರು. ನಾಲ್ಕು ವರ್ಷ ಇವರದ್ದೇ ಸರ್ಕಾರವಿದ್ದರೂ ಹಳೆಯ ಪ್ರಕರಣ ಇತ್ಯರ್ಥ ಪಡಿಸದೆ ಮಲಗಿದ್ದರೇ ಎಂದು ಪ್ರಶ್ನಿಸಿದ ಪೊನ್ನಣ್ಣ, ಕಾನೂನು ವ್ಯಾಪ್ತಿಯ ಸುತ್ತೋಲೆಗೂ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಮಮಂದಿರಕ್ಕೆ ನಮ್ಮ ವಿರೋಧವಿದಿದ್ದರೆ ನಾವು ದ್ವೇಷ ರಾಜಕಾರಣ ಮಾಡುತ್ತಿದ್ದೇವೆ ಎಂದು ಹೇಳಬಹುದಿತ್ತು. ಆದರೆ ಈಡಿ, ಸಿಬಿಐಯನ್ನು ಕಪಿ ಮುಷ್ಠಿಯಲ್ಲಿಟ್ಟುಕೊಂಡು ರಾಜಕೀಯ ದ್ವೇಷ ಮಾಡುತ್ತಿರುವವರು ಇವರು ಎಂದು ಆರೋಪಿಸಿದರು. ನನ್ನನ್ನು ರಾಜಕೀಯವಾಗಿ ಮುಗಿಸಲು…
ಮಡಿಕೇರಿ ಜ.2 : ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ಕೊಡವ ಮಕ್ಕಡ ಕೂಟದ ವತಿಯಿಂದ ಕೊಡವ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪುಸ್ತಕ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಲುವಾಗಿ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ “ವಿಶ್ವ ಕೊಡವ ಸಮ್ಮೇಳನ” ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಗ್ರೀನ್ ಸಿಟಿ ಫೋರಂ ನಿರ್ದೇಶಕ ಕುಕ್ಕೇರ ಜಯ ಚಿಣ್ಣಪ್ಪ, ತಲಕಾವೇರಿ ಮತ್ತು ಭಾಗಮಂಡಲ ದೇವಾಲಯದ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಟಂಡ ಎಸ್.ತಮ್ಮಯ್ಯ ಹಾಜರಿದ್ದರು.
ಮಡಿಕೇರಿ ಜ.2 : ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎದುರು ನಿಂತು ಕರ್ನಾಟಕ ರಾಜ್ಯಕ್ಕೆ ಏನು ಬೇಕು ಎಂದು ಕೇಳಲಾಗದ ಬಿಜೆಪಿ ಮಂದಿ, ಜನರ ಹಾದಿ ತಪ್ಪಿಸುವುದಕ್ಕಾಗಿ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುತ್ತಿರುವುದಕ್ಕೂ, ಗಲಭೆ ಸಂಬಂಧ ಹಳೆಯ ಪ್ರಕರಣಗಳ ಕುರಿತು ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ, ಈ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ, ಕಾನೂನು ರೀತಿಯ ಕ್ರಮಗಳು ನಡೆಯುತ್ತಿದೆ ಅಷ್ಟೇ ಎಂದರು. ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡಿಲ್ಲ, ವಿರೋಧ ಪಕ್ಷದಲ್ಲಿದ್ದ ವಾಜಪೇಯಿ, ಅಡ್ವಾಣಿ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದೆ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್ ಶಾ ಅವರುಗಳು ಸಿಬಿಐ, ಈಡಿ, ಚುನಾವಣಾಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.…
