ಸಂಪಾಜೆ ಜ.2 : ಚೆಡಾವು-ಸಂಪಾಜೆ ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಪೆರಾಜೆ ಶಾಸ್ತಾವು ದೇವಾಲಯದ ಮಾಜಿ ಧರ್ಮದರ್ಶಿ ಸುರೇಶ್ ಪೆರುಮುಂಡ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ದೈವಸ್ಥಾನದ ಧರ್ಮದರ್ಶಿ ಹೆಚ್.ಎಂ.ಬಾಬು, ನೇಮೋತ್ಸವ ಸಮಿತಿಯ ಅಧ್ಯಕ್ಷ ಹುದೇರಿ ಶಿವಯ್ಯ (ರವಿ), ಸಮಾಜ ಸೇವಕರಾದ ಕೆ.ಕೆ.ರಾಜೇಶ್ವರಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಹೆಚ್.ಸಿ. ಗಣೇಶ್, ಸದಸ್ಯರಾದ ಶಶಿಕುಮಾರ್, ಸುಂದರ, ನಾರಾಯಣ, ಕೆ.ಟಿ.ಸತೀಶ್ , ಹುಕ್ರಪ್ಪ, ಮೋಹನ, ನಾಗೇಶ್, ಸಚಿನ್, ವಸಂತ, ಸಂತೋಷ್, ಶರತ್, ಅಶ್ವಥ್, ನಿತಿನ್, ಗೌರಿ, ಸುಮಿತ್ರಾ, ಸರೋಜ , ಹೆಚ್.ಎಂ. ನಾರಾಯಣ, ವಿತಿನ್ ಭಾಗವಹಿಸಿದ್ದರು.
ಲೇಖಕ: admin
ಮಡಿಕೇರಿ ಜ.2 : ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿದ್ದು, ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ತನ್ನ ಗಮನಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಗಿರುವ ತಾಂತ್ರಿಕ ಅಡಚಣೆಯನ್ನು ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭರವಸೆ ನೀಡಿದರು. ಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕೊಡವ ಪಾಲೆ ಅಥವಾ ಅರಮನೆಪಾಲೆ ಜನಾಂಗವು ಕೊಡವ ಸಂಸ್ಕೃತಿಯನ್ನು ಪಾಲಿಸುತ್ತಿದ್ದು, ಅವರದ್ದೇ ಶೈಲಿಯ ಶ್ರಮದಿಂದ ಶಾಂತಿಯುತವಾಗಿ ಬಾಳುತ್ತಿರುವ ಜನಾಂಗವಾಗಿದೆ ಎಂದರು. ಪ್ರಸ್ತುತ ದಿನಗಳಲ್ಲಿ ಜನಸಂಖ್ಯೆ ಕುಸಿತ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಈ ಜನಾಂಗದ ರಕ್ಷಣೆ ನಮ್ಮ ಸರ್ಕಾರದ ಹೊಣೆಯಾಗಿದೆ ಅದನ್ನು ತಾವು ಪಾಲಿಸುತ್ತೇನೆ ಎಂದರು. ಈ…
ಮಡಿಕೇರಿ ಜ.2 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜನವರಿ, 25 ರೊಳಗೆ ಸಲ್ಲಿಸಬೇಕು. ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 9 ಸಾವಿರ. ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ / ಅನುತ್ತೀರ್ಣ ಶೇ.40ಕ್ಕಿಂತ ಮೇಲ್ಪಟ್ಟು ಶೇ.75ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ನಗರಸಭೆ ಮಡಿಕೇರಿ-3 ಕುಶಾಲನಗರ ಪಟ್ಟಣ ಪಂಚಾಯಿತಿ-1, ಸೋಮವಾರಪೇಟೆ ಪಟ್ಟಣ ಪಂಚಾಯಿತಿ- 1 ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ-1. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯು…
ಮಡಿಕೇರಿ ಜ.1 :NEWS DESKಕರ್ನಾಟಕದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀ ರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ. ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಶ್ರೀ @yogiraj_arun ಅವರು ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆಯನ್ನು ನೆರವೇರಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. (ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ)
ಮಡಿಕೇರಿ ಜ.1 : ಮಡಿಕೇರಿ ತಾಲ್ಲೂಕು ಹೆರವನಾಡು ಗ್ರಾಮದ ಅಪ್ಪಂಗಳ ನಿವಾಸಿ ಮೊಟ್ಟನ ಡಾಲು ಜ್ಯೋತಿ ಶಂಕರ್ ( ಹಿರಿಯ ವಕೀಲರು) (59) ಇಂದು ಸಂಜೆ ನಿಧನರಾದರು. ಕೊಡಗು ಗೌಡ ವಿದ್ಯಾಸಂಘದ ನಿರ್ದೇಶಕರು, ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರು, ಕಾವೇರಿ ಜನ್ಮಭೂಮಿ ಟ್ರಸ್ಟ್ ನ ನಿರ್ದೇಶಕರು ಆಗಿರುವ ಮೊಟ್ಟನ ಡಾಲು ಜ್ಯೋತಿಶಂಕರ್ ಅವರ ಅಂತ್ಯಕ್ರಿಯೆ ಜ.2 ರಂದು ಮಧ್ಯಾಹ್ನ 2 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕುಶಾಲನಗರ ಜ.1 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಕುಶಾಲನಗರದ ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಎನ್ .ಎನ್. ಶಂಭುಲಿಂಗಪ್ಪ ಅವರಿಗೆ ರಾಯಚೂರಿನಲ್ಲಿ ಡಾ ಹೆಚ್. ಎನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ರಾಯಚೂರಿನ ಲಿಂಗಸಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಪರಿಷತ್ತಿನ ಮೂರನೇ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನದಲ್ಲಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮ್ಮೇಳನ ಅಧ್ಯಕ್ಷರಾದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ ಎಂ ಹನುಮಂತಪ್ಪ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
ಮಡಿಕೇರಿ ಜ.1 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜ.2 ಮತ್ತು 3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜ.2 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜ.3 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆಯುವ 2023-24ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 17 ರ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.
