ಮಡಿಕೇರಿ ನ.21 : ಮುಖ್ಯಮಂತ್ರಿಗಳ ನಿಧಿ ಮತ್ತು ಪ್ರಾಕೃತಿಕ ವಿಕೋಪ ನಿಧಿಯಡಿ ಬಂದ ಅನುದಾನದಲ್ಲಿ ಹಿಂದಿನ ಶಾಸಕರುಗಳು ತಮ್ಮ ಹಿಂಬಾಲಕರಿಗಾಗಿ ಕಾಮಗಾರಿಗಳನ್ನು ಕೈಗೊಂಡಿದ್ದರು. ಆದರೆ ಇಂದಿನ ಕಾಂಗ್ರೆಸ್ ಶಾಸಕರುಗಳು ಜನರಿಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತಿರುಗೇಟು ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಶಾಸಕರುಗಳು ಕಳೆದ 20 ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಯಾವ ಉಪಕಾರ ಮಾಡಿದ್ದಾರೆ ಎನ್ನುವುದನ್ನು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಇವರುಗಳು ಮಾಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮೊದಲು ಶ್ವೇತಪತ್ರ ಹೊರಡಿಸಲಿ, ನಂತರ ನಾವು ಹೊರಡಿಸುತ್ತೇವೆ ಎಂದರು. ಕಾಂಗ್ರೆಸ್ ಶಾಸಕರುಗಳು ಬಂದು ಆರು ತಿಂಗಳುಗಳಷ್ಟೇ ಆಗಿದೆ, ಮಾಜಿ ಶಾಸಕರುಗಳು ಆತುರ ಪಡದೆ ಸ್ವಲ್ಪ ಸಹನೆಯಿಂದ ಕಾದು ನೋಡಬೇಕು. ಅಭಿವೃದ್ಧಿ ಎಂದರೆ ಏನು ಎನ್ನುವುದನ್ನು ಮುಂದಿನ ಒಂದು ವರ್ಷದಲ್ಲಿ ಇಬ್ಬರು ಶಾಸಕರು ತೋರಿಸಿಕೊಡಲಿದ್ದಾರೆ ಎಂದು ತಿಳಿಸಿದರು. ಹಿಂದಿನ ಶಾಸಕರು ಲಭ್ಯ ಅನುದಾನವನ್ನು ಜನರ ಹಿತಕ್ಕೆ ಪೂರಕವಾದ ಕಾಮಗಾರಿಗಳಿಗೆ ಬಳಸಲು…
ಲೇಖಕ: admin
ಮಡಿಕೇರಿ ನ.21 : ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದ್ದಾರೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಓದುವ ಹವ್ಯಾಸ ಜ್ಞಾನವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಅಧ್ಯಯನ ಮಾಡಿದರೆ ಪದವಿ ಹಂತವನ್ನು ಮುಗಿಸಿದ ತಕ್ಷಣ ಸರಕಾರಿ ಉದ್ಯೋಗವನ್ನು ಪಡೆಯಲು ಅನುಕೂಲವಾಗುತ್ತದೆ. ಮಾಹಿತಿ ಮತ್ತು ತಂತ್ರಜ್ಞಾನ ಕೈ ಬೆರಳಿನಲ್ಲಿದ್ದರೂ ಪುಸ್ತಕವನ್ನು ಕೈಯಲ್ಲಿಡಿದು ಓದುವ ಅನುಭವವೇ ಶ್ರೇಷ್ಠವಾದದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೊ.ರಾಘವ ಕರೆ ನೀಡಿದರು. ಕಾಲೇಜ್…
ಮಡಿಕೇರಿ ನ.21 : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಸಿದ್ಧಗೊಳಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಘಟಕ, ಎನ್‍ಎಸ್‍ಎಸ್ ಘಟಕ ಹಾಗೂ ನಗರದ ಲಯನ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಲಯನ್ಸ್ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ…
