ಸೋಮವಾರಪೇಟೆ ಡಿ.17: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ 60 ಅಂಗಡಿ ಮಳಿಗೆ ಹರಾಜು ವಿಚಾರ ಭಾರೀ ಚರ್ಚೆಗೆ ಒಳಪಟ್ಟಿರುವ ಬೆನ್ನಲ್ಲೇ ಶಾಸಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲೂ ತೀರ್ಮಾನ ಅಂತಿಮಗೊಂಡಿಲ್ಲ. ಸಭೆಯಲ್ಲಿ ಚರ್ಚೆಗಳು ನಡೆದರೂ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಅಂತಿಮವಾಗಿ ಜಿಲ್ಲಾಧಿಕಾರಿಗಳ ಅಂಗಳಕ್ಕೆ ಟೆಂಡರ್ ಪ್ರಕ್ರಿಯೆಯ ಚೆಂಡನ್ನು ಎಸೆಯಲಷ್ಟೇ ಸಭೆ ಸೀಮಿತವಾಯಿತು. ಮಳಿಗೆಗಳ ಹರಾಜು ವಿಚಾರ ಮುನ್ನೆಲೆಗೆ ಬಂದಾಗಿನಿಂದಲೂ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳ ನಡುವೆ ತಿಕ್ಕಾಟ ಆರಂಭಗೊಂಡಿದ್ದು, ಶಾಸಕರ ಮಧ್ಯೆ ಪ್ರವೇಶದ ನಂತರವೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ತಾ.14ರಂದು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಆಡಳಿತಾಧಿಕಾರಿಗಳ ನಡುವೆ ಪಂಚಾಯಿತಿ ಮುಂಭಾಗವೇ ಸಾರ್ವಜನಿಕರೆದುರು ಜಟಾಪಟಿ ನಡೆದಿದ್ದು, ಈ ಸಂದರ್ಭ ತಾ.16ರಂದು ಸಭೆ ಕರೆಯುವ ಬಗ್ಗೆ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ತಹಶೀಲ್ದಾರ್ ನರಗುಂದ್ ಅವರು ಭರವಸೆ ನೀಡಿದ್ದರು. ಅದರಂತೆ ನಿನ್ನೆ (ಡಿ.16)ಸಂಜೆ 5 ಗಂಟೆಗೆ ಪಟ್ಟಣ ಪಂಚಾಯಿತಿಯಲ್ಲಿ ಸಭೆ ನಿಗದಿಯಾಗಿದ್ದರೂ, ಸಭೆಯನ್ನು ನಿಗದಿ ಮಾಡಿದ್ದ ಆಡಳಿತಾಧಿಕಾರಿ ನಿಗದಿತ ಸಮಯಕ್ಕೆ ಸಭೆಗೆ ಆಗಮಿಸಲಿಲ್ಲ.…
ಲೇಖಕ: admin
ಸುಂಟಿಕೊಪ್ಪ ಡಿ.17 : ಅರೆಭಾಷೆ ಗೌಡ ಸಮುದಾಯದ ಸಂಸ್ಕೃತಿ, ಪರಂಪರೆಯ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಸುಂಟಿಕೊಪ್ಪ ನಾಡು ಗೌಡ ಸಂಘವನ್ನು ಸಬಲಗೊಳಿಸಲು ಎಲ್ಲರೂ ಕೈಜೋಡಿಸುವಂತೆ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಕರೆ ನೀಡಿದ್ದಾರೆ. ಸುಂಟಿಕೊಪ್ಪದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಂಘದ 8ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕಳೆದ 7 ವರ್ಷಗಳಿಂದ ಸಂಘ ಕಾರ್ಯನಿರ್ವಹಿಸುತ್ತಿದೆ. ಶೈಕ್ಷಣಿಕ, ಸಮಾಜ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜನಾಂಗದವರನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತಿದೆ. ಸಂಘದ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬಲ್ಲಡ್ಕ ಅಭಿಜನ್, ಪುಳ್ಳಿಜ್ಜನ ರಿತೀಶ್, ವಾಣಿಜ್ಯ ವಿಭಾಗದಲ್ಲಿ ಅಯ್ಯಂಡ್ರ ದಿವ್ಯಶ್ರೀ, ಯಂಕನ ವರ್ಧಿನಿ ಪುರಸ್ಕಾರಕ್ಕೆ ಪಾತ್ರರಾದರು. ಕೊಡಗು ಜಿಲ್ಲಾ ಸರಕಾರಿ ನಿವೃತ್ತ ಗೌಡ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್, ಸುಂಟಿಕೊಪ್ಪ…
