ಲೇಖಕ: admin

ಮಡಿಕೇರಿ ನ.11 :  ಕುಶಾಲನಗರ- ಚಂದ್ರಯಾನ 3 ಯಶಸ್ಸಿನ ಸಂಭ್ರಮಾಚರಣೆಯ ಪ್ರಯುಕ್ತ  ಕೊಡಗಿನ ಸೈನಿಕ ಶಾಲೆಯಲ್ಲಿ  ಚಂದ್ರಯಾನ-3 ರ ಯಶಸ್ಸಿನ ಸಂಭ್ರಮಾಚರಣೆ  ನಡೆಯಿತು. ವಿದ್ಯಾರ್ಥಿಗಳಿಗೆ  ಸಂಭ್ರಮಾಚರಣೆ  ಪ್ರಯುಕ್ತ ‘ತಿರಂಗ’ ಎಂಬ ವಿಷಯವನ್ನಾಧರಿಸಿ ಕವನ ಬರೆಯುವ ಸ್ಪರ್ಧೆ  ನಡೆಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭ ಶಾಲೆಯ ಪ್ರಾಂಶುಪಾಲರು ಮಾತನಾಡಿ,  ಶಾಲೆಯ ಯುವ ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ದೇಶಪ್ರೇಮವನ್ನು ತುಂಬುವ ಮೂಲಕ ತಮ್ಮ ದೇಶಭಕ್ತಿಯ ಮನೋಭಾವವನ್ನು  ಉತ್ತೇಜಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

Read More

ನಾಪೋಕ್ಲು ನ.10 : ನಾಪೋಕ್ಲು- ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲೂಕು ಬಳಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದ್ದು,  ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣಕ್ಕೆ ಸಮೀಪದ ಹಳೆ ತಾಲೂಕು ಬಳಿಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಪಕ್ಕದ ರಸ್ತೆಯಲ್ಲಿ ಹೊಂಡವಾಗಿದ್ದು ಹಲವು ದಿನಗಳಿಂದ ಮುಚ್ಚದೆ ಇದ್ದುದರಿಂದ ಸಣ್ಣ ಗುಂಡಿಗಳು ದೊಡ್ಡ ಗುಂಡಿಗಳಾಗಿ ರಸ್ತೆ ಸಂಚಾರಕ್ಕೆ ತೀವ್ರ ತೊಂದಯಾಗುತ್ತಿದೆ.  ವಾಹನಗಳು ರಸ್ತೆಯ ಅವ್ಯವಸ್ಥೆಯಿಂದ ಒಂದು ಪಾಶ್ವದಲ್ಲಿ ಚಲಿಸಲಾರದೆ ಮತ್ತೊಂದು ಕಡೆಯಲ್ಲಿ ಚಲಿಸುತ್ತಿದ್ದು  ನೀರಿನ ಪೈಪಿಗೆ ತೊಂದರೆ ಉಂಟಾಗುತ್ತಿರುವುದರಿಂದ  ಸಾರ್ವಜನಿಕರು ಪರದಾಡುವಂತಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ದೇವಾಲಯದ ಸಮಿತಿ ಸದಸ್ಯರು ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಪ್ರಯತ್ನ ಮಾಡಿದ್ದರು. ಇದೀಗ ಮತ್ತೆ ರಸ್ತೆ ಗುಂಡಿಮಯವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಇನ್ನಾದರೂ ಸಂಬಂಧಪಟ್ಟವರು ಗಮನಹರಿಸಿ ರಸ್ತೆಯ ಗುಂಡಿಯನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ  

Read More

ಮಡಿಕೇರಿ ನ.11 :  ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಮಡಿಕೇರಿ ತಾಲ್ಲೂಕಿನ ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.ರಮೇಶ್‍ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಮಡಿಕೇರಿ ತಾಲ್ಲೂಕಿನ ಕೊಂಗಂಡ ಎ. ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಎಚ್.ಎಸ್.ಸುಬ್ಬಪ್ಪರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಮಡಿಕೇರಿಯ ಮಣವಟ್ಟೀರ ಕಾವೇರಿಯಮ್ಮ ಪೂವಣ್ಣ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.  ಬಿದ್ದಾಟಂಡ ಎ. ರಮೇಶ್ ಚಂಗಪ್ಪ – ಕೊಡಗು ಸಹಕಾರ ರತ್ನ ಜಿಲ್ಲೆಗೊಬ್ಬರಂತೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. 2023 ರ ಕೊಡಗು ಸಹಕಾರ ರತ್ನಕ್ಕೆ ಭಾಜನರಾದವರು ಶ್ರೀ ಬಿದ್ದಾಟಂಡ ಎ. ರಮೇಶ್ ಚಂಗಪ್ಪ ಮಡಿಕೇರಿ ತಾಲೂಕು ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.…

