ಮಡಿಕೇರಿ ನ.18 : ಶಾಲೆಗಳಿಗೆ ಸಾಹಿತ್ಯವನ್ನು ಕೊಂಡೊಯ್ಯುವ ಮೂಲಕ ವಿದ್ಯಾರ್ಥಿಗಳನ್ನು ಸಾಹಿತ್ಯಾಸಕ್ತರನ್ನಾಗಿ ಮಾಡಿ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಪ್ರತಿಯೊಂದು ಶಾಲೆಗಳಲ್ಲಿ ವ್ಯವಸ್ಥಿತವಾಗಿ ನಡೆಯಬೇಕೆಂದು ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ತಿಳಿಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ಹಾಕತ್ತೂರು ಪ್ರೌಢಶಾಲೆಯಲ್ಲಿ ನಡೆದ ಬಿ.ಆರ್.ಸಾಯಿನಾಥ್ ಮತ್ತು ತ್ರಿಭಾಷಾ ಸಾಹಿತಿ ಮುಲ್ಲೇಂಗಡ ದಿ.ಬೇಬಿ ಚೋಂದಮ್ಮ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕೊಡಗಿನ ಮಹಿಳಾ ಸಾಹಿತ್ಯದಲ್ಲಿ ಕಥೆಗಾರ್ತಿ ಗೌರಮ್ಮ ಅವರ ಸಾಧನೆಯ ಕುರಿತು ಶ್ಲಾಘಿಸಿದ ದೊಡ್ಡೇಗೌಡರು, ನಂಜನಗೂಡು ತಿರುಮಲಾಂಭ ಕಲ್ಯಾಣಮ್ಮನವರ ಸಮಕಾಲೀನರಾಗಿ ಗೌರಮ್ಮನವರು ಬರೆದ ಪುಸ್ತಕಗಳು ಇಂದು ಓದುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ ಎಂದರು. ಹತ್ತನೇ ಶತಮಾನದ ಕವಿ ನಾಗವರ್ಮ 15ನೇ ಶತಮಾನದ ಜೈನ ಕವಿ ದೇವಪ್ಪ, ರೆ.ಫಾ.ಕಿಟೆಲ್ ಅನಂತರ ಪಂಜೆ ಮಂಗೇಶರಾಯರು, ಭಾರತೀಸುತರು , ಗೌರಮ್ಮ, ಡಿ.ಎನ್. ಕೃಷ್ಣಯ್ಯನವರು ಕೊಡಗಿನಲ್ಲಿ ಬೆಳೆಸಿದ…
ಲೇಖಕ: admin
ಗರಿಯಾಬಂದ್ ನ.17 : ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದ ಬಳಿ ನಡೆದಿದೆ. ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು ಸ್ಫೋಟ ಸಂಭವಿಸಿತು. ಹುತಾತ್ಮ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್‌ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಬೆಂಗಳೂರು ನ.17 : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಶಾಸಕ ಆರ್.ಅಶೋಕ್ ಅವರು ಆಯ್ಕೆಯಾಗಿದ್ದಾರೆ. ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.
ಬೆಂಗಳೂರು ನ.17 : ಬಿಜೆಪಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ವರಿಷ್ಠರು ಬೆಂಬಲ ಸೂಚಿಸಿದ ಹಿನ್ನೆಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಇಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಎನ್ ಡಿಎ ಜೊತೆಗಿನ ಮೈತ್ರಿ ವಿರುದ್ಧ ಸಾರ್ವಜನಿಕವಾಗಿ ಮಾತನಾಡಿದ್ದ ಇಬ್ರಾಹಿಂ ಅವರನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿದ್ದಾರೆ. ಕಾಂಗ್ರೆಸ್ ಎಂಎಲ್‌ಸಿ ಆಗಿದ್ದ ಇಬ್ರಾಹಿಂ ಅವರು, ಪಕ್ಷ ತೊರೆದು ಜೆಡಿಎಸ್ ನ ರಾಜ್ಯಾಧ್ಯಕ್ಷರಾಗಿದ್ದರು.
