ಲೇಖಕ: admin

ಮಡಿಕೇರಿ ನ.23 : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನವು ನ.28 ರಂದು ಬೆಳಗ್ಗೆ 10.30 ಗಂಟೆಗೆ ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ https://navodaya.gov.in/nvs/nvs-school/KODAGU/en/home/ ದೂ.ಸಂ. 8921089811, 6361148504 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್  ತಿಳಿಸಿದ್ದಾರೆ.

Read More

ಮಡಿಕೇರಿ ನ.23 : ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ನಿಶಾನ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸೋಮಣ್ಣ ಮಿಮಿಕ್ರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ಕಾರ್ಯದರ್ಶಿ ಪಿ.ಎನ್.ವಿನೋದ್, ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Read More

ವಿರಾಜಪೇಟೆ ನ.23 : ಮೈಸೂರಿನಲ್ಲಿ ನಡೆದ 3ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಪ್ಸರ ಜಯನ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಕರಾಟೆ ಶಿಕ್ಷಕ ಎಂ.ಬಿ. ಚಂದ್ರನ್ ಅವರಲ್ಲಿ ತರಬೇತಿ ಮತ್ತು ಮಾರ್ಗದರ್ಶ ಪಡೆದಿದ್ದಾರೆ. ಶಾಲಾ ಸಂಯೋಜಕರಾದ ಅಮೃತ, ಶಿಕ್ಷಕಿ ಟಿ.ಜಿ.ಕಲ್ಪ ಹಾಜರಿದ್ದರು. ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ಸಿಬ್ಬಂದಿಗಳು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದರು.

Read More

ಮಡಿಕೇರಿ ನ.23 : ಕರ್ನಾಟಕ ಸ್ಪೋರ್ಟ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ವಲಯ ಮಟ್ಟದ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಇಂಟೋಪೀಸ್ ಡ್ಯಾನ್ಸ್ ತಂಡ 8 ಚಿನ್ನ, 5 ಬೆಳ್ಳಿ, 7 ಕಂಚಿನ ಪದಕವನ್ನು ಪಡೆದು ರಾಜ್ಯ ಮಟ್ಟದ ಚಾಂಪಿಯನ್‍ಶಿಪ್ ಗೆ ಆಯ್ಕೆಯಾಗಿದೆ.

Read More

ಮಡಿಕೇರಿ.ನ23  :  ಕೊಡಗಿನ ಜನತೆ ಕಾನೂನಿಗೆ ಸೂಕ್ತ ಗೌರವ ನೀಡುತ್ತಿದ್ದು, ರಾಜಿ ಪಂಚಾಯತ್ ಗಳಿಗೆ ಆದ್ಯತೆ ನೀಡದೇ ಇರುವುದರಿಂದಲೇ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ ಜಿಲ್ಲೆಯಲ್ಲಿ ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಆಯೋಜಿತ ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತ ವಿಚಾರಗೋಷ್ಟಿ ಉದ್ಘಾಟಿಸಿ ರಾಮರಾಜನ್ ಮಾತನಾಡಿದರು. ಶಿಸ್ತು ಮತ್ತು ಶಿಕ್ಷಣವಂತರಾದ ಕೊಡಗಿನ ಜನತೆ ಹೆಚ್ಚಿನ ಪಾಲು ಕಾನೂನು ಅನುಸರಿಸುತ್ತಾ ನಿಯಮಗಳನ್ನು ಪಾಲಿಸುತ್ತಾರೆ. ಹೀಗಾಗಿಯೇ ಇಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳ ಸಂದಭ೯ ರಾಜಿಪಂಚಾಯತ್ , ಒತ್ತಡ ಹೇರುವಿಕೆ ಗಣನೀಯವಾಗಿ ಕಡಮೆಯಿದೆ. ಇದರಿಂದಾಗಿಯೇ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಶಿಕ್ಷೆಯ ಪ್ರಮಾಣ ಕೊಡಗಿನಲ್ಲಿ ಹೆಚ್ಚಾಗಿದೆ ಎಂದರು. ಮಾದಕ ವ್ಯಸನಿಗಳಿಗೆ ಮಾದಕ ಪದಾಥ೯ಗಳನ್ನು ಅಂಗಡಿಗಳಲ್ಲಿ ಯಾರೂ ನೀಡಬಾರದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ…

Read More

ಮಡಿಕೇರಿ ನ.23 : ಎಲ್ಲಾ ಕೊಡವ ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಡಿ.29 ಮತ್ತು 30 ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ (“ಗ್ಲೋಬಲ್ ಕೊಡವ ಸಮ್ಮಿಟ್”) ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲೆ, ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶದಲ್ಲಿ ನೆಲೆಸಿರುವ ಕೊಡವ ಜನಾಂಗ ಬಾಂಧವರು ಸೇರಿದಂತೆ ಸುಮಾರು 20 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಕೊಡವರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ, ಕೊಡವರು ಎದುರಿಸುತ್ತಿರುವ ಸಮಸ್ಯೆಗಳು, ಕೊಡವರ ಸಂಸ್ಕೃತಿ, ಸಂಪ್ರದಾಯ ಹಾಗೂ ಕೊಡವರ ವಿನೂತನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಮತ್ತು ಮುಂದಿನ ನಡೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ವಿಶಿಷ್ಟ ಕಾರ್ಯಕ್ರಮವನ್ನು ಹಲವು ವರ್ಷಗಳ ಅಧ್ಯಯನದ ನಂತರ…

