ಲೇಖಕ: admin

ಮಡಿಕೇರಿ ನ.25 : ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವೈ.ಯು.ಕಾವ್ಯ ರಾಷ್ಟ್ರ ಮಟ್ಟದ ಫುಟ್‍ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾಳೆ. ಇವಳು 14 ವರ್ಷ ವಯೋಮಿತಿಯ ಬಾಲಕಿಯರ ಫುಟ್‍ಬಾಲ್ ಕ್ರೀಡೆಯಲ್ಲಿ ನಾಯಕಿಯಾಗಿ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ್ದು, ಮಂಗಳೂರಿನ ಬಜ್ಪೆಯಲ್ಲಿ ನಡೆದ ವಿಭಾಗ ಮಟ್ಟದ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗದ ತಂಡದಲ್ಲಿ ಸ್ಥಾನ ಗಳಿಸಿದ್ದಾಳೆ. ಅಲ್ಲದೇ ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ರಾಜ್ಯ ಮಟ್ಟದ ಕ್ರಿಡೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಕಾವ್ಯ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಯಾಗಿದ್ದು, ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಲ್.ಸಂದೇಶ್ ತರಬೇತಿ ನೀಡಿದ್ದಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಡಿ.ಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ನ.25  :  ಕೊಡಗು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಪದವಿ ಪೂರ್ವ ಮಕ್ಕಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ವಿದ್ಯಾಥಿ೯ಗಳು ಬಹುಮಾನ ಗಳಿಸಿ ಮಂಡ್ಯದಲ್ಲಿ ನಡೆಯಲಿರುವ ವಲಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ಭುವನೇಶ್ವರಿ ಎಸ್ ಏಕಪಾತ್ರಾಭಿನಯ, ಕೆ.ಎಸ್. ರಜೀನ್, ಚರ್ಚಾಸ್ಪರ್ಧೆ ಬಿ.ಆರ್.ರಿದಾ ಸುಮನ್ ಪ್ರಬಂಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಲಿದ್ದಾರೆ.  ವಿ.ಸಿ.ಹೇಮಶ್ರೀ  ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ನ.25 :  ಮೈಸೂರು ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ (ಕೆ.ಎಸ್.ಎ)  ಅಧ್ಯಕ್ಷರಾಗಿ ಮನೆಯಪಂಡ ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಚೋಳಪಂಡ ದೇಚಮ್ಮ,  ಕಾರ್ಯದರ್ಶಿಯಾಗಿ ಮುಂಡಿಯೊಳಂಡ ಮಾಚಯ್ಯ, ಜಂಟಿ ಕಾರ್ಯದರ್ಶಿ ಇಶಾನಿ ಮೊಟ್ಟೆಯಂಡ, ಖಜಾಂಚಿಯಾಗಿ ಬಲ್ಯಂಡ ಮೌರ್ಯ, ಸಹ ಖಜಾಂಚಿಯಾಗಿ ನಾಯಕಂಡ ತ್ರಿಷಾ, ಸಾಂಸ್ಕೃತಿಕ ನಾಯಕಿಯಾಗಿ ಚೆಟ್ಟೀರ ಗ್ರಂಥ ಹಾಗು ಸಾಂಸ್ಕೃತಿಕ ನಾಯಕನಾಗಿ ಮಂಡೇಟಿರ ದೇಗುಲ್ ಆಯ್ಕೆಯಾಗಿದ್ದಾರೆ.   

Read More

ಮಡಿಕೇರಿ ನ.25 :  ಜಿಲ್ಲಾ ಪೊಲೀಸ್‌ ಘಟಕದಲ್ಲಿ ಅಪರಾಧ ಪತ್ತೆ ಹಾಗೂ ವಿವಿಧ ವಿಭಾಗದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 52 ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಯಿತು. ನಗರದ ಕವಾಯತು ಮೈದಾನದಲ್ಲಿ ನಡೆದ ಕವಾಯತು ಸಂದರ್ಭ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್  ಪಶಂಸನಾ ಪತ್ರ ನೀಡಿ  ಅಭಿನಂದಿಸಿದರು. 

Read More

ಬೆಂಗಳೂರು ನ.25 : ಹುತಾತ್ಮ ಕ್ಯಾಪ್ಟನ್​ ಪ್ರಾಂಜಲ್​ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಧನ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ‌ ಸಲ್ಲಿಸಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು  ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದರು.

Read More

ಮಡಿಕೇರಿ ನ.25 :  ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಡಿ.3 ರಂದು ಬೆಳಿಗ್ಗೆ 10 ಗಂಟೆಯಿಂದ ಪೊನ್ನಂಪೇಟೆಯ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆಯಲಿದ್ದು, ಜಿಲ್ಲೆಯ ಮೂಲನಿವಾಸಿಗಳು ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಮೂರು ನಾಡಿನ ತಕ್ಕ ಮುಖ್ಯಸ್ಥ ಹಾಗೂ ಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಕೈಮುಡಿಕೆ ಪುತ್ತರಿ ಕೋಲ್ ಮಂದ್ ವಿಷಯವಾಗಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡಿಗೆ ಸೇರಿದ ವಿವಿಧ ಗ್ರಾಮಗಳ ಹಾಗೂ ಮೂರು ನಾಡಿನ ತಕ್ಕಮುಖ್ಯಸ್ಥರು ಸೇರಿದಂತೆ ಮೂರು ನಾಡಿನವರು ಸೇರಿ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ   ಹಬ್ಬವನ್ನು ಸಂಭ್ರಮದಿಂದ ಆಚರಿಸಲು   ತೀರ್ಮಾನಿಸಲಾಯಿತು. ಮೂರು ನಾಡಿನವರು ಮಾತ್ರವಲ್ಲದೆ ಜಿಲ್ಲೆ ಹಾಗೂ ಹೊರಜಿಲ್ಲೆಯಲ್ಲಿ ನೆಲೆಸಿರುವ ಕೊಡವ  ಮಂದಿಗೆ ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಇದರೊಂದಿಗೆ ಜಿಲ್ಲೆಯ ವಿವಿಧ ಶಾಲಾಕಾಲೇಜುಗಳ ತಂಡಕ್ಕೆ ಮತ್ತು ಸಾರ್ವಜನಿಕರಿಗೂ ಮುಕ್ತ…

