ಮಡಿಕೇರಿ ಅ.24 : 47ನೇ ವರ್ಷದ ದಸರಾ ಉತ್ಸವದಲ್ಲಿರುವ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಸಮಿತಿಯಿಂದ ಈ ಬಾರಿ ಮಹಾ ಗಣಪತಿಯಿಂದ ಶತಮಾಹಿಷೆಯ ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, ಮಂಟಪಕ್ಕಾಗಿ ಸುಮಾರು ರೂ.31.5 ಲಕ್ಷ ವೆಚ್ಚ ಮಾಡಲಾಗುತ್ತಿದೆ. ದೇವಾಲಯದ ದಸರಾ ಸಮಿತಿ ಅಧ್ಯಕ್ಷರಾಗಿ ಹೆಚ್.ಪಿ. ಲೋಕೇಶ್ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಟಪದಲ್ಲಿ 30 ಕಲಾಕೃತಿಗಳು ಇರಲಿದೆ. ದೇವಾಲಯ ಸಮಿತಿಯಲ್ಲಿ ಸುಮಾರು 372 ಮಂದಿ ಸದಸ್ಯರಿದ್ದಾರೆ. ಮಂಟಪದಲ್ಲಿ ಅಳವಡಿಸಲಾಗುತ್ತಿರುವ ಕಥೆಯನ್ನು ಆರ್.ಬಿ. ರವಿ ನಿರ್ದೇಶಿಸಿದ್ದಾರೆ. ಮಡಿಕೇರಿಯ ಫ್ಯೂಚರ್ ಇವೆಂಟ್ ಸ್ಟುಡಿಯೋ ಸೆಟ್ಟಿಂಗ್ ಹಾಗೂ ಸೌಂಡ್ಸ್ ಸೆಟ್ಟಿಂಗ್ ಮಾಡಲಿದೆ. ಮಡಿಕೇರಿಯ ಪೂಜಾ ಲೈಟಿಂಗ್ ಆರ್ಚ್ ಬೋರ್ಡ್ ವ್ಯವಸ್ಥೆ ಮಾಡಲಿದೆ. ಗಣೇಶ್ ಹಾಗೂ ಸೋಮಶೇಖರ್ ಟ್ರಾö್ಯಕ್ಟರ್ ಸೆಟ್ಟಿಂಗ್ ಮಾಡಲಿದ್ದಾರೆ. ಮಡಿಕೇರಿಯ ಬಿ.ಎನ್. ಕ್ರಿಯೇಷನ್‌ನ ಮೋಹನ್ ಹಾಗೂ ಪುನಿತ್ ಅವರು ವೆಲ್ಡಿಂಗ್, ಚಲನವಲನ ಹಾಗೂ ಫ್ಲಾರ್ಟ್ ಫಾರಂ ಸೆಟ್ಟಿಂಗ್ ಮಾಡಲಿದ್ದಾರೆ. ಮಡಿಕೇರಿಯ ಪೂಜಾ ಲೈಟಿಂಗ್‌ನ ರಘು ಮತ್ತು ತಂಡ ಕಲಾಕೃತಿಗಳಿಗೆ ವಿಶೇಷ ಎಫೆಕ್ಟ್ ನೀಡಲಿದ್ದಾರೆ. ಮಡಿಕೇರಿಯ…
ಲೇಖಕ: admin
ಮಡಿಕೇರಿ ಅ.24 : ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಿಯಮ್ಮ ದೇವಾಲಯವರಾ ಮಂಟಪ ಸಮಿತಿ ಈ ಬಾರಿ 93ನೇ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು, ಪರಶಿವನಿಂದ ಜಲಂಧರ ಸಂಹಾರ ಕಥಾ ಸಾರಾಂಶವನ್ನು ಹೊಂದಿದೆ ಎಂದು ದಸರಾ ಸಮಿತಿ ಅಧ್ಯಕ್ಷ ಅಂಬೆಕಲ್ ನವೀನ್ ತಿಳಿಸಿದ್ದಾರೆ. ರೂ.20 ಲಕ್ಷ ವೆಚ್ಚದಲ್ಲಿ ಮಂಟಪ ತಯಾರಿಯಾಗಿದ್ದು, ಮಂಟಪದಲ್ಲಿ 23 ಕಲಾಕೃತಿಗಳು ಇರಲಿದೆ. ಮಂಟಪದಲ್ಲಿ ಕಾಲಿಕಟ್ ಏಷಿಯನೆಟ್ ಸ್ಟುಡಿಯೋ ಅಂತೋಣಿ ಸ್ಟುಡಿಯೋ ಸೆಟ್ಟಿಂಗ್ ಮಾಡಲಿದ್ದಾರೆ, ದಿಂಡಿಗಲ್, ಎಂ.ಪಿ. ಲೈಟಿಂಗ್ ಬೋರ್ಡ್ ವ್ಯವಸ್ಥೆ ಮಾಡಲಿದ್ದಾರೆ. 150ಕ್ಕೂ ಅಧಿಕ ಮಂದಿ ಸದಸ್ಯರು ತಂಡದಲ್ಲಿದ್ದಾರೆ, ವಿಯನ್ ಇಂಜಿನಿಯರಿಂಗ್ ವರ್ಕ್ ಪ್ಲಾಟ್ ಫಾರ್ಮ, ಚಲನವಲನವನ್ನು ತಂಡದ ಸದಸ್ಯರೇ ಮಾಡಲಿದ್ದಾರೆ. ಮಡಿಕೇರಿಯ ಅಶ್ರಫ್, ಪ್ರಕಾಶ್ ತಂಡ ಸ್ಪೆಷಲ್ ಎಫೆಕ್ಟ್ ನೀಡಲಿದೆ. ಬೆಂಗಳೂರಿನ ಎಲ್ಲೋ ಸೌಂಡ್ಸ್ ಇರಲಿದೆ. ಕಲಾಕೃತಿಗಳನ್ನು ಅಸ್ತಿತ್ವ ಆರ್ಟಿ ಸುನಿ ಮತ್ತು ಮನು ತಂಡ ಕಲಾತ್ಮಕವಾಗಿ ಮಾಡುತ್ತಿದೆ. ಮೋಹನ್ ಮತ್ತು ಸಂಪತ್ ಟ್ಯಾಕ್ಟರ್, ಸೆಟ್ಟಿಂಗ್, ಬಿನ್ ಮತ್ತು ತಂಡ ಕಥಾ…
ಮಡಿಕೇರಿ ಅ.24 : ಕೋದಂಡ ರಾಮ ದಸರಾ ಮಂಟಪ ಸಮಿತಿ 49ನೇ ವರ್ಷದ ದಸರಾ ಉತ್ಸವ ಆಚರಿಸಿದ್ದು, “ಮಣಿಕಂಠನಿಂದ ಮಹಿಷಿಯ ಶಾಪ ವಿಮೋಚನೆ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷರಾಗಿ ಗೋಪಿನಾಥ್ ತಿಳಿಸಿದ್ದಾರೆ. ರೂ.20 ಲಕ್ಷ ರೂ.ವೆಚ್ಚದಲ್ಲಿ ಮಂಟಪ ನಿರ್ಮಾಣವಾಗಿದ್ದು, 25 ಕಲಾಕೃತಿಗಳಿದ್ದು, ಮೈಸೂರು ಜಿಲ್ಲೆಯ ಉದೂರಿನ ಮಹದೇವಪ್ಪ ಮತ್ತು ನಾಗರಾಜು ಕಲಾಕೃತಿಗಳನ್ನು ನಿರ್ಮಿಸುತ್ತಿದ್ದಾರೆ. ಮಡಿಕೇರಿ ಗೌತಮ್ ಮತ್ತು ಸಂದು ಸ್ಟುಡಿಯೋ ಸೆಟ್ಟಿಂಗ್ ಹಾಗೂ ಫಯರ್‌ವರ್ಕ್ ಮಾಡಲಿದ್ದಾರೆ. ಪ್ಲಾಟ್‌ಫಾರ್ಮ್ ಸೆಟ್ಟಿಂಗ್ ಅನ್ನು ಸಮಿತಿಯ ಸದಸ್ಯರೇ ನಿರ್ವಹಿಸಲಿದ್ದಾರೆ. ಟ್ರಾ÷್ಯಕ್ಟ ಸೆಟ್ಟಿಂಗ್ ಹಾಗೂ ಚಲನವಲನವನ್ನು ಹೇಮರಾಜ್ ಮತ್ತು ತಂಡ ವಹಿಸಿಕೊಂಡಿದೆ. ಸೋಮದಾರಪೇಟೆ ಧ್ವನಿವರ್ಧಕವನ್ನು ಅಳವಡಿಸುತ್ತಿದೆ.
