ಮಡಿಕೇರಿ ನ.14 : ನಿಲ್ಲಿಸಿದ್ದ ಆಟೋರಿಕ್ಷಾಗೆ ಬೊಲೆರೋ ವಾಹನವೊಂದು ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಟಿಬೆಟಿಯನ್ ಶಿಬಿರದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕುಶಾಲನಗರ ಸಮೀಪ ಬೈಲುಕೊಪ್ಪದಲ್ಲಿ ನಡೆದಿದೆ. ಟಿಬೆಟಿಯನ್ ಶಿಬಿರದ ವ್ಯಕ್ತಿ ಆಟೋದ ಹಿಂಬದಿಯಲ್ಲಿ ಕುಳಿತ್ತಿದ್ದರು, ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಆಟೋಕ್ಕೆ ಡಿಕ್ಕಿಯಾದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಿಂಬರ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ. ಆಟೋ ಮತ್ತು ಬೊಲೆರೋ ಸಂಪೂರ್ಣ ಜಖಂಗೊಂಡಿದೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೇಖಕ: admin
ಮಡಿಕೇರಿ ನ.14 : ಮೇಕೇರಿಯ ಶ್ರೀಗೌರಿ ಶಂಕರ ದೇವಾಲಯದಲ್ಲಿ ದೀಪಾವಳಿ ಮತ್ತು ಗೋಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿ ನೂರಾರು ದೀಪಗಳು ಪ್ರಜ್ವಲಿಸಿದವು. ಗೋಪೂಜೆಯನ್ನು ಮಾಡುವ ಮೂಲಕ ಗೋವುಗಳಿಗೆ ಸಿಹಿಯನ್ನು ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿದ್ದ ಭಕ್ತರಿಗೆ ಮಹಾಪೂಜೆಯ ನಂತರ ಪ್ರಸಾದ ವಿತರಿಸಲಾಯಿತು.
ಮಡಿಕೇರಿ ನ.14 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನವಾದ ಇಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಮಾಡಲಾಯಿತು. ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರದ್ಧಾಭಕ್ತಿಯಿಂದ ನಡೆದ “ಗೋಪೂಜೆ”ಯಲ್ಲಿ ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್, ಅರ್ಚಕರು, ಸಿಬ್ಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಮಹಾಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.
ಮಡಿಕೇರಿ ನ.14 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನವಾದ ಇಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಮಾಡಲಾಯಿತು. ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರದ್ಧಾಭಕ್ತಿಯಿಂದ ನಡೆದ “ಗೋಪೂಜೆ”ಯಲ್ಲಿ ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್, ಅರ್ಚಕರು, ಸಿಬ್ಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಮಹಾಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.
ಮಡಿಕೇರಿ ನ.14 : ಒಂಟಿ ಸಲಗವೊಂದು ದಾಳಿ ನಡೆಸಿ ಬೆಳೆ ನಾಶ ಮಾಡಿರುವುದಲ್ಲದೆ ಮನೆಗೂ ಹಾನಿ ಮಾಡಿರುವ ಘಟನೆ ಹುಣುಸೂರು ತಾಲ್ಲೂಕಿನ ಬಿಲ್ಲೇನ ಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ರೈಲ್ವೆ ಬ್ಯಾರಿಕೇಡ್ ದಾಟಿ ಹೊರಬಂದ ಆನೆ ಬೆಳೆಯನ್ನು ನಾಶ ಮಾಡಿದೆ. ಪಕ್ಕದಲ್ಲೇ ಇದ್ದ ಮನೆಗೂ ಹಾನಿ ಮಾಡಿದ್ದು, ಮನೆಯಲ್ಲಿದ್ದವರು ಕಿರುಚಿಕೊಂಡಾಗ ಮನೆಯಂಗಳದಲ್ಲಿದ್ದ ಡ್ರಮ್ ನಿಂದ ನೀರು ಕುಡಿದ ಕಾಡಾನೆ ಅಲ್ಲಿಂದ ಕಾಲ್ಕಿತ್ತಿದೆ. ಅದೃಷ್ಟವಶಾತ್ ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ನ.14 : ಮಡಿಕೇರಿ ತಾಲ್ಲೂಕಿನ ನರಿಯಂದಡ ಗ್ರಾ.ಪಂ ವ್ಯಾಪ್ತಿಯ ಕರಡ ಕೀಮಲೆಕಾಡು ಗ್ರಾಮದಲ್ಲಿ ಕಾಡಾನೆಯೊಂದು ಮರಿಗೆ ಜನ್ಮ ನೀಡಿದೆ. ಸ್ಥಳೀಯ ನಿವಾಸಿ ಎಂ.ಮಂಜು ಎಂಬುವವರ ಮನೆಯ ಬಳಿ ರಾತ್ರಿ ವೇಳೆ ಕಾಡಾನೆ ಮರಿ ಹಾಕಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಮರಿಯನ್ನು ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಕುತೂಹಲದಿಂದ ನೋಡುತ್ತಿದ್ದ ದೃಶ್ಯ ಕಂಡು ಬಂತು. ತಾಯಿ ಆನೆ ಪಕ್ಕದ ತೋಟದಲ್ಲಿ ಇರುವುದಾಗಿ ತಿಳಿದು ಬಂದಿದೆ. ನರಿಯಂದಡ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿರುವ ಬಗ್ಗೆ ಗ್ರಾಮಸ್ಥರು ದೂರಿಕೊಂಡಿದ್ದಾರೆ.
