ಲೇಖಕ: admin

ಸೋಮವಾರಪೇಟೆ ಡಿ.14 :   ವೀರಶೈವ ಸಮಾಜ ಹಾಗೂ ಬಸವೇಶ್ವರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ   ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂಗಳ ವಾದ್ಯಗಳೊಂದಿಗೆ ನಂದಿದ್ವಜ ಮೆರವಣಿಗೆಯ ನಂತರ, ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.   

Read More

ನಾಪೋಕ್ಲು ಡಿ.14 : ಸ್ಕೌಟ್ಸ್ ಮತ್ತು ಗೈಡ್ಸ್ ಸನಿವಾಸ-2023 ಶಿಬಿರವು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳು ಬಾಲ್ಯದಲ್ಲಿಯೇ ಶಿಸ್ತು ಮತ್ತು ಮೌಲ್ಯಗಳನ್ನು ರೂಪಿಸಿಕೊಳ್ಳಲು ಶಿಬಿರ ಸಹಕಾರಿಯಾಗಿದೆ. ಬೌದ್ಧಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ, ಪ್ರತಿ ಮಗುವು ಉತ್ತಮ ನಾಗರೀಕನಾಗಲು ಸಾಧ್ಯ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಧನಂಜಯ, ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಜೀವನ ಕೌಶಲ್ಯಗಳನ್ನು ತಿಳಿದುಕೊಂಡು ಬಾಳಿನಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ಸಿಗುವಂತಾಗುತ್ತದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಶುಭ ಹಾರೈಸಿ, ದ್ವಿತೀಯ ಸೋಪಾನ ಮತ್ತು ತೃತೀಯ ಸೋಪಾನ ಪರೀಕ್ಷೆಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸ್ಕೌಟ್ ಎ.ಡಿ.ಸಿ.ಹಾರಿಸ್, ಸ್ಕೌಟ್ ಮತ್ತು ಗೈಡ್ ನಲ್ಲಿ ತಮಗಾದ ಅನುಭವಗಳನ್ನು…

Read More

ಮಡಿಕೇರಿ ಡಿ.14 : ಪ್ರಜಾಪ್ರಭುತ್ವದ ದೇಗುಲದಂತ್ತಿರುವ ಸಂಸತ್ ಭವನಕ್ಕೆ ನುಗ್ಗಿದ ಇಬ್ಬರು ವ್ಯಕ್ತಿಗಳು ಬಣ್ಣದ ಹೊಗೆಯ ಸ್ಪ್ರೇ ಬಳಸಿ ಆತಂಕ ಸೃಷ್ಟಿಸಿರುವುದು ಖಂಡನೀಯವೆಂದು ತಿಳಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಭದ್ರತಾ ಲೋಪಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸತ್ ಭವನಕ್ಕೆ ಸೂಕ್ತ ಭದ್ರತೆ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸುಮಾರು 22 ವರ್ಷಗಳ ಹಿಂದೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭಯೋತ್ಪಾದಕರ ದಾಳಿ ನಡೆದಿತ್ತು. ಇದೀಗ ಮತ್ತೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ವ್ಯಕ್ತಿಗಳು ಸಂಸತ್ ಭವನದೊಳಗೆ ನುಗ್ಗಿದ್ದಾರೆ. ಇದು ಕೇಂದ್ರ ಸರ್ಕಾರದ ಬೇಜವಾಬ್ದಾರಿತನಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಸಂಸತ್ ಭವನಕ್ಕೇ ಭದ್ರತೆ ನೀಡಲಾಗದವರು ದೇಶದ ಜನತೆಗೆ ಭದ್ರತೆ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿರುವ ಭೋಜಣ್ಣ ಸೋಮಯ್ಯ, ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಮೂಲಕ ವ್ಯಕ್ತಿಗಳು ಪಾಸ್ ಪಡೆದಿರುವ ಪ್ರಕರಣ ಇಡೀ…