Read More

ಸುಂಟಿಕೊಪ್ಪ ನ.11 : ಹಿಂದೂ ಜಾಗರಣ ವೇದಿಕೆಯ ವತಿಯಿಂದ ಮಾದಾಪುರ ಗಣಪತಿ ದೇವಾಲಯದಲ್ಲಿ ಕುಟ್ಟಪ್ಪ ಸ್ಮರಣಾರ್ಥ ಶಾಂತಿ ಪೂಜೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಕುಟ್ಟಪ್ಪ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಪ್ರಮುಖರಾದ ಭೋಜೇಗೌಡ, ದಿ.ಕುಟ್ಟಪ್ಪ ಅವರ ಪುತ್ರ ಡಿ.ಕೆ.ಡಾಲಿ, ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಾಯೋಜಕ ಅಜಿತ್ ಕುಕ್ಕೇರಾ, ಪ್ರಮುಖರಾದ ಚೇತನ್ ಶಾಂತಿನಿಕೇತನ, ವಿನಯ್, ತಾಲ್ಲೂಕು ಸಾಯೋಜಕ ವಿನಯ್ ಕುಮಾರ್, ಹೇಮಂತ್, ಗಪ್ಪು ಸೋಮಯ್ಯ, ಬಿಪಿನ್, ಸೂರಜ್, ಕೊಪ್ಪತಂಡ ಗಣೇಶ್, ಅಶೋಕ್ ಹಾಗೂ ಗ್ರಾಮಸ್ಥರು ಹಾಜರಿದ್ದರು. ಸುನಿಲ್ ಮಾದಾಪುರ ಸ್ವಾಗತಿಸಿ, ನಿರ್ವಹಿಸಿ ವಂದಿಸಿದರು.

Read More

ಮಡಿಕೇರಿ ನ.11 : ಧಾರ್ಮಿಕ ಮತ್ತು ಸಾಂಸ್ಕೃತಿಕ  ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಮಡಿಕೇರಿ ತಾಲ್ಲೂಕು, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ನ.14 ರಂದು ಸಂಜೆ 05.30 ಗಂಟೆಗೆ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ “ಗೋಪೂಜೆ” ಕಾರ್ಯಕ್ರಮಕ್ಕೆ ಆಗಮಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

Read More

ಮಡಿಕೇರಿ ನ.11 : ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಪ್ರಸ್ತಾಪಿತ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ 14 ರಿಂದ 18 ರ ವಯಸ್ಸಿನ ಕಿಶೋರಾವಸ್ಥೆಯ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಜಿಲ್ಲಾದ್ಯಂತ ದೀಪಾವಳಿ ಹಾಗೂ ಹುತ್ತರಿ ಹಬ್ಬದ ಪ್ರಯುಕ್ತ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಪಟಾಕಿ ತಾಯಾರಿಕೆ, ಮಾರಾಟ ಹಾಗೂ ಇತರೆ ಪ್ರಕ್ರಿಯೆಗಳು ಅಪಾಯಕಾರಿ ಉದ್ದಿಮೆಗಳ ವ್ಯಾಪ್ತಿಗೆ ಬರುವುದರಿಂದ ಈ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು. ತಪ್ಪಿದ್ದಲ್ಲಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯನ್ವಯ…

Read More

ಮಡಿಕೇರಿ ನ.10 : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್‌ಎಸ್ ಆಸ್ಪತ್ರೆ ವತಿಯಿಂದ ನ.12 ರಂದು ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆಸ್ಪತ್ರೆಯ ಸಮೀಪದಲ್ಲಿರುವ ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸ್ಪರ್ಧೆ ಆರಂಭಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿಲ್ಪಾ ಸತೀಶ್ ಮನವಿ ಮಾಡಿದ್ದಾರೆ. ಸ್ಪರ್ಧೆ ಮೂರು ವಿಭಾಗದಲ್ಲಿ ನಡೆಯಲಿದ್ದು, ಮೊದಲ ವಿಭಾಗದಲ್ಲಿ ಎಲ್‌ಕೆಜಿ ಯಿಂದ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ವಿಷಯ “ಪ್ರಕೃತಿ”, ಎರಡನೇ ವಿಭಾಗದಲ್ಲಿ 2ನೇ ತರಗತಿಯಿಂದ 6ನೇ ತರಗತಿಯವರೆಗೆ ವಿಷಯ “ಚಂದ್ರಯಾನ” ಮತ್ತು 3ನೇ ವಿಭಾಗದಲ್ಲಿ 7ನೇ ತರಗತಿಯಿಂದ 10ನೇ ತರಗತಿಯವರೆಗೆ ವಿಷಯ “ಜಾಗತಿಕ ತಾಪಮಾನ” ವಾಗಿರುತ್ತದೆ. ಚಿತ್ರ ಬಿಡಿಸಲು ಬಣ್ಣವನ್ನು ಮಾತ್ರ ವಿದ್ಯಾರ್ಥಿಗಳು ತರಬೇಕು, ಕಾಗದವನ್ನು ಆಯೋಜಕರು ನೀಡಲಿದ್ದಾರೆ. ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನು ನೀಡಲಾಗುತ್ತಿದ್ದು, ನಗದು, ಪದಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು.…

