ಲೇಖಕ: admin

ಮಡಿಕೇರಿ ಅ.28 :  ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ  ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಶಾಲನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ  ನಡೆದ  ಕಾರ್ಯಕ್ರಮದಲ್ಲಿ  ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ  ಗಣ್ಯರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ  ಗೌರವ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅಂದು 3ನೇ ಶತಮಾದಲ್ಲಿ ಬರೆದ ರಾಮಾಯಣವನ್ನು ನಾವು ಆಗಿನಿಂದ ಈಗಿನ ವರೆಗೂ ಅಳವಡಿಸಿಕೊಡು ಬಂದಿದ್ದೇವೆ. ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ 24000 ಶ್ಲೋಕಗಳು, 7 ಕ್ಯಾಂಟೋಗಳು ಮತ್ತು 4 ಲಕ್ಷಕ್ಕೂ ಹೆಚ್ಚು ಪದಗಳನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದರು. ಸುಮಾರು 10 ವರ್ಷಗಳಿಂದ ಕುಶಾಲನಗರ  ವಾಲ್ಮೀಕಿ ಸಮುದಾಯ ಭವನ ಪಾಳುಬಿದ್ದಿದ್ದು ಇದರ ದುರಸ್ತಿಗೆ ಬೇಕಾದ ಸೌಲಭ್ಯಗಳನ್ನು…

Read More

ಸುಂಟಿಕೊಪ್ಪ ಅ.28: ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಆದಿಕವಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಮಹರ್ಷಿ ವಾಲ್ಮೀಕಿಯು ಮಹರ್ಷಿಯಾಗಿ ಪರಿವರ್ತನೆಗೊಂಡು ಮನೆ ಮನೆಗಳಲ್ಲಿ ಪಾರಾಯಣ ಮಾಡುವಂತಹ ರಾಮಾಯಾಣ ಗ್ರಂಥವನ್ನು ಬರೆದ ಕಥಾನಾಕವನ್ನು ವಿವರಿಸದರು. ಕಾಲೇಜಿನ ಉಪನ್ಯಾಸಕಿ ಸುನೀತ ಗಿರೀಶ್ ಮತಾನಾಡಿ, ಮಹಾಕವಿ ವಾಲ್ಮೀಕಿ ಜೀವನ ಮತ್ತು ಸಂದೇಶವನ್ನು ವಿವರವಾಗಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಅ.28 : ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ನ.1 ರಿಂದ ವರ್ಷವಿಡೀ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯ ಎಲ್ಲಾ ಜನತೆಯ ಸಹಕಾರದಿಂದ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ನ.1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಅವರು ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ನ.1 ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ(ರೇಡಿಯೋ) ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ. ಸಂಜೆ…

Read More

ಮಡಿಕೇರಿ ಅ.28 : ವಿಶ್ವದ ಗುರುವಾದ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅವರು ಸಾವಿರಾರು ವರ್ಷಗಳ ಹಿಂದೆಯೇ ರಾಮಾಯಣ ಬರೆಯುವ ಮೂಲಕ ಬುದ್ದಿವಂತಿಕೆ ಪ್ರದರ್ಶನ ಮಾಡಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ತೋರಿರುವ ದಾರಿಯಲ್ಲಿ ನಡೆಯಬೇಕು. ಇಡೀ ದಕ್ಷಿಣ ಏಷ್ಯಾದಲ್ಲಿಯೇ ವಾಲ್ಮೀಕಿ ರಾಮಾಯಣ ಕಥೆಗಳನ್ನು ಅಧ್ಯಯನ ಮಾಡಬಹುದಾಗಿದೆ ಎಂದು ಕೆ.ರಾಮರಾಜನ್ ನುಡಿದರು. ‘ಬುದ್ದಿವಂತಿಕೆ ಯಾರ ಸೊತ್ತಲ್ಲ. ಅವಕಾಶಗಳು ಒಂದೊಂದು ರೀತಿ ಸಿಕ್ಕಿರುತ್ತವೆ. ಅದರಂತೆ ಅವರು ಮೇಲೆ ಬಂದಿರುತ್ತಾರೆ. ಅವಕಾಶ ವಂಚಿತರಿಗೆ ಅವಕಾಶಗಳೇ ಲಭ್ಯವಾಗುವುದಿಲ್ಲ. ಸಮಾಜದಲ್ಲಿ ಎಲ್ಲರಿಗೂ ಅವಕಾಶಗಳು ಸಿಗುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಪ್ರತಿಪಾದಿಸಿದರು.’ ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ…

Read More

ಮಡಿಕೇರಿ ಅ.28 : ಕೊಡಗು ಜಿಲ್ಲಾಡಳಿತ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನ.1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಬೆಂಗಳೂರು ಅ.28 : 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದ 8 ಮಂದಿ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಸಾಧಕರಿಗೆ ಪ್ರದಾನ ಮಾಡಿದರು. ನ್ಯಾಯಾಂಗ ಕ್ಷೇತ್ರದಿಂದ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್ ವೈ ಹನುಮಂತಪ್ಪ, ಧಾರ್ಮಿಕ ಕ್ಷೇತ್ರದಿಂದ ಮಹಾದೇವಮ್ಮ, ಶಿಕ್ಷಣ ಕ್ಷೇತ್ರದಿಂದ ರಾಮಣ್ಣ ಮಹಾದೇವ ಗಸಿ, ಸಮಾಜ ಸೇವೆ ಕ್ಷೇತ್ರದಿಂದ ಜಿ ಓ ಮಹಾಂತಪ್ಪ, ಸಾಮಾಜಿಕ ಸಂಘಟನೆ ವಲಯದಿಂದ ಸೋಮಣ್ಣ, ವೈದ್ಯಕೀಯ ಕ್ಷೇತ್ರದಿಂದ ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರದಿಂದ ಸುಕನ್ಯಾ ಮಾರುತಿ ಹಾಗೂ ರಂಗಭೂಮಿಯಿಂದ ಸುಜಾತಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ…

