ಮಡಿಕೇರಿ ನ.13 : ವೀರಾಜಪೇಟೆಯ ಬಿಟ್ಟಂಗಾಲ ಸಮೀಪದ ಅಂಬಟ್ಟಿ ಗ್ರಾಮದಲ್ಲಿ ದೀಪಾವಳಿ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಯೋಗೇಶ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸುನಿಲ್ ಮಾದಾಫುರ, ವೀರಾಜಪೇಟೆ ತಾಲ್ಲೂಕು ಸಹ ಸಂಯೋಜಕ್ ಗಣೇಶ್ ಸೇರಿದಂತೆ ಸ್ಥಳೀಯ ಕಾರ್ಯಕರ್ತರು, ಗ್ರಾಮಸ್ಥರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ನ.13 : ನೆಲ್ಯಹುದಿಕೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಅರೆಕಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ (ಐದ್ರೋಡಮ್ಮ) ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನೆಲ್ಯಹುದಿಕೇರಿ ಭಗವತಿ ದೇಗುಲದ ಅರ್ಚಕರಾದ ರಘು ಭಟ್ ಹಾಗೂ ರಾಕೇಶ್ ಭಟ್ ಅವರುಗಳ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆದವು. ಅಭಿಷೇಕ, ಅಲಂಕಾರ ಮತ್ತು ಮಹಾಪೂಜೆ ನೆರವೇರಿತು. ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ದೇವಾಲಯದ ಅಡಳಿತ ಮಂಡಳಿಯ ಅಧ್ಯಕ್ಷ ರವಿಕುಮಾರ್ ಕೆ.ಎಸ್ ಮಾತನಾಡಿ ರಾಜ್ಯದ ವಿವಿಧ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರು ದೇವಿಯ ದರ್ಶನ ಪಡೆದು ತೆರಳುತ್ತಿದ್ದಾರೆ ಎಂದರು. ಅಡಳಿತ ಮಂಡಳಿಯ ಕಾರ್ಯದರ್ಶಿ ಜಯಣ್ಣ, ಉಪಾಧ್ಯಕ್ಷ ಚಂದ್ರ, ಖಜಾಂಚಿ ಅಳಗು, ಸದಸ್ಯ ಆನಂದ ರಘು ಮತ್ತಿತರರು ಪೂಝೆಯಲ್ಲಿ ಪಾಲ್ಗೊಂಡಿದ್ದರು. (ವರದಿ : ಕಿಶೋರ್ ಕುಮಾರ್ ಶೆಟ್ಟಿ)
ಸುಂಟಿಕೊಪ್ಪ, ನ.13: ಭಾರತದ ಸಂವಿಧಾನದ ಅಡಿಯಲ್ಲಿ ನಾವೆಲ್ಲಾರೂ ಒಂದು ಎಂಬ ಸಮಾನತೆ ಸೂತ್ರದಡಿಯಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡು ಸಾಮರಸ್ಯ ಬದುಕನ್ನು ಕೊಡಗಿನಲ್ಲಿ ಹಿಂದೂ ಮಲಯಾಳಿ ಸಮಾಜ ಆಗ್ರ ಸ್ಥಾನದಲ್ಲಿದೆ ಎಂದು ಕೊಡಗು ಜಿ.ಪಂ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯ ಹೇಳಿದರು. ಕಾನ್‍ಬೈಲ್ ಸರ್ಕಾರಿ ಮಾದರಿ ಶಾಲೆಯಲ್ಲಿ ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 14 ಕಡೆಗಳಲ್ಲಿ ಹಿಂದೂ ಮಲಯಾಳಿ ಸಮಾಜದ ಶಾಖೆಗಳು ಇದ್ದು, ಕೂಲಿ ಕಾರ್ಮಿಕರಿಂದ ಹಿಡಿದು ಅತ್ಯಲ್ಪ ಸಂಖ್ಯೆಯಲ್ಲಿ ಶ್ರೀಮಂತರು ನಮ್ಮ ಸಮಾಜದಲ್ಲಿದ್ದು, ಅಚಾರ ವಿಚಾರಗಳು ಹಬ್ಬ ಹರಿದಿನಗಳನ್ನು ನಾವೆಲ್ಲಾರೂ ಒಂದಾಗಿ ಆಚರಿಸುತ್ತಿರುವುದು ವೈಶಿಷ್ಟ್ಯ ಪೂರ್ಣ ಅಂಶವೆಂದು ಬಣ್ಣಿಸಿದರು. ಸಾಮಾನ್ಯವಾಗಿ ಹಬ್ಬ ಹರಿದಿನಗಳಿಗೆ ಶುಭಸಮಾರಂಭಗಳಿಗೆ ನಾವೆಲ್ಲಾರೂ ನಮ್ಮ ಕೈಲಾದ ಸಹಾಯವನ್ನು ಮಾಡುತ್ತೇವೆ ಆದರೆ ಯಾರಿಗೂ ಸಾವು ಯಾವಾಗ ಸಂಭವಿಸುತ್ತದೆ ಎಂಬುದು ಗೊತ್ತಿರುವುದಿಲ್ಲ ಇಲ್ಲಿನ ಸಮಾಜದ ಸದಸ್ಯರು…
ಮಡಿಕೇರಿ ನ.13 : ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಗರ, ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸಲು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಹುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಅವರು, ಹೊರಗುತ್ತಿಗೆ ನೌಕರರನ್ನು ನೇರ ವೇತನ ಪಾವತಿಗೆ ಒಳಪಡಿಸದ್ದಿದ್ದಲ್ಲಿ ನ.15 ರಂದು ರಾಜ್ಯವ್ಯಾಪಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ವಾಹನ ಚಾಲಕರು, ನೀರು ಸರಬರಾಜುದಾರರು, ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ 15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆ ಆಧಾರದಲ್ಲಿ ಉಳಿಸಿಕೊಂಡಿದೆ. ನಗರಗಳ ಸ್ವಚ್ಛತೆ ಮತ್ತು ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ…
ವಿರಾಜಪೇಟೆ ನ.13 : ದೀಪಾವಳಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿರಾಜಪೇಟೆ ಪ್ರಖಂಡದಿಂದ ಕಾವಾಡಿ ಶ್ರೀ ಗೋ ಶಾಲೆಯಲ್ಲಿ ಗೋ ಪೂಜೆಯನ್ನು ನಡೆಯಿತು. ಮುಕ್ಕೋಟಿ ದೇವರುಗಳು ಗೋವಿನಲ್ಲಿ ನೆಲೆಯಾಗಿದೆ, ಅಮೃತ ರೂಪವಾಗಿ ಕ್ಷೀರವನ್ನೇ ಕೊಡುವ ಮಾತೆ ಗೋವು. ಗೋ ಪರಿಪಾಲಕನಾದ ಕೃಷ್ಣನಿಗೆ ಪ್ರಿಯವಾದ ಕಾಮಧೇನು ಗೋವು ಆಗಿದೆ ಎಂದು ಗೋ ಪೂಜೆ ಮಾಹಿತಿ ನೀಡಿದರು. ಈ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಪರ್ಕ ಪ್ರಮುಖ್ ಕುಟ್ಟಂಡ ಪ್ರೀನ್ಸ್ ಗಣಪತಿ, ಸೇವಾ ಭಾರತೀಯ ಜಿಲ್ಲಾಧ್ಯಕ್ಷ ಟಿ.ಸಿ.ಚಂದ್ರ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ವಿವೇಕ್ ರೈ, ತಾಲ್ಲೂಕು ಸಂಚಾಲಕ ಐನಂಡ ಕುಶಾಲಪ್ಪ, ಗೋ ಪರಿವಾರದ ಸೋಮಶೇಖರ್, ಜಾಗರಣ ವೇದಿಕೆ ತಾಲೂಕು ಸಂಚಾಲಕ ಗಣೇಶ್, ಗೋರಕ್ಷಾ ಪ್ರಮುಖ್ ಶರೀನ್, ರಾಜ, ವಿಶ್ವ ಹಾಗೂ ಸಂಘಟನೆ ಪ್ರಮುಖರು ಹಾಜರಿದ್ದರು.