ಮಡಿಕೇರಿ ಡಿ.17 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಷಷ್ಠಿ ಮತ್ತು ಸುಬ್ರಹ್ಮಣ್ಯ ರಥೋತ್ಸವದಲ್ಲಿ ಪಾಲ್ಗೊಳ್ಳಲು ಮಡಿಕೇರಿ ನಗರದ ಅಯ್ಯಪ್ಪ ಮಾಲಾಧಾರಿ ಭಕ್ತರು ಹಾಗೂ ಯುವಕರು ಕಾಲ್ನಡಿಗೆ ಮೂಲಕ ಮಡಿಕೇರಿಯಿಂದ ಸುಬ್ರಹ್ಮಣ್ಯಕ್ಕೆ ಸಾಗಿದರು. 60 ಕ್ಕೂ ಹೆಚ್ಚು ಭಕ್ತರು ಮಡಿಕೇರಿಯಿಂದ ಬೆಳಿಗ್ಗೆ ಐದು ಗಂಟೆಗೆ ಹೊರಟು ಗಾಳಿಬೀಡು, ವಣಚಲು, ಕಡಮಕಲ್ಲು ಸೇರಿದಂತೆ ದಟ್ಟ ಅರಣ್ಯದ ನಡುವೆ ನಡೆದುಕೊಂಡು ಹೋಗಿ ಸಂಜೆ ವೇಳೆಗೆ ಸುಬ್ರಹ್ಮಣ್ಯ ದೇವಾಲಯಕ್ಕೆ ತಲುಪಿದ್ದಾರೆ. ಸೋಮವಾರ ನಡೆಯುವ ಷಷ್ಠಿ ಮತ್ತು ಸುಬ್ರಹ್ಮಣ್ಯ ರಥೋತ್ಸವದಲ್ಲಿ ಪಾಲ್ಗೊಂಡು ಮರಳಲಿದ್ದಾರೆ.
ಮಡಿಕೇರಿ ಡಿ.17 : ಕಂಡಂಗಾಲ ಶಾಲೆಯಲ್ಲಿ ನಡೆದ ಬೇರಳಿನಾಡ್ ಕುತ್ತನಾಡ್ ಬೋಟ್ಟಿಯತ್ ನಾಡ್ ಫ್ಯಾಮಿಲಿ ಕಪ್ ಹಾಕಿ ಪಂದ್ಯಾವಳಿಯಲ್ಲಿ ಸತತ 2ನೇ ಬಾರಿಗೆ ಅಪ್ಪಂಡೇರಂಡ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಮಡಿಕೇರಿ ಡಿ.16 : ಸಂಸತ್ ಭವನದಲ್ಲಿ ಇಬ್ಬರು ವ್ಯಕ್ತಿಗಳು ಆತಂಕ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರನ್ನು ಉಚ್ಚಾಟಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಿಂದ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸತ್ತಿನ ಭದ್ರತಾ ಲೋಪದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಅವರು ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹವಾಗಿದೆ. ತಕ್ಷಣ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದು. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ…
ಮಡಿಕೇರಿ ಡಿ.16 : ಹಬ್ಬ, ಜಾತ್ರೆ, ಚುನಾವಣೆ, ಪ್ರಮುಖ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಹೀಗೆ ಹಲವು ತುರ್ತು ಸಂದರ್ಭದಲ್ಲಿ ಪೊಲೀಸರ ಜತೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುವ ಗೃಹ ರಕ್ಷಕದಳದ ಸಿಬಂಧಿಗಳ ಕಾರ್ಯ ಶ್ಲಾಘನೀಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ. ಗೃಹ ರಕ್ಷಕದಳ ವಿಭಾಗದಿಂದ ಕೊಡಗು ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ನಡೆದ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ರಕ್ಷಕದಳದ ಸಿಬ್ಬಂಧಿಗಳ ಕರ್ತವ್ಯ ಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆಚ್ಚಬೇಕಿದೆ. ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಗೃಹ ರಕ್ಷಕರು ಪೊಲೀಸರ ಜೊತೆ ಸೇರಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲಾ ಗೃಹ ರಕ್ಷಕದಳದ ಸಮಾದೇಷ್ಠರು ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಮಾತನಾಡಿ, ಜಿಲ್ಲೆಗೆ ಗೃಹರಕ್ಷಕರ 500 ಮಂಜೂರಾತಿಯಲ್ಲಿ, 250 ಗೃಹ ರಕ್ಷಕರಿಗೆ ಅವಕಾಶವಿದ್ದು, 150 ಮಂದಿ ಪೊಲೀಸರ ಜತೆ ಸರಿಸಮಾನವಾಗಿ…
ಮಡಿಕೇರಿ ಡಿ.16 : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನವೀಯ ಘಟನೆಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಜ.ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು, ಬೆಳಗಾವಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಭ್ರೂಣ ಹತ್ಯೆ ಪ್ರಕರಣದ ವಿರುದ್ಧವೂ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರುಗಳಾದ ಮಹೇಶ್ ಜೈನಿ, ಅರುಣ್ ಶೆಟ್ಟಿ, ಪಕ್ಷದ ಪ್ರಮುಖರಾದ ಜಗದೀಶ್, ನಾಗೇಶ್, ಬಾಲಕೃಷ್ಣ, ಅರುಣ್ ಕುಮಾರ್, ಚಂದ್ರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ ಡಿ. 16 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೂಲಕ ಕಾಯ೯ನಿವ೯ಹಿಸುತ್ತಿರುವ ಕೊಡಗು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗೆ ಅತ್ಯುತ್ತಮ ಕಾಯ೯ಚಟುವಟಿಕೆಗಳಿಗಾಗಿ ಈ ಬಾರಿ ರಾಜ್ಯಮಟ್ಟದಲ್ಲಿಯೇ ಅತ್ಯುತ್ತಮ ಜಿಲ್ಲಾ ಘಟಕದ ಪ್ರಶಸ್ತಿ ಲಭಿಸಿದೆ. ಕೊಡಗು ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಕಳೆದ ಹಲವು ತಿಂಗಳಲ್ಲಿ ಕೈಗೊಂಡ ವಿವಿಧ ಸಮಾಜ ಸೇವಾ ಚಟುವಟಿಕೆಗಳಿಗಾಗಿ ರಾಜ್ಯ ರೆಡ್ ಕ್ರಾಸ್ ಘಟಕವು ಸಮಗ್ರ ಕಾಯ೯ನಿವ೯ಹಣೆ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ರೆಡ್ ಕ್ರಾಸ್ ಘಟಕವನ್ನು ಪರಿಗಣಿಸಿ ರಾಜ್ಯದಲ್ಲಿಯೇ ಕೊಡಗು ಘಟಕ ಅತ್ಯುತ್ತಮ ಸೇವೆ ಸಲ್ಲಿಸಿದೆ ಎಂದು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಮುಂದಿನ ಮಂಗಳವಾರ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ರಾಜ್ಯಪಾಲರು ಈ ಪ್ರಶಸ್ತಿಯನ್ನು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗೆ ನೀಡಲಿದ್ದಾರೆ. ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾಗಿ ಜಿಲ್ಲಾಧಿಕಾರಿ ವೆಂಕಟ ರಾಜಾ ಕಾಯ೯ನಿವ೯ಹಿಸುತ್ತಿದ್ದು, ಸಭಾಪತಿಗಳಾಗಿ ಬಿ.ಕೆ ರವೀಂದ್ರ ರೈ, ಉಪಾಧ್ಯಕ್ಷರಾಗಿ ಅನಿಲ್ ಎಚ್.ಟಿ, ಪ್ರಧಾನ ಕಾಯ೯ದಶಿ೯ಯಾಗಿ ಮುರಳೀಧರ್ ಕಾಯ೯ನಿವ೯ಹಿಸುತ್ತಿದ್ದಾರೆ ಎಂದು ರೆಡ್ ಕ್ರಾಸ್ ರಾಜ್ಯ ಘಟಕದ ಪ್ರಧಾನ ಕಾಯ೯ದಶಿ೯…
