ಲೇಖಕ: admin

ಮಡಿಕೇರಿ ಮಾ.23 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್, 7 ರಿಂದ 30 ರವರೆಗೆ (ರಜೆ ದಿನ ಹೊರತುಪಡಿಸಿ) 21 ದಿನಗಳ ಕಾಲ ನುರಿತ ತರಬೇತುದಾರರಿಂದ ಬೇಸಿಗೆ ತರಬೇತಿ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಈಜು ತರಬೇತುದಾರರು ಮನೋಹರ್ ದೂ.ಸಂ.9480032712, ಷಟಲ್ ಬ್ಯಾಡ್ಮಿಂಟನ್ ತರಬೇತುದಾರರು ಜ್ಯೋತಿ ಸೋಮಯ್ಯ 8792842853, ಟೇಬಲ್ ಟೆನ್ನಿಸ್ ತರಬೇತುದಾರರು ರಚನ್ ಪೊನ್ನಪ್ಪ 9110677030, ಅಥ್ಲೆಟಿಕ್ಸ್ ತರಬೇತುದಾರರು ಮಹಾಬಲ ಕೆ. 9980887499 ಮತ್ತು ಹಾಕಿ ತರಬೇತುದಾರರು ಬಿಂದ್ಯಾ ಕೆ.ಕೆ. 8105122430 ನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. :: ಕ್ರೀಡೆಗಳ ವಿವರ : : ಈಜು, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್(7 ರಿಂದ 18 ವರ್ಷದವರಿಗೆ), ಅಥ್ಲೆಟಿಕ್ಸ್, ಹಾಕಿ (10 ರಿಂದ 18 ವರ್ಷದವರಿಗೆ). ಈಜು ಬೆಳಗ್ಗೆ 9.30 ರಿಂದ 11.30 ರವರೆಗೆ ಮತ್ತು ಸಂಜೆ 5 ರಿಂದ 6.30 ಗಂಟೆಯವರೆಗೆ, ಷಟಲ್ ಬ್ಯಾಡ್ಮಿಂಟನ್ ಮಧ್ಯಾಹ್ನ…

Read More

ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡರಂಗ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಜಾಗತೀಕರಣ ಯುಗದಲ್ಲಿಯೂ ಸಹ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಕೈಮಗ್ಗ ಉತ್ಪನ್ನಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕೈಜೋಡಿಸಬೇಕು ಎಂದು ಅವರು ಕೋರಿದರು. ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಸರ್ಕಾರದ ಅಂಗ ಸಂಸ್ಥೆಗಳಿಗೆ ಬೆಡ್‍ಶೀಟ್, ಟವಲ್, ಮ್ಯಾಟ್ ಮತ್ತಿತರ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿದಲ್ಲಿ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಬರಲಿದೆ. ಇದರಿಂದ ಸ್ಥಳೀಯವಾಗಿ ಸ್ವ ಉದ್ಯೋಗ ದೊರೆಯಲಿದೆ ಎಂದು ಅವರು ಸಲಹೆ ಮಾಡಿದರು. ನೇಕಾರರ ಬದುಕು ಹಸನುಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಪಾಂಡುರಂಗ ಅವರು ಸಲಹೆ ಮಾಡಿದರು. ಕೊಡಗು…

Read More

ಮಡಿಕೇರಿ ಮಾ.23 NEWS DESK :  ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪತ್ರಕರ್ತರಿಗೆ ಆಯೋಜಿಸಿದ್ದ ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 ನಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯಾಟದಲ್ಲಿ ಟಾಸ್ ಸೋತ ಮೀಡಿಯಾ ಚಾಲೆಂಜರ್ಸ್ ತಂಡ ನಿಗದಿತ 6 ಓವರ್‍ನಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಕಲೆಹಾಕಿತು. ತಂಡದ ಪರ ವಿನೋದ್ 39, ಹೇಮಂತ್ 31 ರನ್ ಕಲೆ ಹಾಕಿದರು. ಗುರಿ ಬೆನ್ನಟ್ಟಿದ ಮೀಡಿಯಾ ಹಿಟ್ಟರ್ಸ್ ತಂಡ 4 ವಿಕೆಟ್ ಕಳೆದುಕೊಂಡು 54 ರನ್‍ಗಳಿಸಿ 27ರನ್‍ಗಳ ಅಂತರದಲ್ಲಿ ಸೋಲುಂಡಿತ್ತು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡವನ್ನು ಮೀಡಿಯಾ ಹಿಟ್ಟರ್ಸ್ ತಂಡ 10 ವಿಕೆಟ್‍ಗಳಿಂದ ಮಣಿಸಿತು. ನಂತರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತ ಕೂರ್ಗ್ ಡ್ಯೂ ಡ್ರಾಪ್ಸ್ ಕುಶಾಲನಗರ ತಂಡ ನಿಗದಿತ ಓವರ್‍ನಲ್ಲಿ 7 ವಿಕೆಟ್ ನಷ್ಟಕ್ಕೆ 44 ರನ್…

