ಮಡಿಕೇರಿ ಡಿ.19 : ಬೆಂಗಳೂರಿನ ಯಶವಂತಪುರದ ಜಿಸಿಆರ್ ಸಭಾಂಗಣದಲ್ಲಿ ನಡೆದ ಅಂತರಾಜ್ಯ ಮಟ್ಟದ ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ಮಟ್ಟದ ಬಾಲಕ ಹಾಗೂ ಬಾಲಕಿಯರ ಮುಕ್ತ ಟೆಕ್ವಾಂಡೊ ಚಾಂಪಿಯನ್ ಶಿಪ್ ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಆರ್.ಲೋಹಿತ್ 2 ಚಿನ್ನ, ಮುಡ್ಯನ ಗೌರವ್ 2 ಚಿನ್ನ, ಮನೀಶ್ ನಾಥ್ 2 ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆರ್.ಮಾನ್ವಿ 1 ಚಿನ್ನ, 1 ಬೆಳ್ಳಿ, ಬಾರನ ಬಿಂಬಿತ್ ಗೌಡ 1 ಚಿನ್ನ, 1 ಬೆಳ್ಳಿ, ನಿಲಾ ಜಾಯಿಸನ್ 1 ಚಿನ್ನ, 1 ಬೆಳ್ಳಿ, ಕಿರಣ್ ಕಾಂತ್ 1 ಚಿನ್ನ, 1 ಬೆಳ್ಳಿ, ಪಿ.ಬಿ.ಶಿವ 1 ಚಿನ್ನ, 1 ಬೆಳ್ಳಿ, ಬಾರನ ಪ್ರೇಕ್ಷಿತ್ ಗೌಡ 1 ಚಿನ್ನ, 1 ಕಂಚು, ಮಾನ್ಯ ರಾಜ್ 1 ಚಿನ್ನ, 1 ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಜಿ.ಎಂ.ಮಿನ್ ಶಾ 2 ಬೆಳ್ಳಿ, ವಿ.ಕಿಶಾನ್ 2…
ಲೇಖಕ: admin
ಮಡಿಕೇರಿ ಡಿ.19 : ಸರಕಾರಿ ದಾಖಲೆಗಳಲ್ಲಿ “ಕೊಡಗರು” ಬದಲಿಗೆ “ಕೊಡವ” ಎಂದು ನಮೂದಿಸಲು ಕಾನೂನು ಹೋರಾಟ ನಡೆಸಿ ಯಶಸ್ವಿಯಾದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಯತ್ನಕ್ಕೆ ಅರಪಟ್ಟು ಮುಕ್ಕಾಟಿರ ಕುಟುಂಬಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅರಪಟ್ಟು ಮುಕ್ಕಾಟಿರ ಕುಟುಂಬದ ಅಧ್ಯಕ್ಷ ಮುಕ್ಕಾಟಿರ ಕ್ಯಾಟಿ ಉತ್ತಪ್ಪ ಅವರು, ಕಳೆದ ಹಲವು ವರ್ಷಗಳ ಗೊಂದಲ ನಿವಾರಣೆಗೆ ನಿರಂತರ ಹೋರಾಟದ ಮೂಲಕ ಶ್ರಮಿಸಿದ ನಿಮ್ಮ ಕಾರ್ಯ ಶ್ಲಾಘನೀಯ. ಇದಕ್ಕಾಗಿ ಇಡೀ ಅರಪಟ್ಟು ಮುಕ್ಕಾಟಿರ ಕುಟುಂಬಸ್ಥರು ಆಭಾರಿಯಾಗಿದ್ದೇವೆ. ಸರಕಾರಿ ದಾಖಲೆಗಳಲ್ಲಿ “ಕೊಡಗರು” ಬದಲಿಗೆ “ಕೊಡವ” ಎಂದು ನಮೂದಿಸುವ ಕ್ರಮ ಸ್ವಾಗತಾರ್ಹವಾಗಿದೆ. ಇನ್ನು ಮುಂದೆಯೂ ಕೊಡವರ ಪರವಾದ ನ್ಯಾಯಸಮ್ಮತ ಬೇಡಿಕೆಗಳ ಹೋರಾಟಕ್ಕೆ ಜಯ ಸಿಗಲಿ ಎಂದು ತಿಳಿಸಿದ್ದಾರೆ.