Read More

ನಾಪೋಕ್ಲು ಡಿ.14 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಗಡಿ ಪ್ರಾಧಿಕಾರ ಮತ್ತು ಕರಿಕೆ ಗ್ರಾ.ಪಂ ಸಂಯುಕ್ತ ಆಶ್ರಯದಲ್ಲಿ ಗಡಿ ಉತ್ಸವ ನಡೆಸುವ ಬಗ್ಗೆ ಕರಿಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ನಾಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಉತ್ಸವವನ್ನು ಜನವರಿ 8 ರಂದು ಎಳ್ಳುಕೊಚ್ಚಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಗಡಿ ಭಾಗವಾದ ಕರಿಕೆಯಲ್ಲಿ ಕನ್ನಡ ಧ್ವಜಾರೋಹಣ, ನಾಡು ನುಡಿಯ ಜಾನಪದ ಕಲಾತಂಡಗಳ ಮೆರವಣಿಗೆ ಕಾರ್ಯಕ್ರಮದೊಂದಿಗೆ ಗಡಿಭಾಗದ ಸಮಸ್ಯೆಗಳು ಅಹವಾಲುಗಳ ಬಗ್ಗೆ, ವಿಚಾರಗೋಷ್ಠಿ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡ ಒಂದು ದಿನದ ಗಡಿ ಉತ್ಸವವನ್ನುನಡೆಸಲಾಗುವುದು ಎಂದು ತಿಳಿಸಿದರು. ಗಡಿ ಉತ್ಸವಕ್ಕೆ ಶಾಸಕರುಗಳನ್ನು, ಸಂಬಂಧಪಟ್ಟ ಅಧಿಕಾರಿಗಳನ್ನು ಬರಮಾಡಿಕೊಂಡು ಅವರ ಸಮ್ಮುಖದಲ್ಲಿ ವಿಚಾರಗೋಷ್ಠಿ ನಡೆಸಿ, ಗಡಿ ಭಾಗದ ಸಮಸ್ಯೆ ಗಳಿಗೆ ಸಂಬಂಧ ಪಟ್ಟ ನಿರ್ಣಯ ಮಂಡನೆ ಮಾಡಿ…

Read More

ಮಡಿಕೇರಿ ಡಿ.13 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಕೊಡಗು ಜಿಲ್ಲೆಯ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಇಲ್ಲಿಯವರೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರವನ್ನು ನಿಭಾಯಿಸಬಲ್ಲ ಸಮರ್ಥ ಅಭ್ಯರ್ಥಿಗಳು ಕೊಡಗು ಜಿಲ್ಲೆಯಲ್ಲೂ ಇದ್ದಾರೆ. ರಾಜಕೀಯ ಪಕ್ಷಗಳು ಕೇವಲ ಮತಬ್ಯಾಂಕ್ ಗಾಗಿ ಕೊಡಗನ್ನು ಅವಲಂಬಿಸದೆ ಕೊಡಗಿನವರಿಗೂ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಲೋಕಸಭಾ ಕ್ಷೇತ್ರದ ಹಂಚಿಕೆಯಲ್ಲಿ ಕೊಡಗು ಅತಂತ್ರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿಂದೆ ಮಂಗಳೂರು ಕ್ಷೇತ್ರದೊಂದಿಗೆ ಸಹಿಸಿಕೊಂಡ ಕೊಡಗು, ಇದೀಗ ಮೈಸೂರಿನೊಂದಿಗೆ ಹೊಂದಿಕೊಂಡಿದೆ. ಆಮದು ಅಭ್ಯರ್ಥಿಗಳಿಂದ ಕೊಡಗು ಜಿಲ್ಲೆಗೆ ನ್ಯಾಯ ದೊರೆಯುವ ವಿಶ್ವಾಸ ಇಲ್ಲಿನ ಜನರಿಗಿಲ್ಲ. ಜಿಲ್ಲೆಯನ್ನು ಜ್ವಲಂತ ಸಮಸ್ಯೆಗಳು ಕಾಡಿದಾಗ ಇಲ್ಲಿಯವರೆಗಿನ ಸಂಸದರುಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಹೊರಗಿನ ಅಭ್ಯರ್ಥಿಗಳಿಗೆ ಇಚ್ಛಾಶಕ್ತಿಯ ಕೊರತೆ ಇರುತ್ತದೆ, ಆದರೆ ಸ್ಥಳೀಯರಾದರೆ ಕೊಡಗಿನ ಬಗ್ಗೆ ಕಾಳಜಿ ಇರುತ್ತದೆ ಮತ್ತು…