Read More

ಮಡಿಕೇರಿ ಮಾ.23 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ರಸ್ತೆಗಳು ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಾರ್ಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರ ಅಧಿಕಾರವಧಿಯಲ್ಲೇ ನಡೆದಿದೆ. ಆದರೆ ಕಾಂಗ್ರೆಸ್ಸಿಗರು ಕಳೆದ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಸುಳ್ಳು ಹೇಳಿಕೆ ನೀಡುವ ಮೂಲಕ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 2016ರಲ್ಲಿ ಆಗಿನ ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ- ಕರಡ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಉತ್ತಮ ದರ್ಜೆಯ ರಸ್ತೆಯನ್ನು ನಿರ್ಮಾಣ ಮಾಡಲು ಅಡಿಗಲ್ಲು ಹಾಕಿದರು. ಇದೇ ಅವಧಿಯಲ್ಲಿ 3 ಕಿ.ಮೀ ಉತ್ತಮ ರಸ್ತೆಯನ್ನು ಮರು ಡಾಂಬರೀಕರಣ ಮಾಡಿ ಅನುಕೂಲ ಕಲ್ಪಿಸಿಕೊಟ್ಟರು. ಇದೀಗ ಕಾಂಗ್ರೆಸ್ ಸರಕಾರ ಬಂದ ನಂತರ ಕಳೆದ ಮೂರು ವರ್ಷಗಳಲ್ಲಿ ಒಂದು ಕಿ.ಮೀ 350 ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಿ…

Read More

ಸುಂಟಿಕೊಪ್ಪ ಮಾ.23 NEWS DESK : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆ ಧ್ವಜಾರೋಹಣದೊಂದಿಗೆ ಆರಂಭಗೊಂಡ ತೆರೆ ಮಹೋತ್ಸವವು ಮಧ್ಯಾಹ್ನದವರೆಗೂ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ಕೋಲಗಳು ಸೇರಿದಂತೆ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿದ್ಯುತ್ ದೀಪ ಹಾಗೂ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು. ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ಉಪಾಧ್ಯಕ್ಷ ಯಂಕನ ಶ್ರೀರಾಮ್, ಬಿ.ಡಿ.ರಾಜುರೈ, ಪ್ರಧಾನಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಚಿ ರಮೇಶ್‍ಪಿಳ್ಳೆ, ಸಹಕಾರ್ಯದರ್ಶಿ ಯಂಕನ ಕೌಶಿಕ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಸುರೇಶ್ ಗೋಪಿ, ಸುದೀಶ್, ಚಂದು ಸುರೇಶ್, ಧನುಕಾವೇರಪ್ಪ, ಎಂ.ಎಸ್.ಸುನಿಲ್, ಚಂದ್ರ, ಪ್ರವೀಣ, ದಿವಾಕರ ರೈ, ವಿನೋದ್, ಪ್ರಾಂತ್, ಎ.ಲೋಕೇಶ್ ಕುಮಾರ್, ಎ.ಶ್ರೀಧರ್ ಕುಮಾರ್, ಮನು ರೈ (ಮಹೇಶ್), ಸಲಹಾಸಮಿತಿ ಸದ್ಯರಾದ ಕೆ.ಪಿ.ಜಗನ್ನಾಥ್, ವೀಣಾರೈ, ಗಿರೀಜಾ ಉದಯಕುಮಾರ್ ಹಾಗೂ ರಮ್ಯ ಮೋಹನ್ ಸೇರಿದಂತೆ ಸಮಿತಿ ಸದಸ್ಯರು ಸೇರಿದಂತೆ ಭಕ್ತಾಧಿಗಳು ಸಾವಿರಾರು…

