ಲೇಖಕ: admin

ಮಡಿಕೇರಿ ಡಿ.18 : ಕೊಡಗು ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿಲ್ಲವ ಸಮುದಾಯ ಬಾಂಧವರಿಗಾಗಿ ಡಿ.30 ಮತ್ತು 31 ರಂದು 17ನೇ ವರ್ಷದ ಕೋಟಿ ಚೆನ್ನಯ್ಯ ಕ್ರೀಡಾಕೂಟ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ಬಿ.ಎಸ್.ಲೀಲಾವತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಸಮಾಜದ ಹಾಗೂ ಜಿಲ್ಲೆಯ ಗಣ್ಯ ವ್ಯಕ್ತಿಗಳು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದರು. ಎರಡು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್, ಪುರುಷ ಹಾಗೂ ಮಹಿಳೆಯರಿಗೆ ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ಮಹಿಳೆಯರಿಗೆ ಥ್ರೋಬಾಲ್, ವಿಷದ ಚೆಂಡು, ಪುರುಷರಿಗೆ ವಾಲಿಬಾಲ್, 5 ವರ್ಷದೊಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, 1 ರಿಂದ 2ನೇ ತರಗತಿಯ ಮಕ್ಕಳಿಗೆ ಕಪ್ಪೆ ಜಿಗಿತ, 3 ರಿಂದ 5ನೇ ತರಗತಿ ಮಕ್ಕಳಿಗೆ 50 ಮೀ. ಓಟ, 5ನೇ ತರಗತಿಯಿಂದ 7ನೇ ತರಗತಿ ಬಾಲಕ-ಬಾಲಕಿಯರಿಗೆ 100 ಮೀ.…

Read More

ಮಡಿಕೇರಿ ಡಿ.18 : ನೆರೆಯ ಕೇರಳ ರಾಜ್ಯದಲ್ಲಿ ಕೊರೋನ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗುತ್ತಿದೆ. ಆದರೆ ಸಧ್ಯಕ್ಕೆ ತೀವ್ರ ನಿರ್ಬಂಧ ಹೇರುವ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮಂಗಳವಾರ ಕೊರೋನ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಗಡಿ ಭಾಗವಾದ ಕೊಡಗು, ಮಂಗಳೂರು ಮತ್ತು ಚಾಮರಾಜನಗರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು. ಪ್ರಸಕ್ತ ರಾಜ್ಯದಲ್ಲಿ ಸಹಜ ಸ್ಥಿತಿ ಇದೆ. ಶೀತ, ಜ್ವರ ಕೆಮ್ಮು ಇರುವವರು ಕೊರೋನ ಟೆಸ್ಟ್ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಪ್ರಕರಣ ಬಂದರಷ್ಟೇ ನಿಬರ್ಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ…

Read More

ಮಡಿಕೇರಿ ಡಿ.18 : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಜರುಗಿತು. ಮಧ್ಯಾಹ್ನ ಶ್ರೀ ಸುಬ್ರಮಣ್ಯ ದೇವರ ಬೂತ ಬಲಿ ನೆರವೇರಿತು. ನಂತರ ಮಹಾಮಂಗಳಾರತಿ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ.

Read More

ಅರಂತೋಡು ಡಿ.18 :  ಅರಂತೋಡುವಿನ   ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ವತಿಯಿಂದ ಡಿ.19 ರಂದು ಪ್ರಧಾನಮತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಣಾ ಕಾರ್ಯಕ್ರಮ ನಡೆಯಲಿದೆ. ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ  ನಡೆಯಲಿರುವ ಕಾರ್ಯಕ್ರಮದಲ್ಲಿ  ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ  ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ ಮಾಡಲಿದ್ದಾರೆ. ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿಯ ಮಾಲೀಕ ಟಿ.ಎಂ ಶಹೀದ್ ತೆಕ್ಕಿಲ್ ಅವರ  ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ  ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಅರಂತೋಡು ಜಿ.ಪಂ ನ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಗೌರವ ಉಪಸ್ಥಿತಿಯಾಗಿ ಆಗಮಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಅರಂತೋಡು ಗ್ರಾ.ಪಂ ಅಧ್ಯಕ್ಷ ಕೇಶವ ಅಡ್ತಲೆ, ಅರಂತೊಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ವಿವಿಧ ಗ್ರಾ.ಪಂ ಅಧ್ಯಕ್ಷರಾದ ಸುಮತಿ ಶಕ್ತಿಮೇಲು…

