ಸಿದ್ದಾಪುರ ನ.23 : ಸೇವಾ ಮನೋಭಾವದ ಸಮಾಜ ಸೇವೆಗಾಗಿ ಪಾಲಿಬೆಟ್ಟದ ಮೂಕೊಂಡ ವಿಜು ಸುಬ್ರಮಣಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಸದಸ್ಯರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಪರಿಸರ ಕಾಳಜಿಯೊಂದಿಗೆ ಕ್ರೀಡೆ, ಶಿಕ್ಷಣ, ಆರೋಗ್ಯ ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ವಿಜು ಸುಬ್ರಮಣಿಯವರ ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕಳತ್ತೂರು ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಪಂಡಿತ್ ದಿನೇಶ್ ಗುರೂಜಿ ಅವರ ಸಂಸ್ಥೆಯ 4ನೇ ರಾಜ್ಯಮಟ್ಟದ ಜ್ಯೋತಿಷ್ಯ ಹಾಗೂ ಸಾಧಕ ಸಮಾವೇಶದಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಾಗಿಣಿ ಭರಣ, ಪಂಡಿತ್ ದಿನೇಶ್ ಗುರೂಜಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಲೇಖಕ: admin
ವಿರಾಜಪೇಟೆ ನ.23 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ರಂಗೋಲಿ ಸ್ಪರ್ಧೆ, ಕ್ರೀಡಾ ಸ್ಪರ್ಧೆ ಹಾಗೂ ಗ್ರಾಹಕರ ಸಂಘದ ವತಿಯಿಂದ ಮಕ್ಕಳ ಸಂತೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಅರುಣ್ ಆನ್ಸಿ ಡಿಸೋಜ ಭಾಷೆ ಹಾಗೂ ಪಠ್ಯ ವಿಷಯಕ್ಕೆ ಸಂಬಂಧಿಸಿದ ರಂಗೋಲಿ ಸ್ಪರ್ಧೆ ಉದ್ಘಾಟನೆ ಮಾಡಿದರು. 8,9,10ನೇ ತರಗತಿಯ ವಿದ್ಯಾರ್ಥಿಗಳು ತ್ರಿಭುಜ, ಹೃದಯ, ಮೆದುಳು, ನರಮಂಡಲ, ಕಿವಿ, ಸಮಾಸ, ಇಂಗ್ಲೀಷ್ ವ್ಯಾಕರಣ, ಭಾರತದ ನಕ್ಷೆ ಇತ್ಯಾದಿಗಳನ್ನು ರಂಗೋಲಿಯ ಮೂಲಕ ಚಿತ್ರಿಸಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೂ, ಪೋಷಕರಿಗೂ, ವಿಷದ ಚೆಂಡು, ಸಂಗೀತ ಖುರ್ಚಿ, ಬಾಲ್ ಇನ್ ದಿ ಬಕೆಟ್, ಬಾಂಬ್ ಇನ್ ದಿ ಸಿಟಿ ಇತ್ಯಾದಿ ಮನೋರಂಜನಾ ಕ್ರೀಡೆಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್.ಜಿ.ಲಿನ್ನಿ ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುರೇಶ್ ಮಕ್ಕಳ ಸಂತೆ ಕಾರ್ಯಕ್ರಮವನ್ನು ಮಕ್ಕಳಿಂದ ತರಕಾರಿ ವ್ಯಾಪಾರ ಮಾಡುವ ಮೂಲಕ ಉದ್ಘಾಟಿಸಿದರು. ಮಕ್ಕಳು ಸ್ಥಳೀಯವಾಗಿ ಸಿಗುವ ಸೊಪ್ಪು, ತರಕಾರಿ, ಹೇರಳೆಕಾಯಿ ಇತ್ಯಾದಿಗಳನ್ನು ತಂದು ವ್ಯಾಪಾರ ಮಾಡಿ ಗಮನ…
