ಲೇಖಕ: admin

ವಿರಾಜಪೇಟೆ ಡಿ.18 : ವಿರಾಜಪೇಟೆಯ ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗಬನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಅರ್ಚಕ ವೇಣುಗೋಪಾಲ್ ಭಟ್ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ಮುಂಜಾನೆ ಸಂಕಲ್ಪ ಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಮಾಡಲಾಯಿತು. ನಾಗನ ಮೂರ್ತಿಗೆ ಸೀಯಾಳ ಹಾಗೂ ಹಾಲಿನ ಅಭಿಷೇಕ ನಡೆಸಿದರು. ನಂತರ ಅರ್ಚಕರು ನಾಗತಂಬಿಲವನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಕಾರ್ಯಕ್ರಮ ನಡೆಯಿತು. ಬೇಟೋಳಿ, ಹೆಗ್ಗಳ, ಬೂದಿಮಾಳ, ರಾಮನಗರ, ವಿರಾಜಪೇಟೆ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.

Read More

ಸುಂಟಿಕೊಪ್ಪ ಡಿ.18: ವರ್ಕ್‍ಶಾಪ್ ಮಾಲೀಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಪಿ.ಆರ್.ಸುನಿಲ್‍ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಪುನರ್ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಅನಿಸ್, ಸಹಕಾರ್ಯದರ್ಶಿಯಾಗಿ ನಿತಿನ್, ಸಂಘಟನಾ ಕಾರ್ಯದರ್ಶಿಯಾಗಿ ಫೆಲಿಕ್ಸ್, ಖಜಾಂಚಿಯಾಗಿ ಸಂದೀಪ್, ಗೌರವಧ್ಯಕ್ಷರುಗಳಾಗಿ ಬಿ.ಎ.ಸಂತೋಷ್, ಪಿ.ಆರ್.ಸುಕುಮಾರ್, ಕೆ.ಪಿ.ವಿನೋದ್, ಸಮಿತಿ ಸದಸ್ಯರುಗಳಾಗಿ ಕೆ.ಜಿ.ಸತೀಶ್, ಯೇಸುದಾಸ್, ಸುರೇಶ್, ರಜಾಕ್ ಹಾಗೂ 9 ಮಂದಿ ಆಡಳಿತ ಮಂಡಳಿ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಕಚೇರಿಯಲ್ಲಿ ನಡೆದ 21ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಾರ್ಷಿಕ ಖರ್ಚು ವೆಚ್ಚಗಳ ಲೆಕ್ಕ ಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು.

Read More

ಸುಂಟಿಕೊಪ್ಪ ಡಿ.18: ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಗಣಪತಿ ಹೋಮ, ಸತ್ಯನಾರಾಯಣ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಅರ್ಚಕರಾದ ಭಾನುಪ್ರಕಾಶ್ ಭಟ್ ಹಾಗೂ ರಮೇಶ್ ಭಟ್ ವಿಶೇಷ ಪೂಜಾ ಕೈಂಕರ್ಯ ನೇರವೇರಿಸಿದರು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದವನ್ನು ಸ್ವೀಕರಿಸಿದರು.ಈ ಸಂದರ್ಭ ದೇವಾಲಯದ ಟ್ರಸ್ಟಿ ಹಾಗೂ ಅಧ್ಯಕ್ಷ ಕೆ.ಎನ್.ಪೂಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಜಿ ಡಾ. ಎ.ಬಿ.ತಮ್ಮಯ್ಯ, ತಕ್ಕ ಮುಖ್ಯಸ್ಥರಾದ ಕುಮಾರ್, ಪ್ರಧಾನ ಟ್ರಸ್ಟಿಗಳಾದ ಕೆ.ಎಸ್.ಮಂಜುನಾಥ್, ಜಗನ್ನಾಥ್ ರೈ, ದತ್ತ ಸೋಮಣ್ಣ, ಎಂ.ಎಸ್.ಸುರೇಶ್ ಚಂಗಪ್ಪ, ಸನ್ನಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ಷಷ್ಠಿಯ ಅಂಗವಾಗಿ ದೇವಾಲಯವನ್ನು ತಳಿರು ತೊರಣ ಸೇರಿದಂತೆ ವಿವಿಧ ಬಣ್ಣ ಬಣ್ಣದ ಹೂಗಳಿಂದ ಅಲಂಕಾರಿಸಲಾಗಿತ್ತು.