ಮಡಿಕೇರಿ ಅ.24 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ 48ನೇ ವರ್ಷದ ಉತ್ಸವ ಆಚರಿಸುತ್ತಿದ್ದು, ಕೃತಿಬಾಸ ರಾಮಾಯಣದಿಂದ ಆಯ್ದ ಪಂಚಮುಖಿ ಆಂಜನೇಯನಿಂದ ಅಹಿರಾವಣ- ಮಹಿರಾವಣ ವಧೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷರುಗಳಾದ ಪ್ರಭು ರೈ ಹಾಗೂ ರಾಜಾ ಸುಬ್ಬಯ್ಯ ತಿಳಿಸಿದ್ದಾರೆ. ಎರಡು ಟ್ರಾ÷್ಯಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಈ ಬಾರಿ ದಿಂಡಿಗಲ್‌ನ ಕಳೇಯಗಂ ಲೈಟಿಂಗ್ ಬೋರ್ಡ್ ಅಳವಡಿಸಲಿದೆ. ಮಡಿಕೇರಿಯ ಶಕ್ತಿ ವಿನಾಯಕ ಈವೆಂಟ್ ಮ್ಯಾನೇಜ್‌ಮೆಂಟ್‌ನ ಪ್ರಶಾಂತ್ ನೇತೃತ್ವದಲ್ಲಿ ಬೆಂಗಳೂರಿನ ಪ್ರೀತಿ ಸೌಂಡ್ಸ್ ಸಂಸ್ಥೆ ಧ್ವನಿವರ್ಧಕ ಹಾಗೂ ಸ್ಟುಡಿಯೋ ಸೆಟ್ಟಿಂಗ್ಸ್ ಮಾಡಲಿದೆ. ಪ್ಲಾಟ್‌ಫಾರಂನ್ನು ಟೀಂ ಕೆಎಂಟಿ ಮಾಡಲಿದ್ದು, ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ಹಾಗೂ ಕಲಾಕೃತಿಗಳಿಗೆ ಚಲನವಲನ ವ್ಯವಸ್ಥೆಯನ್ನು ಟೀಂ ಕೆ.ಎಂ.ಟಿ.ಯ ಜಿ.ಸಿ.ಜಗದೀಶ್, ಪ್ರಸಾದ್ ಆಚಾರ್ಯ ತಂಡ ಮಾಡಲಿದೆ. ಒಟ್ಟು 17 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಹಾಗೂ ಮಡಿಕೇರಿಯ ಆರ್ವಿನ್ ಹಾಗೂ ರಾಕೇಶ್ ತಂಡ ಕಲಾಕೃತಿಗಳನ್ನು…
ಮಡಿಕೇರಿ ಅ.24 : ನಗರದ ನಾಲ್ಕು ಶಕ್ತಿ ದೇವತೆಗಳ ಹಿರಿಯ ಅಕ್ಕಳೆಂದೆ ಖ್ಯಾತಿ ಪಡೆದಿರುವ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6 ರಿಂದ 10ರವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಆರ್.ರವಿ ತಿಳಿಸಿದ್ದಾರೆ. ಎರಡು ಟ್ರಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‌ನ ಮಾತಾ ಎಲೆಕ್ಟಿçಕಲ್ಸ್ನವರು ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಕೊಲ್ಲಂನ ಶಿವು ಪ್ರೊ ಲೈಟ್ಸ್ನವರು ಧ್ವನಿವರ್ಧಕವನ್ನು ಒದಗಿಸಲಿದ್ದು, ಮಡಿಕೇರಿ ಈವೆಂಟ್ ಟೆಕ್‌ನ ಅವಿನ್‌ಕುಮಾರ್ ತಂಡ ಸ್ಟುಡಿಯೋ ಸೆಟ್ಟಿಂಗ್ಸ್ ಹಾಗೂ ಫೈರ್ ಎಫೆಕ್ಟ್ ವ್ಯವಸ್ಥೆ ಮಾಡಲಿದೆ. ಒಟ್ಟು 18 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಐಂಡ್ ಸನ್ಸ್ ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ಕಲಾಕೃತಿಗಳಿಗೆ ಚಲನವಲನವನ್ನು ಸಮಿತಿ ಸದಸ್ಯರೆ ನೀಡಲಿದ್ದಾರೆ. ಟ್ರಾ÷್ಯಕ್ಟರ್ ಸೆಟ್ಟಿಂಗ್ಸ್ ಅನ್ನು ಮಂಜು ಮತ್ತು ತಂಡ ಮಾಡಲಿದ್ದು, ಮಯೂರಿ ಆರ್ಟ್ಸ್ ತಂಡ ಕಲಾಕೃತಿ ಅಲಂಕಾರ ಮಾಡಲಿದೆ. ಒಟ್ಟು 26…
