ಲೇಖಕ: admin

ಮಡಿಕೇರಿ ನ.24 : ಹಿಂದೂ ಮಲಯಾಳಿ ಸಂಘದ ವತಿಯಿಂದ ನ.26 ರಂದು ಮಡಿಕೇರಿಯಲ್ಲಿ ಮಲಯಾಳಿ ಬಾಂಧವರ “ಓಣಾಘೋಷಂ-ಓಣಂಸಧ್ಯ” ಹಬ್ಬ ಆಚರಿಸಲಾಗುವುದೆಂದು ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕಾವೇರಿ ಹಾಲ್‍ನಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಹೊರಟು ನಗರದ ಮುಖ್ಯ ರಸ್ತೆಯ ಮೂಲಕ ಸಾಗಿ ಕಾವೇರಿ ಹಾಲ್ ತನಕ ಓಣಾಘೋಷಂ ಮೆರವಣಿಗೆ ನಡೆಯಲಿದೆ ಎಂದರು. ಮಧ್ಯಾಹ್ನ 1 ಗಂಟೆಗೆ ಓಣಂ ಸಧ್ಯ ನಡೆಯಲಿದ್ದು, 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು,…

Read More

ಮಡಿಕೇರಿ ನ.24 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನ.27 ರಂದು ಸಂಜೆ 4.00 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯವರಾದ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.

Read More

ಮಡಿಕೇರಿ ನ.24 : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ನ.29 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ವರ್ಣಿತ್ ನೇಗಿ  ತಿಳಿಸಿದ್ದಾರೆ.

Read More

ಮಡಿಕೇರಿ ನ.24 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದಲ್ಲಿ ವೀಕ್ಷಿಸಿದರು. ನೂತನ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಕುರಿತು ಕಲಾವಿದ ಈ.ರಾಜು ಮತ್ತು ತಂಡದವರು ಹಾಡು ಹಾಡಿದರು. ಬೀದಿನಾಟಕ, ಸಂಗೀತ ಕಾರ್ಯಕ್ರಮಗಳು ಸೇರಿದಂತೆ ಹೆದ್ದಾರಿ ಫಲಕಗಳು ಹೀಗೆ ವಿವಿಧ ಮಾಧ್ಯಮಗಳ ಮೂಲಕ ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ಮಾಹಿತಿ ನೀಡಿದರು.

Read More

ಮಡಿಕೇರಿ ನ.24 : ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ವತಿಯಿಂದ 2023-24 ನೇ ಸಾಲಿನ ಪಿಎಚ್‍ಡಿ ಪದವಿಗಾಗಿ ವಿವಿಧ ವಿಭಾಗಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ www.mangaloreuniversity.ac.in  ಪಡೆಯಬಹುದಾಗಿದೆ.

Read More

ಮಡಿಕೇರಿ ನ.24 : ವಿದ್ಯಾರ್ಥಿಗಳು ಪ್ರಗತಿ ಕಾಣಬೇಕಿದ್ದರೆ ಗುರು-ಹಿರಿಯರಿಗೆ ಗೌರವ ನೀಡಬೇಕು ಎಂದು ಸಾಹಿತಿ ಮೇಚಿರ ಸುಭಾಷ್ ನಾಣಯ್ಯ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಸ್ತು ಬದ್ಧ ಜೀವನ ಮುಖ್ಯ. ಮೊಬೈಲ್ ಗೀಳನ್ನು ವಿದ್ಯಾರ್ಥಿಗಳು ಕಡಿಮೆ ಮಾಡಬೇಕು. ಹೆಚ್ಚು ಮೊಬೈಲ್ ಬಳಕೆಯಿಂದ ಮಾನವನ ಜ್ಞಾನ ಹಾಗೂ ಯೋಚನಾ ಶಕ್ತಿ ಕಡಿಮೆ ಮಾಡುತ್ತದೆ ಎಂದು ತಿಳಿಸಿದರು. ಪ್ರಶಸ್ತಿ ಪ್ರಶಂಸೆ ಮುಖ್ಯವಲ್ಲ. ಎಂದಿಗೂ ಅದರ ಹಿಂದೆ ಹೋಗಬಾರದು. ಪ್ರಯತ್ನಗಳಿಂದ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಕಾಯುವ ತಾಳ್ಮೆ ವಿದ್ಯಾರ್ಥಿಗಳಿಗೆ ಇರಬೇಕು ಎಂದು ಸುಭಾಷ್ ನಾಣಯ್ಯ ಅವರು ಹೇಳಿದರು. ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ ಅವರು ಮಾತನಾಡಿ ವಿದ್ಯಾರ್ಥಿಗಳ ಸವಾರ್ಂಗೀಣ ಅಭಿವೃದ್ಧಿ ಮುಖ್ಯವಾಗಿರುವುದರಿಂದ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ ಎಂದರು. ವಿದ್ಯಾರ್ಥಿಗಳಲ್ಲಿ ಪ್ರೌಢಶಾಲಾ ಹಾಗೂ ಪದವಿ ಹಂತದಲ್ಲಿಯೇ ಸ್ಪರ್ಧಾ ಮನೋಭಾವ ಬೆಳೆಸುವುದು ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಹಕರಿಸುತ್ತದೆ ಎಂದು ಪಿ.ಎಂ.ದೇವಕಿ…