Read More

ಮಡಿಕೇರಿ ಡಿ.18 : ಕೇರಳ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ  ನಮ್ಮ ರಾಜ್ಯದಲ್ಲಿಯೂ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಮಾಸ್ಕ್, ವೆಂಟಿ ಲೇಟರ್, ಪಿಪಿ ಕಿಟ್, ಬೆಡ್‍ಗಳ ಕೊರತೆ ಉಂಟಾಗದಂತೆ ಎಚ್ಚರ ವಹಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ, ಜ್ವರ, ಕೆಮ್ಮು ರೋಗ ಲಕ್ಷಣ ಕಂಡುಬಂದಲ್ಲಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು. ಅಗತ್ಯ ಕ್ರಮಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಡಾ.ರವಿ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದರು. ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಸ್ಥಳಗಳಲ್ಲಿ ನಿಗಾ ತಪಾಸಣೆ ಮಾಡಲಾಗುವುದು. ಹೆಚ್ಚು ಟೆಸ್ಟಿಂಗ್ ಮಾಡಲು ಆರೋಗ್ಯ ಇಲಾಖೆಗೆ ಆದೇಶ ನೀಡಲಾಗಿದ್ದು, ಹೆಚ್ಚು ಪಾಸಿಟಿವ್ ಕೇಸ್ ಬಂದರೆ ನಿರ್ಬಂಧದ ಬಗ್ಗೆ ಯೋಚಿಸುವುದಾಗಿ ತಿಳಿಸಿದರು.

Read More

ಮೈಸೂರು  ಡಿ.18 :  ವ್ಯಾಪಾರಸ್ಥರ ದೈನಂದಿನ ಬದುಕು ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕವಾಗಿದ್ದು, ಪೈಪೋಟಿಗಳ ನಡುವೆ ಒತ್ತಡದ ಬದುಕನ್ನು ಸಾಗಿಸುತ್ತಿದ್ದಾರೆ. ದಿನದ ಒಂದು ಘಂಟೆಗಳ ಕಾಲ ಬಿಡುವು ಮಾಡಿಕೊಂಡು ಆಯಾಮಗಳ‌ ಮೂಲಕ ತಮ್ಮಗಳ ಆರೋಗ್ಯವನ್ನು ಕಾಪಾಡಿಕೊಳ್ಳಿ.‌ ಅಂತೆಯೇ ಗ್ರಾಹಕರ ಆರೋಗ್ಯದ ಕಾಳಜಿಗಾಗಿ ಆಹಾರ ಪದಾರ್ಥ ಮಾರುವ ಹಾಗೂ ತಯಾರಿಸುವ ವ್ಯಾಪಾರಸ್ಥರು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (ಎಫ್‌ಎಸ್‌ಎಸ್‌ ಎಐ) ಪರವಾನಗಿ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರು ಜಿಲ್ಲಾ ಅಂಕಿತ ಅಧಿಕಾರಿ ಡಾ.‌ಕಾಂತರಾಜ್ ಹೇಳಿದರು. ಹೂಟಗಳ್ಳಿ ಕೆಎಚ್‌ಬಿ ಬಡಾವಣೆಯ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ನಡೆದ ನೂತನ ಸದಸ್ಯರಿಗೆ ಸಂಘದ ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರವನ್ನು ವಿತರಣೆ ಮಾಡುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು‌, ಆಹಾರ ಉತ್ಪನ್ನಗಳು ತಯಾರಾಗುವ, ಸಂಗ್ರಹಿಸುವ ಸ್ಥಳದ ಮೇಲೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ಕಲಬೆರೆಕೆ ಹಾಗೂ ಗುಣಮಟ್ಟವಿಲ್ಲದ ಆಹಾರ ಉತ್ಪನ್ನಗಳನ್ನು ತಯಾರಿಸುವವರ ವಿರುದ್ಧ ಕ್ರಮ ಕೈಗೊಳ್ಳುವ…