Read More

ಮಡಿಕೇರಿ ಮಾ.23 NEWS DESK : ಕೊಡಗು ಜಿಲ್ಲೆಯ ಪ್ರತಿಷ್ಟಿತ ಕ್ಲಬ್ ಗಳಲ್ಲೊಂದಾದ ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಕಿರಿಯಮಾಡ ರತನ್ ತಮ್ಮಯ್ಯ ಆಯ್ಕೆಯಾಗಿದ್ದಾರೆ. ಮಾ.21 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ 2 ವಷ೯ಗಳ ಅವಧಿಗೆ ರತನ್ ತಮ್ಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮುಕ್ಕಾಟೀರ ಸಂಜು ಪೊನ್ನಪ್ಪ ಅವರನ್ನು ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮತ್ತು ಸಂಜಯ್ ಹೆಚ್. ಎಲ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. 121 ವಷ೯ಗಳ ಸುಧೀಘ೯ ಇತಿಹಾಸಿವಿರುವ ಕಾಸ್ಮೋಪಾಲಿಟನ್ ಕ್ಲಬ್ ನಲ್ಲಿ 240 ಸದಸ್ಯರಿದ್ದಾರೆ, ರತನ್ ತಮ್ಮಯ್ಯ ರೋಟರಿ ಸಂಸ್ಥಯ ವಿವಿಧ ಹುದ್ದೆಗಳಲ್ಲಿಯೂ ಕಾಯ೯ನಿವ೯ಹಿಸಿದ್ದಾರೆ.

Read More

ಮಡಿಕೇರಿ NEWS DESK  ಮಾ.23 : ಕೇಂದ್ರ ಸರಕಾರ ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ (ಚೌಕಿ) ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರದ ಕ್ರಮವನ್ನು ಖಂಡಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು ಮಾತನಾಡಿ ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಇಳಿಕೆಯಾಗುವಲ್ಲಿಯವರೆಗೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು. ಕಾoಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರೂ.430 ಇದ್ದ ಅನಿಲದ ಬೆಲೆ ಇಂದು ಸಾವಿರದ ಸನಿಹಕ್ಕೆ ತಲುಪಿದೆ. ಇದು ನರೇಂದ್ರ ಮೋದಿಯವರ ಆಡಳಿತದ…

Read More

ಮಡಿಕೇರಿ ಮಾ.23 NEWS DESK  : ಶ್ರೀ ವಿನಾಯಕ ಸೇವಾ ಟ್ರಸ್ಟ್‌ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀ ರಾಮನವಮಿ ಆಚರಣೆ ಹಾಗೂ ಟ್ರಸ್ಟ್‌ನ 2025-26 ವಾರ್ಷಿಕ ಮಹಾಸಭೆ ಮಾ.26ರಂದು ನಡೆಯಲಿದೆ. ಟ್ರಸ್ಟ್‌ಗೆ ನೂತನವಾಗಿ ಖರೀದಿಸಿರುವ ಜಾಗದ ಆವರಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿ ಅವರ ನೇತೃತ್ವದಲ್ಲಿ ಗಣಹೋಮ, ಬಳಿಕ ದುರ್ಗಾ ಹೋಮ, 11 ಗಂಟೆಗೆ ಶ್ರೀರಾಮನವಿ ಪ್ರಯುಕ್ತ ವಿಶೇಷ ಪೂಜೆ, ಶ್ರೀರಾಮನಿಗೆ ಆರತಿ ನೆರವೇರಲಿದೆ. ನಂತರ ಟ್ರಸ್ಟ್‌ನ ಭಜನಾ ತಂಡದಿಂದ ಭಜನೆ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಕಾರ್ಯದರ್ಶಿ ಬ್ರಿಜೇಶ್‌ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಟ್ರಸ್ಟ್‌ ಅಧ್ಯಕ್ಷ ಹೊನ್ನಪ್ಪ ಆಚಾರ್ಯ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದೆ. ಮುಖ್ಯ ಅತಿಥಿಯಾಗಿ ಮಡಿಕೇರಿಯ ಶ್ರೀರಾಮಾಂಜನೇಯ ಭಜನಾ ಮಂಡಳಿಯ ಪ್ರಮುಖರಾದ ಕೆ.ಕೆ. ಮಹೇಶ್‌ ಕುಮಾರ್‌ ಪಾಲ್ಗೊಳ್ಳಲಿದ್ದಾರೆ. ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಇದೇ ವೇಳೆ ಸನ್ಮಾನಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ. ರಾಮನವಮಿ…

