ಮಡಿಕೇರಿ ನ.15 : ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ಮತ್ತಷ್ಟು ಹತ್ತಿರವಾಗಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ. ಭಾಗಮಂಡಲದಲ್ಲಿ ಹೋಬಳಿ ಮಟ್ಟದ ಕಾಂಗ್ರೆಸ್ ಸೇವಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಸೇವಾ ಕೇಂದ್ರಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದರು. ಜನಸೇವೆಗಾಗಿಯೇ ಕಚೇರಿಯನ್ನು ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದರಲ್ಲಿ ಸೇವಾ ಕಚೇರಿ ಪ್ರಮುಖ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭ ಕೋಳಿಬೈಲು ಸಿ.ವೆಂಕಟೇಶ್ ಅವರನ್ನು ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಿದ ಶಾಸಕರು, ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದರು. ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಡಿಸಿಸಿ ಸದಸ್ಯ ಸುನಿಲ್ ಪತ್ರವೊ, ಚೆಟ್ಟಿಮಾನಿ ಗ್ರಾ.ಪಂ ಸದಸ್ಯ ಹ್ಯಾರಿಸ್, ಕರಿಕೆ…
ಲೇಖಕ: admin
ನಾಪೋಕ್ಲು ನ.15 : ಗ್ರಾಮಭಿವೃದ್ಧಿ ಯೋಜನೆಯ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಿದ ಅನುದಾನದಲ್ಲಿ ಚೆರಿಯ ಪರಂಬು ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೆರಿಯಪರಂಬು – ಕಲ್ಲುಮೊಟ್ಟೆ ಸಂಪರ್ಕ ರಸ್ತೆ ಗೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಮಗಾರಿಗೆ ಚೆರಿಯ ಪರಂಬುವಿನಲ್ಲಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿ ಮಾತನಾಡಿದರು. ಸ್ಥಳೀಯ ನಾಯಕರು ಚೆರಿಯಪರಂಬು ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಒಂದು ವಾರದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಆಗಲಿದೆ ಎಂದರು . ಮಳೆಗಾಲದಲ್ಲಿ ಚೆರಿಯ ಪರಂಬು ಜಲಾವೃತವಾಗುವುದನ್ನು ತಡೆಗಟ್ಟಲು ಸೂಕ್ತ ಕಾಮಗಾರಿ ಕೈಗೊಳ್ಳಲಾಗುವುದು. ಸಣ್ಣ ನೀರಾವರಿ ಇಲಾಖೆ ಸಚಿವರು ಹಾಗೂ ಉಸ್ತುವಾರಿ ಸಚಿವರು ಈ ಮೊದಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾಮ ಗಾರಿಗಳನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದರು. ಈ ಸಂದರ್ಭ ಪಂಚಾಯಿತಿ…
ಮಡಿಕೇರಿ ನ.15 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಸಂಭ್ರಮದಿಂದ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಅಶೋಕ್ ಸಂಗಪ್ಪ ಅಲೂರ್, ಹಳೆ ವಿದ್ಯಾರ್ಥಿ ಸಂಘ ಕ್ರಿಯಾಶೀಲವಾಗಿದ್ದು, ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ವಿಚಾರ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ನಡುವೆ ಸಿಕ್ಕಿ ಸಂಕಷ್ಟದಲ್ಲಿರುವುದು ಎಲ್ಲರಿಗೂ ಅರಿವಿದೆ. ಈ ಸಮಸ್ಯೆ ಸರ್ಕಾರದ ಮಟ್ಟದಲ್ಲಿ ಪರಿಹಾರವಾಗಬೇಕಿದ್ದು, ಜನಪ್ರತಿನಿಧಿಗಳು ಈ ವಿಚಾರವಾಗಿ ಸಹಕರಿಸಬೇಕೆಂದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಡಕಾಗದಂತೆ ಪೂರ್ಣ ಪ್ರಯತ್ನ ಕೈಗೊಳ್ಳಲಾಗುವುದೆಂದೆಂದು ತಿಳಿಸಿದರು. ಸಂಘದ ಅಧ್ಯಕ್ಷರಾದ ಡಾ.ಪಾರ್ವತಿ ಅಪ್ಪಯ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 75 ವರ್ಷಗಳನ್ನು ಪೂರೈಸಿದೆ. ಇತ್ತೀಚೆಗೆ ಕಾಲೇಜಿನಲ್ಲಿ ಬಹಳಷ್ಟು ಸಮಸ್ಯೆಗಳು ಉದ್ಭವಿಸಿದ್ದು, ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಯುತ್ತಿದೆ, ಕಾಲೇಜಿನ…
ಕುಶಾಲನಗರ ನ.15 : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ವೇದಿಕೆ ಘಟಕದ ವತಿಯಿಂದ ಕೊಡಮಾಡುವ 2023ನೇ ಸಾಲಿನ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಭಾಜನರಾಗಿದ್ದಾರೆ. ಕನ್ನಡ ಸಾಹಿತ್ಯ, ನಾಡು, ನುಡಿಯ ಬೆಳವಣಿಗೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಲೋಕೇಶ್ ಸಾಗರ್ ಅವರಿಗೆ ಕೊಡಮಾಡಲಾಗಿದೆ. ನ.19 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕರುನಾಡು ಸಾಮರಸ್ಯ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.