Read More

ಮಡಿಕೇರಿ ನ.23 : ವಿವಿಧ ಕ್ಷೇತ್ರಗಳಲ್ಲಿನ ಅಸಂಘಟಿತ ಕಾರ್ಮಿಕ ಸಮೂಹಕ್ಕೆ ಆರ್ಥಿಕ ಚೈತನ್ಯವನ್ನು ಒದಗಿಸುವ ಮೂಲಕ ರಾಷ್ಟ್ರಾಭ್ಯುದಯದ ಚಿಂತನೆಯಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ಸಮಾಜದ ತಳ ಹಂತದಲ್ಲಿರುವವರ ಆಶಾಕಿರಣವಾಗಿದೆ ಎಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕರಾದ ಮಾಜಿ ಸಚಿವ ಎ.ರಾಮದಾಸ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯೋಜನೆಯ ವಿವರಗಳನ್ನು ನೀಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಬೀದಿ ಬದಿ ವ್ಯಾಪಾರಿಗಳ ನೆರವಿನ ಚಿಂತನಡಿಯಡಿ ರೂಪುಗೊಂಡ ಪಿಎಂ ಸ್ವನಿಧಿ ಯೋಜನೆಯಡಿ ಪ್ರಸ್ತುತ ಪತ್ರಿಕಾ ವಿತರಕರು, ವಿವಾಹ ಸಮಾರಂಭಗಳಲ್ಲಿ ಛಾಯಾಚಿತ್ರ ತೆರೆಯುವವರು, ವಿಡಿಯೋಗ್ರಾಫರ್‍ಗಳು, ಹಾಲು ವಿತರಕರು, ಹೂ ಕಟ್ಟುವವರು ಮತ್ತು ಮಾರುವವರು ಹೀಗೆ 23 ವಿವಿಧ ಕ್ಷೇತ್ರಗಳ ಅಸಂಘಟಿತರನ್ನು ಸೇರ್ಪಡೆಗೊಳಿಸಿ, ಅವರಿಗೆ ಯೋಜನೆಯ ನೆರವನ್ನು ವಿಸ್ತರಿಸಲಾಗಿದೆ ಎಂದರು. ಸ್ವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗೆ ಮೊದಲ ಹಂತದಲ್ಲಿ 10ಸಾವಿರ, ಎರಡನೇ ಹಂತದಲ್ಲಿ 20 ಸಾವಿರ ರೂ., ಮೂರನೇ ಹಂvದಲ್ಲಿ 50ಸಾವಿರ ರೂ. ಮತ್ತು…

Read More

ಮಡಿಕೇರಿ ನ.23 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ‘ಉತ್ಥಾನ ದ್ವಾದಶಿ’ ಪ್ರಯುಕ್ತ ದೇವಾಲಯದ ರೂಢಿ ಸಂಪ್ರದಾಯದಂತೆ “ತುಳಸಿ ಪೂಜೆ” ಯನ್ನು ನ.24 ರಂದು ಸಂಜೆ 6.30 ರಿಂದ 7.30 ಗಂಟೆಗೆ ನಡೆಸಲಾಗುವುದು. ಈ ದಿನದಂದು ಸೇವಾಕರ್ತರು ತಮ್ಮ ಹೆಸರನ್ನು ದೇವಾಲಯದಲ್ಲಿ ನೋಂದಾಯಿಸುವ ಮೂಲಕ ಸೇವೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಅಣ್ಣಪ್ಪ ಜೆ.ಆರ್. ಮೊ.ಸಂ.9902290302 ಹಾಗೂ ಕುಶಕುಮಾರ್ ಜೆ.ಎನ್. ಮೊ.ಸಂ.9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ನ.23 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’’ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿ ಅವಧಿ 6 ತಿಂಗಳು. ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ರಂತೆ ಶಿಷ್ಯವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 8792628437, 9845318364, 9663153922, 8762925862, 8762110952ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ತಿಳಿಸಿದ್ದಾರೆ. 

Read More

ಮಡಿಕೇರಿ ನ.23 : ವಿಶ್ವ ಹಿಂದು ಪರಿಷದ್ ವತಿಯಿಂದ ನ.26 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ನಡೆಯಲಿದೆ. ಸಂಜೆ 5 ಗಂಟೆಗೆ ಭಾಗಮಂಡಲದ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಜನೆ, ವೇದಘೋಷಗಳೊಂದಿಗೆ ಕಾವೇರಿ ತಾಯಿಗೆ ಕಾವೇರಿ ಆರತಿ ನೆರವೇರಲಿದೆ. ಮುಖ್ಯ ಭಾಷಣಕಾರರಾಗಿ ಸುವರ್ಣ ನ್ಯೂಸ್ ಚಾನಲ್ ನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ. ವಿಶ್ವ ಹಿಂದು ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಉಪಸ್ಥಿತರಿರುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾತೆ ಕಾವೇರಿಗೆ ಆರತಿ ಬೆಳಗುವಂತೆ ವಿಶ್ವ ಹಿಂದು ಪರಿಷದ್ ನ ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Read More