Read More

ಗೋಣಿಕೊಪ್ಪ ಮಾ.23 NEWS DESK : ಗೋಣಿಕೊಪ್ಪಲು ಶ್ರೀ ಕಿಲೇರಿ ಮುತ್ತಪ್ಪ ದೇವಸ್ಥಾನ ಹರಿಶ್ಚಂದ್ರಪುರದಲ್ಲಿ ಶ್ರೀ ಮುತ್ತಪ್ಪದೇವರ ವಾರ್ಷಿಕೋತ್ಸವ ಮಾ.29, 30 ಮತ್ತು 31 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. 29 ರಂದು ಬೆಳಿಗ್ಗೆ 6ಕ್ಕೆ ಗಣಪತಿ ಹೋಮ, 8.30ಕ್ಕೆ ಪ್ರತಿಷ್ಠಾ ದಿನಾಚರಣೆ ಪೂಜೆ, ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪನ್‍ದೇವರ ವೆಳ್ಳಾಟಂ, ರಾತ್ರಿ 9 ಗಂಟೆಗೆ ಸಾಮೂಹಿಕ ಅನ್ನ ಸಂತರ್ಪಣೆನಡೆಯಲಿದೆ. ಮಾ. 30 ರಂದು ಸಂಜೆ 6.30 ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, 7.30 ಗಂಟೆಗೆ ಕಾರಣೋರ್ ವೆಳ್ಳಾಟಂ, ರಾತ್ರಿ 8.30 ಗಂಟೆಗೆ ಗುಳಿಗನ್ ವೆಳ್ಳಾಟಂ, 9 ಗಂಟೆಗೆ ಸಾಮೂಹಿಕ ಅನ್ನಸಂತರ್ಪಣೆ, 9 ಗಂಟೆಗೆ ಕಂಡ ಕರ್ಣನ್ ವೆಳ್ಳಾಟಂ, 10.30 ಗಂಟೆಗೆ ವಸೂರಿಮಲಾ ವೆಳ್ಳಾಟಂ, 11.30 ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ, 12.30 ಗಂಟೆಗೆ ಪೋದಿ ವೆಳ್ಳಾಟಂ, ಮಧ್ಯಾಹ್ನ 1 ಗಂಟೆಗೆ ಕಳಸ ಸ್ವಾಗತ ನಡೆಯಲಿದೆ. ಮಾ.31 ರಂದು ಮಂಗಳವಾರ ಪ್ರಾತಃಕಾಲ 2 ಗಂಟೆಗೆ…

Read More

ಮಡಿಕೇರಿ NEWS DESK ಮಾ.23 : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ತಿರಸ್ಕರಿಸಿ ಒಳಮೀಸಲಾತಿ ರಹಿತ ಹಳೆ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ವತಿಯಿಂದ ಮಾ.25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ಒಕ್ಕೂಟದ ಜಿಲ್ಲಾ ಸಂಚಾಲಕ ಮೋಹನ್ ಮೌರ್ಯ ಸಿ.ಜೆ ಹಾಗೂ ಮಡಿಕೇರಿ ಸಂಚಾಲಕ ಎಸ್.ಸಿ.ಸತೀಶ್ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾವೇಶದಲ್ಲಿ ಕೊಡಗು ಜಿಲ್ಲೆಯಿಂದ 500 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ವರದಿಯನ್ನು ರಾಜ್ಯ ಸರಕಾರ ತಿರಸ್ಕರಿಸಬೇಕು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅoಶಗಳೊoದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡಬೇಕು. ವ್ಯತ್ಯಾಸಗಳು ಕಂಡುಬoದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ…

Read More