ಮಡಿಕೇರಿ ಜ.2 : ಬಿಎಸ್‍ಎನ್‍ಎಲ್ ಮೈಸೂರು ವಿಭಾಗೀಯ ಸಲಹಾ ಸಮಿತಿ ಸದಸ್ಯರಾಗಿ ಮಡಿಕೇರಿಯ ಕನ್ನಂಡಬಾಣೆಯ ನಾಳನ ಕನ್ನಿಕೆ ದಿನೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೇಂದ್ರ ಸರಕಾರದ ಸಾರ್ವಜನಿಕ ಸಂಪರ್ಕ ಸಚಿವಾಲಯ ಈ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಲೇಖಕ: admin
ಮಡಿಕೇರಿ ಜ.2 : ಸೋಮವಾರಪೇಟೆಯ ನೂತನ ಟರ್ಫ್ ಮೈದಾನ ಉದ್ಘಾಟನಾ ಸಮಾರಂಭವು ಜ.3 ರಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೂತನ ಮೈದಾನವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಕೆ.ಎ.ಅಬ್ದುಲ್ ರಜಾಕ್ ತಿಳಿಸಿದ್ದಾರೆ.
ನಾಪೋಕ್ಲು ಜ.2 : ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಕ್ರೀಡಾ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಮೈಸೂರು ಗೌಡ ಸಮಾಜದ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪೊನ್ನಚನ ಅಪ್ಪಯ್ಯ, ಸಂಘದ ಸದಸ್ಯರುಗಳ ಸಂಖ್ಯೆ ಗಣನೀಯ ಏರಿಕೆಯು ಸಂಘದ ಅಭಿವೃದ್ಧಿ ಹಾಗೂ ಬೆಳವಣಿಗೆಯನ್ನು ಸೂಚಿಸುತ್ತದೆ. ಸಂಘದ ಮೂಲ ಹಾಗೂ ಮುಖ್ಯ ಉದ್ದೇಶವನ್ನು ಗುರಿಯಾಗಿಟ್ಟುಕೊಂಡು ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು. ಸಂಘವು ತನ್ನದೇ ಆದ ನಿವೇಶನ ಹೊಂದುವ ಮೂಲಕ ತಮ್ಮದೇ ಆದ ಸ್ವಂತ ಕಟ್ಟಡವನ್ನು ಹೊಂದಬೇಕೆಎನ್ನುವ ಇಂಗಿತವನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಸರ್ವರ ಸಹಕಾರವನ್ನು ಕೋರಿ ಸರ್ವರ ಸಹಮತವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ವಿದ್ಯಾ ವಿಕಾಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕವಿಶ್ ಗೌಡ ಮಾತನಾಡಿ, ಕೊಡಗಿನ ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿ ನೆಲೆಸಿದ್ದು, ಎಲ್ಲರೂ ಒಂದಾಗಿ ಸೇರಿ ನಡೆಸುತ್ತಿರುವ ಕಾರ್ಯ ಚಟುವಟಿಕೆಗಳು ಇತರರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಪ್ರತಿಭಾವಂತರನ್ನು ಗುರುತಿಸಿ ಪುರಸ್ಕರಿಸುವುದು ವಿಶೇಷ…
