ಮಡಿಕೇರಿ ಡಿ.16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಡಿ.18 ರಂದು ನಾಪೋಕ್ಲು ಕೊಳಕೇರಿಯ ನೂರಂಬದ ನಾಡ್ ನಲ್ಲಿ ನಡೆಯುವ 14ನೇ ವರ್ಷದ “ಗನ್ ಕಾರ್ನಿವಲ್ ತೋಕ್ ನಮ್ಮೆ”ಯಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಮಾಜಿ ಸದಸ್ಯ, ಕರ್ನಾಟಕ ವಿಧಾನ ಪರಿಷತ್ ಸದಸ್ಯ, ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಳಕೇರಿಯ ನೂರಂಬದ ನಾಡ್ ನಲ್ಲಿರುವ ರಮ್ಮಿ ನಾಣಯ್ಯ ಹಾಗೂ ರೀನಾ ನಾಣಯ್ಯ ಅವರ ಕಾವೇರಿ ಎಸ್ಟೇಟ್ ನ ಕಾವೇರಿ ನದಿ ದಂಡೆಯಲ್ಲಿ ನಮ್ಮೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಅವರು ಪಾಲ್ಗೊಳ್ಳುತ್ತಿರುವುದರಿಂದ ನಮ್ಮ ನೈತಿಕತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ಕೊಡವ ಗನ್ ವಿನಾಯಿತಿ ಹಕ್ಕುಗಳ ಮುಂದುವರಿಕೆಯನ್ನು ಅವರು ಸಮರ್ಥಿಸಿದ್ದರು. ಅಧಿಕಾರದಲ್ಲಿರುವ ಸರ್ಕಾರ ಶಸ್ತ್ರಾಸ್ತ್ರ ಮತ್ತು ಯುದ್ಧಸಾಮಾಗ್ರಿ ತಿದ್ದುಪಡಿ ಮಸೂದೆಯನ್ನು ತಂದಾಗ ಸಂಸತ್ತಿನಲ್ಲಿ ಚರ್ಚೆ ನಡೆಯಿತು. ಸರ್ಕಾರ ಕೊಡವರ ಜೀವಿತಾವಧಿಯ ಗನ್ ವಿನಾಯಿತಿ ಹಕ್ಕುಗಳನ್ನು…
ಲೇಖಕ: admin
ಕಡಂಗ ಡಿ.16 : ವಿರಾಜಪೇಟೆ ತಾಲ್ಲೂಕಿನ ಕುಂಜಲಗೇರಿ ಗ್ರಾಮದ ಬೆಟ್ಲಪ್ಪ ಈಶ್ವರ ದೇವರ ವಿಶೇಷ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ನ.15 ರಿಂದ ಆರಂಭಗೊಂಡಿರುವ ಪೂಜೆಯು ಸುಮಾರು ಒಂದು ತಿಂಗಳ ಕಾಲ ನಡೆಯಿತು. ಕೇರಳದ ಚೆಂಡೆ ವಾದ್ಯ ಹಾಗೂ ಮಹಾಪೂಜೆಯ ನಂತರ ಬೆಟ್ಟದ ಕೆಳಗೆ ಇರುವ ಅರಳಿ ಮರದ ಸುತ್ತ ದೇವರ ಬಲಿ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರಿಗೆ ನೈವ್ಯದ್ಯ ಅರ್ಪಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪದಾಧಿಕಾರಿಗಳು ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಡಿ.16 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.18 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆಯಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ದೇವರಾಜು ತಿಳಿಸಿದ್ದಾರೆ. ದೇವಾಲಯದಲ್ಲಿ ಮಹಾಪೂಜೆಯ ನಂತರ ಮಧ್ಯಾಹ್ನ 1 ಗಂಟೆಗೆ ‘ಸಾರ್ವಜನಿಕ ಅನ್ನದಾನ’ ಕಾರ್ಯಕ್ರಮ ನಡೆಯಲಿದ್ದು, ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಅನ್ನ ಪ್ರಸಾದ’ ಸ್ವೀಕರಿಸುವಂತೆ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಕೋರಿದ್ದಾರೆ.