ವಿರಾಜಪೇಟೆ ನ.13 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ದೇವಾಲಯದ ಅರ್ಚಕರಾದ ವಾಮನಮೂರ್ತಿ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಮೊದಲಿಗೆ ಅರ್ಚಕರು ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ವನದುರ್ಗೆ, ಶ್ರೀ ನಾಗ ಗುಡಿಯಲ್ಲಿ ವಿಶೇಷ ಅಲಂಕಾರ ಮತ್ತು ಪೂಜೆಯನ್ನು ನೆರವೇರಿಸಿ ಅರ್ಚನೆ ಮಾಡಿದರು. ದೀಪಾವಳಿ ಪ್ರಯುಕ್ತ ತುಳಸಿ ಪೂಜೆಯನ್ನು ದೇವಾಲಯದ ಆವರಣದಲ್ಲಿ ನೆರವೇರಿಸಿ, ಕುಂಕುಮಾರ್ಚನೆ, ಪುಷ್ಪರ್ಚನೆ ಹಾಗೂ ಅಷ್ಟೋತ್ತರವನ್ನು ಪಠಿಸಲಾಯಿತು. ಮಹಾ ಮಂಗಳಾರತಿ ನಂತರ ಪ್ರಸಾದ ವಿತರಣೆನೆರವೇರಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಕುಶಾಲನಗರ ನ.13. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಆಶ್ರಯದಲ್ಲಿ ‘ಗೋ ಗ್ರೀನ್ ಅಭಿಯಾನ’ದಡಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತ ಪರಿಸರ ಜಾಗೃತಿ ಅಭಿಯಾನ ನಡೆಯಿತು. ಸ್ವಚ್ಛ ದೀಪಾವಳಿ – ಶುಭ ದೀಪಾವಳಿ ಆಚರಣೆ ಪರಿಕಲ್ಪನೆಯೊಂದಿಗೆ “ಹಸಿರು ದೀಪಾವಳಿ ಆಚರಿಸುವ ಅಗತ್ಯತೆ’ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಪಟಾಕಿ ಮತ್ತು ಸಿಡಿಮದ್ದು ಸಿಡಿಸುವುದರಿಂದ ಪರಿಸರ…
ಮಡಿಕೇರಿ ನ.13 : ಕನ್ನಡ ನಾಡಿನಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡಬೇಕು ಎಂಬುವುದೇ ಕರ್ನಾಟಕ ರಾಜ್ಯದ ಕನ್ನಡಿಗರ ಒತ್ತಾಸೆಯಾಗಿದೆಯೇ ಹೊರತು ಇತರ ಭಾಷಿಕರನ್ನು ವಿರೋಧಿಸುವ ಮನೋಸ್ಥಿತಿ ಯಾರಿಗೂ ಇಲ್ಲ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಸೋಮವಾರಪೇಟೆ ಸಂತ ಜೋಸೆಫರ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಡಿಭಾಗದಲ್ಲಿ ಅನ್ಯ ಭಾಷಿಕರ ವಲಸೆ ಹೆಚ್ಚಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಮಲೆಯಾಳಂ, ತಮಿಳು ಮಾತ್ರವಲ್ಲ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ನೇಪಾಳ ಮತ್ತಿತರ ರಾಜ್ಯಗಳ ಜನತೆ ಬಂದು ನೆಲೆಸುತ್ತಿದ್ದಾರೆ. ಅವರುಗಳ ಭಾಷೆಯನ್ನು ನಮ್ಮ ಮೇಲೆ ಹೇರಬಾರದು, ಕನ್ನಡ ಭಾಷೆಯನ್ನು ಕಲಿಯುವ ಅಭಿಮಾನವನ್ನು ಮೂಡಿಸಿಕೊಳ್ಳಬೇಕು ಎಂದರು. ಕರ್ನಾಟಕದ ಹೆಸರೇ ಒಂದು ಚೈತನ್ಯದ ಚಿಲುಮೆಯಾಗಿದೆ, ಕರ್ನಾಟಕಕ್ಕೆ ತನ್ನದೇ ಆದ ಹಿರಿಮೆ, ಸಮನ್ವಯತೆ, ಸಹಿಷ್ಣುತೆ, ಸಾಮರಸ್ಯ ಇದೆ. ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದು…
ಮಡಿಕೇರಿ ನ.13 : ಪ್ರಸಕ್ತ(2023-24) ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ವೆಬ್‍ಸೈಟ್ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು. ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಣ್ಣ ಆದಾಯ ಗಳಿಸಲು ಆರ್ಥಿಕ ಚಟುವಟಿಕೆಗಳಿಗಾಗಿ ನಿಗಮಗಳಿಂದ ನೇರ ಸಾಲ (ಗರಿಷ್ಟ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು…
ಮಡಿಕೇರಿ ನ.13 : ಮಡಿಕೇರಿ-ವಿರಾಜಪೇಟೆ 66 ಕೆವಿ ವಿದ್ಯುತ್ ಮಾರ್ಗದ ಕಾಮಗಾರಿ ಸಂಬಂಧ ಹಾಲಿ ಚಾಲ್ತಿಯಲ್ಲಿರುವ 66/11 ಕೆವಿ ಮಡಿಕೇರಿ ವಿದ್ಯುತ್ ವಿತರಣಾ ಕೇಂದ್ರದ ಒಳಬರುವ 66 ಕೆವಿ ಮಡಿಕೇರಿ-ಕುಶಾಲನಗರ ವಿದ್ಯುತ್ ಮಾರ್ಗದಲ್ಲಿ ಪರಿಶೀಲನೆ ಮತ್ತು ನಿರ್ವಹಣೆ ಕಾರ್ಯವನ್ನು ಮಾಡಬೇಕಿರುವುದರಿಂದ ನ.15 ರಂದು ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.






