ಲೇಖಕ: admin

ಮಡಿಕೇರಿ ನ.18 : ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಬರಹಗಾರರು ಮತ್ತಷ್ಟು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಾಹಿತಿ ಹಂಚೆಟ್ಟಿರ ಫ್ಯಾನ್ಸಿಮುತ್ತಣ್ಣ ಅವರು ಹೇಳಿದ್ದಾರೆ.         ಕರ್ನಾಟಕ ಸಂಭ್ರಮ 50 ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ರಾಜೇಶ್ವರಿ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಸಾಹಿತಿ ವಿಜಯ ವಿಷ್ಣುಭಟ್ ಮತ್ತು ದಿ.ಡಿ.ಜೆ.ಪದ್ಮನಾಭ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೊಡಗಿನ ಮಹಿಳಾ ಸಾಹಿತಿಗಳು’ ವಿಷಯ ಕುರಿತು ಮಾತನಾಡಿದರು.         ಕೊಡಗಿನ ಗೌರಮ್ಮ ಹೆಸರಿನಲ್ಲಿ ಪ್ರಶಸ್ತಿ ಪ್ರಾರಂಭವಾದ ನಂತರ ಕೊಡಗು ಜಿಲ್ಲೆಯಲ್ಲಿ ಮಹಿಳಾ ಬರಹಗಾರರ ಸಂಖ್ಯೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಇನ್ನಷ್ಟು ಮಹಿಳಾ ಬರಹಗಾರರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕನ್ನಡ, ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜೊತೆಗೆ ಸಾಹಿತ್ಯದ ಮೂಲಕ ಸಮಾಜದ ಆಗುಹೋಗುಗಳನ್ನು…

Read More

ಮಡಿಕೇರಿ ನ.18 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಶಿಕ್ಷಣ ಇಲಾಖೆ ವತಿಯಿಂದ ಮೂರ್ನಾಡು ವೃತ್ತದ 20 ಅಂಗನವಾಡಿ ಕೇಂದ್ರದ ಹಾಗೂ ಪಿಎಂಶ್ರೀ ಶಾಲೆ ಮೂರ್ನಾಡುವಿನ ಸುಮಾರು 400 ಮಕ್ಕಳ ಪ್ರತಿಭೆಗೆ ಒಂದು ಸುಂದರ ವೇದಿಕೆಯನ್ನು ಕಲ್ಪಿಸಲಾಗಿತ್ತು. ಪುಟಾಣಿ ಮಕ್ಕಳು ಛದ್ಮವೇಶ, ನೃತ್ಯ,ಅಭಿನಯ ಗೀತೆ,ಪಾಲ್ಗೊಂಡು ಪದಕಗಳನ್ನು ಪಡೆದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ,,ಡ್ರಾಯಿಂಗ್ ಪುಸ್ತಕ ವಿತರಣೆ ಮಾಡಲಾಯಿತು. ಮಕ್ಕಳ ಪೋಷಕರು, ಶಿಕ್ಷಕರು, ಅಂಗನವಾಡಿ ಶಿಕ್ಷಕರು,ಸಹಾಯಕರಿಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ವಿಜೇತರಿಗೆ ಪದಕಗಳನ್ನು ನೀಡಲಾಯಿತು.        ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿತ ಪೊನ್ನಮ್ಮ ಶಾಲಾ ವಿದ್ಯಾರ್ಥಿನಿ ರವರು ವಹಿಸಿಕೊಂಡಿದ್ದರು.  ಕಾರ್ಯಕ್ರಮದಲ್ಲಿ ಕಾಂತೂರು ಮೂರ್ನಾಡು ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರಾದ ದಿವ್ಯ, ಶಾಲಾ ಶಿಕ್ಷಕ ರಾಜೇಶ್, ದಸರಾ ಸಾಂಸ್ಕೃತಿಕ ಸಮಿತಿಯ ತೆನ್ನಿರ ಮೈನಾ, ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿ ವಿ.ಕೆ.ಲಲಿತಾ ಅವರನ್ನು ಸನ್ಮಾನಿಸಲಾಯಿತು.…

Read More

ಮಡಿಕೇರಿ ನ.18 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024 ರ ಸಂಬಂಧ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ತಿದ್ದುಪಡಿ ಇತ್ಯಾದಿ ಸಂಬಂಧ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ತಹಶೀಲ್ದಾರರು ಇತರರು ಇದ್ದರು.