Read More

ನಾಪೋಕ್ಲು ನ.25 : ಮಡಿಕೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಎಂಬ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು. ಮಡಿಕೇರಿ ಆರೋಗ್ಯ ಇಲಾಖೆಯ ಆರ್.ಬಿ.ಎಸ್.ಕೆ ತಂಡ ವಿದ್ಯಾರ್ಥಿಗಳಿಗೆ ರಕ್ತ ಪರೀಕ್ಷೆಯನ್ನು ನಡೆಸಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಹಿಮೋಗ್ಲೋಬಿನ್ ಅಂಶ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ನೀಡಿ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಸಂದರ್ಭ ಮಡಿಕೇರಿ ಆರೋಗ್ಯ ಇಲಾಖೆಯ ಡಾ.ಪೂಜಾ ಹಾಗೂ ಡಾ.ಲಾವಣ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವರದಿ : ದುಗ್ಗಳ ಸದಾನಂದ

Read More

ನಾಪೋಕ್ಲು ನ.25 : ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಚೀಯಕಪೂವಂಡ ಸವಿತ ಅಪ್ಪಚ್ಚು ಅವರು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಹೆಗಡೆ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಭಾರತೇಂದು ಹರಿಶ್ಚಂದ್ರ ಮತ್ತು ಹರದಾಸ ಅಪ್ಪಚ್ಚ ನಾಟಕ ಸಾಹಿತ್ಯದ ತುಲನಾತ್ಮಕ ಅಧ್ಯಯನ ಎಂಬ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್ಡಿ ನೀಡಿದೆ. ಇವರು ಚೀಯಕಪೂವಂಡ ಅಪ್ಪಚ್ಚು ಅವರ ಪತ್ನಿ.ದೇವಣಗೇರಿ ಪುಗ್ಗೇರ ಪೊನ್ನಪ್ಪ ಜೂಬಿ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ 

Read More

ಕುಶಾಲನಗರ, ನ. 24: ಕುಶಾಲನಗರದ ಗೌಡ ಸಮಾಜ ಮತ್ತು ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ  ನ.27 ರಂದು ಹುತ್ತರಿ ಆಚರಣೆ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಬ್ಬದ ಆಚರಣೆ ಬಗ್ಗೆ ಮಾಹಿತಿ‌ ನೀಡಿದ ಅವರು‌,  ಅಂದು‌ ಸಂಜೆ ಕುಶಾಲನಗರ ಗೌಡ ಸಮಾಜದಲ್ಲಿ ಸೇರಿ  7.45ಕ್ಕೆ ದೇವರಿಗೆ ಪೂಜೆ ಸಲ್ಲಿಸಿ‌ ನೆರೆಕಟ್ಟಿ ಮೆರವಣಿಗೆಯಲ್ಲಿ ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವುದರೊಂದಿಗೆ  ಗುಮ್ಮನಕೊಲ್ಲಿಯಲ್ಲಿ ಗೌಡ ಯುವಕ ಸಂಘದ ಗದ್ದೆಯಲ್ಲಿ ರಾತ್ರಿ 8.45 ಕ್ಕೆ ಗದ್ದೆಗೆ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕದಿರು ತೆಗೆದು ಜನಾಂಗದವರಿಗೆ, ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ನಾಲ್ಕು ಗದ್ದೆಗಳಲ್ಲಿ ಕದಿರು ಬೆಳೆಯಲಾಗಿದ್ದು ಸಾರ್ವಜನಿಕರು ನೂಕುನುಗ್ಗಲಿಲ್ಲದೆ ಕದಿರು ಪಡೆದುಕೊಳ್ಳಲು ಅವಕಾಶವಿದೆ ಎಂದರು. ಗೋಷ್ಠಿಯಲ್ಲಿ…

Read More

ಮಡಿಕೇರಿ ನ.24 : ಮಡಿಕೇರಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ನ.26 ರಂದು ಜಿಲ್ಲಾ ಮಟ್ಟದ ಪುರುಷರ ಕ್ರಿಕೆಟ್ ಹಾಗೂ ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಅವರು ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ದಿನದ ಕ್ರೀಡಾಕೂಟ ನಡೆಯಲಿದ್ದು, ಸಂಜೆ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ಯಾಮ್ ಪ್ರಸಾದ್.ಹೆಚ್.ಸಿ ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಂ.ಜಿ.ಉಮಾ ಅವರು ಸಭೆಯನ್ನುದ್ದೇಶಿಸಿ ಸಂವಿಧಾನದ ದಿನಾಚರಣೆಯ ಕುರಿತು ಪ್ರಾಸ್ತವಿಕ ನುಡಿಯನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ, ಹಿರಿಯ ವಕೀಲ ಹಾಗೂ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಶಾಂತಿ.ಜಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್…

Read More