Read More

ಮಡಿಕೇರಿ ಡಿ.13 : ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ” ಎಂಬ ದ್ಯೇಯ ವಾಕ್ಯದಡಿಯಲ್ಲಿ ವಿರಾಜಪೇಟೆ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಚೌಕಿಯಲ್ಲಿ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಈ ಬೇಟಿ ಬಚಾವ್ ಬೇಟಿ ಪಡಾವ್ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭ ಪಶು ವೈದ್ಯಾಧಿಕಾರಿ ಡಾ.ರಾಕೇಶ್ ಮಾತನಾಡಿ, ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡಲು ಮಾತ್ರ ಅಲ್ಲ, ಅವರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ ಎಂದು ತಿಳಿಸಿದರು. ನಂತರ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಮೊಹಮದ್ ರಾಫಿ, ಹೆಣ್ಣು ಮಕ್ಕಳ ಮೇಲಿನ ಶೋಷಣೆಯನ್ನು ನಿಲ್ಲಿಸಿ, ಅವರಿಗೆ ಶಿಕ್ಷಣವನ್ನು ನೀಡಿ. ಶಿಕ್ಷಣವನ್ನು ನೀಡಿದಾಗ ಅವರು ಎಲ್ಲಾ ರೀತಿಯಲ್ಲಿಯೂ ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು. ಮಾತ್ರವಲ್ಲದೆ ಮಹಿಳಾ ಜಾಗೃತಿಯ ವಿಭಿನ್ನ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು. ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜಾಗೃತಿ…

Read More

ಮಡಿಕೇರಿ ಡಿ.13 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜ ಸಂಘಟನೆಗಳ ಸಹಯೋಗದಲ್ಲಿ ‘ಅರೆಭಾಷೆ ದಿನಾಚರಣೆ’ಯು ಡಿ.15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಡಿ.13 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಇವರ ಸಹಕಾರದಲ್ಲಿ ವಿಶೇಷ ಘಟಕ ಯೋಜನೆಯಡಿ ಸಂವಿಧಾನ ಶಿಲ್ಪಿ, ಭಾರತ ರತ್ನ, ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಓದು’ ಕಾರ್ಯಕ್ರಮವು ಡಿ.14 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಸಿ.ಶಾಮ್ ಪ್ರಸಾದ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ಮದೆನಾಡು ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಡಿ.13 : ಅಂಚೆ ಅದಾಲತ್‍ನ ಮುಂದಿನ ಸಭೆಯು ಡಿ.18 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ, ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿ.15 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿ.18 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.13 : ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘವನ್ನು ಪುನಶ್ಚೇತನಗೊಳಿಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸಮಾಪನಾ ಆದೇಶವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಂಘದ ಅಮ್ಮತ್ತಿಯ ಸದಸ್ಯರ ಹಿತರಕ್ಷಾ ಸಮಿತಿ ಮನವಿ ಮಾಡಿದ ಮೇರೆಗೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಚಿವರೊಂದಿಗೆ ಸಮಾಲೋಚನೆ ನಡೆಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸಮಾಪನ ಆದೇಶವನ್ನು ರದ್ದುಪಡಿಸಿ, ಆಡಳಿತ ಅಧಿಕಾರಿಯನ್ನು ನೇಮಕ ಮಾಡಬೇಕು. ಸಂಘವನ್ನು ರೈತರಿಗೆ ಮರಳಿ ನೀಡಬೇಕು ಎಂದು ಒತ್ತಾಯಿಸಿದರು. ಸಹಕಾರಿ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಡನೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣನವರು ಇಂದು ಸುವರ್ಣ ಸೌಧ, ಬೆಳಗಾವಿಯಲ್ಲಿ ಸಭೆ ನಡೆಸಿದರು. ಮನವಿಗೆ ತಕ್ಷಣ ಸ್ಪಂದಿಸಿದ ಸಹಕಾರ ಸಚಿವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಂಘದ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Read More