ಮಡಿಕೇರಿ ಜ.1 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹೆಚ್.ಡಿ.ಸಿಂಚನ ಜಾರ್ಖಾಂಡ್ ನಲ್ಲಿ ನಡೆಯಲಿರುವ 41ನೇ ರಾಷ್ಟ್ರ ಮಟ್ಟದ ಥ್ರೋಬಾಲ್ ಚಾಂಪಿಯನ್‍ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜ.1 : ರಾಜ್ಯ ಸರ್ಕಾರದ ಖಜಾನೆ ಇಲಾಖೆಯಲ್ಲಿ ಸುದೀರ್ಘ ಕಾರ್ಯನಿರ್ವಹಿಸಿದ್ದ ನಗರದ ನಿವಾಸಿ ಎಂ.ಬಾಲಕೃಷ್ಣ ಅವರು ವಯೋನಿವೃತ್ತಿಯಾಗಿದ್ದು, ಇವರನ್ನು ಸುಳ್ಯದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸನ್ಮಾನಿಸಲಾಯಿತು. ಮಡಿಕೇರಿ ಜಯನಗರ ಬಡಾವಣೆ ನಿವಾಸಿಯಾಗಿರುವ ಬಾಲಕೃಷ್ಣ 33 ಗಳ ಕಾಲ ನಗರದ ಜಿಲ್ಲಾ ಖಜಾನೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಮಂಗಳೂರಿನಲ್ಲಿ ಒಂದೂವರೆ ವರ್ಷ ಕಾರ್ಯನಿರ್ವಹಿಸಿದ, ಬಳಿಕ ಸಹಾಯಕ ಖಜಾನೆ ಅಧಿಕಾರಿಯಾಗಿ ಸುಳ್ಯದಲ್ಲಿ 2 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇದೀಗ ವಯೋನಿವೃತ್ತಿಯಾಗಿರುವ ಬಾಲಕೃಷ್ಣ ಅವರಿಗೆ ಸುಳ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಇಲಾಖಾಧಿಕಾರಿಗಳು, ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು. ಬಾಲಕೃಷ್ಣ ಅವರ ಪತ್ನಿ ಮಡಿಕೇರಿ ವಿಜಯ ಬ್ಯಾಂಕ್ ಅಧಿಕಾರಿ ಸರಸ್ವತಿ ಕೂಡ ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಜ.1 : ಅಧಿಕಾರಿಗಳು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳಿಗೆ ಹೊಸ ವರ್ಷ ಆಚರಣೆಯ ಶುಭಾಶಯ ತಿಳಿಸಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಾತನಾಡಿ ಹಿಂದಿನ ಸಭೆಯಲ್ಲಿ ಚರ್ಚಿಸಲಾದ ಹತ್ತು ಪ್ರಕರಣಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದರು. ಮುಂದಿನ ಸಭೆಗೆ ಮುನ್ನ ಇತ್ಯರ್ಥವಾಗದ ಪ್ರಕರಣ ಸರಿಪಡಿಸಲು ತಿಳಿಸಿದರು. ಸಫಾಯಿ ಕರ್ಮಚಾರಿಗಳ ಸಮಿತಿಯ ಸದಸ್ಯರಾದ ರಂಗಸ್ವಾಮಿ ಮಾತನಾಡಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸಫಾಯಿ ಕರ್ಮಚಾರಿಗಳ ಸಭೆ ನಡೆಸಲಾಗಿದ್ದು, ಸ್ವಚ್ಛತಾಗಾರರನ್ನು ಖಾಯಂಗೊಳಿಸಲು, ನಿವೇಶನದ ಹಕ್ಕುಪತ್ರ ಒದಗಿಸಲು, ಸಫಾಯಿ ಕರ್ಮಚಾರಿಗಳಿಗೆ ಭದ್ರತೆ ನೀಡಲು ಜಿಲ್ಲಾಧಿಕಾರಿಗಳ ಬಳಿ ಮನವಿ ಮಾಡಿದರು. ಸಫಾಯಿ…