ವಿರಾಜಪೇಟೆ ಜ.2 : ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಮತ್ತು ಬೆಂಗಳೂರಿನ ಸಮಾಜಮುಖಿ ಪ್ರಕಾಶನ ವತಿಯಿಂದ ಕುಪ್ಪಳ್ಳಿಯಲ್ಲಿ ಆಯೋಜಿಸಲಾಗಿರುವ “ವಿಚಾರ ಕ್ರಾಂತಿಯ ಹಗಲಿರುಳು ಚಿಂತನ” ಶಿಬಿರಕ್ಕೆ ವಿರಾಜಪೇಟೆ ತಾಲೂಕಿನ ಪತ್ರಕರ್ತೆ ಹಾಗೂ ಸಾಹಿತಿ ರಜಿತ ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಜ.6 ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಖ್ಯಾತ ಸಾಹಿತಿಗಳು, ಲೇಖಕರು ಶಿಬಿರದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಡಿಕೇರಿ ಜ.2 : ಕವಯತ್ರಿ ಕೃಪಾ ದೇವರಾಜ್ ಅವರ ಹೊಸ ಕೃತಿ “ಕಾರ್ಪಣ್ಯದ ಹೂವು” ಕವನ ಸಂಕಲನ ಬಿಡುಗಡೆಗೊಂಡಿತು. ಕಣಿವೆಯ ಸುಂದರ ಪರಿಸರದಲ್ಲಿ ನಡೆದ ಅನೌಪಚಾರಿಕ ಸಭೆಯೊಂದರಲ್ಲಿ ಸಾಹಿತಿ ಭಾರದ್ವಾಜ್ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು ಹೊರ ಹೊಮ್ಮುತ್ತವೆ ಎಂದರು. ಬೆಂಗಳೂರಿನ ಲೇಖಕ ಇರ್ಫಾನ್ ಮಾತನಾಡಿ, ಕೊಡಗಿನ ಸುಂದರ ಪರಿಸರ ಲೇಖರಿಗೆ ಸುಂದರ ವಿಷಯ ಒದಗಿಸುತ್ತದೆ ಎಂದು ತಿಳಿಸಿದರು. ಲೇಖಕಿ ಕೃಪಾದೇವರಾಜ್ ಮಾತನಾಡಿ, ಸರಳತೆ ಬಯಸುವ ತಾನು, ಕಥಾ ಸಂಕನವನ್ನೂ ಅದ್ಧೂರಿಯಾಗಿ ಬಿಡುಗಡೆ ಮಾಡಲು ಬಯಸಲಿಲ್ಲ ಎಂದು ಹೇಳಿದರು. ಬರಹಗಾರ ನೌಶದ್ ಜನ್ನತ್, ಪರ್ತಕರ್ತ ಬಿ.ಜಿ. ಅನಂತಶಯನ, ಚುಟುಕ ಕವಿ ಹಾ.ತಿ. ಜಯಪ್ರಕಾಶ್ ಮಾತನಾಡಿದರು. ಕವನ ಸಂಕಲನದಲ್ಲಿ ಕನ್ನಡದಲ್ಲಿ ಮಂತ್ರ ಪಠಿಸುವ ಏಕೈಕ ಅರ್ಚಕ ವಾಗ್ಮಿ ಹಿರೇಮಗಳೂರು ಕಣ್ಣನ್ ಅವರ ಮುನ್ನುಡಿ, ಖ್ಯಾತ ಬರಹಗಾರ್ತಿ ಮಂಗಳನಾಡಿಗ್ ಅವರ ನುಡಿ ಅಡಕವಾಗಿರುವುದು ವಿಶೇಷ.
ವಿಜಯಪುರ ಜ.2 : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ…
ಪುತ್ತೂರು ಜ.2 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ವರ್ಣೋತ್ಸವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ಮಾರ್ಗದರ್ಶನದಲ್ಲಿ ಒಟ್ಟು 35 ವಿದ್ಯಾರ್ಥಿಗಳ ತಂಡವು ಇದರಲ್ಲಿ ಪಾಲ್ಗೊಂಡಿತ್ತು. ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಬಾಗವಹಿಸಿದ ವಿದ್ಯಾರ್ಥಿಗಳು 5 ವಿಭಾಗಗಳಲ್ಲಿ ಪ್ರಥಮ ಹಾಗೂ 2 ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡು ಒಟ್ಟು ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನ್ನು ಪಡೆದುಕೊಂಡಿದ್ದಾರೆ. ಇವರಿಗೆ ಭೂಮಿಕಾ ಕಲಾ ಸಂಘದ ಸಂಯೋಜಕರಾದ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಡಾ.ಶ್ವೇತಾಂಬಿಕಾ.ಪಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.