Read More

ಕಕ್ಕಬ್ಬೆ ಅ.28 :  ಕುಂಜಿಲ ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ ನ.3 ರಂದು  108ನೇ ವಾರ್ಷಿಕ ರಾತೀಬ್ ಮಜ್ಲಿಸ್ ಹಾಗೂ  ದುವಾ ಮಜ್ಲಿಸ್ ನಡೆಯಲಿದೆ. ಅಂದು ಮಗ್ರಿಬ್ ನಮಾಜಿನ ಬಳಿಕ ಕುಂಜಿಲ ಪೈನೆರಿ ಸಭಾಂಗಣದಲ್ಲಿ ನಡೆಯಲಿದ್ದು,  ಬಹುಮಾನ್ಯರಾದ ನಿಝಾರ್ ಅಹ್ಸನಿ ಕಕ್ಕಡಿಪುರಮ್ ಉಸ್ತಾದ್ ದುವಾ ನೇತೃತ್ವ ವಹಿಸಲಿದ್ದಾರೆ. ಖುತುಬುಲ್ ಆರಿಫೀನ್ ರಾತೀಬ್ ಸಂಘ ಬೃಹತ್ ರಾತೀಬ್ ಮಜ್ಲಿಸ್ನಲ್ಲಿ ನೇತೃತ್ವ ನೀಡಲಿದ್ದಾರೆ. ವರದಿ:ಸಾಜಿದ್ ಪಯ್ಯಡಿ 

Read More

ಹ್ಯಾಂಗ್​ಝೌ: ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಪ್ಯಾರಾ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್​ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಪ್ಯಾರಾ ಅಥ್ಲೀಟ್​ಗಳು ಮುರಿದಿದ್ದಾರೆ. ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಪ್ರಧಾನಿ ಮೋದಿ ಮೆಚ್ಚುಗೆ ::  ಈ ಮಹತ್ತರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್​ಗಳಿಗೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು,…

Read More

ನಾಪೋಕ್ಲು ಅ.28 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಪೋಕ್ಲುವಿನ 9ನೇ ತರಗತಿ ವಿದ್ಯಾರ್ಥಿನಿ ಅರೆಪ್ರಜ್ಞಾವಸ್ಥೆಯಲ್ಲಿ ಮನೆ ಸಮೀಪದ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದಾಳೆ. ಮರಂದೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅರೆಪ್ರಜ್ಞಾವಸ್ಥೆಯಲ್ಲಿದ್ದ ವಿದ್ಯಾರ್ಥಿನಿಯನ್ನು ನೋಡಿದ್ದಾರೆ. ಆಕೆಯನ್ನು ಮನೆಗೆ ಕರೆತಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ

Read More

ಮಡಿಕೇರಿ ಅ.28 :  ಜೀವನದಲ್ಲಿ ಯಾವುದೇ ನಕಾರಾತ್ಮಕ ಹಿನ್ನಲೆಯಿದ್ದರೂ ಕೂಡ ಸಕಾರಾತ್ಮಕದೆಡೆಗೆ ತೆರಳಿ ಮಾನಸಿಕವಾಗಿ ಪರಿವರ್ತನೆ ಹೊಂದಿ ಬದುಕನ್ನು ವಿಕಾಸಗೊಳಿಸಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ನೈಜ ಉದಾಹರಣೆ ಎಂದು ಸೈಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಹೇಮ  ಅಭಿಪ್ರಾಯಪಟ್ಟರು. ವಾಲ್ಮೀಕಿ ಜಯಂತಿಯ ಪ್ರಯುಕ್ತ ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ, ಕನ್ನಡ ಭಾಷಾ ವಿಭಾಗ ಹಾಗೂ ಇತರ ಭಾಷಾ ವಿಭಾಗದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆ ಪ್ರಯುಕ್ತ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಕುರಿತು ಹಾಗೂ ಪ್ರಸ್ತುತ ದಿನಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಏಕೆ ಅಗತ್ಯ ಎಂಬುದನ್ನು ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ  ಪ್ರತಿಮಾ ರೈ  ಪ್ರಾಸ್ತಾವಿಕ ನುಡಿಯ ಮುಖಾಂತರ ಕಾರ್ಯಕ್ರಮದ ಸ್ವರೂಪದ ಉದ್ದೇಶ ಮನದಟ್ಟು ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ಮಾತನಾಡಿ,  ವಾಲ್ಮೀಕಿ ಜೀವನ ಹಿನ್ನೆಲೆ ಹಾಗೂ ಭಾರತೀಯ ಸಾಹಿತ್ಯದಲ್ಲಿ ಅವರ ಕೊಡುಗೆ…

Read More