ಸುಂಟಿಕೊಪ್ಪ,ಡಿ.16: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್-ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ ದಳಗಳ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು. ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಗೈಡ್ಸ್‍ನ ಸಂಘಟಕರಾದ ದಮಯಂತಿ ಧ್ವಜಾರೋಹಣ ನೇರವೇರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್‍ನ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಅದೇ ರೀತಿಯಲ್ಲಿ ಸಮಾಜದಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಸೇವೆಯನ್ನು ಸಲ್ಲಿಸುವ ಮೂಲಕ ಸೇವಾ ಮನೋಭಾವನೆಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಕಾವೇರಿ ನಿಸರ್ಗಧಾಮದ ವನರಕ್ಷಕರು ಅರಣ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡಿದರು. ನಂತರ 4 ದಳಗಳ ಸದಸ್ಯರು ವಿವಿಧ ಚಟುವಟಿಕೆಗಳಾದ ಪರಿಸರ ವೀಕ್ಷಣೆ, ಸಾಹಸ ಕ್ರೀಡೆ ಮೂಲಕ ಮನರಂಜಿಸಿ ಉತ್ತಮ ಮೌಲ್ಯಗಳ ವಿಚಾರದ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಯಿನಿ ವೀರಾ…
ಲೇಖಕ: admin
ಮಡಿಕೇರಿ ಡಿ.16 : ಧನ್ಯಶ್ರೀ ನೃತ್ಯ ಕಲಾನಿಕೇತನ ವತಿಯಿಂದ ಭರತನಾಟ್ಯ ಕಲಾವಿದೆ ಪ್ರೇಕ್ಷ ಭಟ್ ಅವರ “ಭರತನಾಟ್ಯ ರಂಗಪ್ರವೇಶ” ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಶ್ರೀಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಹಾಸನದ “ನಾಟ್ಯಶ್ರೀ” ಭಾರತೀಯ ಸಂಗೀತ ನೃತ್ಯ ಕಲಾ ಶಾಲೆಯ ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ ಹಾಗೂ ಪೊನ್ನಂಪೇಟೆ ನಿನಾದ ವಿದ್ಯಾಸಂಸ್ಥೆಯ ಚೇಂದಿರ ನಿರ್ಮಲ ಬೋಪಣ್ಣ ಅವರು ಭರತನಾಟ್ಯ ಕಲೆ ಮತ್ತು ಭಾರತೀಯ ಸಂಸ್ಕೃತಿಯ ಕುರಿತು ಮಾತನಾಡಿದರು. ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ, ಚೇಂದಿರ ನಿರ್ಮಲ ಬೋಪಣ್ಣ, ಕೊಡಗಿನ ಹಿರಿಯ ಕಲಾವಿದರಾದ ಅಂಬಳೆ ಸತ್ಯಪ್ರಸಾದ್ ದಂಪತಿ, ಪ್ರೇಕ್ಷ ಭಟ್ ಅವರ ಗುರುಗಳಾದ ಬೆಂಗಳೂರಿನ ಧನ್ಯಶ್ರೀ, ಸೌತಡ್ಕ ಮಹಾ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ವೇದ ಪಂಡಿತರು ಆದ ಗೋಪಾಲಕೃಷ್ಣ ಗೋಕುಲ ಅಡಿಗ ದಂಪತಿ, ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ಭಾಗವಹಿಸಿದ ಕಲಾವಿದರು, ರಂಗಸಜ್ಜಿಕೆ ಹಾಗೂ ಅಲಂಕಾರ ನಿರ್ವಹಿಸಿದ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಮಾರಿ ಪ್ರೇಕ್ಷ ಭಟ್ ಸತತ 2…