ಪುತ್ತೂರು ನ.23 : ರಾಜ್ಯ ಮಟ್ಟದ ಜೂನಿಯರ್ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ ಕಂಚಿನ ಪದಕ ಗೆದ್ದಿದ್ದಾರೆ. ಕರ್ನಾಟಕ ರಾಜ್ಯ ವೆಯ್ಟ್ ಲಿಫ್ಟಿಂಗ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ 67ಕೆಜಿ ವಿಭಾಗದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ. ಇವರು ಪುತ್ತೂರಿನ ಜಗದೀಶ್ ಭಂಡಾರಿ ಹಾಗೂ ನಯನಾ ಭಂಡಾರಿ ಇವರ ಪುತ್ರ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನ ವಿಶ್ರಾಂತ ಯೋಧ ಹಾಗೂ ರಾಷ್ಟ್ರೀಯ ವೈಟ್‌ಲಿಫ್ಟರ್ ಪುಷ್ಪರಾಜ್ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ನ.23 : ಪ್ರಸಕ್ತ(2023-24) ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ, ಮರಗೆಲಸ ಮತ್ತು ಗಾರೆ ಕಸುಬಿನ ಸುಧಾರಿತ ಉಪಕರಣ ಪಡೆಯಲು ಆಸಕ್ತಿಯುಳ್ಳ ಗ್ರಾಮೀಣ ಪ್ರದೇಶದ ವೃತ್ತಿನಿರತ ಕಸುಬುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ದಾಖಲಾತಿಗಳೊಂದಿಗೆ https://kodagu.nic.in/en/application-for-free-toolkits-for-rural-artisans-during-the-year-2023-24/2023-24/ ವೆಬ್‍ಸೈಟ್‍ನಲ್ಲಿ ಡಿ.20 ರೊಳಗೆ ಅಪ್‍ಲೋಡ್ ಮಾಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ವೋಟರ್ ಐಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಪಡೆದ ಪ್ರಮಾಣ ಪತ್ರ(ಸರ್ಟಿಫಿಕೇಟ್ ಪ್ರಮ್ ಪಂಚಾಯತ್ ಡೆವಲೆಪ್‍ಮೆಂಟ್ ಆಫಿಸರ್(ಫಾರ ಟೈಲರಿಂಗ್, ಮೆಷಿನ್ ಮತ್ತು ಕಾರ್‍ಫೆಂಟರಿ) ದಾಖಲಾತಿಗಳನ್ನು ನೀಡುವುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು(ಗ್ರಾಮೀಣ ಕೈಗಾರಿಕೆ) ರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ ದೂ.ಸಂ.08272-228113 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ. ಅರ್ಹತೆ:-ವಿದ್ಯುತ್ ಚಾಲಿತ ಹೊಲಿಗೆಯಂತ್ರ…
ಮಡಿಕೇರಿ ನ.22 : ಅವಕಾಶ ವಂಚಿತ ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಪ್ರಕಟಪಡಿಸಲು ಹಾಗೂ ಚಿಣ್ಣರಾಗಿ ಸಂತೋಷ ಹಾಗೂ ಖುಷಿ ಯಿಂದಿರಲು ನ.25 ರಂದು ಒಂದು ದಿನದ `ಬಾಲಮೇಳ-2023′ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ನ.25 ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬಾಲಮೇಳವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಉದ್ಘಾಟಿಸಲಿದ್ದಾರೆ. ನಂತರ ಸಂಜೆ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಹೈಕೋರ್ಟ್ ನ್ಯಾಯಾಧೀಶರಾದ ಉಮಾ ಎಂ.