ಸಿದ್ದಾಪುರ ನ.21 : ಕೊಡಗಿನ ಕಾಫಿ ತೋಟಗಳ ಕಡಿದಾದ ರಸ್ತೆಯಲ್ಲಿ ತಮ್ಮ ಕಾರುಗಳನ್ನು ಚಲಾಯಿಸಿ ನಿಗದಿತ ಸಮಯ ಸಾಧಿಸುವ ಮೂಲಕ ದೆಹಲಿಯ ಹರಿಕೃಷ್ಣ ವಾದಿಯ- ಹಿಮಾಚಲಪ್ರದೇಶದ ಕುನಾಲ್ ಕಶ್ಯಪ್ ಜೋಡಿ ಸಮಗ್ರ ಚಾಂಪಿಯನ್‌ಶಿಪ್ ತಮ್ಮದಾಗಿಸಿಕೊಂಡಿದ್ದಾರೆ. ಬ್ಲೂ ಬ್ಯಾಂಡ್ ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್‌ಶಿಪ್ ನೇತೃತ್ವದಲ್ಲಿ ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಹಕಾರದೊಂದಿಗೆ ನಡೆದ ರೋಬಸ್ಟಾ-2023 ರ್‍ಯಾಲಿಯ ಅಂತಿಮ ದಿನದಂದು ಹೊಸಳ್ಳಿ ಹಾಗೂ ಮಾರ್ಗೊಳ್ಳಿ ಕಾಫಿ ತೋಟಗಳ ಕಡಿದಾದ ರಸ್ತೆಯಲ್ಲಿ ರೋಮಾಂಚನಕಾರಿಯಾಗಿ ತಮ್ಮ ಕಾರುಗಳನ್ನ ಚಲಾಯಿಸಿ ಸಾಧನೆಯ ಗುರಿ ಮುಟ್ಟಿದ್ದಾರೆ. ನಾಲ್ಕು ಚಕ್ರದ ವಾಹನಗಳಿಗೆ ಐದನೇ ಸುತ್ತಿನ ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್‌ಶಿಪ್ ಅತ್ಯಂತ ರೋಚಕವಾಗಿತ್ತು. ಪಾಲಿಬೆಟ್ಟ ವ್ಯಾಪ್ತಿಯಲ್ಲಿರುವ ಕಾಫಿ ತೋಟದ ದುರ್ಗಮ ಹಾದಿಯಲ್ಲಿ ಮೈನವಿರೇಳಿಸುವ ರ‍್ಯಾಲಿ ನಡೆಯಿತು. ಅರೋರ ವಿಕ್ರಂ ರಾವ್- ಸೌಮ್ಯ ಜೋಡಿ ದ್ವಿತೀಯ ಹಾಗೂ ಜಾಹನ್ ಸಿಂಗ್ ಗಿಲ್- ಸೂರಜ್ ಕೇಶವ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಐಎನ್‌ಆರ್‌ಸಿ2 ವಿಭಾಗದಲ್ಲಿ ಹರಿಕೃಷ್ಣ ವಾದಿಯ- ಕುನಾಲ್…
ಮಡಿಕೇರಿ ನ.21 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ “ಮಲ್ಲೇಂಗಡ ಬೆಳ್ಯಪ್ಪ” ಅವರ ಸ್ಮರಣಾರ್ಥ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್‍ಶಿಪ್ ಕಪ್-2023” ಪಂದ್ಯಾವಳಿಯ ವಿಜೇತರ ಪಟ್ಟಿ ಪ್ರಕಟವಾಗಿದೆ. ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ 15 ವರ್ಷದೊಳಗಿನ ಬಾಲಕರ ಸಿಂಗಲ್ಸ್ ನಲ್ಲಿ ಅವಿನೇಶ್ ಪ್ರಥಮ, ಲಿತೇಶ್ ದ್ವಿತೀಯ, 18 ವರ್ಷದೊಳಗಿನ ಬಾಲಕರ ಸಿಂಗಲ್ಸ್ ನಲ್ಲಿ ಸಹದ್ ಪ್ರಥಮ, ಹೆಚ್.ಎನ್.ಪ್ರಜ್ವಲ್ ದ್ವಿತೀಯ, 25 ವರ್ಷದೊಳಗಿನ ಬಾಲಕರ ಸಿಂಗಲ್ಸ್ ನಲ್ಲಿ ಪ್ರಜ್ವಲ್ ಪ್ರಥಮ, ವಿ.ವೈ.ಚೇತನ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. 15 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್ ನಲ್ಲಿ ಲೋಚನಾ ಪ್ರಥಮ, ಫಿದಾ ದ್ವಿತೀಯ, 18 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸಿಂಚನಾ ಪ್ರಥಮ, ಜ್ಞಾನ ದ್ವಿತೀಯ, 25 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನವ್ಯ ಪ್ರಥಮ, ದಿವ್ಯಾ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ ರಚನ್ ಪೊನ್ನಪ್ಪ ಪ್ರಥಮ, ಈಶ್ವರ್ ದ್ವಿತೀಯ, ಪುರುಷರ ಡಬಲ್ಸ್…