Read More

ಮಡಿಕೇರಿ ನ.24 : ಹುದ್ದೆ ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಸಂಘದ ಪ್ರಮುಖರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು ಮತ್ತು ಸಾಮಾಜಿಕ ಭದ್ರತೆಯನ್ನು ನೀಡಬೇಕೆಂದು ಒತ್ತಾಯಿಸಿದರು. ಕರ್ನಾಟಕದಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರ ಅತಿಥಿ ಉಪನ್ಯಾಸಕರುಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇವರುಗಳ ಜೀವನ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತಂತ್ರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯ ವ್ಯಾಪಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು, ಕೊಡಗಿನಲ್ಲಿ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರ ತಕ್ಷಣ ನಮ್ಮ ಮನವಿಗೆ ಸ್ಪಂದಿಸಿ ಹುದ್ದೆ ಖಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಕೊಡಗು ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಘದ ಉಪಾಧ್ಯಕ್ಷ ನಟರಾಜ್, ಸಂಘದ ಸಂಘಟನಾ ಕಾರ್ಯದರ್ಶಿ ಮನೋಜ್…

Read More

ಮಡಿಕೇರಿ ನ.24 : ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಭರದಲ್ಲಿ ಮಾತೃಭಾಷೆಯನ್ನು ಮೂಲೆ ಗುಂಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿರುವ ಪೊಮ್ಮಕ್ಕಡ ಪರಿಷತ್‍ನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಮಕ್ಕಳಲ್ಲಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಆಸಕ್ತಿ ಹೆಚ್ಚಾಗಬೇಕು ಎಂದು ಕರೆ ನೀಡಿದ್ದಾರೆ. ವಿರಾಜಪೇಟೆ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್, ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಸಭಾಂಗಣದಲ್ಲಿ ನಡೆದ ವಿಚಾರ ಮಂಡನೆ, ಸನ್ಮಾನ ಹಾಗೂ “ನಾಡ ಕೊಡಗ್” ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾಷೆ, ಕಲೆ, ಜನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಮಹಿಳೆಯ ಪ್ರಮುಖ ಪಾತ್ರವಾಗಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಪದ್ಧತಿ ಪರಂಪರೆಯನ್ನೆ ಮರೆಯುತ್ತಿದ್ದಾರೆ. ತಮ್ಮ ನೆಲವನ್ನು ಇತರರಿಗೆ ಮಾರಿ ಮಣ್ಣಿನ ಸಂಬಂಧವನ್ನು…