ನಾಪೋಕ್ಲು ಜ.2 : ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಆಗಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ ಬಡ್ಡಿರ ನಳಿನಿ ಪೂವಯ್ಯ ಹೇಳಿದರು. ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸತ್ಯ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಮಾನವೀಯತೆ ಹೊಂದಿದ ಮಾನವನನ್ನಾಗಿ ರೂಪಿಸುವುದು ಶಿಕ್ಷಕರ ಜವಾಬ್ದಾರಿ. ಪ್ರತಿಯೊಂದು ಮಗುವಿನ ಬುದ್ಧಿವಂತಿಕೆ ಭಿನ್ನವಾಗಿರುತ್ತದೆ. ಪೋಷಕರು ಮಗುವಿನಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಪ್ರೋತ್ಸಾಹ ದೊರೆಕಿದಂತಾಗುತ್ತದೆ. ಅಂತೆಯೇ ಹೊಸ ವರ್ಷ ಕೂಡ ಸಂಕಲ್ಪಗಳನ್ನು ಮಾಡುವಂತ ದಿನ. ಹೊಸ ವರ್ಷದ ಆಚರಣೆ ಕೇವಲ ಆಚರಣೆಯಲ್ಲಿ ಮುಗಿಯುವುದಿಲ್ಲ. ಹಿಂದಿನ ವರ್ಷಗಳ ಎಡರು ತೊಡರುಗಳನ್ನು ನೆನಪಿಸಿಕೊಂಡು ಹೊಸ ವರ್ಷದಲ್ಲಿ ಸಂಕಲ್ಪ ಮಾಡಿದಾಗ ಹೊಸ ವರ್ಷದ ಆಚರಣೆಗೆ ಒಂದು ಅರ್ಥ ಬರುತ್ತದೆ ಎಂದರು. ಪರೀಕ್ಷೆಗಾಗಿ ಉತ್ತಮ ಸಿದ್ಧತೆಗಳನ್ನು ವಿದ್ಯಾರ್ಥಿಗಳು ಇಂದಿನಿಂದಲೇ ಸಿದ್ಧಪಡಿಸಿಕೊಳ್ಳಬೇಕು. ಜೀವನದಲ್ಲಿ ಗುರಿಯಿಸಿ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು. ಪೋಷಕರು…
ಸೋಮವಾರಪೇಟೆ ಜ.2 : ಜೇಸಿ ವಲಯ 14ರ ಎಸ್‍ಎಂಎ ಉಪ ಚೇರ್ಮನ್ ಸೋಮವಾರಪೇಟೆ ನಿವಾಸಿ ಎ.ಆರ್.ಮಮತ ಅವರು ಜೆಸಿಐ ರಾಷ್ಟ್ರೀಯ ಅತ್ಯುತ್ತಮ ಹಿರಿಯ ಮಹಿಳಾ ಸದಸ್ಯೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ಜೆಸಿಐ ಎಸ್‍ಎಂಎ ರಾಷ್ಟ್ರೀಯ ಅಧಿವೇಶನದಲ್ಲಿ ರಾಷ್ಟೀಯ ಚೇರ್ಮನ್ ಪ್ರಮೋದ್ ಕುಮಾರ್ ಪ್ರಶಸ್ತಿ ವಿತರಿಸಿದರು. ರಾಷ್ಟ್ರೀಯ ಉಪ ಚೇರ್ಮನ್ ನರೆನ್ ಕಾರ್ಯಪ್ಪ, ನಿರ್ದೇಶಕ ಕೆ.ಎಸ್.ಕುಮಾರ್, ವಲಯ-14ರ ಚೇರ್ಮನ್ ವಿರೇಶ್‍ಬಾಬು, ನಿಯೋಜಿತ ಚೇರ್ಮನ್ ರಂಗಸ್ವಾಮಿ, ನಿಕಟಪೂರ್ವ ಚೇರ್ಮನ್ ಶಿವನಂಜಪ್ಪ, ವಲಯ ಉಪಚೇರ್ಮನ್ ಯೋಗೇಶ್ ಇದ್ದರು.
ಸೋಮವಾರಪೇಟೆ ಜ.2 : ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಪೋಷಕರ ಕ್ರೀಡಾಕೂಟದ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಟೀಮ್ ಹಣಕೋಡು ತಂಡ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದು, ತಾಕೇರಿ ಮಹಿಳೆಯರ ತಂಡ ದ್ವೀತಿಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಂಜು ಟೀಮ್ ಪ್ರಥಮ, ಶಿವಾಜಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾವಳಿಯನ್ನು ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ಪದಾಧಿಕಾರಿಗಳಾದ ರಾಮಚಂದ್ರ, ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೊನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ಮತ್ತು ಶಿಕ್ಷಕರುಗಳು ಇದ್ದರು.