Read More

ಸೋಮವಾರಪೇಟೆ ನ.18 : ಸೋಮವಾರಪೇಟೆ ಸಮೀಪದ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರದಂದು ವಿವಿಧ ಮನರಂಜನಾ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಶಾಲಾ ಮಕ್ಕಳಿಂದಲೇ ವೇದಿಕೆ ಕಾರ್ಯಕ್ರಮ ನಡೆಯಿತು. ಸ್ಫರ್ದಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಂಗೀತ ಕುರ್ಚಿ ಸ್ಪರ್ಧೆ ಪ್ರೇಕ್ಷಕರ ಮನರಂಜಿಸಿತು.

Read More

ಸೋಮವಾರಪೇಟೆ ನ.18 : ಸೋಮವಾರಪೇಟೆ ಜೇಸಿಐ ಪುಷ್ಪಗಿರಿ ಸಂಸ್ಥೆಯ ವತಿಯಿಂದ ನಂಜಮ್ಮ ಸಮುದಾಯ ಭವನದಲ್ಲಿ ನಡೆಸಲಾಗುತ್ತಿರುವ ಜೇಸಿ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಚದುರಂಗ ಸ್ಪರ್ಧೆ ನಡೆಯಿತು. ಈ ಸಂದರ್ಭ ಜೇಸಿ ಸಂಸ್ಥೆಯ ಅಧ್ಯಕ್ಷೆ ಎಂ.ಎ. ರುಬೀನಾ, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ ಲಕ್ಷ್ಮೀ ಕುಮಾರ್, ಕಾರ್ಯಕ್ರಮ ಯೋಜನಾಧಿಕಾರಿ ವಿನುತಾ ಸುದೀಪ್ ಸದಸ್ಯರಾದ ಬಿ.ಈ. ಅರಣ್‌ಕುಮಾರ್ ಇದ್ದರು.

Read More

ಮಡಿಕೇರಿ ನ.18 : ಮಡಿಕೇರಿ ಯೂತ್ ಕ್ರಿಕೆಟ್ ಕ್ಲಬ್(ಎಂವೈಸಿಸಿ) ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.18 ರಿಂದ 24 ರವರೆಗೆ ಜಿಲ್ಲಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಉಪಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಪ್ಪ ಅವರ ಪರಿಶ್ರಮದಿಂದ 39 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಎಂವೈಸಿಸಿ, ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಾ, ಪಂದ್ಯಾವಳಿಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನೊಂದಿಗೆ ನೋಂದಾಯಿತ ಜಿಲ್ಲೆಯ ಎರಡು ಕ್ಲಬ್‌ಗಳಲ್ಲಿ ಎಂವೈಸಿಸಿ ಕೂಡ ಒಂದಾಗಿದೆ. ಕ್ಲಬ್‌ನಿಂದ ನಿರಂತರವಾಗಿ ಪಂದ್ಯಾವಳಿಗಳನ್ನು ನಡೆಸಲು ಸಾಧ್ಯವಾಗದಿದ್ದರು, ಕಳೆದ ಏಳೆಂಟು ವರ್ಷಗಳಿಂದ ತಪ್ಪದೆ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿಕೊಂಡು ಬರುತ್ತಿರುವುದಾಗಿ ಹೇಳಿದರು. ಈ ಬಾರಿಯ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ವ್ಯಾಪ್ತಿಯ 18 ರಿಂದ 20 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರು ಕೊಡಗಿನ ಮೂಲದವರೇ ಆಗಿರಬೇಕೆಂದು ಸ್ಪಷ್ಟ…

Read More

ಮಡಿಕೇರಿ ನ.18 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024ರ ಸಂಬಂಧ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ತಿದ್ದುಪಡಿ ಇತ್ಯಾದಿ ಸಂಬಂಧ ಕೊಡಗಿನ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ. ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಯವರು, ಮತದಾರರ ನೋಂದಣಾಧಿಕಾರಿ ಹಾಗೂ ಹಿರಿಯ ಉಪವಿಭಾಗಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