ಕುಶಾಲನಗರ ಡಿ.16 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮತ್ತು ಆರ್.ಪಿ.ಐ.ಕೆ.ಕರ್ನಾಟಕ ಪಕ್ಷದ ಕೊಡಗು ಘಟಕದ ಆಶ್ರಯದಲ್ಲಿ ರಾಜ್ಯಮಟ್ಟದ ಸಭೆ ಡಿ.17ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆ.ಬಿ.ರಾಜು ತಿಳಿಸಿದರು. ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಡಿ.17 ರಂದು ಕುಶಾಲನಗರ ಮಹಾಲಕ್ಷ್ಮಿ ಸಭಾಂಗಣದಲ್ಲಿ ರಾಜ್ಯಮಟ್ಟದ ಪ್ರಮುಖರ ಸಭೆ ಹಮ್ಮಿಕೊಳ್ಳಲಾಗಿದೆ. ಪಕ್ಷವನ್ನು ಪುನರ್ ರಚಿಸಿ ಸಂಘಟನೆಯನ್ನು ಮತ್ತಷ್ಟು ಸಶಕ್ತಗೊಳಿಸಲು ಆಸಕ್ತಿ ಹೊಂದಿರುವವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು. ಸಾಮಾಜಿಕ ಚಟುವಟಿಕೆಗಳು, ಹೋರಾಟಗಳ ಮೂಲಕ ನೊಂದವರ ಪರ ದನಿಯಾಗಬೇಕಿದೆ, ಸಮಸ್ಯೆಗಳ ವಿರುದ್ದ ಪ್ರತಿಭಟಿಸುವಂತಾಗಬೇಕಿದೆ. ಸರಕಾರದ ಸೌಲಭ್ಯಗಳನ್ನು ಪಡೆದು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲೂ ಸಂಘಟನೆ ಪದಾಧಿಕಾರಿಗಳು ಕ್ರಮವಹಿಸುವಂತಾಗಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ದೊರಕಬೇಕೆಂಬುದು ಸಂಘಟನೆಯ ಆಶಯ. ಅಂದು ಮುಕ್ತವಾಗಿ ಯಾರೂ ಬೇಕಾದರೂ ಪಕ್ಷ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು. ಮಹಿಳೆಯರ ಮೇಲಿನ ದೌರ್ಜನ್ಯ ಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರಕಾರಗಳು…
ಮಡಿಕೇರಿ ಡಿ.16 : ಸರ್ಕಾರಿ ದಾಖಲೆಗಳಲ್ಲಿ “ಕೊಡಗ” ಬದಲಿಗೆ “ಕೊಡವ” ಪದ ಬಳಕೆಗೆ ಅಧಿಕೃತ ಅನುಮೋದನೆ ದೊರೆಯಲು ಹೋರಾಟ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಯತ್ನ ಶ್ಲಾಘನೀಯವೆಂದು ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರಿಗೆ ಪತ್ರ ಬರೆದಿರುವ ಕರವಟ್ಟಿರ ಟಿ.ಪೆಮ್ಮಯ್ಯ ಹಾಗೂ ಗೌರವ ಕಾರ್ಯದರ್ಶಿ ಚಿರಿಯಪಂಡ ವಿವೇಕ್ ಮುತ್ತಣ್ಣ ಅವರುಗಳು ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ನಮ್ಮ ಅಭಿಪ್ರಾಯಕ್ಕೆ ವಿರುದ್ಧವಾಗಿ “ಕೊಡಗ” ಎಂದು ನಮೂದಿಸಲಾಗುತ್ತಿತ್ತು. ಆದರೆ ಸಿಎನ್‍ಸಿ ಯ ಸುದೀರ್ಘ ಹೋರಾಟದ ಫಲವಾಗಿ ಇಂದು “ಕೊಡವ” ಎನ್ನುವುದು ಅಧಿಕೃತವಾಗಿದೆ. ಇದರಿಂದ ನಮ್ಮ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗದ ಪ್ರಗತಿಗೆ ಸಹಕಾರಿಯಾಗಲಿದೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸಹಪಾಠಿಗಳಿಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಕೋರುವುದಾಗಿ ತಿಳಿಸಿದ್ದಾರೆ.