ಸೋಮವಾರಪೇಟೆ ಜ.2 : ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸುಂಟಿಕೊಪ್ಪ ಕೊಡಗರಹಳ್ಳಿ ಶಾಲೆಗೆ ಒಕ್ಕಲಿಗರ ಸಂಘದ ನಿರ್ದೇಶಕ, ದಾನಿ ಹರಪಳ್ಳಿ ರವೀಂದ್ರ ಆರ್ಥಿಕ ಸಹಾಯ ನೀಡಿದರು. ಶಾಂತಳ್ಳಿ ಕುಮಾರಲಿಂಗೇಶ್ವರ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪೋಷಕರ ಸಭೆಯಲ್ಲಿ ಒಟ್ಟು 30 ಲಕ್ಷ ಮೌಲ್ಯದ ಚೆಕ್‍ನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಕೆ.ಗೋಪಾಲ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕೊಡಗರಹಳ್ಳಿ ಶಾಲೆಯನ್ನೂ ಅಭಿವೃದ್ಧಿಗೊಳಿಸುವ ಚಿಂತನೆಯಿದ್ದು, ಆ ಶಾಲೆಗೆ 3 ಲಕ್ಷ ಅನುದಾನ ನೀಡುವ ಬಗ್ಗೆ ಕ್ರಮ ವಹಿಸುವುದಾಗಿ ಹರಪಳ್ಳಿ ರವೀಂದ್ರ ಹೇಳಿದರು. ಮಾತೃಭಾಷೆಯಾಗಿರುವ ಕನ್ನಡವನ್ನು ದೈನಂದಿನ ಜೀವನದಲ್ಲಿ ಬಳಸಲೇಬೇಕಿದೆ. ಆದರೆ ವ್ಯಾವಹಾರಿಕವಾಗಿ ಆಂಗ್ಲ ಭಾಷೆಯ ಅನಿವಾರ್ಯವಿದೆ. ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನದ ಯುಗದಲ್ಲಿ ಬದುಕು ಕಟ್ಟಿಕೊಳ್ಳಲು ಇಂಗ್ಲೀಷ್‍ನ ಅಗತ್ಯತೆ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಶಾಂತಳ್ಳಿಯಂತಹ ಗ್ರಾಮೀಣ ಭಾಗದಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಎಂದರು. ಶ್ರೀ ಕುಮಾರಲಿಂಗೇಶ್ವರ ಶಾಲೆಯಲ್ಲಿ ಹೆಚ್ಚುವರಿಯಾಗಿ 4 ಕೊಠಡಿ, ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್, ಯೋಗ, ಸಂಗೀತ,…
ನಾಪೋಕ್ಲು ಜ.2 : ಸಂಘಟನೆಯನ್ನು ಆರಂಭಿಸುವುದು ಸುಲಭ ಅದನ್ನು ಯಶಸ್ವಿ ಸಂಘಟನೆಯಾಗಿ ಮಾರ್ಪಡಿಸಲು ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಬೇಕು ಎಂದು ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್ ರಮೇಶ್ ಹೇಳಿದರು. ನಾಪೋಕ್ಲುವಿನ ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್ ನಲ್ಲಿ ನಡೆದ ಹಿಂದೂ ಮಲಯಾಳಿ ಸಂಘದ ಕಚೇರಿ ಉದ್ಘಾಟನಾ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉತ್ತಮ ಸದಸ್ಯರಿಂದ ಸಂಘಟನೆ ಬಲವರ್ಧನೆಗೊಳ್ಳುತ್ತದೆ. ಸಂಘಟನೆ ಆರಂಭಿಸುವಾಗ ಇರುವ ಆಸಕ್ತಿ ಚಿರಕಾಲ ಉಳಿಯಬೇಕು. ತಿಂಗಳಿಗೊಮ್ಮೆ ಸಭೆ ನಡೆಸುವುದರ ಮೂಲಕ ಆಗು ಹೋಗುಗಳನ್ನು ಚರ್ಚಿಸಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರತಿ ಸಭೆಯಲ್ಲಿ ಸದಸ್ಯರು ಪಾಲ್ಗೊಂಡು ಒಮ್ಮತದ ಅಭಿಪ್ರಾಯವನ್ನು ಹೊಂದಿ ತೀರ್ಮಾನ ಕೈಗೊಂಡಾಗ ಯಶಸ್ಸಿಗೆ ಸಹಕಾರಿಯಾಗುತ್ತದೆ ಎಂದರು. ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿ, ಸಂಘದಿಂದ ಸದಸ್ಯರಿಗೆ ಉಪಯೋಗವಾಗಲಿ. ಸಂಘದ ಕಾರ್ಯಕ್ರಮಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಜವಾಬ್ದಾರಿ ಸಂಘವನ್ನು ನಿರ್ಮಿಸಿ ಕೊಡಬೇಕು ಎಂದು ಸಲಹೆ ನೀಡಿದರು. ಕಾಫಿ ಬೆಳೆಗಾರ ಅಪ್ಪಚೆಟ್ಟೋಳಂಡ ನವೀನ್…
ಸಂಪಾಜೆ ಜ.2 : ಚೆಡಾವು-ಸಂಪಾಜೆ ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಪೆರಾಜೆ ಶಾಸ್ತಾವು ದೇವಾಲಯದ ಮಾಜಿ ಧರ್ಮದರ್ಶಿ ಸುರೇಶ್ ಪೆರುಮುಂಡ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ದೈವಸ್ಥಾನದ ಧರ್ಮದರ್ಶಿ ಹೆಚ್.ಎಂ.ಬಾಬು, ನೇಮೋತ್ಸವ ಸಮಿತಿಯ ಅಧ್ಯಕ್ಷ ಹುದೇರಿ ಶಿವಯ್ಯ (ರವಿ), ಸಮಾಜ ಸೇವಕರಾದ ಕೆ.ಕೆ.ರಾಜೇಶ್ವರಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಹೆಚ್.ಸಿ. ಗಣೇಶ್, ಸದಸ್ಯರಾದ ಶಶಿಕುಮಾರ್, ಸುಂದರ, ನಾರಾಯಣ, ಕೆ.ಟಿ.ಸತೀಶ್ , ಹುಕ್ರಪ್ಪ, ಮೋಹನ, ನಾಗೇಶ್, ಸಚಿನ್, ವಸಂತ, ಸಂತೋಷ್, ಶರತ್, ಅಶ್ವಥ್, ನಿತಿನ್, ಗೌರಿ, ಸುಮಿತ್ರಾ, ಸರೋಜ , ಹೆಚ್.ಎಂ. ನಾರಾಯಣ, ವಿತಿನ್ ಭಾಗವಹಿಸಿದ್ದರು.
ಮಡಿಕೇರಿ ಜ.2 : ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿದ್ದು, ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ತನ್ನ ಗಮನಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಗಿರುವ ತಾಂತ್ರಿಕ ಅಡಚಣೆಯನ್ನು ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭರವಸೆ ನೀಡಿದರು. ಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕೊಡವ ಪಾಲೆ ಅಥವಾ ಅರಮನೆಪಾಲೆ ಜನಾಂಗವು ಕೊಡವ ಸಂಸ್ಕೃತಿಯನ್ನು ಪಾಲಿಸುತ್ತಿದ್ದು, ಅವರದ್ದೇ ಶೈಲಿಯ ಶ್ರಮದಿಂದ ಶಾಂತಿಯುತವಾಗಿ ಬಾಳುತ್ತಿರುವ ಜನಾಂಗವಾಗಿದೆ ಎಂದರು. ಪ್ರಸ್ತುತ ದಿನಗಳಲ್ಲಿ ಜನಸಂಖ್ಯೆ ಕುಸಿತ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಈ ಜನಾಂಗದ ರಕ್ಷಣೆ ನಮ್ಮ ಸರ್ಕಾರದ ಹೊಣೆಯಾಗಿದೆ ಅದನ್ನು ತಾವು ಪಾಲಿಸುತ್ತೇನೆ ಎಂದರು. ಈ…