ಸೂರತ್ ನ.15 : ಬೃಹತ್ ಟ್ಯಾಂಕ್ ವೊಂದನ್ನು ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪಲ್ಸಾನ ಕಡೋದರ ರಸ್ತೆಯಲ್ಲಿರುವ ಮಿಲ್ ವೊಂದರಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಮರಾಜ್ ಮತ್ತು ಬಾರ್ಡೋಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನಾಲ್ವರು ಕಾರ್ಮಿಕರ ಮೃತ ದೇಹಗಳನ್ನು ಹೊರತೆಗೆದರು.
ಚೆನ್ನೈ ನ.15 : ಅನಾರೋಗ್ಯದಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎನ್ ಶಂಕರಯ್ಯ (102) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಕರಯ್ಯ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಶ್ರೀನಗರ ನ.15 : ಬಸ್ ಕಂದಕಕ್ಕೆ ಬಿದ್ದು ಸುಮಾರು 25 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಎಂಬಲ್ಲಿ ನಡೆದಿದೆ. ಸುಮಾರು 40 ಪ್ರಯಾಣಿಕರಿದ್ದ ಬಸ್ ಬುಧವಾರ 300 ಅಡಿ ಆಳದ ಕಂದಕಕ್ಕೆ ಬಿದ್ದು ಹಲವರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮಡಿಕೇರಿ ನ.15 : ಕೊಡಗು ಸುನ್ನೀ ವೇಲ್ಪೇರ್ ಅಸೋಸಿಯೇಷನ್ ಕುವೈಟ್ ಸಮಿತಿ ವತಿಯಿಂದ ಕೈತಾನ್ ರಾಜಧಾನಿ ಹೋಟೆಲ್ ನಲ್ಲಿ ಬ್ರಹತ್ತ್ ಜಲಾಲಿಯ್ಯ ರಾತೀಬ್ ಹಾಗೂ ಶೈಖ್ ಜೀಲಾನಿ ಸಯ್ಯಿದ್ ತಾಜುಲ್ ಉಲಾಮಾ ಅನುಸ್ಮರಣೆ ಸಮಾವೇಶ ನಡೆಯಿತು. ಮಗ್ರಿಬ್ ನಮಾಜಿನ ಬಳಿಕ, ಉಸ್ತಾದ್ ರುಗಳ ನೇತೃತ್ವದಲ್ಲಿ ಜಾಲಾಲಿಯ್ಯ ರಾತೀಬ್ ನಡೆಯಿತು. ಕಾರ್ಯಕ್ರಮದ ಸ್ವಾಗತ ಸಮಿತಿ ಚೆರ್ಮಾನ್ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹುಸೈನ್ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುವೈಟ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಅಯ್ಯಂಗೇರಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕುವೈಟ್ ಸಮಿತಿ ಅಧ್ಯಕ್ಷ ಬಾದುಃಶಾ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಕಾರರಾಗಿ ಆಗಮಿಸಿದ್ದ ಸಯ್ಯಿದ್ ಮುತ್ತನ್ನೂರ್ ತಂಗಲ್ ಮಲಪ್ಪುರಂ ಮಾತನಾಡಿ ಜನಮನಸ್ಸು ಸೆಳೆದರು. ಸಮಿತಿ ಪ್ರಮುಖರಾದ ಅಬ್ದುಲ್ ರಹಮಾನ್ ಸಖಾಫಿ, ಅಲವಿ ಸಖಾಫಿ ತಂಜೇರಿ, ಮಾಹಿನ್ ಸಖಾಫಿ ಅಯ್ಯಂಗೇರಿ ಮಾತನಾಡಿ ಶುಭಕೋರಿದರು. ವೇದಿಕೆಯಲ್ಲಿ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಯಕೂಬ್ ಕಾರ್ಕಳ, ಕೆಎಸ್‌ಸಿಡಿ ಅಧ್ಯಕ್ಷ ಯೂಸುಫ್ ಮಂಚಕ್ಕಲ್,…
