ಮಡಿಕೇರಿ ನ.22 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ನವೆಂಬರ್, 23 ರಂದು ಮಧ್ಯಾಹ್ನ 2.30 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ನ.22 : ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ನ.23 ರಂದು ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ವಿಚಾರಗೋಷ್ಠಿ ನಡೆಯಲಿದೆ. ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ. ವಿಚಾರಗೋಷ್ಟಿಯಲ್ಲಿ ಮೈಸೂರು ವೖತ್ತದ ಉಪಔಷಧ ನಿಯಂತ್ರಕ ಬಿ.ಪಿ. ಅರುಣ್, ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗುರುನಾಥ್ ಮಾಗಣಗೇರಿ, ಜಿಲ್ಲಾ ಕಾಮಿ೯ಕ ಅಧಿಕಾರಿ ಎಸ್.ಎಲ್.ಹಷ೯ವಧ೯ನ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಅನಿಲ್ ಧವನ್, ಕೊಡಗು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಆನಂದ್, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾನೂನು ಸಲಹೆಗಾರಕೆ.ಹರೀಶ್ , ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಜೀವನ್ ಮಾಹಿತಿ ನೀಡಿದ್ದಾರೆ.
ಮಡಿಕೇರಿ ನ.22 : ನೆಲ್ಯಾಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ನ.27 ರಂದು ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಜರುಗಲಿದ್ದು, ರಾತ್ರಿ 8.30ಕ್ಕೆ ಕದಿರು ತೆಗೆಯಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.
ಮಡಿಕೇರಿ ನ.22 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ 07 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಡಿ.15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್ 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್ 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸುವಂತೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ…
ಸುಂಟಿಕೊಪ್ಪ ನ.22 : ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕ್‍ರ್‍ವೊಂದು ರಸ್ತೆ ಬದಿಯ ಹೊಟೇಲ್‍ವೊಂದಕ್ಕೆ ನುಗ್ಗಿರುವ ಘಟನೆ ಗದ್ದೆಹಳ್ಳದಲ್ಲಿ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಶಾಲನಗರ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರೊಂದು ರಾತ್ರಿ 1 ಗಂಟೆಯ ಸುಮಾರಿಗೆ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳದ ಮಸೀದಿ ಸಮೀಪದ, ಹಂಸ ಎಂಬವರಿಗೆ ಸೇರಿದ ಹೋಟೆಲ್‍ಗೆ ಡಿಕ್ಕಿಯಾಗಿದೆ. ಇದರಿಂದ ಹೋಟೆಲ್ ಮುಂಭಾಗ ಸೇರಿದಂತೆ, ಅದರ ಒತ್ತಿನಲ್ಲಿರುವ ಕೆ.ಕೆ. ಸೌಂಡ್ಸ್ ಶಾಮಿಯಾನ ಅಂಗಡಿಗೆ ಹಾನಿಯಾಗಿದೆ. ಈ ಸಂದರ್ಭ ಹೋಟೆಲ್ ಮತ್ತು ಸೌಂಡ್ಸ್ ಮಳಿಗೆಯಲ್ಲಿ ಯಾರು ಇರಲಿಲ್ಲವಾದ್ದರಿಂದ, ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಘಟನೆಗೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ನ.21 : ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ “ಕರ್ನಾಟಕ ಸಾಧಕ ರತ್ನ” ರಾಜ್ಯೋತ್ಸವ ಪ್ರಶಸ್ತಿಗೆ ಆರ್.ಕೆ.ಬಾಲಚಂದ್ರ ಆಯ್ಕೆಯಾಗಿದ್ದಾರೆ. ಆರ್.ಕೆ.ಬಾಲಚಂದ್ರ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ , ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ಮಡ ಕಲಿಸುವಿಕೆ, ರಾಜ್ಯಾದ್ಯಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ನೀಡಿದ ತರಬೇತಿಯ ಸೇವೆ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವಿಸಲಾಗುವುದು. ನ.26 ರಂದು ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ನಾಪೋಕ್ಲು ನ.21 : ಕೈಕಾಡು ಗ್ರಾಮ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದ ಪಿ.