Read More

ವಿರಾಜಪೇಟೆ ನ.18 : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಭವಿಷ್ಯದ ಭಾರತ ಪ್ರಗತಿಯತ್ತ ಸಾಗಲು ಸಹಕಾರಿಯಾಗಲಿದೆ ಎಂದು ವಿರಾಜಪೇಟೆ ಜಾನಪದ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಸಾಹಿತಿ ರಂಜಿತ ಕಾರ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ಮೌಂಟೇನ್ ವ್ಯೂ ಶಾಲೆಯಲ್ಲಿ ನಡೆದ ಸಂಭ್ರಮದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸ್ವಾತಂತ್ರ್ಯ ಭಾರತ ಅಭಿವೃದ್ಧಿಯತ್ತ ಸಾಗಬೇಕಾದರೆ ಇಂದಿನ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ, ಪರಿಶುದ್ಧ ಪ್ರೇಮ ಕಲಿಕೆ, ಬದುಕುವ, ವಿಕಸಿಸುವ, ಭಾಗವಹಿಸುವ ಹಕ್ಕುಗಳ ಅನುಪಾಲನೆಯಾಗಬೇಕು ಎಂದರು. ಮಕ್ಕಳಲ್ಲಿ ಯಾವ ರೀತಿಯ ಅಭಿರುಚಿಯಿದೆ ಎಂಬುವುದನ್ನು ಪೋಷಕರು ಮೊದಲು ಅರಿತುಕೊಂಡು ಉತ್ತಮ ಗುರಿಯೆಡೆಗೆ ತಲುಪಿಸಲು ಪ್ರಯತ್ನಿಸಬೇಕು. ಸೋಲು ಗೆಲುವು ಎಂದಿಗೂ ಇದ್ದಿದ್ದೇ, ಆದರೆ ಪ್ರಯತ್ನ ನಮ್ಮದಾಗಿರಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿ ಹಾಗೂ ವಿವಿಧ ಸ್ಪರ್ಧೆಯ ತೀರ್ಪುಗಾರರಾಗಿ ಪಾಲ್ಗೊಂಡಿದ್ದ ವಿರಾಜಪೇಟೆಯ ವಕೀಲರಾದ ಅನುಪಮ ಕಿಶೋರ್ ಮಾತನಾಡಿ ನಮ್ಮ ದೇಶದಲ್ಲಿ ವಿಭಿನ್ನ ಸಂಸ್ಕೃತಿ,…

Read More

ಮಡಿಕೇರಿ ನ.18 : ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಜನಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ನಗರಸಭಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಗರಸಭೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರುಗಳು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಅವರು, ನಗರಸಭಾ ಅಧ್ಯಕ್ಷರು ತಮಗೆ ದೊರೆತ್ತಿರುವ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತಮ್ಮ ಹಿತಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ನಗರದ ಅಭಿವೃದ್ಧಿಗಾಗಿ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಮತ್ತು ಜನಪರ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದರು. ಅಧ್ಯಕ್ಷರು ನಗರದ ಜನರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ, ಸರ್ಕಾರದಿಂದ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಇವರ ಅಸಮರ್ಥ ಆಡಳಿತದಿಂದಾಗಿ ನಗರೋತ್ಥಾನದ ಮೂರನೇ ಹಂತದ ಅನುದಾನ ರೂ.3 ಕೋಟಿ ಖರ್ಚಾಗದೆ ಸರ್ಕಾರಕ್ಕೆ ವಾಪಾಸ್ಸಾಗಿದೆ. ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸೋಣವೆಂದು ಕರೆ ನೀಡಿದ ಕ್ಷೇತ್ರದ ಶಾಸಕರ…

Read More

ಮಡಿಕೇರಿ ನ.18 : ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಜನಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದರ ನೈತಿಕ ಹೊಣೆ ಹೊತ್ತು ನಗರಸಭಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ನಗರಸಭೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರುಗಳು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭಾ ಸದಸ್ಯ ಹಾಗೂ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಅವರು, ನಗರಸಭಾ ಅಧ್ಯಕ್ಷರು ತಮಗೆ ದೊರೆತ್ತಿರುವ ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತಮ್ಮ ಹಿತಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ನಗರದ ಅಭಿವೃದ್ಧಿಗಾಗಿ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಮತ್ತು ಜನಪರ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದರು. ಅಧ್ಯಕ್ಷರು ನಗರದ ಜನರ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ, ಸರ್ಕಾರದಿಂದ ವಿಶೇಷ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಇವರ ಅಸಮರ್ಥ ಆಡಳಿತದಿಂದಾಗಿ ನಗರೋತ್ಥಾನದ ಮೂರನೇ ಹಂತದ ಅನುದಾನ ರೂ.3 ಕೋಟಿ ಖರ್ಚಾಗದೆ ಸರ್ಕಾರಕ್ಕೆ ವಾಪಾಸ್ಸಾಗಿದೆ. ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸೋಣವೆಂದು ಕರೆ ನೀಡಿದ ಕ್ಷೇತ್ರದ ಶಾಸಕರ…

Read More