ನಾಪೋಕ್ಲು ನ.21 : ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶವನ್ನು ಸರ್ಕಾರದ ವತಿಯಿಂದ ಅಭಿವೃದ್ಧಿಗೊಳಿಸಲಾಗಿದ್ದು, ಸರ್ಕಾರದ ಸವಲತ್ತುಗಳನ್ನು ಪಡೆಯಲು ಎಲ್ಲ ರೈತರು, ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಅವಶ್ಯಕವಾಗಿರುವುದರಿಂದ ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಮಾಹಿತಿ ದಾಖಲೆಸಿಕೊಂಡರು. ರೈತರು ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ ಪ್ರತಿ ಗಳು, ಆಧಾರ್ ಕಾರ್ಡು, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ ಒದಗಿಸಿ ನೋಂದಣಿ ಮಾಡಿಕೊಂಡರು. ಕೃಷಿ ,ಕಂದಾಯ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಜರಿದ್ದು, ರೈತರಿಂದ ಮಾಹಿತಿ ಪಡೆದುಕೊಂಡು ಒಟ್ಟು 85 ಅರ್ಜಿಗಳನ್ನು ಸ್ವೀಕರಿಸಿ ನೋಂದಾಯಿಸಿದರು. ಈ ಸಂದರ್ಭ ಗ್ರಾಮ ಲೆಕ್ಕಾಧಿಕಾರಿ ಅಮೃತ ಆರ್, ಕೃಷಿ ಇಲಾಖೆಯ ಅಕೌಂಟೆಂಟ್ ಸಾಗರಿಕ, ಗ್ರಾಮ ಸಹಾಯಕ ಪ್ರಸಾದ್ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ನ.21 : ದುಡಿಯುವ ಕಾರ್ಮಿಕ ವರ್ಗಕ್ಕೆ ಕನಿಷ್ಠ ವೇತನ ಘೋಷಿಸದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ದುಡಿಸಿಕೊಳ್ಳುವ ಮೂಲಕ ಪರೋಕ್ಷವಾಗಿ ಜೀತದಾಳುಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಕುಟುಂಬದ ನಿರ್ವಹಣೆ, ಆಹಾರ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ 26 ಸಾವಿರ ರೂ. ಘೋಷಿಸುವ ಅಗತ್ಯವಿದೆ ಎಂದರು. ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ 2 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಆದರೆ ಇವುಗಳನ್ನು ಗುತ್ತಿಗೆ ಆಧಾರದ ನೌಕರರ ಮೂಲಕ ತುಂಬಲಾಗುತ್ತಿದೆ. ಕಡಿಮೆ ವೇತನ ನೀಡಿ ಹೆಚ್ಚು ದುಡಿಸಿಕೊಳ್ಳುವ ಜೀತ ಪದ್ಧತಿಯನ್ನು ಸರ್ಕಾರವೇ ಜಾರಿಗೆ ತರುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ, ಉದ್ಯೋಗ ವಿನಿಮಯ ಕಚೇರಿಯಲ್ಲೂ ಗುತ್ತಿಗೆ ಆಧಾರದ ನೌಕರರನ್ನೇ ನೇಮಿಸಿಕೊಳ್ಳಲಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಪ್ರಯತ್ನವನ್ನೇ ಮಾಡುತ್ತಿಲ್ಲವೆಂದು ಟೀಕಿಸಿದರು. ::: ಭರವಸೆ…
