ಕುಶಾಲನಗರ ಡಿ.15 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯ ಮಟ್ಟದ ಡಾ. ಎಚ್.ನರಸಿಂಹಯ್ಯ ಪ್ರಶಸ್ತಿಗೆ ಕುಶಾಲನಗರದ ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಭಾಜನರಾಗಿದ್ದಾರೆ. 2023 ನೇ ಸಾಲಿನ ಪ್ರಶಸ್ತಿಗೆ ರಾಜ್ಯದಲ್ಲಿ 37 ಸಾಧಕರು ಆಯ್ಕೆಯಾಗಿದ್ದು, ಕೊಡಗು ಜಿಲ್ಲೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಶಂಭುಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.29 ಮತ್ತು 30 ರಂದು ರಾಯಚೂರಿನಲ್ಲಿ ನಡೆಯಲಿರುವ ಪರಿಷತ್ತಿನ ಮೂರನೇ ರಾಜ್ಯಮಟ್ಟದ ವಾರ್ಷಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.
ಲೇಖಕ: admin
ವಿರಾಜಪೇಟೆ ಡಿ.15 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ವಿರಾಜಪೇಟೆ ತಾಲೂಕು ವಿರಾಜಪೇಟೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಕೆದಮುಳ್ಳೂರು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ತೋಮರ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ವಿರಾಜಪೇಟೆ ಸ.ಪ್ರ,ದ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಕೆ.ಬಸವರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ಸಂಸ್ಕೃತಿ ಧಾರ್ಮಿಕ ಆಚರಣೆ ಮಹತ್ವ, ಧರ್ಮ ಕಾರ್ಯಗಳಿಂದ ಆಗುವ ಒಳಿತುಗಳ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೆ.ಧ.ಗ್ರಾ. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು, ವಿಮಾ ಕಾರ್ಯಕ್ರಮ, ವಿಪತ್ತು ನಿರ್ವಹಣೆ ಕಾರ್ಯಕ್ರಮ, ಮಾಶಾಸನ, ನಮ್ಮೂರು ನಮ್ಮ ಕೆರೆ, ಜನ ಮಂಗಲ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಪೂಜಾ ಸಮಿತಿ ಅಧ್ಯಕ್ಷ ಕೆ.ಎಸ್.ಅರುಣ ಅಧ್ಯಕ್ಷತೆಯಲ್ಲಿ…
ಮಡಿಕೇರಿ ಡಿ.15 : ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿರುವ ಕೊಡಗಿನ ಕರ್ನಲ್ ಮಂಡೆಪಂಡ ಸ್ಮಿತಾ ಅಯ್ಯಪ್ಪ (ತವರುಮನೆ ಮೇವಡ) ಅವರು ಕಮಾಂಡಿಂಗ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದಾರೆ. ಜಮ್ಮು ಕಾಶ್ಮೀರದ ರಜೋರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು 356 ಎ.ಸಿ. ಬೆಟಾಲಿಯನ್‌ನ ಕಮಾಂಡಿಂಗ್ ಅಧಿಕಾರಿಯಾಗಿ ಡಿ.12 ರಂದು ನಿಯೋಜನೆ ಗೊಂಡಿದ್ದಾರೆ. ಇವರು ಕರ್ನಲ್ ಅಯ್ಯಪ್ಪ ಅವರ ಪತ್ನಿ.
ನಾಪೋಕ್ಲು ಡಿ.15 : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಹೊಟೇಲ್, ಬೇಕರಿ, ಅಂಗಡಿ ,ಕ್ಯಾಂಟೀನ್ ಗಳ ಒಣ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಕೊಡಬೇಕು ತಪ್ಪಿದ್ದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಂಚಾಯಿತಿಯಿಂದ ಹಲವಾರು ಬಾರಿ ಈ ಹಿಂದೆ ನೋಟಿಸಿ ನೀಡಲಾಗಿದ್ದರು ಕೂಡ ಪದೇ ಪದೇ ತ್ಯಾಜಗಳನ್ನು ರಸ್ತೆ ಬದಿಗೆ ಹಾಗೂ ಪಂಚಾಯತಿಯ ಮುಂಭಾಗದಲ್ಲಿ ಸುರಿಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಒಣ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಪಂಚಾಯಿತಿಯ ಕಸದ ವಾಹನಕ್ಕೆ ಇಲೇವಾರಿ ಮಾಡುವಂತೆ ತಿಳಿಸಿದರು. ಹಸಿ ಕಸ ಮತ್ತು ಒಣ ಕಸ ವಿಂಗಡನೆ ಮಾಡದಿದ್ದಲ್ಲಿ ಪಂಚಾಯಿತಿಯಿಂದ ಕಸವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ಅವರು, ಬಟ್ಟೆ ಬ್ಯಾಗ್ಗಳನ್ನು ಉಪಯೋಗಿಸುವುದರ ಮೂಲಕ ಪ್ಲಾಸ್ಟಿಕ್ ನಿಷೇಧಕ್ಕೆ ಪಂಚಾಯಿತಿಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದ ಅವರು, ಪ್ಲಾಸ್ಟಿಕ್ ಬಳಕ್ಕೆ ಕಂಡು ಬಂದರೆ ಪಂಚಾಯಿತಿಯಿಂದ…
ಸೋಮವಾರಪೇಟೆ ಡಿ.15 : ಅಂಗಡಿ ಮಳಿಗೆ ಹರಾಜು ವಿಚಾರದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂಬ ವಿಚಾರ ಇಂದು ಪ್ರತಿಭಟನೆಯ ಸ್ವರೂಪ ಪಡೆದುಕೊಂಡಿತು. ಅಧಿಕಾರಿಗಳ ವಿರುದ್ಧ ಘೋಷಣೆ, ಮಾತಿನ ಚಕಮಕಿ ನಡೆಯಿತು. ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಭಾಗದ 60 ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಹರಾಜಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ ಸದಸ್ಯರು ಹರಾಜು ಪ್ರಕ್ರಿಯೆ ಮುಂದೂಡಿ ಹಾಗೂ ಸಭೆ ಕರೆಯಿರಿ ಎಂದು ಮನವಿ ಮಾಡಿದರೂ ಸ್ಪಂದಿಸದ ಆಡಳಿತಾಧಿಕಾರಿ ಕ್ರಮ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಳಗ್ಗಿನಿಂದಲೇ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಡಳಿತಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. 12 ಗಂಟೆಗೆ ಆಗಮಿಸಿದ ಆಡಳಿತಾಧಿಕಾರಿಯನ್ನುದ್ದೇಶಿಸಿ ಮಾತನಾಡಿದ ಪ್ರತಿಭಟನಾಕಾರರು ಹಿಂದಿನ ಸಭೆಯಲ್ಲಿ ನಮ್ಮ ಅಭಿಪ್ರಾಯ ತಪ್ಪಾಗಿ ನಿರ್ಣಯ ಮಾಡಿದ್ದೀರಿ, ನಂತರ ಎರಡು ಸಭೆಗಳನ್ನು ಮುಂದೂಡಿದ್ದೀರಿ, ನಮ್ಮನ್ನು ಕಡೆಗಣಿಸಿ ಹರಾಜು ಕರೆದಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹರಾಜು…