ಕಡಂಗ ಡಿ.19 : ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮವನ್ನು ಬೇಂಗೂರು ಗ್ರಾ.ಪಂ ಸದಸ್ಯ ಕೆ.ಎಂ.ಬಶೀರ್ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜೀವನದಲ್ಲಿ ಕ್ರೀಡೆಯಿಂದ ದೊರೆಯುವ ಪ್ರಯೋಜನದ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು , ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಪರಮೇಶ್ ಸ್ವಾಗತಿಸಿ, ರಮೇಶ್ ವಂದಿಸಿದರು. ದೈಹಿಕ ಶಿಕ್ಷಕ ಅಯ್ಯಪ್ಪ ವಿದ್ಯಾರ್ಥಿಗಳ ತಂಡವನ್ನು ಮುನ್ನಡೆಸಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಡಿ.19 : ಕರ್ನಾಟಕ ವಿಧಾನ ಪರಿಷತ್ ನ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 2012 ರಿಂದ ಇಲ್ಲಿಯವರೆಗೆ ಗೆಲುವು ಸಾಧಿಸುತ್ತಾ ಬಂದಿರುವ ವಿಧಾನ ಪರಿಷತ್ ಸದಸ್ಯರುಗಳಿಂದ ಶಿಕ್ಷಕರ ಹಾಗೂ ಸರ್ಕಾರಿ ನೌಕರರ ಸಮಸ್ಯೆಗಳು ಉಲ್ಬಣಿಸುತ್ತಾ ಬಂದಿವೆ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಕರ ಸಮಸ್ಯೆಗಳ ಬಗ್ಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಮಾತ್ರ ಅರಿವಿರುತ್ತದೆ. ನಾನು ಒಬ್ಬ ಶಿಕ್ಷಕನಾಗಿ ಸೇವೆ ಸಲ್ಲಿಸಿರುವುದರಿಂದ ಇಲ್ಲಿನ ಆಗುಹೋಗುಗಳ ಬಗ್ಗೆ ತಿಳಿದಿದೆ. ಅಲ್ಲದೆ ಆಡಳಿತ ಪಕ್ಷದ ಅಭ್ಯರ್ಥಿಯಾಗಿರುವುದರಿಂದ ನನ್ನ ಗೆಲುವಿನಿಂದ ಶಿಕ್ಷಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಲಿದೆ ಎಂದರು. 2006 ಮತ್ತು 2012 ರಲ್ಲಿ ಗೆಲುವು ಸಾಧಿಸಿದ ಬಿಜೆಪಿ ಎಂಎಲ್‍ಸಿ ಹಾಗೂ 2018 ರಲ್ಲಿ ವಿಧಾನ ಪರಿಷತ್ ಪ್ರವೇಶಿಸಿದ ಜೆಡಿಎಸ್ ಎಂಎಲ್‍ಸಿ ಯಿಂದ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯವಾಗಿಲ್ಲ. ಇವರುಗಳಿಂದ ಶಿಕ್ಷಕರ ಕ್ಷೇತ್ರಕ್ಕೆ ದೊಡ್ಡ ನಷ್ಟವೇ ಉಂಟಾಗಿದೆ, ಸಮಸ್ಯೆಗಳು ಕ್ಯಾನ್ಸರ್ ಆಗಿ ಮಾರ್ಪಟ್ಟಿವೆ.…
ಚೆಯ್ಯಂಡಾಣೆ ಡಿ.19 : ಒಬ್ಬ ವ್ಯಕ್ತಿ ಹುಟ್ಟವಾಗ ಯಾವ ಧರ್ಮದಲ್ಲಿ ಹುಟ್ಟುತ್ತಾನೆ ಎಂಬುದು ಅವರಿಗೆ ಅರಿವಿರುವುದಿಲ್ಲ. ಹುಟ್ಟಿದ ಮೇಲೆ ತನ್ನ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸುವ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಪಣ ತೊಡಬೇಕೆಂದು ನರಿಯಂದಡ ಗ್ರಾ.ಪಂ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಹೇಳಿದರು. ಕಡಂಗದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ ಪೇಡರೇಷನ್ (ಎಸ್.ಎಸ್.ಎಫ್ ) ವಿರಾಜಪೇಟೆ ವಿಭಾಗ ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಕೋಡಿರ ಪ್ರಸನ್ನ ತಮ್ಮಯ್ಯ ಸಾಹಿತ್ಯೋತ್ಸವದ ಮುಖ್ಯ ದ್ವಾರವಾದ ಮಹೂಂ ಎಂ.ಎ. ಅಬೂಬಕ್ಕರ್ ಸ್ಮಾರಕ ದ್ವಾರ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಎಲ್ಲಾ ವರ್ಗದ ಜನರು ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳಲು, ಉತ್ತಮ ಯುವ ಪೀಳಿಗೆಯನ್ನು ಸಮಾಜಕ್ಕೆ ತರಲು ಇಂತಹ ಕಾರ್ಯಕ್ರಮದಿಂದ ಸಾಧ್ಯ, ಎಸ್ ಎಸ್ ಎಫ್ ನಾ ಸಾಹಿತ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು. ನಿವೃತ ಸೈನಿಕ ಹಾಗೂ ನಾಪೋಕ್ಲು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಮ್ಮರ್…