ಮಡಿಕೇರಿ ಡಿ.16 : ಕೊಡಗು ಜಿಲ್ಲಾ ವ್ಯಾಪ್ತಿಯ ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಎಚ್‍ಪಿ ಮತ್ತು 10 ಎಚ್‍ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್‍ಸೆಟ್‍ಗಳ ಗ್ರಾಹಕರು ಮಾಸಿಕ ಶುಲ್ಕವನ್ನು ಪಾವತಿಸಿದ ನಂತರವೇ ‘ಡಿಬಿಟಿ’ ನಲ್ಲಿ ಗ್ರಾಹಕರಿಗೆ ಸರ್ಕಾರದಿಂದ ಮರುಪಾವತಿಸಲು ತಿಳಿಸಿರುವುದರಿಂದ ಕಾಫಿ ಬೆಳೆಗಾರರ 10 ಎಚ್‍ಪಿ ಮತ್ತು 10 ಎಚ್‍ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್‍ಸೆಟ್‍ಗಳ ಗ್ರಾಹಕರು 7 ದಿನದೊಳಗೆ ಎಲ್ಲಾ ವಿದ್ಯುತ್ ಬಾಕಿ ಶುಲ್ಕವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ. ಡಿ.23 ರ ನಂತರ ವಿದ್ಯುತ್ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಗಮದ ನಿಯಮಾನುಸಾರ ಕ್ರಮವಹಿಸಲಾಗುವುದು, ‘ಡಿಬಿಟಿ’ ಯೋಜನೆಯಡಿ ನೋಂದಾಯಿಸಿಕೊಳ್ಳಲು ಆಧಾರ್ ಕಾರ್ಡ್, ಫ್ರೂಟ್ಸ್ ಐಡಿ ಮತ್ತು ಬಿಲ್ಲು ಪ್ರತಿ ದಾಖಲಾತಿಗಳನ್ನು ಹತ್ತಿರದ ಸೆಸ್ಕ್ ಕಚೇರಿಯಲ್ಲಿ ಕೂಡಲೇ ಸಲ್ಲಿಸಲು 10 ಎಚ್‍ಪಿ ವರೆಗಿನ ನೀರಾವರಿ ವಿದ್ಯುತ್ ಸ್ಥಾವರ ಹೊಂದಿರುವ ಕಾಫಿ ಬೆಳೆಗಾರರಲ್ಲಿ ಸೆಸ್ಕ್ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಡಿ.16 : ಭಾರತ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ 1971 ರಲ್ಲಿ ನಡೆದ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ವಿಜಯ ಸಾಧಿಸಿದ ಹಿನ್ನೆಲೆ ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ವಿಜಯ್ ದಿವಸ್ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಎನ್‍ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ಜೆಫಿರಿನ್ ಅರಾನ್ಹಾ (Col. Zephyrin Aranha), ಜಿ.ಪಂ.ಸಿಇಒ ವರ್ಣಿತ್ ನೇಗಿ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಕೆ.ಪಿ.