Read More

ಮಡಿಕೇರಿ ನ.24 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಸಭೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆಯಿತು. ಮೊಗೇರ ಸಮಾಜದ ಗೌರವ ಸಲಹೆಗಾರ ಪಿ.ಎಂ.ರವಿ ಮಾತನಾಡಿ, ಮೊಗೇರ ಜನಾಂಗದ ಸಂಸ್ಕೃತಿ, ಪದ್ಧತಿ, ಪರಂಪರೆಯನ್ನು ಉಳಿಸಿ ಬೆಳೆಸುವುದರೊಂದಿಗೆ ಜನಾಂಗದ ಅಭಿವೃದ್ಧಿಗೆ ಶ್ರಮಿಸಲು ಸಂಘಟನೆಯ ಅಗತ್ಯವಿದೆ, ಪ್ರತಿಯೊಬ್ಬರು ಸಂಘಟನೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಮೊಗೇರ ಜನಾಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಎಲ್ಲಾ ಕ್ಷೇತ್ರದಲ್ಲೂ ಮೊಗೇರ ಸಮುದಾಯ ಗುರುತಿಸಿಕೊಳ್ಳುವಂತಾಗಬೇಕು. ಜಿಲ್ಲೆಯಾದ್ಯಂತ ಮೊಗೇರ ಸಮಾಜದ ಸಂಘಟನೆಯನ್ನು ಬಲಿಷ್ಠಗೊಳಿಸಲು ಸಮುದಾಯದ ಯುವಕ, ಯುವತಿಯರು ಮುಂದೆ ಬರಬೇಕು ಎಂದು ಕರೆ ನೀಡಿದರು. ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಗೌತಮ್ ಶಿವಪ್ಪ ಮಾತನಾಡಿ, ಸಮಾಜದ ಬೆಳವಣಿಗೆಗೆ ಎಲ್ಲರೂ ಮುಂಚೂಣಿಯಲ್ಲಿ ನಿಲ್ಲಬೇಕು. ನಮ್ಮ ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿ ಆಗಬೇಕಾದರೆ ನಾವೆಲ್ಲರೂ ಒಗ್ಗಟ್ಟಾಗಿ ಸಂಘಟನೆಯನ್ನು ಬಲಪಡಿಸಬೇಕು ಮತ್ತು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದರು. ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದ ಸಮಾಜದ ಜಿಲ್ಲಾಧ್ಯಕ್ಷ ಪಿ.ಬಿ.ಜನಾರ್ಧನ, ಮೊಗೇರ ಸಮಾಜದ ಅಧ್ಯಕ್ಷನಾಗಿ…

Read More

ಮಡಿಕೇರಿ ನ.24 : ರೀಬಿಲ್ಡ್ ಕೊಡಗು ಸಂಸ್ಥೆ ತನ್ನ 5ನೇ ವಾರ್ಷಿಕೋತ್ಸವದ ಹಿನ್ನೆಲೆ ವಿರಾಜಪೇಟೆ ನರ್ಸಿಂಗ್ ಹೋಮ್ ನ ರೋಗಿಗಳಿಗೆ ನಡೆದಾಡಲು ಪೂರಕವಾದ ಸ್ಟೀಲ್ ಸ್ಟಾಂಡ್ ವಾಕರ್, ವಾಕಿಂಗ್ ಸ್ಟಿಕ್, ವೀಲ್ ಚೇರ್ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ವಿತರಿಸಿತು. ಸಂಸ್ಥೆಯ ಸ್ಥಾಪಕ ಕೆ.ಎ.ಕುಶಾಲಪ್ಪ ಅವರು ಸಲಕರಣೆಗಳನ್ನು ವಿತರಿಸಿ ಮಾತನಾಡಿ, ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ವತಿಯಿಂದ ಇಂದು ಅಗತ್ಯ ವೈದ್ಯಕೀಯ ಸಾಧನ, ಸಲಕರಣೆಗಳನ್ನು ವಿತರಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅಸಹಾಯಕ ರೋಗಿಗಳ ಸಮಸ್ಯೆಯನ್ನು ಮನಗಂಡು ನಮ್ಮ ತಂಡ ಸಹಾಯ ಮಾಡುತ್ತಿದೆ ಎಂದರು. ಕೊಡಗಿನಲ್ಲಿ ಈ ಹಿಂದೆ ಯಾರೂ ಕಂಡು ಕೇಳರಿಯದ ರೀತಿಯಲ್ಲಿ ಜಲಪ್ರಳಯ ಉಂಟಾಗಿತ್ತು. ಇಂತಹ ಸಂದರ್ಭದಲ್ಲಿ ಮನೆ, ಆಸ್ತಿ ಕಳೆದುಕೊಂಡು ಅಸಾಹಯಕ ಸ್ಥಿತಿಯಲ್ಲಿದ್ದ ಕೊಡಗಿನ ಜನತೆಯ ಸಂಕಷ್ಟಕ್ಕೆ ನಮ್ಮಿಂದ ಸಾಧ್ಯವಾದಷ್ಟು ರೀತಿಯಲ್ಲಿ ಸ್ಪಂದಿಸಿದ್ದೇವೆ. ದೇಶವನ್ನು ಕಾಡಿದ ಕೋವಿಡ್ ಸೋಂಕು ಸಂದರ್ಭದಲ್ಲಿಯೂ ಸಂಕಷ್ಟಕ್ಕೀಡಾದ ಜನರ ನೆರವಿಗೆ ಧಾವಿಸಿದ್ದೇವೆ ಎಂದು ಹೇಳಿದರು. ಸಂಸ್ಥೆ ಸ್ಥಾಪನೆಯಾಗಿ 5 ವರ್ಷಗಳಾಗಿದೆ, ಇಲ್ಲಿಯವರೆಗೆ ಹಲವು…

Read More