ಮಡಿಕೇರಿ ಡಿ.15 : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಡಿ.18 ರಂದು “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ವಿಶೇಷ ಪೂಜೆ ನಡೆಯಲಿದೆ. ಬೆಳಗ್ಗೆ 8.30 ರಿಂದ 11 ಗಂಟೆಯ ತನಕ ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಕುಶಾಲನಗರ, ಡಿ.14 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ರಾಷ್ಟ್ರೀಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ಈ ತಿಂಗಳ 23 ರಿಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು ಕೊಡಗು ಜಿಲ್ಲಾ ಘಟಕ ಅಧ್ಯಕ್ಷರಾದ ಹೆಚ್ ವಿ ಶಿವಪ್ಪ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ದಾವಣಗೆರೆ ನಗರದಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಈ ಸಂಬಂಧ ದಾವಣಗೆರೆ ಜಿಲ್ಲಾ ಘಟಕ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ. ಈ ಮಹಾ ಅಧಿವೇಶನಕ್ಕೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರನ್ನು ಆಹ್ವಾನಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶರಣ ಶರಣೆಯರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯಿಂದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಶರಣ ಶರಣೆಯರು ಈ ತಿಂಗಳ 17ರ ಒಳಗೆ ಮಹಾಸಭಾಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ ಅವರನ್ನು ಸಂಪರ್ಕಿಸುವಂತೆ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಗುಡ್ಡೆ ಹೊಸೂರು ಘಟಕದ…
ಮಡಿಕೇರಿ ಡಿ.14 : ಖ್ಯಾತ ಸಾಹಿತಿ ದಿವಂಗತ ಮುಲ್ಲೇಂಗಡ ಬೇಬಿ ಚೋಂದಮ್ಮ ಅವರ ಸ್ಮರಣಾರ್ಥ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ವತಿಯಿಂದ ಅಮ್ಮತ್ತಿಯಲ್ಲಿ ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತ್ತಾಟ್ ನಮ್ಮೆ ಸಂಭ್ರಮದಿಂದ ನಡೆಯಿತು. ಅಮ್ಮತ್ತಿ ಕೊಡವ ಸಮಾಜದ ಸಹಕಾರದೊಂದಿಗೆ ಅಮ್ಮತ್ತಿ ಕೊಡವ ಸಮಾಜದ ಆವರಣದಲ್ಲಿ ನಡೆದ ಕೊಡವ ವಾಲಗತ್ತಾಟ್ ನಮ್ಮೆಗೆ ಜಿಲ್ಲೆಯ ಖ್ಯಾತ ವಾಲಗ ತಂಡ ಎಂದು ಖ್ಯಾತಿ ಪಡೆದಿರುವ ಅಮ್ಮತ್ತಿಯ ನರಸ ಮತ್ತು ತಂಡ ಕೊಡವ ವಾಲಗ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮನ್ನು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೇಯಂಡ ವೀಣಾ ಅಚ್ಚಯ್ಯ ಉದ್ಘಾಟಿಸಿ, ಕೊಡವ ಆಚಾರ, ವಿಚಾರ, ಸಂಸ್ಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ, ಯುವ ಪೀಳಿಗೆಗೆ ಉಳಿಸಿ, ಬೆಳೆಸುವಂತಾಗಬೇಕು ಎಂದು ಕರೆ ನೀಡಿದರು. ತೂಕ್ ಬೊಳಕ್ ಕಲೆ ಕ್ರೀಡೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್…
ಮಡಿಕೇರಿ ಡಿ.14 : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದು,್ದ ಅರ್ಜಿ ಸಲ್ಲಿಸಲು 2024 ರ ಜ.10 ಕೊನೆಯ ದಿನವಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂ.ಸಂ.1902 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ…
ಮಡಿಕೇರಿ ಡಿ.14 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 22 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://.shp.karnataka.gov.in ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ರೂ.1.00 ಲಕ್ಷ. ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://.bcwd.karnataka.gov.in ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಈ ಇ-ಮೇಲ್…