ಸೋಮಣ್ಣ, ಮಡಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಪಿ.ಕೆ.ಕುಟ್ಟಪ್ಪ, ಮಾಜಿ ಸೈನಿಕರಾದ ಟಿ.ಸಿ.ಗಣಪತಿ, ಕೆ.ಪಿ.ಮುತ್ತಣ್ಣ, ಕಾವೇರಪ್ಪ, ಗೌಡಂಡ ತಿಮ್ಮಯ್ಯ, ಎನ್.ಎ.ಅಯ್ಯಪ್ಪ, ಎಚ್.ಆರ್.ವಾಸಪ್ಪ, ಪ್ರಭಾಕರ, ಸುಬ್ರಮಣಿ, ಚಿಣ್ಣಪ್ಪ, ಎನ್.ಎಂ.ಸೋಮಯ್ಯ, ಎಂ.ಕೆ.ನಾಚಪ್ಪ, ಕೆ.ಪಿ.ಮ್ಯಾಥ್ಯು, ಬಿ.ಸಿ.ಎಂ.ಇಲಾಖೆ ಅಧಿಕಾರಿ ಎನ್.ಮಂಜುನಾಥ್, ರೆಡ್‍ಕ್ರಾಸ್ ಜಿಲ್ಲಾ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು. ನಂತರ ಮೌನ ಆಚರಿಸಲಾಯಿತು. …
ಮಡಿಕೇರಿ ಡಿ.16 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಡಿ.23 ರಿಂದ 29 ರವರೆಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರು ಈ ಕುರಿತು ಮಾಹಿತಿ ನೀಡಿ, ಗ್ರಾಮಸ್ಥರು ಮತ್ತು ದಾನಿಗಳ ಸಹಕಾರದಿಂದ ಕಟ್ಟೆಮಾಡು ಗ್ರಾಮದ 3.80 ಏಕರೆ ಪ್ರದೇಶದಲ್ಲಿ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇಗುಲವನ್ನು ನಿರ್ಮಿಸಲಾಗಿದೆ. ದೇವಸ್ಥಾನದಲ್ಲಿ ಶಿವಲಿಂಗದೊಂದಿಗೆ ತೀರ್ಥಮಂಟಪ, ಶ್ರೀ ವಿಷ್ಣುವಿನ ಗುಡಿ, ಶ್ರೀಗಣಪತಿ ಗುಡಿ, ನಾಗನಕಟ್ಟೆ, 46 ಅಡಿಯ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆಯೆಂದು ತಿಳಿಸಿದರು. ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ಮತ್ತು ಬ್ರಹ್ಮಶ್ರೀ ಇರುವೈಲು ಕೃಷ್ಣದಾಸ ತಂತ್ರಿಗಳವರ ನೇತೃತ್ವದಲ್ಲಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದೆ. ಡಿ.23 ರಂದು ಸಂಜೆ ಕ್ಷೇತ್ರದ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಡಿ.24…
ಮಡಿಕೇರಿ ಡಿ.16 : ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.18 ರಂದು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ” ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಶ್ರೀ ಬೂತ ಬಲಿ, 12.20 ಗಂಟೆಗೆ ಮಹಾಮಂಗಳಾರತಿ ಜರುಗಲಿದ್ದು, ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ…