Read More

ಮಡಿಕೇರಿ ನ.10 : ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯ ಪರ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ ಶಾಂತಿಯುತ ಹೋರಾಟಕ್ಕೆ ಶೀಘ್ರ ಜಯ ಸಿಗಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಡಿನಾಡ್- ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಕುಂಜಿಲ ಕಕ್ಕಬ್ಬೆ “ಕೆಂಜರಾಣೆ ಪಾಡಿನಾಡ್‌ಮಂದ್”ನಲ್ಲಿ ಕೊಡವ ಜಾಗೃತಿ ಸಭೆಯ ಮೂಲಕ ಸಿಎನ್‌ಸಿ ಸಂಘಟನೆಯ ಐದು ಹಂತಗಳ ಪಾದಯಾತ್ರೆಯನ್ನು ಮುಕ್ತಾಯಗೊಳಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕೊಡಗಿನ ಆದಿಮಸಂಜಾತ ಕೊಡವ ಜನಾಂಗಕ್ಕೆ ಸಂವಿಧಾನದಡಿ ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆಯ ಮೂಲಕ ಮಾತ್ರ ಭದ್ರತೆ ಸಿಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕೊಡವ ಲ್ಯಾಂಡ್ ಗಾಗಿ ಶಾಂತಿಯುತ ಹೋರಾಟ ಮುಂದುವರೆಯಲಿದೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಎನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಿ ನಮ್ಮ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.…

Read More

ಮಡಿಕೇರಿ ನ.10 : ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ಪರಿಸರ ಸ್ನೇಹಿ ಹಬ್ಬವನ್ನಾಗಿ ಆಚರಿಸಲು ಮನವಿ ಮಾಡುತ್ತದೆ. ದೀಪಾವಳಿ ಆಚರಿಸುವ ಸಂದರ್ಭದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಪೋಟಿಸುವುದರಿಂದ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮತ್ತು ತ್ಯಾಜ್ಯ ಉತ್ಪಾದನೆಯಾಗಲಿದ್ದು, ಅದನ್ನು ತಡೆಗಟ್ಟಲು ಪರಿಸರಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ಸಿದ್ಧಪಡಿಸಿ ದೀಪಾವಳಿ ಉಡುಗೊರೆ ನೀಡಬಹುದು ಹಾಗೂ https://pledge.mygov.in/swachh.divali-shubh-diwali link ಮೂಲಕ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಆಚರಿಸುವ ಬಗ್ಗೆ ಪ್ರತಿಜ್ಞೆ ಪಡೆದು ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಾದ ವಿಜಯ್ ಕೋರಿದ್ದಾರೆ.

Read More

ಮಡಿಕೇರಿ ನ.10 : ಕಾಂಗ್ರೆಸ್ ಸೇವಾದಳದ ಶತಮಾನೋತ್ಸವ ಸಮಾರಂಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಎಐಸಿಸಿ ಸೇವಾದಳದ ರಾಷ್ಟ್ರಾಧ್ಯಕ್ಷ ಲಾಲ್ ಜಿ ದೇಸಾಯಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಿಂದ ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ನೇತೃತ್ವದಲ್ಲಿ ಪ್ರಮುಖರಾದ ತೆರೆಸಾ ವಿಕ್ಟರ್, ರಾಜ್ಯ ಕಾರ್ಯದರ್ಶಿ ದಾಮೋದರ್, ಸದಸ್ಯ ಸಣ್ಣುವಂಡ ಕಾವೇರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಪಾಂಡನ ಪುಷ್ಪವೇಣಿ, ಅನೀಸ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಹಭಿಬ್ ಅಹಮ್ಮದ್, ಕಾರ್ಯದರ್ಶಿ ರವೀನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಹಯಾತ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜು, ಕುಶಾಲನಗರ ಬ್ಲಾಕ್ ಅಧ್ಯಕ್ಷ ಸಾಹುಲ್ ಹಮೀದ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ರಾಜಶೇಖರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಹರೀಶ್, ನಾಪೋಕ್ಲು ಅಧ್ಯಕ್ಷ ಪಿಯೂಷ್ ಪೆರೇರ, ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಪ್ರೇಮ ಕೃಷ್ಣಪ್ಪ, ಶೇಕ್…

Read More