Read More

ಮಡಿಕೇರಿ ಡಿ.18 : ಕೊಡಗು ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ತಾಲ್ಲೂಕುಗಳಲ್ಲಿ ಒಂದಾಗಿರುವ ‘ಕುಶಾಲನಗರ ತಾಲ್ಲೂಕು’ವಿನಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಬ್ರಾಹ್ಮಣ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿತ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು,ಕುಶಾಲನಗರ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ತಾನು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಲ್ಲದೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಸ್ಥಳೀಯ ಬ್ರಾಹ್ಮಣರ ಸಂಘಕ್ಕೆ ಸಹಕಾರ ನೀಡಲಾಗುವುದೆಂದು ಹೇಳಿದರು. ಆರೋಗ್ಯ ಕೇಂದ್ರ ಮೇಲ್ದರ್ಜೆಗೆ- ಊರಿನ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆ ಎಲ್ಲ ರೀತಿಯ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುವುದು. ರಥ ಬೀದಿಯಲ್ಲಿರುವ ಬ್ರಾಹ್ಮಣ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲಾಗುವುದು. ಕುಶಾಲನಗರ ತಾಲೂಕು ಆಸ್ಪತ್ರೆಗೆ 100 ಬೆಡ್ ಕಲ್ಪಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಜೊತೆಗೆ ಡಯಾಲಿಸಿಸ್ ಕೇಂದ್ರ ಮುಂದಿನ ತಿಂಗಳು ಸೇವೆಗೆ ಲಭ್ಯವಾಗಲಿದೆ ಎಂದರು. ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಮಿನಿ ವಿಮಾನ ನಿಲ್ದಾಣ ರೈಲ್ವೆ…

Read More

ಸುಂಟಿಕೊಪ್ಪ,ಡಿ.18: ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ‘ಚಡ್ಡಿದೋಸ್ತ್’ ಬಳಗದ ವತಿಯಿಂದ ಗುಡ್ಡೆಹೊಸೂರು ಐಚೆಟ್ಟೀರ ನರೇನ್ ಸೋಮಯ್ಯ ಸ್ಪೋಟ್ರ್ಸ್ ಸೆಂಟರ್ ಮೈದಾನದಲ್ಲಿ ಆಯೋಜಿಸಿದ್ದ 5ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಸೌಹಾರ್ದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಶಿಕ್ಷಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ಚಡ್ಡಿದೋಸ್ತ್ ‘ಎ’ ತಂಡ ದ್ಚಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಟೆನ್ನಿಸ್ ಬಾಲ್ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಚಡ್ಡಿದೋಸ್ತ್ ‘ಎ’ ಮತ್ತು ‘ಬಿ’ ತಂಡ, ಕೊಡಗು ಶಿಕ್ಷಕರ ತಂಡ, ಅರಣ್ಯ ಇಲಾಖೆ ಮತ್ತು ಕೊಡಗು ಪ್ರೆಸ್ ಕ್ಲಬ್ ತಂಡಗಳು ಭಾಗವಹಿಸಿದ್ದವು. ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಕೊಡಗು ಶಿಕ್ಷಕರ ತಂಡ ಮತ್ತು ಚಡ್ಡಿದೋಸ್ತ್ ‘ಎ’ ತಂಡಗಳ ನಡುವೆ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಚಡ್ಡಿದೋಸ್ತ್ ತಂಡ ನಿಗಧಿತ 6 ಓವರುಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು 48 ರನ್ ಬಾರಿಸಿತು. 49 ರನ್ನುಗಳ ಗುರಿ ಬೆನ್ನಟ್ಟಿದ್ದ ಕೊಡಗು ಶಿಕ್ಷಕರ ತಂಡ ಆಕರ್ಷಕ ಆಟದ…