ಮಡಿಕೇರಿ ಅ.24 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕಂಚಿಕಾಮಾಕ್ಷಿ ಮುತ್ತು ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 60ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗಿದ್ದು, ಈ ಬಾರಿ ಶಿವನಿಂದ ತ್ರಿಪುರಾಸುರರ ವಧೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಜಿ.ಆರ್.ರಾಘವೇಂದ್ರ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‌ನ ಡೇವಿಡ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಧ್ವನಿವರ್ಧಕವನ್ನು ಬೆಳಗಾಂನ ಕೃಷ್ಣ ಸಂಸ್ಥೆ ಒದಗಿಸಲಿದ್ದು, ಚೆನ್ನೈನ ಸನ್‌ಬರ್ನ್ ಸಂಸ್ಥೆ ಸ್ಟುಡಿಯೋ ಸೆಟ್ಟಿಂಗ್ಸ್ ಹಾಗೂ ಮುಂಬೈನ ಸನ್‌ಬರ್ನ್ ಸಂಸ್ಥೆ ಫೈರ್ ಎಫೆಕ್ಟ್ ಕಲ್ಪಿಸಲಿದೆ. ಪ್ಲಾಟ್ ಫಾರಂನ್ನು ಸೈಜು ಮತ್ತು ಸಮಿತಿ ಸದಸ್ಯರು ನಿರ್ಮಿಸಿದ್ದಾರೆ. ಟ್ರಾ÷್ಯಕ್ಟರ್ ಸೆಟ್ಟಿಂಗ್ಸ್ನ್ನು ಬಿಪಿನ್ ಮತ್ತು ತಂಡ ಸೆಂಟ್ ಆಂಟೋನಿ ಫ್ಯಾಬ್ರಿಕೇಶನ್, ಎಸ್.ಎಲ್. ರಹಮತ್ ನಿಸಾ ಇಂಜಿನಿಯರಿಂಗ್ ತಂಡ ಮಾಡಲಿದೆ. 28 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಎಲ್‌ಇಡಿ ಎಫೆಕ್ಟನ್ನು ಪ್ರಮೋದ್ ಪರ್ಫೆಕ್ಟ್ ಈವೆಂಟ್, ಲೇಜರ್ ಶೋವನ್ನು ಮನೋಜ್ ಒದಗಿಸಲಿದ್ದಾರೆ.…
ಮಡಿಕೇರಿ ಅ.24 : ಶ್ರೀ ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ 28ನೇ ವರ್ಷದ ಉತ್ಸವ ಆಚರಿಸುತ್ತಿದ್ದು, ಉಗ್ರನರಸಿಂಹನಿಂದ ಹಿರಣ್ಯಕಶ್ಯಪು ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗಿದೆ ಎಂದು ಕರವಲೆ ಭಗವತಿ ಮಹಿಷ ಮರ್ದಿನಿ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಪಿ.ಜಿ. ಗಜೇಂದ್ರ (ಕುಶ) ತಿಳಿಸಿದ್ದಾರೆ. ಎರಡು ಟ್ರಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ದಿಂಡಿಗಲ್‌ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದು, ಸಮಿತಿ ಸದಸ್ಯರೇ ಫ್ಲಾಟ್ ಫಾರಂ ನಿರ್ಮಾಣ ಮಾಡಲಿದ್ದಾರೆ. ಮಡಿಕೇರಿಯ ಸ್ಕಂದ ಸಂಸ್ಥೆಯವರು ಧ್ವನಿವರ್ಧಕವನ್ನು ಒದಗಿಸಲಿದ್ದು, ಬೆಂಗಳೂರಿನ ಅನುಪ್ರೋ ಈವೆಂಟ್ ನವರು ಸ್ಟುಡಿಯೋ ಸೆಟ್ಟಿಂಗ್ ಮಾಡಲಿದ್ದಾರೆ. ಫೈರ್ ಎಫೆಕ್ಟನ್ನು ಬೆಂಗಳೂರಿನ ಸ್ಟಾನಿ ಎಫ್‌ಎಕ್ಸ್ ತಂಡ ನೀಡಲಿದೆ. 22 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ನಾಗರಾಜ್ ತಂಡ ಹಾಗೂ ಮಡಿಕೇರಿಯ ಶೋಮ್ಯಾನ್ ಕ್ರಿಯೇಷನ್ಸ್ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ನ್ನು ಶೋಮ್ಯಾನ್ ಕ್ರಿಯೇಷನ್ಸ್ ತಂಡ ಮಾಡಲಿದ್ದು, ಕಲಾಕೃತಿಗಳಿಗೆ ಚಲನವಲನವನ್ನು ಸಮಿತಿ ಸದಸ್ಯರೆ ನೀಡಲಿದ್ದಾರೆ. ರೂ.22 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಕೊಡಗಿನ ವಾಲಗ…
ಮಡಿಕೇರಿ ಅ.24 : ನಗರದ ಶ್ರೀ ಚೌಡೇಶ್ವರಿ ದೇವಾಲಯ ದಸರಾ ಮಂಟಪ ಸಮಿತಿ 61ನೇ ವರ್ಷದ ದಸರಾ ಉತ್ಸವ ಆಚರಿಸುತ್ತಿದ್ದು, ಶ್ರೀ ಕಟೀಲು ಕ್ಷೇತ್ರ ಮಹಾತ್ಮ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ಚೌಡೇಶ್ವರಿ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ವಿಶಾಕ್ ರಮೇಶ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ಮಧುರೈನ ಶ್ರೀ ಕಾರ್ತಿಕೇಯನ್ ಲೈಟಿಂಗ್ ಬೋರ್ಡ್ಸ್ ಅಂಡ್ ಡಿಸ್ ಪ್ಲೇ ಸಂಸ್ಥೆಯವರು ಲೈಟಿಂಗ್ ಬೋರ್ಡ್ ಅಳವಡಿಸಲಿದ್ದಾರೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟ್ ವ್ಯವಸ್ಥೆಯನ್ನು ಸೋಮವಾರಪೇಟೆಯ ನಂದಿ ಸೌಂಡ್ ನವರು ಮಾಡಲಿದ್ದಾರೆ. ಪ್ಲಾಟ್ ಫಾರಂನ್ನು ಜಯರಾಂ ಆಚಾರ್, ಹರೀಶ್, ಲಕ್ಷ್ಮಣಾಚಾರ್ ಶೇಖರ್, ರಾಕಿ, ಜನ್ನು, ಶಶಿ ಮತ್ತು ತಂಡ, ಗುಣ ಮತ್ತು ತಂಡದವರು ನಿರ್ಮಿಸಲಿದ್ದಾರೆ. ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ನ್ನು ಕ್ರಿಯೇಟಿವ್ ಸ್ಟುಡಿಯೋ ಬಾಯ್ಸ್ ಮಾಡಲಿದ್ದಾರೆ. ಒಟ್ಟು 23 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಮತ್ತು ಕ್ರಿಯೇಟಿವ್ ಸ್ಟುಡಿಯೋ ಬಾಯ್ಸ್ ಮಾಡಲಿದ್ದಾರೆ. ಕಲಾಕೃತಿಗಳಿಗೆ ಚಲನವಲನವನ್ನು ಕ್ರಿಯೇಟಿವ್ ಸ್ಟುಡಿಯೋ ಹಾಗೂ…