ಮಡಿಕೇರಿ ಡಿ.16 : ವನ್ಯಜೀವಿಗಳ ಸ್ವಚ್ಛಂದ ಬದುಕಿಗೆ ತೊಡಕಾಗಬಲ್ಲ ಅರಣ್ಯ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬಾರದೆಂದು ರೈತ ಸಂಘದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ತಿತಿಮತಿಯ ಅರಣ್ಯ ಇಲಾಖೆಯ ಅತಿಥಿಗೃಹದಲ್ಲಿ ನಾಗರಹೊಳೆ ವನ್ಯಜೀವಿ ವಿಭಾಗ, ಕೊಡಗು ಮತ್ತು ಹುಣಸೂರು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ರೈತ ಸಂಘದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಮತ್ತಿಗೋಡು ಸಾಕಾನೆ ಶಿಬಿರದ ಪ್ರವಾಸೋದ್ಯಮ ಚಟುವಟಿಕೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು. ತಿತಿಮತಿ- ಹುಣಸೂರು ಹೆದ್ದಾರಿಯಲ್ಲಿ ವಾಹನದಟ್ಟಣೆ ಹೆಚ್ಚಾಗಿ ತೊಂದರೆಯಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ನೀಡಬಾರದು. ಅರಣ್ಯ ಪ್ರವಾಸೋದ್ಯಮದಿಂದ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾಡಾನೆ, ಹುಲಿ ಮತ್ತು ಚಿರತೆಗಳಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ದಾಳಿ ಹಾಗೂ ಕೃಷಿಕರು ಅನುಭವಿಸುತ್ತಿರುವ ನಷ್ಟದ ಕುರಿತು ವಿವರಿಸಿದ ರೈತ ಸಂಘದ ಪದಾಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಒತ್ತಾಯಿಸಿದರು. ಹಿರಿಯ ಅರಣ್ಯ ಅಧಿಕಾರಿಗಳು ಹಾಗೂ ರೈತ ಸಂಘದ…
ಮಡಿಕೇರಿ ಡಿ.16 : ಕಳೆದ ಒಂದೂವರೆ ತಿಂಗಳಿನಿಂದ ಆಹಾರಕ್ಕಾಗಿ ಪರದಾಡುತ್ತ ಹಾರಂಗಿ ಹಿನ್ನೀರಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ದೃಷ್ಟಿ ದೋಷದ ಹೆಣ್ಣು ಕಾಡಾನೆ ಮೃತಪಟ್ಟಿದೆ. ಸೋಮವಾರಪೇಟೆ ಸಮೀಪದ ಸಜ್ಜಳ್ಳಿ ಗ್ರಾಮದ ಹಾರಂಗಿ ಹಿನ್ನೀರು ಪ್ರದೇಶದಲ್ಲಿ ನಿತ್ರಾಣಗೊಂಡು ಬಿದ್ದಿದ್ದ 35 ವರ್ಷದ ಹೆಣ್ಣು ಕಾಡಾನೆಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚೇತರಿಸಿಕೊಳ್ಳದ ಕಾಡಾನೆ ಸಾವನ್ನಪ್ಪಿದೆ. ಆಹಾರವಿಲ್ಲದೆ ಅಸ್ವಸ್ಥಗೊಂಡಿದ್ದ ಹೆಣ್ಣಾನೆಗೆ ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರು. ಒಂದು ಕಣ್ಣು ಸಂಪೂರ್ಣವಾಗಿ ಕುರುಡಾಗಿತ್ತು, ಮತ್ತೊಂದು ಕಣ್ಣು ಮಂದವಾಗಿತ್ತು. ಈ ಕಾರಣದಿಂದ ತನಗೆ ಬೇಕಾದ ಆಹಾರವನ್ನು ಪಡೆದುಕೊಳ್ಳಲು ಸಾಧ್ಯವಾಗದ ಕಾಡಾನೆ ನಿತ್ರಾಣಗೊಂಡಿತ್ತು. ಕುಡಿಯುವ ನೀರಿಗಾಗಿ ಹಾರಂಗಿ ಹಿನ್ನೀರಿಗೆ ಬಂದು ಕುಸಿದು ಬಿದ್ದಿತ್ತು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಡಿ.16 : ದಕ್ಷಿಣ ವಲಯದ ಡಿಐಜಿ ಡಾ. ಎಂ.