ಸಿ. ಅಪ್ಪಾಜಿ(ಪೇರಿಯಂಡ-81) ನಿಧನರಾಗಿದ್ದಾರೆ. ಇವರು ಪ್ರಖ್ಯಾತ ಕೊಡವ ಆಂದೊಳತ ಪಾಟ್ ಅನ್ನು ಬರೆದ ಪೇರಿಯಂಡ ದಿವಂಗತ ಚೆಂಗಪ್ಪನವರ ಕಿರಿಯ ಪುತ್ರ. ಪ್ರಾರಂಭದಲ್ಲಿ ಪತ್ರಕರ್ತರಾಗಿ ಕೊಡಗು ದೈನಿಕ (ಕೊಡಗು ಪ್ರೆಸ್ಸ್) ದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ ಇವರು ತದನಂತರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿ ಅoತಿಮವಾಗಿ ದಿ. ಮೈಸೂರ್ ಪ್ರಿಂಟರ್ಸ್ ಲಿಮಿಟೆಡ್ ನ ಪ್ರಜಾವಾಣಿ ಪತ್ರಿಕೆಯ ಕ್ರೀಡಾ ವಿಭಾಗದಲ್ಲಿ, ವಿಶೇಷವಾಗಿ ಕುದುರೆ ಓಟದ ಬರವಣಿಗೆಗಾರರಾಗಿ ಜನಮನ್ನಣೆ ಗಳಿಸಿದ್ದರು. ಇವರ ಅಂತ್ಯಕ್ರಿಯು ನ.22 ರಂದು ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ ಸ್ವಂತ ನಿವಾಸದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ನ.21 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.26 ರಂದು ನಡೆಯುವ 33 ನೇ ಕೊಡವ ನ್ಯಾಷನಲ್ ಡೇ ಯಶಸ್ಸಿಗಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ದೇವಟ್ ಪರಂಬುವಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡವ ನರಮೇಧದ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಮುಖರು ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರನ್ನು ಸ್ಮರಿಸಿದರು. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಕೊಡವ ನ್ಯಾಷನಲ್ ಡೇ ಸಂದರ್ಭ ಮತ್ತೊಮ್ಮೆ ಕೊಡವರ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಅಂದು ಭಾರತೀಯ ಸಂವಿಧಾನದ ದಿನವನ್ನು ಕೂಡ ಸಿಎನ್‍ಸಿ ವತಿಯಿಂದ ಆಚರಿಸಲಾಗುವುದು ಎಂದು ನಾಚಪ್ಪ ಹೇಳಿದರು. ಪುತ್ತರಿ ಹಬ್ಬ ಸರ್ವರಿಗೂ ಧಾನ್ಯ, ಸಂಪತ್ತು, ಪ್ರಶಾಂತತೆ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದರು. ಸಿಎನ್‍ಸಿಯ ಸದಸ್ಯರಾದ ಕಲಿಯಂಡ ಪ್ರಕಾಶ್, ಅಲ್ಮಂಡ ಜೈ, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್ ಮತ್ತಿತರರು ವಿಶೇಷ ಪ್ರಾರ್ಥನೆ ಸಂದರ್ಭ ಹಾಜರಿದ್ದರು.
ಮಡಿಕೇರಿ ನ.21 : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಸಿದ್ಧಗೊಳಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಘಟಕ, ಎನ್‍ಎಸ್‍ಎಸ್ ಘಟಕ ಹಾಗೂ ನಗರದ ಲಯನ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಲಯನ್ಸ್ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ…
ಕಡಂಗ ನ.21 : ಕರ್ನಾಟಕ ಹಾಗೂ ಕೇರಳದ ನಾನಾ ಭಾಗಗಳಲ್ಲಿ ಹಲವಾರು ರೋಗಿಗಳಿಗೆ ಹಾಗೂ ಬಡ ಅನಾಥ ಕುಟುಂಬಕ್ಕೆ ಸಹಾಯಕ್ಕಾಗಿ ಜಾಲತಾಣಗಳ ಮೂಲಕ ವಿಡಿಯೋ ಮಾಡಿ ಜನ ಮನ ಗೆದ್ದ ಚಾರೀಟಿ ಕಾರ್ಯಕರ್ತ ನಾಪೋಕ್ಲು ಸಮೀಪದ ಚೆರಿಯಪರಂಬು ನಿವಾಸಿ ಜಾಬಿರ್ ನಿಝಾಮಿ (ಸೇವ್ ದಿ ಡ್ರಿಮ್ಸ್ ಟ್ರಸ್ಟ್) ಅವರನ್ನು ಕಡಂಗ ಕೆಡಿಎಸ್ ಮುಸ್ಲಿಂ ಯೂತ್ ಚಾರೀಟಿ ವತಿಯಿಂದ ಸನ್ಮಾನಿಸಲಾಯಿತು. ಶಾದಿಮಹಲ್ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆಡಿಎಸ್ ಮುಸ್ಲಿಂ ಯೂತ್ ಚಾರೀಟಿ ಪದಾಧಿಕಾರಿಗಳು ನಸ್ಮಾನಿಸಿ ಗೌರವಿಸಿದರು. ಕೆಡಿಎಸ್ ಮುಸ್ಲಿಂ ಯೂತ್ ಚಾರಿಟಿಯ ಅಧ್ಯಕ್ಷ ಸಿ.ಎ.ಜುನೈದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವ್ ದಿ ಡ್ರಿಮ್ಸ್ ನ ನಿರ್ದೇಶಕರಾದ ಮೈಸಿ ಕತ್ತಣಿರ, ಆರಫಾತ್, ಅಹ್ಮದ್ ನಾಪೋಕ್ಲು, ಹೋದ್ದೂರು ಗ್ರಾ.ಪಂ. ಸದಸ್ಯ ಮೊಯ್ದು, ಮೊಯ್ಯದ್ದೀನ್ ಮಸೀದಿಯ ಮಾಜಿ ಅಧ್ಯಕ್ಷ ಇಬ್ರಾಹಿಂ,ಮೊಯ್ದು ಮುಸ್ಲಿಯಾರ್, ಕೆಡಿಎಸ್ ನಿರ್ದೇಶಕರಾದ ಫತಾಯಿ, ಅಬ್ದುಲ್ ರಹ್ಮನ್, ಉಸ್ಮಾನ್,ಸುಬೈರ್,ರಝಾಕ್ ಪಿ.ಇ, ಕೆಡಿಎಸ್ ಆಡಳಿತ ಮಂಡಳಿಯ ಮಮ್ಮು,ರಝಾಕ್ ಸಿ.ಎ,ಸೌಕತ್, ಶರೀಫ್, ಎ.ಎ.ರಝಿಕ್, ಮುಜೀಬ್, ಮತಿತ್ತರರು ಇದ್ದರು.…