ಸುಂಟಿಕೊಪ್ಪ ನ.17 : ಲಾರಿ ಹಾಗೂ ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಗದ್ದೆಹಳ್ಳದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಓಮ್ನಿ ಹಾಗೂ ಮಡಿಕೇರಿಯಿಂದ ಸುಂಟಿಕೊಪ್ಪದ ಕಡೆಗೆ ತೆರಳುತ್ತಿದ್ದ ಲಾರಿ ಗದ್ದೆಹಳ್ಳದ ತಿರುವಿನಲ್ಲಿ ಡಿಕ್ಕಿಯಾಗಿದೆ. ಘಟನೆಯಿಂದ ಓಮ್ನಿಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ನ.17 : ಮಂಗಳೂರಿನ ಕೇಶವ ಸ್ಮೃತಿ ಸಂವರ್ಧನ ಸಮಿತಿ ವತಿಯಿಂದ ನ.19 ರಂದು ಕೊಡಗು ಜಿಲ್ಲಾ ಮಹಿಳಾ ಸಮನ್ವಯದ “ನಾರೀ ಶಕ್ತಿ ಸಂಗಮ” ಮಹಿಳಾ ಸಮ್ಮೇಳನ ಮಡಿಕೇರಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ 2 ಗಂಟೆಯವರೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನಡೆಯಲಿರುವ ಸಮ್ಮೇಳನ ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷತೆ, ಗ್ರಾಮೀಣ ಕೃಷಿ ವಿಚಾರಗಳ ಬಗ್ಗೆ ಬೆಳಕು ಚೆಲ್ಲಲಿದೆ. ಕಾರ್ಯಕ್ರಮವನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಪುಷ್ಪಾ ಕುಟ್ಟಣ್ಣ ಉದ್ಘಾಟಿಸಲಿದ್ದು, ಸಾಹಿತಿ ಜಲಾ ಕಾಳಪ್ಪ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ವಸಂತ ಸ್ವಾಮಿ “ಭಾರತೀಯ ಚಿಂತನೆಯಲ್ಲಿ ಮಹಿಳೆ, ಭಾರತದ ವಿಕಾಸದಲ್ಲಿ ಮಹಿಳೆಯರ ಪಾತ್ರ ಮತ್ತು ಸುರಕ್ಷತೆ, ಸ್ವಾವಲಂಬನೆ, ಆರೋಗ್ಯ, ಶಿಕ್ಷಣ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ. ಸಮಾರೋಪ ವಾಚಕರಾಗಿ ಅಖಿಲ ಭಾರತೀಯ ಕಿಸಾನ್ ಸಂಘದ ಸಂಯೋಜಕಿ ವೀಣಾ ಸತೀಶ್ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲೆಯ ಸಾಧಕ ಮಹಿಳೆಯರು ಸೇರಿದಂತೆ ವೈದ್ಯರು, ವಕೀಲರು,…
ನಾಪೋಕ್ಲು ನ.17 : ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಾರ್ವಜನಿಕ ನೀರಿನ ಟ್ಯಾಂಕ್ ಅನ್ನು ಶ್ವಚ್ಛಗೊಳಿಸಲಾಯಿತು. ನಾಪೋಕ್ಲು ಗ್ರಾಮ ಪಂಚಾಯತಿಗೆ ಸೇರಿದ ಸಾರ್ವಜನಿಕ ನೀರಿನ ಟ್ಯಾಂಕ್ ಅನ್ನು ಸ್ವಯಂ ಸೇವಕರು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು. ಈ ಸಂದರ್ಭ ಸ್ವಯಂ ಸೇವಕರಾದ ಚೇತನ್, ದೇವಪ್ಪ, ಚರಣ್, ಸುದೀಪ್, ನಿತೀಶ್, ರಾಜೇಶ್, ಶರತ್ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಮೈಸೂರು ನ. 17: ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್‍ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಬಂದಿರುವ ಮಾಹಿತಿಯ ಪ್ರಕಾರ ಮೂರು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದ ಅವರು. ಕಾಂಗ್ರೆಸ್ ಪರವಾಗಿ ಜನಾದೇಶ ಬಂದರೆ ಲೋಕಸಭಾ ಚುನಾವಣೆ ಮುಂದೂಡಲಾಗುವುದೇ ಎಂಬ ಬಗ್ಗೆ ಉತ್ತರಿಸಿ ಮುಂದೂಡಲಾಗುವುದಿಲ್ಲ ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆ ಇದೆ ಎಂದರು. ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ:: ರಾಜ್ಯಸರ್ಕಾರ ಬರಪರಿಹಾರ ನೀಡುವ ಸಂಬಂಧ ಕೇಂದ್ರಕ್ಕೆ ಒಂದು ವಾರದ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರದಿಂದ 17900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಗೂ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ…
ಮಡಿಕೇರಿ ನ.17 : ತೋಟದ ಲೈನ್ ಮನೆಗಳಲ್ಲಿ ವಾಸವಿರುವ ಕಾರ್ಮಿಕರಿಗೆ ಸ್ವಂತ ಭೂಮಿ ಮತ್ತು ಮನೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆದಿವಾಸಿ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ರೈತ ಸಂಘ (ಎಐಕೆಎಸ್) ಮತ್ತು ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಹಕ್ಕೊತ್ತಾಯಗಳನ್ನು ಮಂಡಿಸಿದರು. ದಲಿತ ಆದಿವಾಸಿ ಕೃಷಿ ಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಮೂಲ ನಿವಾಸಿ ಆದಿವಾಸಿಗಳು, ದಲಿತರು, ಕೃಷಿ ಕಾರ್ಮಿಕರು ಸ್ವಂತ ಸೂರಿಲ್ಲದೆ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಶತ-ಶತಮಾನಗಳಿಂದ ಉಳ್ಳವರ ದೌರ್ಜನ್ಯಕ್ಕೆ ಒಳಗಾಗಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂದು ನಿಜವಾದ ಆದಿವಾಸಿಗಳು ಯಾವುದೇ ಸೌಲಭ್ಯಗಳಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಗುರುತಿನ ದಾಖಲೆಗಳನ್ನು ಮಾಲೀಕರು ಕಸಿದುಕೊಂಡು ಸರ್ಕಾರದ ದಾಖಲೆಗಳಲ್ಲಿ ಆದಿವಾಸಿಗಳು ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. ಕೊಡಗಿನ ಭೂಮಾಲೀಕ ವರ್ಗಕ್ಕೆ…
ಮಡಿಕೇರಿ ನ.17 : ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶವನ್ನು (ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ-Farmer Registration and Unified Beneficiary Information System- FRUITS) ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ್ ಅವರು ತಿಳಿಸಿದ್ದಾರೆ. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್‍ಐಡಿ) ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಯೋಜನೆಗಳಿಗೆ ಫ್ರೂಟ್ಸ್ ಸಂಖ್ಯೆ ಬಳಸಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆಯುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ. 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ…