ಜಿ., ಜಿಲ್ಲಾ ಮುಖ್ಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ರಾಜ್ಯ ಕಾನೂನು ಪ್ರಾಧಿಕಾರದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. `ಬಾಲ ಮೇಳ-2023′ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ 200 ಮಕ್ಕಳು ಭಾಗವಹಿಸಲಿದ್ದು, ಇವರು ತಮ್ಮ ಚಿಂತನೆ, ಯೋಜನೆಗಳನ್ನು, ಪ್ರತಿಭೆ ಮತ್ತು ಕನಸುಗಳನ್ನು ಹಂಚಿಕೊಳ್ಳುವರು. ಮೇಳದಲ್ಲಿ ಹಲವಾರು ಸಂತೋಷದಾಯಕ ಆಟಗಳು ಮತ್ತು ಚಟುವಟಿಕೆಗಳ ಸ್ಟಾಲ್‍ಗಳಿದ್ದು ಇವುಗಳಲ್ಲಿ ಮಕ್ಕಳು ಭಾಗವಹಿಸಲಿದ್ದಾರೆ. ಹಾಗೂ ಈ…
ಬೆಂಗಳೂರು ನ.23: ಉಸ್ತುವಾರಿ ಸಚಿವರ ಆಪ್ತಸಹಾಯಕರು ಅಥವಾ ಕಚೇರಿ ಹೆಸರಿನಲ್ಲಿ ಹಣ ಕೇಳುವವರ ವಿರುದ್ದ ದೂರು ದಾಖಲಿಸಿ ತನಿಖೆ ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡುಗು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಸೂಚನೆ ನೀಡಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ್ ತಿಳಿಸಿದ್ದಾರೆ. ಆಪ್ತ ಸಹಾಯಕರ ಸೋಗಿನಲ್ಲಿ ಅಧಿಕಾರಿಗೆ ಹಣಕ್ಕೆ ಬೇಡಿಕೆಯಿಟ್ಟಿರುವ ಪ್ರಕರಣದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಯಾರೇ ಹಣಕ್ಕೆ ಬೇಡಿಕೆಯಿಡುವ ಪ್ರಕರಣ ಕಂಡಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು. ಹಾಗೆಯೇ, ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಪ್ರಕರಣಗಳ ಬಗ್ಗೆ ಯಾವುದೇ ಹಿಂಜರಿಕೆಯಿಲ್ಲದೆ ಪೊಲೀಸರಿಗೆ ದೂರು ನೀಡಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದು, ಈ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ನೀಡುವಂತೆಯೂ ಮನವಿ ಮಾಡಿದ್ದಾರೆ.
ಮಡಿಕೇರಿ ನ.23 : 2023 ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯು ಜಿಲ್ಲಾ ಮಟ್ಟದಲ್ಲಿ ಡಿ.3 ರಂದು ಆಚರಿಸುವ ಸಲುವಾಗಿ ಜಿಲ್ಲೆಯ ಮೂರು ತಾಲ್ಲೂಕುಗಳ ವಿಶೇಷಚೇತನರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನ.24 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ದಸರಾ ಮೈದಾನ, ನ.29 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನ ಮತ್ತು ನ.29 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಜಿಲ್ಲೆಯ ಎಲ್ಲಾ ವಿಶೇಷ ಚೇತನರು ಆಯಾಯ ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಾಗೂ ಡಿ.3 ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನಾಚರಣೆಯನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೋರಿದ್ದಾರೆ.