ಮಡಿಕೇರಿ ನ.15 : ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ಸೋಮವಾರಪೇಟೆ ಬೇಳೂರು, ಕೋವರ್‌ಕೊಲ್ಲಿ ಜಂಕ್ಷನ್ ಬಳಿ ಪ್ರವಾಸೋದ್ಯಮ ಸ್ಥಳಗಳ ಮಾರ್ಗಸೂಚಿ ಫಲಕವನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ ರೋಹಿತ್ ಮಾತನಾಡಿ, ಪ್ರವಾಸೋದ್ಯಮ ಮಾರ್ಗನಸೂಚಿ ಫಲಕವು ಹೆಚ್ಚಿನ ಪ್ರವಾಸಿಗರಿಗೆ, ಪ್ರವಾಸೋದ್ಯಮ ಸ್ಥಳಗಳನ್ನು ತಲುಪಲು ಅನುಕೂಲವಾಗಲಿದೆ ಎಂದರು. ಇನ್ನು ಅನೇಕ ಸ್ಥಳಗಳಲ್ಲಿ ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ಪ್ರವಾಸೋದ್ಯಮ ಮಾರ್ಗಸೂಚಿ ಫಲಕವನ್ನು ಅಳವಡಿಸುವುದಾಗಿ ಅವರು ತಿಳಿಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಎಸ್.ಎಲ್. ಅಭಿನಂದ ಮತ್ತು ಖಜಾಂಚಿ ಪ್ರೀತಂ ಹಾಜರಿದ್ದರು.
ಮಡಿಕೇರಿ ನ.15 : ಕೊಡಗು ಹೆಗ್ಗಡೆ ಸಮಾಜದ ಪ್ರತಿನಿಧಿಗಳ ಸಭೆಯು ಸಮಾಜದ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ವಾರ್ಷಿಕ ಕ್ರೀಡೋತ್ಸವವನ್ನು ಹಾತೂರು ಸರ್ಕಾರಿ ಪ್ರಾಥಮಿಕ ಶಾಲೆಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣದಲ್ಲಿ 2024ರ ಮೇ 3 ರಿಂದ 5ರ ವರೆಗೆ ಮೂರು ದಿನಗಳ ಕಾಲ ಕ್ರಿಕೆಟ್, ಹಗ್ಗ ಜಗ್ಗಾಟ ಮತ್ತು ಮಹಿಳೆಯರಿಗೆ ಥ್ರೋ ಬಾಲ್ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಿ, ಕ್ರೀಡಾ ಕೂಟದ ಯಶಸ್ವಿಗೆ ಸರ್ವರ ಸಹಕಾರ ಕೋರಲಾಯಿತು. ಕ್ರೀಡಾ ಕೂಟ ನಡೆಯುವ ದಿನಾಂಕಗಳಂದು ಕೊಡಗು ಹೆಗ್ಗಡೆ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಭೆಯಲ್ಲಿ ಮನವಿ ಮಾಡಿದರು. ಹಂಪಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೂತನವಾಗಿ ಆಯ್ಕೆಯಾದ ತಂಬಂಡ ವಿಜಯ್ ಪೂಣಚ್ಚ ಅವರನ್ನು ಅಭಿನಂದಿಸಿ ಕ್ರೀಡೋತ್ಸವದಂದು ಅಭಿನಂದಿಸಲು ನಿರ್ಣಯ ಕೈಗೊಳ್ಳಲಾಯಿತು. ಮುಂಬರುವ ದಿನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಸಮಾಜದ ಸದಸ್ಯರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನ ಸಹಾಯ ನೀಡುವ ನಿಟ್ಟಿನಲ್ಲಿ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತರವ ಚಿಂತನೆ ಇದೆ ಎಂದು ಸಮಾಜದ…