ಮಡಿಕೇರಿ ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ಜನಪ್ರಿಯಗೊಳ್ಳುತ್ತಿದೆ. ಇದನ್ನು ಸಹಿಸದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಟ್ಟೆಕಿಚ್ಚಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜನವರಿ ವೇಳೆಗೆ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಳ್ಳುವುದು ಖಚಿತವೆಂದು ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಕೃಪೆಯಿಂದ ಪ್ರಧಾನಿಯಾದರು, ಪ್ರಸ್ತುತ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ಕಾಂಗ್ರೆಸ್ ಕೃಪೆಯಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಕೃತಜ್ಞತಾಭಾವವಿಲ್ಲದೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಬಗ್ಗೆ ವೈಯುಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಮತ್ತು ಸಾಕ್ಷಿ ಸಹಿತ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು. ಕೇಂದ್ರ ಸಚಿವ ಅಮಿತ್ ಶಾ ಅವರು ಕುಮಾರಸ್ವಾಮಿ ಅವರಿಗೆ ಸುಪಾರಿ ನೀಡಿರುವ…
ಮಡಿಕೇರಿ ನ.21 : ಕಾರ್ಯಪ್ಪ ಕಾಲೇಜ್ ನಲ್ಲಿ ಪರೀಕ್ಷಾ ಪುಸ್ತಕಗಳ ಪ್ರದರ್ಶನ : ವಿದ್ಯಾರ್ಥಿಗಳು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು : ಮೇಜರ್ ಪ್ರೊ. ರಾಘವ ಕರೆ ಮಡಿಕೇರಿ ನ.21 : ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದ್ದಾರೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಓದುವ ಹವ್ಯಾಸ ಜ್ಞಾನವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಅಧ್ಯಯನ ಮಾಡಿದರೆ ಪದವಿ ಹಂತವನ್ನು ಮುಗಿಸಿದ ತಕ್ಷಣ ಸರಕಾರಿ ಉದ್ಯೋಗವನ್ನು ಪಡೆಯಲು ಅನುಕೂಲವಾಗುತ್ತದೆ. ಮಾಹಿತಿ…
ಮಡಿಕೇರಿ ನ.21 : ಕೊಡಗು ಜಿ.ಪಂ., ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ಲಯನ್ಸ್ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2023 ದ ಪೂರ್ವಭಾವಿ ಯಾಗಿ ನಡೆದ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರವನ್ನು ಜಿ.ಪಂ.ಸಿಇಓ ವರ್ಣಿತ್ ನೇಗಿ ಉದ್ಘಾಟಿಸಿದರು. ಡಿಡಿಪಿಐ ಎಂ.ಚಂದ್ರಕಾಂತ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಸ್ಕೌಟ್ಸ್, ಗೈಡ್ಸ್ ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಘಟಕ ಟಿ.ಜಿ.ಪ್ರೇಮಕುಮಾರ್, ಜಿ.ಶ್ರೀಹರ್ಷ, ಲಯನ್ಸ್ ಅಧ್ಯಕ್ಷ ಮಧುಕರ್ ಶೇಟ್ ಇದ್ದರು.