ಮಡಿಕೇರಿ ಅ.24 : ನಗರದ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 105ನೇ ವರ್ಷದ ದಸರಾ ಉತ್ಸವ ಆಚರಿಸುತ್ತಿದ್ದು, ವಿಷ್ಣುವಿನಿಂದ ಮಧು ಖೈಟಭರ ಸಂಹಾರ ಕಥಾ ಸಾರಾಂಶವನ್ನು ಈ ಬಾರಿ ಮಂಟಪದಲ್ಲಿ ಅಳವಡಿಸಲಾಗುತ್ತಿದೆ ಎಂದು ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಪಿ.ವೇಣುಗೋಪಾಲ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ಮಡಿಕೇರಿಯ ಪ್ರೊಫೆಷನಲ್ ಲೈಟ್ ಅಂಡ್ ಸೌಂಡ್ಸ್ ನ ಪವನ್ ತಂಡ ಲೈಟಿಂಗ್ ಬೋರ್ಡ್ ಅಳವಡಿಸಲಿದೆ. ಪ್ಲಾಟ್ ಫಾರಂ ನಿರ್ಮಾಣ ಮತ್ತು ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ಅನ್ನು ಅನಿಲ್ ಕಮಾರ್ ಹಾಗೂ ತಂಡದವರು ಮಾಡಲಿದ್ದಾರೆ. ಬೆಂಗಳೂರಿನ ಕಿಂಗ್ಸ್ ಆಫ್ ಮ್ಯೂಸಿಕ್ ಸಂಸ್ಥೆ ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟ್ ವ್ಯವಸ್ಥೆ ಮಾಡಲಿದೆ. ಮಂಗಳೂರಿನ ಜೆಪಿ ಆರ್ಟ್ಸ್ ರಚಿಸಿದ ಒಟ್ಟು 14 ಕಲಾಕೃತಿಗಳನ್ನು ಬಳಸಲಾಗುತ್ತಿದೆ. ಕಲಾಕೃತಿಗಳಿಗೆ ಚಲನವಲನವನ್ನು ಸಮಿತಿ ಸದಸ್ಯರೇ ನೀಡಲಿದ್ದಾರೆ. ಒಟ್ಟು 10 ಲಕ್ಷ ರೂ. ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆ ಜೊತೆಗೆ ಬಹುಮಾನಕ್ಕೂ ಪೈಪೋಟಿ ನೀಡಲಾಗುತ್ತದೆ…
ಮಡಿಕೇರಿ ಅ.24 : ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದಲ್ಲಿ ದಶಮಂಟಪಗಳ ಸಾರಥಿ ಎಂದೇ ಖ್ಯಾತಿ ಪಡೆದಿರುವ 150 ವರ್ಷಗಳ ಇತಿಹಾಸ ಹೊಂದಿರುವ ಪೇಟೆ ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ಮಂಟಪದಲ್ಲಿ ವೈಕುಂಠ ದರ್ಶನ ಕಥಾ ಸಾರಾಂಶವನ್ನು ಪ್ರದರ್ಶಿಸಲಿದೆ. ಒಂದು ಟ್ರ್ಯಾಕ್ಟರ್, 10 ಕಲಾಕೃತಿಗಳು, ದಿಂಡಿಗಲ್‌ನ ಸೆಲ್ವಂ ಎಲೆಕ್ಟ್ರಿಕಲ್ ನವರ ಲೈಟಿಂಗ್ ಬೋರ್ಡ್ ಇರಲಿದೆ. ಪ್ಲಾಟ್‌ಫಾರಂ ನಿರ್ಮಾಣ ಮತ್ತು ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ನ್ನು ಸಮಿತಿ ಸದಸ್ಯರೆ ಮಾಡಲಿದ್ದಾರೆ. ಧ್ವನಿವರ್ಧಕ ಮತ್ತು ಸ್ಟುಡಿಯೋ ಲೈಟ್ ವ್ಯವಸ್ಥೆಯನ್ನು ಮಡಿಕೇರಿಯ ಮರ್ಕರ ಪವರ್ ನವರು ಒದಗಿಸಲಿದೆ. ಒಟ್ಟು 8 ಲಕ್ಷ ರೂ. ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದೆ ಎಂದು ಅಧ್ಯಕ್ಷ ಭರತ್ ಬಿದ್ದಪ್ಪ ತಿಳಿಸಿದ್ದಾರೆ.