ಮಡಿಕೇರಿ ನ.23 : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಕಾರ್ಯ ನಿರ್ವಹಿಸಬೇಕು ಎಂದರು. ಅಧಿವೇಶನದ ಜವಾಬ್ದಾರಿ ಸಭಾಧ್ಯಕ್ಷರ ಮೇಲಿರುತ್ತದೆ. ಅಧಿವೇಶನದಲ್ಲಿ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತವೆ. ಒಟ್ಟಾರೆ ಸಮಾಜಮುಖಿಯಾಗಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಉತ್ತಮ ಸಂಸದೀಯ ಪಟುಗಳಾಗಿ ಯುವ ಪೀಳಿಗೆ ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಎ.ಪಿ.ಧನಂಜಯ್ ಮಾತನಾಡಿ ದೇಶ ಕಟ್ಟುವ ನಿಟ್ಟಿನಲ್ಲಿ ಯುವ ಪೀಳಿಗೆಗಾಗಿ ಇಂತಹ ಪ್ರಯತ್ನ ಶ್ಲಾಘನೀಯ. ಸರ್ಕಾರದ ಪಾತ್ರ, ಕಾನೂನಿನ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…
ಮಡಿಕೇರಿ ನ.23 : ಜಿಲ್ಲೆಯಲ್ಲಿ ಮಕ್ಕಳಲ್ಲಿನ ರಕ್ತಹೀನತೆ ತಡೆಯುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ `ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನ’ ಕಾರ್ಯಕ್ರಮಕ್ಕೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 10,359 ಪದವಿ ಪೂರ್ವ ಕಾಲೇಜಿನ ಮಕ್ಕಳನ್ನು ಪ್ರಥಮ ಹಂತದಲ್ಲಿ ಪರೀಕ್ಷಿಸಿ, ರಕ್ತಹೀನತೆ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಅಗತ್ಯ ಮಾತ್ರೆ ಹಾಗೂ ಔಷಧಿಯನ್ನು ನಿಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲೆಯಾದ್ಯಾಂತ ಮೊದಲ ಹಂತವಾಗಿ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆಯನ್ನು ನಡೆಸಿ ಪೂರಕ ಮತ್ತು ಚಿಕಿತ್ಸಾತ್ಮಕವಾಗಿ ಐಎಫ್‍ಎ-ಪಿಂಕ್ ಮತ್ತು ಬ್ಲೂ ಮಾತ್ರೆಗಳನ್ನು ನೀಡಿ ಎಲ್ಲಾ ಮಕ್ಕಳನ್ನು ಅನೀಮಿಯಾ ತಡೆಯುವ ಉದ್ದೇಶದಿಂದ ಆರೋಗ್ಯ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ವಿದ್ಯಾರ್ಥಿಗಳಲ್ಲಿ ಅನೀಮಿಯದಿಂದಾಗುವ ಸುಸ್ತು, ಬೆಳವಣಿಗೆಯಲ್ಲಿ…
ಮಡಿಕೇರಿ ನ.23 : ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ `ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ’ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ವೀಕ್ಷಿಸಿದರು. ಈಗಾಗಲೇ ಕಾಮಗಾರಿ ತುಂಬಾ ವಿಳಂಬವಾಗಿದ್ದು, ಆದಷ್ಟು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕಾಮಗಾರಿ ಪೂರ್ಣಗೊಂಡ ನಂತರ ಬಾಕಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ ಅವರು ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದ ತಳ ಮಹಡಿಯಲ್ಲಿ ಕೊಡವ ಮತ್ತು ಅರೆಭಾಷೆ ಅಕಾಡೆಮಿ ಕಚೇರಿಗಳು, ಗ್ರಂಥಾಲಯ, ವಾಹನ ನಿಲುಗಡೆ, ನೆಲಮಹಡಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಗ್ರಂಥಾಲಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಮತ್ತು ರಿಜಿಸ್ಟ್ರಾರ್‍ಗಳ ಕಚೇರಿ, ಮೊದಲ ಮಹಡಿಯಲ್ಲಿ ವೇದಿಕೆ ಸಭಾಂಗಣ, ಎರಡನೇ ಮಹಡಿಯಲ್ಲಿ ಡಾರ್ಮೆಟ್ರರಿ ಒಳಗೊಂಡಿದೆ ಎಂದು ಮಾಹಿತಿ ನೀಡಿದರು. ಸಹಾಯಕ ಎಂಜಿನಿಯರ್ ಸತೀಶ್, ಕಾಮಗಾರಿ ಸಂಬಂಧಿಸಿದಂತೆ…