ಬಿ. ಬೋರಲಿಂಗಯ್ಯ ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಮುಂಜಾನೆ ಕವಾಯತಿನಲ್ಲಿ ಭಾಗವಹಿಸಿ, ಬಳಿಕ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿ ಗಳೊಂದಿಗೆ ಸಭೆಯನ್ನು ನಡೆಸಿ ಸೂಕ್ತ ಸೂಚನೆಗಳನ್ನು ನೀಡಿದರು. ನಂತರ ಜಿಲ್ಲಾ ಪೊಲೀಸ್ ಕಚೇರಿಯ ಪರಿವೀಕ್ಷಣೆ ಯನ್ನು ನಡೆಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಸುಂಟಿಕೊಪ್ಪ,ಡಿ.16 : ಅಂತಿಮ ವರ್ಷದ ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ವಿಭಾಗದ ಪರೀಕ್ಷೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಚಿನ್ನದ ಪದಕ ಪಡದುಕೊಂಡ ಸುಂಟಿಕೊಪ್ಪದ ಶೈನಿ ಡಿಸೋಜ ಅವರನ್ನು ಕೆದಕಲ್ ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು. ಕೆದಕಲ್ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಗ್ರಾಮಸಭೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಫಲ ತಾಂಬೂಲ ನೀಡಿ ಸನ್ಮಾನಿಸಿ, ಗೌರವಿಸಿದರು. ಶೈನಿ ಡಿಸೋಜ ಅವರ ಸಾಧನೆಯ ಬಗ್ಗೆ ಕೆದಕಲ್ ಗ್ರಾ.ಪಂ.ಅಧ್ಯಕ್ಷ ಆನಂದ, ಉಪಾಧ್ಯಕ್ಷೆ ಪಾರ್ವತಿ ಸೋಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಾತನಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ,ಡಿ.16 : ಕ್ರಿಸ್‍ಮಸ್ ಹಬ್ಬದ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಧರ್ಮಗುರು, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರಿದರದು. ಕ್ರೈಸ್ತ ಭಾಂದವರು ಡಿಸೆಂಬರ್ ಮಾಸದಲ್ಲಿ ಮನೆಗಳಿಗೆ ಸುಣ್ಣ ಬಣ್ಣ ಬಳಿದು ವಿವಿಧ ಬಗೆಯ ನಕ್ಷತ್ರಗಳನ್ನು ಮನೆಯ ಮೇಲ್ಚಾವಣಿಗಳ ಮೇಲೆ ಅಳವಡಿಸುವುದು. ಮನೆಗಳಲ್ಲಿ ಕ್ರಿಸ್ತನ ಜನನದ ಸ್ಥಳವಾದ ಗೋದಾಲಿ (ದನದಕೊಟ್ಟಿಗೆ) ನಿರ್ಮಾಣವಾದರೆ, ಮಹಿಳೆಯರು ವಿವಿಧ ಬಗೆ ಬಗೆಯ ತಿಂಡಿ ಖಾದ್ಯಗಳನ್ನು ತಯಾರಿಸುವ ಸಡಗರ ಸಂಭ್ರಮಕ್ಕೆ ಅಣಿಯಾಗುತ್ತಿರುವಂತೆಯೇ ಸಾಂತಕ್ಲಾಸ್ ಅವರನ್ನು ಒಳಗೊಂಡ ಕ್ಯಾರೋಲ್ಸ್ ತಂಡವು ಆಗಮಿಸಿ ಮನೆಗಳಿಗೆ ಆರ್ಶಿವಚನ ನೀಡಿ ಮನೆಯ ಮಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದೇ ಈ ಹಬ್ಬದ ವಿಶೇಷತೆಯಾಗಿದೆ. ವಿಶ್ವದಾದ್ಯಂತ 2023 ರ ಕ್ರಿಸ್ತರ ಜನನದ ಹಬ್ಬವನ್ನು ಸಡಗರ ಸಂಭ್ರಮದಲ್ಲಿ ಆಚರಿಸಲು ಅಣಿಗೊಳ್ಳುತ್ತಿದೆ. ಅದೇ ರೀತಿಯ ಸುಂಟಿಕೊಪ್ಪ ದೇವಾಲಯದಲ್ಲಿಯೂ ಕ್ರೈಸ್ತ ಧರ್ಮಗರುಗಳು, ಕ್ರೈಸ್ತ ದೇವಾಲಯ…
ಗೋಣಿಕೊಪ್ಪ ಡಿ.15 : ಉತ್ತಮ ಪುಸ್ತಕಗಳನ್ನು ಓದುವುದರಿಂದ ಖಿನ್ನತೆಯಿಂದ ಹೊರಬರಲು ಸಾಧ್ಯ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ತಿಳಿಸಿದರು. ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಕಗಳಿಗಾಗಿ ಶಿಕ್ಷಣದ ಉದ್ದೇಶವನ್ನು ಈಡೇರಿಸಿಕೊಳ್ಳದೆ, ಉತ್ತಮ ಜೀವನ ಸಾಗಿಸಲು ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಬೇಕು ಎಂದು ಹೇಳಿದರು. ವಿವೇಕಾನಂದ, ಗಾಂಧಿ, ಅಂಬೇಡ್ಕರ್ ಅಂತ ಜೀವನ ಮಾದರಿ ಪುಸ್ತಕಗಳ ಓದಿನಿಂದ ಪ್ರೇರಣೆ ಹೊಂದುವ ಮೂಲಕ ಬದುಕನ್ನ ಉತ್ಕೃಷ್ಟಗೊಳಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ಶಿಕ್ಷಣಕಷ್ಟೇ ಸೀಮಿತವಾಗದೆ ಸಮಾಜದ ಹೊರಗಿನ ನಡೆಯ ಬಗ್ಗೆ ತಿಳಿದುಕೊಳ್ಳುತ್ತಾ ಬದುಕನ್ನು ಅನುಭವಿಸಬೇಕು ಎಂದು ಹೇಳಿದರು. ಒಬ್ಬ ವ್ಯಕ್ತಿಯ ಬದುಕಿನಲ್ಲಿ ಬದಲಾವಣೆಯನ್ನು ಕಂಡುಕೊಳ್ಳಲು ಪುಸ್ತಕಗಳ ಓದಿನಿಂದ ಸಾಧ್ಯವಾಗಬಲ್ಲದು. ಉತ್ತಮ ಪುಸ್ತಕಗಳಿಗಿಂತ ಬೇರೆ ಸ್ನೇಹಿತರಿರಲು ಸಾಧ್ಯವಿಲ್ಲ. ಒಮ್ಮೆ ಓದಿನ ರುಚಿ ಹೆಚ್ಚಿಸಿಕೊಂಡಾಗ ಖಿನ್ನತೆಗೆ ಒಳಗಾಗುವುದನ್ನು ತಪ್ಪಿಸುವುದರ ಜತೆಗೆ ಇದರ ಪರಿಣಾಮದಿಂದ ಮಾದಕ ವ್ಯಸನಿಗಳಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಸಲಹೆ ನೀಡಿದರು. ಗೋಣಿಕೊಪ್ಪ ಪೊಲೀಸ್ ಠಾಣಾ…
ಮಡಿಕೇರಿ ಡಿ.15 : ಮಡಿಕೇರಿ ಎಂಎಸ್‍ಎಂಇ (ಮಿನಿಸ್ಟ್ರಿ ಆಫ್ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ ಪ್ರೈಸಸ್) ವತಿಯಿಂದ 6 ವಾರಗಳ ಉಚಿತ “ಹೊಲಿಗೆ” ತರಬೇತಿ ಕಾರ್ಯಕ್ರಮವು “ಶ್ರೀ ಸದ್ಗುರು ವಿದ್ಯಾಸಂಸ್ಥೆ”ಯಲ್ಲಿ ನಡೆಯಿತು. ಮಂಗಳೂರು ಎಂಎಸ್‍ಎಂಇನ ಸಹಾಯಕ ನಿರ್ದೇಶಕರಾದ ಸುಮನ್ ಎಸ್.ರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಹರೀಶ್, ಗಂಗಾದರ್ ನಾಯಕ್, ಲೀಡ್ ಬ್ಯಾಂಕ್ ಮ್ಯಾನೆಜರ್ ಹಾಜರಿದ್ದರು. “ಸದ್ಗುರು ವಿದ್ಯಾಸಂಸ್ಥೆ” ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಎಸ್.ಎಂ.ಇ ಯ ಅಸಿಸ್ಟೆಂಟ್ ಡೈರೆಕ್ಟರ್ ರವರಾದ ಸುಮನ್ ರಾಜ್ ಹಾಗೂ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಿ.ಎಸ್.ಡಿ.ಓ ಉಮಾ ಪಾಲ್ಗೊಂಡು ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಮಡಿಕೇರಿ ಡಿ.15 : ‘ಯಾವುದೇ ಭಾಷೆಯನ್ನು ಭೌದ್ಧಿಕವಾಗಿ ಸಂಪಾದಿಸಬೇಕು ಮತ್ತು ಬೆಳೆಸಬೇಕು, ಆ ಮೂಲಕ ಭಾಷೆಯನ್ನು ಉಳಿಸಲು ಸಾಧ್ಯ. ಅರೆಭಾಷೆಯ ಬಗ್ಗೆ ಹೆಚ್ಚು ಹೆಚ್ಚು ಅಧ್ಯಯನ ನಡೆಯಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಗೌಡ ಸಮಾಜ-ಸಂಘಟನೆಗಳ ಸಹಯೋಗದಲ್ಲಿ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಅರೆಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಅರೆಭಾಷೆ ಮಾತಾಡುವುದರ ಜೊತೆಗೆ, ಓದುವ ಮತ್ತು ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಲೇಖನ, ಕಥೆ, ಕವನ, ಬರೆಯುವ ಮೂಲಕ ಅರೆಭಾಷೆ ಬೆಳವಣಿಗೆಗೆ ಮುಂದಾಗಬೇಕಿದೆ ಎಂದು ಸಲಹೆ ನೀಡಿದರು. ಅರೆಭಾಷೆಯಲ್ಲಿ ಪದಕೋಶ, ವಿಶ್ವಕೋಶ, ಪಾರಂಪರಿಕ ವಸ್ತುಕೋಶ ಹೀಗೆ ಹಲವು ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿದೆ. ಅವುಗಳನ್ನು ಅಧ್ಯಯನ…