Read More

ಮಡಿಕೇರಿ ಡಿ.18 : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಾಲ್ಲೂಕಿನ ಒಂದು ಹೋಬಳಿ ಕೇಂದ್ರದಲ್ಲಿ ಸುವರ್ಣ ಸಂಭ್ರಮ ಗ್ರಾಮ ಸಿರಿ ಕಾರ್ಯಕ್ರಮವನ್ನು ನಡೆಸಲು ಕೊಡಗು ಜಿಲ್ಲೆಯ 5 ತಾಲ್ಲೂಕು ಕಸಾಪ ಅಧ್ಯಕ್ಷರುಗಳ ಸಭೆ ನಿರ್ಧರಿಸಿದೆ. ನಗರದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷರುಗಳ ಸಭೆ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ಗೈರು ಹಾಜರಿಯಲ್ಲಿ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಸುವರ್ಣ ಕರ್ನಾಟಕ 50ರ ಸಂಭ್ರಮದ ಗ್ರಾಮಸಿರಿ ಕಾರ್ಯಕ್ರಮವನ್ನು ಎಲ್ಲರ ಸಹಕಾರ ಪಡೆದು ಅರ್ಥಪೂರ್ಣಗೊಳಿಸಬೇಕೆಂದು ಕರೆ ನೀಡಿದರು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಆಪ್ ಮೂಲಕ ಸದಸ್ಯತ್ವ ನೋಂದಣಿ ಆರಂಭಿಸಿದ್ದು, ಸರ್ವರ್ ಸಮಸ್ಯೆ ಎದುರಾಗಿರುವುದನ್ನು…

Read More

ಕಡಂಗ ಡಿ.18 :  ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ  ವಿಶೇಷ ಪೂಜೆ ನಡೆಯಿತು. ಈ ಸಂದರ್ಭ ಸುಬ್ರಹ್ಮಣ್ಯ ದೇವರಿಗೆ ಎಳನೀರು ಹಾಗೂ ಹಾಲಿನ ಅಭಿಷೇಕ ನಡೆಸಲಾಯಿತು. ನಂತರ ದೇವರಿಗೆ ಮಹಾಪೂಜೆ,  ಮಹಾಮಂಗಳಾರತಿ ನಡೆಯಿತು.   ನಂತರ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಅರ್ಚಕರಾದ ಕೀರ್ತಿಶ್  ಪೂಜಾ ವಿಧಿವಿಧಾನವನ್ನು ನಡೆಸಿಕೊಟ್ಟರು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ  ಚಿತ್ರ ಬೆಳ್ಯಪ್ಪ , ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅನ್ನಪ್ರಸಾದವನ್ನು ಕೋಡಿರ ಸುಭಾಶ್ ಮುತ್ತಣ್ಣ ಮತ್ತು ಸಂಸಾರದವರು ಏರ್ಪಡಿಸಿದ್ದರು. ವರದಿ : ನೌಫಲ್ ಕಡಂಗ

Read More

ಮಡಿಕೇರಿ ಡಿ.18 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿತು. ಮಹಾಪೂಜೆ ಮತ್ತು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಡಿ.18 : ಕುಶಾಲನಗರ ಸಮೀಪದ ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಷಷ್ಠಿ ಪ್ರಯುಕ್ತ 55ನೇ ವರ್ಷದ ಮಹಾ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸುಬ್ರಹ್ಮಣ್ಯ ಸ್ವಾಮಿಗೆ ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು, ಮಹಾಮಂಗಳಾತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ರಥಬಲಿ ನಂತರ ರಥಪೂಜೆ ನೆರವೇರಿಸಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಮೂರ್ತಿಯನ್ನು ರಥದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಅಯ್ಯಪ್ಪ ಮಾಲಾಧಾರಿಗಳು ಭಜನೆಯೊಂದಿಗೆ ಬೃಹತ್ ಪ್ರಮಾಣದಲ್ಲಿ ಕರ್ಪೂರ ಹಚ್ಚಿ ಭಕ್ತಿಭಾವ ಮೆರೆದರು. ರಥವು ಕೂಡಿಗೆ-ಕುಶಾಲನಗರ ಮುಖ್ಯ ರಸ್ತೆಯ ಮೂಲಕ ಕೂಡುಮಂಗಳೂರು ಗ್ರಾಮದವರೆಗೆ ಸಾಗಿತು. ರಥೋತ್ಸವಕ್ಕೆ ಅಗಮಿಸಿದ ಸಾವಿರಾರು ಭಕ್ತರಿಗೆ ದೇವಾಲಯ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ನಡೆಯಿತು.

Read More

ಮಡಿಕೇರಿ ಡಿ.18 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿತು. ಮಹಾಪೂಜೆ ಮತ್ತು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More