ಮಡಿಕೇರಿ ಡಿ.19 : ಕೆಲವು ವ್ಯಕ್ತಿಗಳು ಸಂಸತ್ ಭವನದೊಳಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ 92 ಸಂಸದರನ್ನು ಅಮಾನತು ಮಾಡಿರುವುದು ದೇಶದ ಇತಿಹಾಸದಲ್ಲೇ ದೊಡ್ಡ ದುರಂತ ಮತ್ತು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಗೇ ಕಪ್ಪು ಚುಕ್ಕೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದೆ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರಶ್ನೆ ಕೇಳಿದವರಿಗೆ ಅಮಾನತಿನ ಶಿಕ್ಷೆ ನೀಡಿರುವುದು ಖಂಡನೀಯ. ವಿಶ್ವದ ಯಾವುದೇ ಭಾಗದಲ್ಲಿ ಈ ರೀತಿಯ ಕ್ರಮವಾಗಿಲ್ಲ ಎಂದರು. ಪಾಸ್ ನೀಡಿದವರು ಕಾಂಗ್ರೆಸ್ ಸಂಸದರಾಗಿದ್ದರೆ ಮತ್ತು ಸಂಸತ್ ಭವನದೊಳಗೆ ಮುಸ್ಲಿಂ ವ್ಯಕ್ತಿ ಪ್ರವೇಶಿಸಿದ್ದರೆ ಬಿಜೆಪಿ ಮಂದಿಯ ಪ್ರತಿಕ್ರಿಯೆಗಳು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಗೆ ನಿಜವಾದ ನೈತಿಕತೆ ಇದ್ದರೆ ಪ್ರತಾಪ್ ಸಿಂಹರನ್ನು ಅಮಾನತು ಮಾಡಲಿ ಎಂದು ಒತ್ತಾಯಿಸಿದರು. ಭದ್ರತಾ ಲೋಪದ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಧಾನಮಂತ್ರಿ ಅಥವಾ ಗೃಹ ಸಚಿವರು ಇಲ್ಲಿಯವರೆಗೆ ಉತ್ತರ ನೀಡಿಲ್ಲ. ಸಂಸತ್ ಇರುವುದೇ ಪ್ರಶ್ನಿಸಲು ಮತ್ತು ಉತ್ತರ…
ಬೆಂಗಳೂರು, ನವದೆಹಲಿ, ಡಿ.19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್ ಸಬ್ಸಿಡಿ…
ವಿರಾಜಪೇಟೆ ಡಿ.19 : ಹಾಲುಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಯಿತು. ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ.ಹರೀಶ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ, ಯಾವುದೇ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ದೃಢಪಡಿಸಿದರು. ಈ ಸಂದರ್ಭದಲ್ಲಿ ಶಲೆಯ ಮುಖ್ಯೋಪದ್ಯಾಯರಾದ ಭವಾನಿ, ಸಿ ಆರ್.ಪಿ. ಶುಶಾ ಸೇರಿದಂತೆ ಶಾಲಾ ಶಿಕ್ಷಕರು ಹಾಜರಿದ್ದರು.
ನಾಪೋಕ್ಲು ಡಿ.19 : ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಷಷ್ಠಿ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯದಲ್ಲಿ ಪಂಚಾಮೃತ ಅಭಿಷೇಕ, ಪುಷ್ಪಲಂಕಾರ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಮಧ್ಯಾಹ್ನ ಶ್ರೀ ವೆಂಕಟೇಶ್ವರನಿಗೆ ಗಂಟೆ ಜಾಗಟ ವೇದ ಘೋಷಗಳೊಂದಿಗೆ ವಿಶೇಷ ಮಹಾ ಪೂಜೆ ನೆರವೇರಿಸಿ ಮಹಾ ಮಂಗಳಾರತಿಯ ತಿರ್ಥ ಪ್ರಸಾದ ವಿತರಣೆ ನಡೆಯಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಸ್.ಮಂಜಯ್ಯ, ಗೌರವ ಕಾರ್ಯಾಧ್ಯಕ್ಷ ಅಧ್ಯಕ್ಷ ಟಿ.ಎನ್.ರಮೇಶ್, ಕಾರ್ಯದರ್ಶಿ ಟಿ.ಎ.ಸುಜಿಕುಮಾರ್., ಖಜಾಂಚಿ ಯನ್. ಪಿ.ಗೋಪಾಲ ಹಾಗೂ ಹಿರಿಯರಾದ ಟಿ.ವಿ.ಶ್ರೀನಿವಾಸ್, ಟಿ.ಎ.ಆನಂದಸ್ವಾಮಿ, ಅಡಳಿತ ಮಂಡಳಿ ನಿರ್ದೇಶಕರಾದ ಟಿ.ಕೆ.ಸೂರ್ಯಕುಮಾರ, ಟಿ.ವಿ.ಭವಾನಿ ಹಾಗೂ ಇತರರು ಹಾಜರಿದ್ದರು. ದೇವಾಲಯದ ಮುಖ್ಯ ಆರ್ಚಕ ಸುದೀರ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.19 : ಹಳೆ ತಾಲೂಕು ಶಿವಚಾಳಿಯಂಡ ಕುಟುಂಬದವರ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಿಸಲಾಯಿತು. ಈ ಸಂದರ್ಭ ಶಿವಚಾಳಿಯಂಡ ಮಾದಪ್ಪ, ಕಿಶೋರ್ ಬೋಪಣ್ಣ, ಸಹದೇವ, ಸುಭಾಷ್, ಅಂಬಿ, ಲವ ಮತ್ತಿತರರು ಉಪಸ್ತಿತರಿದ್ದರು. ವರದಿ : ದುಗ್ಗಳ ಸದಾನಂದ