Read More

ಮಡಿಕೇರಿ ಡಿ.18 : ನಗರದ  ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ  “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ನಾಪೋಕ್ಲು ಡಿ.18 : ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ನಂತರ ಶಾಲೆಯ ಗೋಡೆಗಳಿಗೆ ಬಣ್ಣ ಬಳಿದು ಅಂದಗೊಳಿಸಿದರು. ನಿರಂತರ ಮೂರು ದಿನಗಳು ನಾಪೋಕ್ಲು ಶೌರ್ಯ ಘಟಕದ ಸದಸ್ಯರು ಶಾಲೆಯ ಸ್ವಚ್ಛತಾ ಶ್ರಮದನದಲ್ಲಿ ತೊಡಗಿಕೊಂಡಿದ್ದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು. ಸ್ವಚ್ಛತಾ ಕಾರ್ಯದಲ್ಲಿ ಘಟಕದ ಸದಸ್ಯರುಗಳಾದ ಎನ್.ಬಿ.ದಿಲೀಶ್, ಬಿ.ಹೆಚ್.ಶಂಕರ್, ಸೀನಾ ಮಾಧವನ್, ಸುನೀತಾ, ದಿವ್ಯ ಬಾಳೆಯಡ, ಚಂದ್ರಕಲಾ, ಶ್ಯಾಮಲಾ, ನಾರಾಯಣ, ಮಾಯಿಲಪ್ಪ, ಉಮಾಲಕ್ಷ್ಮಿ ಸೇವಾ ಕಾರ್ಯದಲ್ಲಿ ಭಾಗವಹಿಸಿದರು. ವರದಿ – ದುಗ್ಗಳ ಸದಾನಂದ

Read More

ನಾಪೋಕ್ಲು ಡಿ.18 : ನರಿಯಂದಡ ಗ್ರಾಮದ ಎಡಪಾಲಕೇರಿ ಅಯ್ಯಪ್ಪ ದೇವಸ್ಥಾನದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬಿಳಿಯ೦ಡ್ರ ಹರಿಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ಪೊಕ್ಕುಳ೦ಡ್ರ ಅಭಿಲಾಶ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ತೋಟಂ ಬೈಲು ಅನಂತಕುಮಾರ್, ಉಪಾಧ್ಯಕ್ಷರಾಗಿ ಪೊಕ್ಕುಳ೦ಡ್ರ ಸೂರಜ್, ಸಲಹಾ ಸಮಿತಿ ಗೌರವ ಸದಸ್ಯರಾಗಿ ಪೊಕ್ಕುಳ೦ಡ್ರ ಮನೋಹರ, ಪೊಕ್ಕುಳ೦ಡ್ರ ಸತ್ಯ , ಕಾರ್ಯಕಾರಿಣಿ ಸದಸ್ಯರಾಗಿ ಮಞಪುರ ಛಾಯಾಪ್ರಕಾಶ್, ರವಿ ಬೋಪಯ್ಯ, ಬಾಲಕೃಷ್ಣ , ತನು, ದಿಲೀಪ್ ಕುಮಾರ್, ರಕ್ಷಿತ್ , ತೋಟಂಬೈಲ್ ಪವನ್, ಕುವೆಂಡ್ರ ದಿನೇಶ್ ಅವರನ್ನು ಆಡಳಿತ ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಡಿ.17 :NEWS DESK ಕೇರಳ ರಾಜ್ಯದಲ್ಲಿ ಕೊರೋನಾ ರುಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಮಾಲೋಚಿಸಿದ ಸಚಿವರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕೊರೋನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮಗಳನ್ನ ಕೈಗೊಳ್ಳಬೇಕು. ಕೊರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ…

Read More