ಮಡಿಕೇರಿ ನ.14 : ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ. ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತç ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ. ನಕ್ಸಲ್ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಗಡಿಭಾಗವಾದ ಬಿರುನಾಣಿ, ತೆರಾಳು, ಪರಕಟಗೆರೆ ಮತ್ತು ಕುಟ್ಟ ಪ್ರದೇಶಕ್ಕೆ…
ಮಂಗಳೂರು ನ.13 : ಅಜ್ಜ ಇಮಾಮ್ ಸಾಹೇಬ್, ತಂದೆ ಬಾಬನ್ ಸಾಹೇಬ್ ಅವರಿಂದ ಬಳುವಳಿಯಾಗಿ ಬಂದ ನಾಗಸ್ವರ ವಾದನವನ್ನು ಕಳೆದ 40 ವರ್ಷಗಳಿಂದ ಮುಖ್ಯ ವೃತ್ತಿಯನ್ನಾಗಿಸಿಕೊಂಡಿದ್ದ ಕಾಪುವಿನ ಶೇಖ್ ಜಲೀಲ್ ಸಾಹೇಬ್ (56) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜಾತ್ರೆಯ ವೇಳೆ ನಾಗಸ್ವರ ಸೇವೆ ನೀಡುತ್ತಿದ್ದ ಉಡುಪಿ ಜಿಲ್ಲೆಯ ಕಾಪುವಿನ ಶೇಖ್ ಜಲೀಲ್ ಸಾಹೇಬ್ ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಹೋಟೆಲ್ ನಲ್ಲಿ ಚಹಾ ಕುಡಿಯಲು ಕುಳಿತ್ತಿದ್ದ ವೇಳೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಕೋಲ ಮತ್ತು ಆಶ್ಲೇಷ ಬಲಿ ಸಂದರ್ಭ ನಾಗಸ್ವರ ಸೇವೆ ಸಲ್ಲಿಸುತ್ತಿದ್ದ ಶೇಖ್ ಜಲೀಲ್ ಸಾಹೇಬ್ ಅವರು ಪತ್ನಿ, ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಲಂಡನ್ ನ.13 : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ತಂಡಕ್ಕೆ ಮಾಜಿ ಪ್ರಧಾನಿಯನ್ನೇ ಸೇರಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಿರುವ ಅವರು ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ತಮ್ಮ ಸಂಪುಟದಿಂದ ವಜಾಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಮಹತ್ವದ ಬದಲಾವಣೆ ಮಾಡಿದ್ದು, ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ನೂತನ ವಿದೇಶಾಂಗ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.
ನವದೆಹಲಿ ನ.13 : ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ “ಟೈಗರ್-3” ಪ್ರದರ್ಶನದ ವೇಳೆ ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಸಂದರ್ಭ ಆತಂಕ ಸೃಷ್ಟಿಯಾದ ಘಟನೆ ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ನಡೆದಿದೆ. ಮೋಹನ್ ಚಿತ್ರಮಂದಿರದೊಳಗೆ ಸಂಭ್ರಮಾಚರಣೆ ನಡೆಸುತ್ತಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು ಪಟಾಕಿ ಸಿಡಿಸಿದ್ದಾರೆ. ಇದರಿಂದ ಸಿನಿಮಾ ನೋಡುತ್ತಿದ್ದವರ ಮೇಲೆ ಪಟಾಕಿ ಕಿಡಿಗಳು ಬಿದ್ದಿದ್ದು, ಚಿತ್ರಮಂದಿರದಿಂದ ಓಡಲು ಶುರು ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಸಲ್ಮಾನ್ ಖಾನ್ ಪಟಾಕಿ ಸಿಡಿಸದಂತೆ ಮತ್ತು ಯಾರಿಗೂ ತೊಂದರೆ ನೀಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.