ಕಾರ್ತಿಕ ಮಾಸ ಮುಗಿದ ನಂತರ ಬರುವ ಮಾರ್ಗಶಿರ ಮಾಸದ ಶುಕ್ಲಪಕ್ಷದ ಷಷ್ಠಿ ತಿಥಿಯಂದು ಪ್ರತೀ ವರ್ಷ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಿಸಲಾಗುತ್ತದೆ. ಈ ದಿನವನ್ನು ಇಂಗ್ಲೀಷ್ ಕ್ಯಾಲೆಂಡರ್ ದಿನಾಂಕದಂತೆ ನಿರ್ಧರಿಸಲಾಗುವುದಿಲ್ಲ. ಬದಲಿಗೆ ಹಿಂದೂ ಪಂಚಾಂಗದ ಕ್ಯಾಲೆಂಡರ್ ಪ್ರಕಾರವೇ ನಿರ್ಧರಿಸಲಾಗುತ್ತದೆ. ಸುಬ್ರಹ್ಮಣ್ಯ ಷಷ್ಠಿಯನ್ನು ಸ್ಕಂದ ಷಷ್ಠಿ, ಚಂಪಾ ಷಷ್ಠಿಯಂತಲೂ ಕರೆಯುತ್ತಾರೆ. ಸುಬ್ರಹ್ಮಣ್ಯ ಷಷ್ಠಿಯಂದು ಭಗವಾನ್ ಶಿವ ಪಾವರ್ತಿಯರ ಎರಡನೇ ಮಗನಾದ ಶ್ರೀ ಸುಬ್ರಹ್ಮಣ್ಯನನ್ನು ಪೂಜಿಸಲಾಗುತ್ತದೆ. ಸೂರಪದ್ಮನೆಂಬ ಮಹಾನ್ ರಾಕ್ಷಸನು ತನ್ನ ಸಹೋದರರಾದ ಸಿಂಹಮುಖ ಹಾಗೂ ತಾರಕಾಸುರರೊಡಗೂಡಿ ದೇವಾದಿದೇವತೆಗಳು ಹಾಗೂ ಮಾನವರಿಗೆ ನಾನಾ ರೀತಿಯ ಕಿರುಕುಳ ನೀಡುತ್ತಿದ್ದಾಗ ಸುಬ್ರಹ್ಮಣ್ಯ ಸ್ವಾಮಿಯು ತಾರಕಸುರ ಮತ್ತಿತರ ದುಷ್ಟರನ್ನು ಸಂಹಾರ ಮಾಡಿ ಲೋಕಕ್ಕೆ ನೆಮ್ಮದಿಯನ್ನು ಕರುಣಿಸಿದನೆಂದು ಪುರಾಣಗಳಲ್ಲಿ ಉಲ್ಲೇಖವಿದೆ. ಶ್ರಿ ಸುಬ್ರಹ್ಮಣ್ಯ ಷಷ್ಠಿಯಂದು ಬಡವರು, ನಿರ್ಗತಿಕರಿಗೆ ಬಟ್ಟೆ ಹಾಗೂ ಅನ್ನದಾನ ಮಾಡಿದಲ್ಲಿ ಪುಣ್ಯ ಪ್ರಾಪ್ತಿಯಾಗುವುದೆಂಬ ನಂಬಿಕೆಯಿದೆ. ಶ್ರಿ ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಈರುಳ್ಳಿ, ಬೆಳ್ಳುಳ್ಳಿ ಬೆರೆಸದ ಸಾತ್ವಿಕ ಆಹಾರ ಸೇವಿಸುವುದು ಅಥವಾ ಉಪವಾಸ ವೃತದೊಂದಿಗೆ ಪೂಜೆ, ಭಜನೆ, ಧ್ಯಾನ,…
ನಾಪೋಕ್ಲು ಡಿ.16 : ಮಡಿಕೇರಿ ತಾಲೂಕಿನ ಎರಡನೆಯ ಮುಖ್ಯ ಪಟ್ಟಣವಾಗಿರುವ ನಾಪೋಕ್ಲುವಿನಿಂದ ಬೇತು ಮಾರ್ಗವಾಗಿ ಎರಡು ಕಿ.ಮೀ. ಅಂತರನವನು ಕ್ರಮಿಸಿದರೆ ಸಿಗುವ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನ ಒಂದು ಸುಂದರ ಪರಿಸರ. ದೇಗುಲ ಎಂದೊಡನೆ ತಟ್ಟನೆ ನೆನಪಾಗುವ ಗುಡಿಗೋಪುರಗಳು ಇಲ್ಲಿಲ್ಲ. ಎತ್ತರದ ಸಮತಟ್ಟು ಸ್ಥಳದಲ್ಲಿ ಹಚ್ಚ ಹಸಿರ ಪರಿಸರದ ನಡುವೆ 6 ಅಡಿ ಎತ್ತರದ ವೃತ್ತಾಕಾರದ ಕಟ್ಟೆ. ಇದರ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ದೇವರಿಗೆ ಕೊಡೆ ಹಿಡಿದಂತೆ ತೋರುವ ಒಂದು ಹಲಸಿನ ಮರ. ಸುತ್ತಲೂ ಸಹಸ್ರಾರು ಹರಕೆಯ ನಾಯಿಗಳು. ಮಕ್ಕಿ ಶಾಸ್ತಾವು ನಿಸರ್ಗ ದೇವಾಲಯಗಳಲ್ಲಿ ಒಂದು. ವರ್ಷಕ್ಕೆರಡು ಬಾರಿ ಆಕರ್ಷಕ ಹಬ್ಬ ಜರುಗುತ್ತದೆ. ಅದೇ ಅಲ್ಲಿನ ಪ್ರಮುಖ ಆಕರ್ಷಣೆ. ಅಸಂಖ್ಯ ಭಕ್ತರು ಸೇರಿ ಸಂಭ್ರಮಿಸುವ ವಿಭಿನ್ನ ಆಚರಣೆಗಳ ಹಬ್ಬ. ಒಮ್ಮೆ ಮೇ ತಿಂಗಳಲ್ಲಿ ಜರುಗಿದರೆ ಮತ್ತೊಮ್ಮೆ ಡಿಸೆಂಬರ್ನಲ್ಲಿ ನಡೆಯುತ್ತದೆ. ಎತ್ತು ಪೋರಾಟ, ದೀಪಾರಾಧನೆ, ಅಜ್ಜಪ್ಪ ಕೋಲ ಹಾಗೂ ವಿಷ್ಣುಮೂರ್ತಿ ಕೋಲಗಳು, ಮೇಲೆರಿ ಮುಂತಾದ ಹಲವು ಆಚರಣೆಗಳೊಂದಿಗೆ ಶ್ರೀ ಶಾಸ್ತಾವು ಹಬ್ಬ…
ಮಡಿಕೇರಿ ಡಿ.16 : ಸುಸಂಸ್ಕೃತ ಕೊಡವ ಜನಾಂಗಕ್ಕೆ ಜೀವನಾದರ್ಶ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಐನ್‍ಮನೆಯೇ ಆಧಾರ ಸ್ತಂಭವಾಗಿದೆ. ಕೊಡಗಿನ ಐನ್‍ಮನೆಗಳು ಚೇತರಿಸಿಕೊಳ್ಳುವ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟ ಪ್ರಕಟಿಸಿದ 77ನೇ ಪುಸ್ತಕ ಹಾಗೂ ಲೇಖಕಿ ಐಚಂಡ ರಶ್ಮಿ ಮೇದಪ್ಪ ಅವರು ಬರೆದಿರುವ 2ನೇ ಪುಸ್ತಕ “ಸಾಂಸ್ಕೃತಿಕ ಪಿಂಞ ಧಾರ್ಮಿಕ ಹಿನ್ನಲೆಲ್ ಕೊಡವಡ ಐನ್‍ಮನೆ” ಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಐನ್‍ಮನೆಗಳು ಕೊಡವರ ಜೀವನಾದರ್ಶ, ಸಂಸ್ಕೃತಿ, ಸಭ್ಯತೆಗಳ ಪ್ರತೀಕವಾಗಿದ್ದು, ವಂಶದ ಮೂಲ ಕಾರಣ ಪುರುಷರನ್ನು ಇಲ್ಲಿ ನೆಲೆಗೊಳಿಸಿ ಪೂಜಿಸುವುದರಿಂದ ಈ ಮನೆಗೆ ಪೂಜನೀಯ ಸ್ಥಾನಮಾನವಿದೆ. ಕೊಡವ ಜನಾಂಗದ ಸಂಸ್ಕೃತಿಗೆ ಜೀವ ತುಂಬಿರುವ ಐನ್‍ಮನೆಯ ಕುರಿತು ಪುಸ್ತಕ ರಚಿಸಿರುವುದು ಶ್ಲಾಘನೀಯವೆಂದರು. ಐನ್‍ಮನೆಯಲ್ಲಿ ಕಲಾತ್ಮಕತೆ ಇದೆ, ಕೊಡವ ಸಂಸ್ಕೃತಿಯ ಜೀವವಿದೆ, ಕೊಡವ ಜನಾಂಗದ ಜೀವಮಾನ ಅಡಗಿದೆ. ಈ ಪೂಜನೀಯ ಮತ್ತು ಭಾವನೀಯ ಐನ್‍ಮನೆಯನ್ನು ಉಳಿಸಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ಎಲ್ಲರ ಮೇಲಿದೆ.…






